Virat Kohli: ಹೊಸ ವಿಶ್ವ ದಾಖಲೆ ನಿರ್ಮಿಸಿದ ಕಿಂಗ್ ಕೊಹ್ಲಿ

India vs Pakistan: ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ವಿರಾಟ್ ಕೊಹ್ಲಿಯ ಅರ್ಧಶತಕದ ನೆರವಿನಿಂದ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್​ ಕಲೆಹಾಕಿತು.

Virat Kohli: ಹೊಸ ವಿಶ್ವ ದಾಖಲೆ ನಿರ್ಮಿಸಿದ ಕಿಂಗ್ ಕೊಹ್ಲಿ
Virat Kohli
Updated By: ಝಾಹಿರ್ ಯೂಸುಫ್

Updated on: Sep 04, 2022 | 11:29 PM

Asia Cup 2022: ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 36 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಅಬ್ಬರಿಸಿದ ಕೊಹ್ಲಿ ವಿಶೇಷ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 50+ ರನ್ ಬಾರಿಸಿದ ಬ್ಯಾಟ್ಸ್​ಮನ್​ ಎಂಬ ದಾಖಲೆ ಇದೀಗ ವಿರಾಟ್ ಕೊಹ್ಲಿ ಪಾಲಾಗಿದೆ. ಈ ಹಿಂದೆ ಈ ವಿಶ್ವ ದಾಖಲೆಯು ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ಹಿಟ್​ಮ್ಯಾನ್ ಟಿ20 ಕ್ರಿಕೆಟ್​ನಲ್ಲಿ 31 ಬಾರಿ 50 ಪ್ಲಸ್ ರನ್ ಕಲೆಹಾಕಿದ್ದರು. ಈ ವೇಳೆ 27 ಅರ್ಧಶತಕಗಳನ್ನು, 4 ಭರ್ಜರಿ ಶತಕಗಳನ್ನು ಸಿಡಿಸಿದ್ದರು.

ಇದೀಗ ಕೇವಲ ಅರ್ಧಶತಕಗಳ ಮೂಲಕವೇ ವಿರಾಟ್ ಕೊಹ್ಲಿ ರೋಹಿತ್ ಶರ್ಮಾ ಅವರ ಈ ಅಪರೂಪದ ದಾಖಲೆಯನ್ನು ಮುರಿದಿದ್ದಾರೆ. ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 32 ಅರ್ಧಶತಕಗಳನ್ನು ಬಾರಿಸಿದ್ದು, ಈ ಮೂಲಕ 32 ಬಾರಿ 50+ ರನ್​ ಕಲೆಹಾಕಿದ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ.

ಇನ್ನು ಪಾಕ್​ ವಿರುದ್ದ 44 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 4 ಫೋರ್​ನೊಂದಿಗೆ 60 ರನ್​ ಬಾರಿಸುವ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ಬ್ಯಾಟ್ಸ್​ಮನ್ ಎಂಬ ವಿಶ್ವ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಟಿ20 ಕ್ರಿಕೆಟ್​ ಅರ್ಧಶತಕದ ಸರದಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ (32) ಅಗ್ರಸ್ಥಾನದಲ್ಲಿದ್ದರೆ ರೋಹಿತ್ ಶರ್ಮಾ (27) ದ್ವಿತೀಯ ಸ್ಥಾನದಲ್ಲಿದ್ದಾರೆ. ಹಾಗೆಯೇ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ (26) ಮೂರನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಒಟ್ಟಿನಲ್ಲಿ ಕಳಪೆ ಫಾರ್ಮ್​ನಿಂದ ಹೊರಬಂದಿರುವ ಕಿಂಗ್ ಕೊಹ್ಲಿ, ಇದೀಗ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಮತ್ತೊಂದಷ್ಟು ದಾಖಲೆಗಳನ್ನು ನಿರ್ಮಿಸಿರುವುದು ವಿಶೇಷ.

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ವಿರಾಟ್ ಕೊಹ್ಲಿಯ ಅರ್ಧಶತಕದ ನೆರವಿನಿಂದ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್​ ಕಲೆಹಾಕಿತು.