AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ದಾಖಲೆಯ ಗೆಲುವಿನ ಬಳಿಕ ವಿಶೇಷ ಮಾಹಿತಿ ಹಂಚಿಕೊಂಡ ನಾಯಕ ವಿರಾಟ್ ಕೊಹ್ಲಿ

India vs New Zealand: ನ್ಯೂಜಿಲೆಂಡ್ ವಿರುದ್ಧದ ಅಮೋಘ ಗೆಲುವಿನ ಮೂಲಕ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನೂ ಬರೆದಿದ್ದಾರೆ. ಮೂರು ಮಾದರಿಯ ಕ್ರಿಕೆಟ್​ನ 50 ಪಂದ್ಯಗಳಲ್ಲಿ ಜಯ ಸಾಧಿಸಿದ ಏಕೈಕ ನಾಯಕ ಕಿಂಗ್ ಕೊಹ್ಲಿ ಆಗಿದ್ದಾರೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ಅವರು ವಿಶೇಷ ಮಾಹಿತಿ ಹಂಚಿಕೊಂಡಿದ್ದಾರೆ.

Virat Kohli: ದಾಖಲೆಯ ಗೆಲುವಿನ ಬಳಿಕ ವಿಶೇಷ ಮಾಹಿತಿ ಹಂಚಿಕೊಂಡ ನಾಯಕ ವಿರಾಟ್ ಕೊಹ್ಲಿ
Virat Kohli Record India vs New Zealand
TV9 Web
| Edited By: |

Updated on: Dec 06, 2021 | 12:37 PM

Share

ಮುಂಬೈನ ವಾಂಕೆಡೆ ಕ್ರೀಡಾಂಗಣದಲ್ಲಿ ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಭಾರೀ ಅಂತರದಿಂದ ಗೆದ್ದ ಟೀಮ್ ಇಂಡಿಯಾ (India vs New Zealand 2nd Test) ನಾಲ್ಕನೇ ದಿನದ ಆರಂಭದಲ್ಲೇ ಪಂದ್ಯ ಮುಗಿಸಿದೆ. 372 ರನ್ ಅಂತರದಿಂದ ಪಂದ್ಯ ಜಯಿಸಿದ ಭಾರತ ತಂಡ ಎರಡು ಪಂದ್ಯಗಳ ಸರಣಿಯನ್ನು 1-0 ಅಂತರದಿಂದ ಗೆದ್ದು ಸರಣಿ ಕೈವಶ ಮಾಡಿಕೊಂಡಿದೆ. ಇದು ಟೆಸ್ಟ್ ಕ್ರಿಕೆಟ್ (Test Cricket) ಇತಿಹಾಸದಲ್ಲಿ ಭಾರತಕ್ಕೆ ದಕ್ಕಿದ ದೊಡ್ಡ ಮೊತ್ತದ ಗೆಲುವಾಗಿದೆ. ಇದರ ಮೂಲಕ ಐಸಿಸಿ ಟೆಸ್ಟ್ ರ್ಯಾಂಕಿಂಗ್ (ICC Test Ranking) ಪಟ್ಟಿಯಲ್ಲೂ ಟೀಮ್ ಇಂಡಿಯಾ (Team India) ನಂಬರ್ ಒನ್ ಪಟ್ಟಕ್ಕೇರಿದೆ. ಈ ಗೆಲುವಿನ ಮೂಲಕ ನಾಯಕ ವಿರಾಟ್ ಕೊಹ್ಲಿ (Virat Kohli) ದಾಖಲೆಯನ್ನೂ ಬರೆದಿದ್ದಾರೆ. ಮೂರು ಮಾದರಿಯ ಕ್ರಿಕೆಟ್​ನ 50 ಪಂದ್ಯಗಳಲ್ಲಿ ಜಯ ಸಾಧಿಸಿದ ಏಕೈಕ ನಾಯಕ ಕಿಂಗ್ ಕೊಹ್ಲಿ ಆಗಿದ್ದಾರೆ. ಪಂದ್ಯ ಮುಗಿದ ಬಳಿಕ ತಂಡದ ಪ್ರದರ್ಶನದ ಬಗ್ಗೆ ಮಾತನಾಡಿದ ಕೊಹ್ಲಿ ವಿಶೇಷ ಮಾಹಿತಿ ಹಂಚಿಕೊಂಡಿದ್ದಾರೆ.

“ಗೆಲುವಿನ ಮೂಲಕ ಕಮ್​ಬ್ಯಾಕ್ ಮಾಡಿರುವುದು ತುಂಬಾ ಖುಷಿ ನೀಡುತ್ತಿದೆ. ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಒಬ್ಬಂಟಿಯಾಗಿ ಜವಾಬ್ದಾರಿ ಹೊತ್ತು ಕಾರ್ಯನಿರ್ವಹಿಸಿದ್ದಾರೆ. ಮೊದಲ ಟೆಸ್ಟ್​ನಲ್ಲೂ ಉತ್ತಮ ಪ್ರದರ್ಶನ ನೀಡಿದ್ದರು. ಈ ಬಾರಿಯಂತು ಅದು ಅತ್ಯುತ್ತಮವಾಗಿತ್ತು. ಕಾನ್ಪುರ ಟೆಸ್ಟ್​ನಲ್ಲಿ ಎದುರಾಳಿ ತಂಡ ಡ್ರಾ ಮಾಡುವಲ್ಲಿ ಯಶಸ್ವಿಯಾಯಿತು. ಬೌಲರ್​ಗಳು ವಿಕೆಟ್ ಕೀಳಲು ಸಾಕಷ್ಟು ಶ್ರಮಪಟ್ಟರು. ಆದರೆ, ಕಿವೀಸ್ ಬ್ಯಾಟರ್​ಗಳು ಔಟಾಗದೆ ದಿಟ್ಟ ಬ್ಯಾಟಿಂಗ್ ನಡೆಸಿದರು. ಈ ಪಿಚ್​ನಲ್ಲಿ ಹೆಚ್ಚುನ ಬೌನ್ಸ್ ಆಗುವ ಕಾರಣ ಪಂದ್ಯವನ್ನು ನಮ್ಮ ಕಡೆ ತಿರುಗಿಸಲು ಉತ್ತಮ ಅವಕಾಶವಿತ್ತು. ಅದನ್ನು ನಾವು ಮಾಡಿದೆವು” ಎಂದು ಹೇಳಿದ್ದಾರೆ.

“ನಮ್ಮ ಗುರಿ ಹೊಸ ಮ್ಯಾನೇಜ್ಮೆಂಟ್​ನ ಅಡಿಯಲ್ಲಿ ಭಾರತೀಯ ಕ್ರಿಕೆಟ್ ಅನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗಬೇಕು ಎಂಬುದು. ಭಾರತೀಯ ಕ್ರಿಕೆಟ್​ನ ಗೌರವವನ್ನು ಉಳಿಸಿಕೊಳ್ಳುವುದು ನಮ್ಮ ಕೈಯಲ್ಲಿದೆ. ಮುಂದಿನ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಬಹಳ ಮುಖ್ಯ ಮತ್ತು ಚಾಲೆಂಜ್ ಕೂಡ. ಅಲ್ಲಿ ಗೆಲುವು ಸಾಧಿಸುವುದು ಸುಲಭವಿಲ್ಲ. ಆದರೆ, ನಮ್ಮ ತಂಡ ಬಲಿಷ್ಠವಾಗಿದೆ. ಅಲ್ಲೂ ಗೆಲುವು ಸಾಧಿಸುವ ವಿಶ್ವಾಸ ಇದೆ” ಎಂದು ಹೇಳಿದ್ದಾರೆ.

ಗೆಲ್ಲಲು 540 ರನ್ ಗುರಿ ಪಡೆದಿದ್ದ ನ್ಯೂಜಿಲ್ಯಾಂಡ್ ಮೂರನೇ ದಿನದಾಟದ ಅಂತ್ಯದಲ್ಲಿ ಐದು ವಿಕೆಟ್ ಕಳೆದುಕೊಂಡು 140 ರನ್ ಗಳಿಸಿತ್ತು. ಒಂದೆಡೆ ಹೆನ್ರಿ ನಿಕೋಲ್ಸ್ ಬ್ಯಾಟಿಂಗ್ ಮಾಡುತ್ತಿದ್ದರೆ ಮತ್ತೊಂದೆಡೆ ಸತತ ವಿಕೆಟ್ ಗಳು ಉರುಳಿತು. ಸ್ಪಿನ್ ದಾಳಿ ದಾಳಿ ನಡೆಸಿದ ಜಯಂತ್ ಯಾದವ್ ಇಂದು ನಾಲ್ಕು ವಿಕೆಟ್ ಕಿತ್ತರು. ಕೊನೆಯ ವಿಕೆಟ್ ಅಶ್ವಿನ್ ಪಾಲಾಯಿತು. ನ್ಯೂಜಿಲ್ಯಾಂಡ್ ತಂಡ 167 ರನ್ ಗೆ ಆಲೌಟಾಯಿತು.

ಟೂರ್ನಿಯಿದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ ರವಿಚಂದ್ರನ್ ಅಶ್ವಿನ್ ಸರಣಿಶ್ರೇಷ್ಠ ಪ್ರಶಸ್ತಿ ಬಾಜಿಕೊಂಡರೆ, ಎರಡನೇ ಟೆಸ್ಟ್​ನಲ್ಲಿ ಶತಕ ಮತ್ತು ಅರ್ಧಶತಕ ಸಿಡಿಸಿದ ಮಯಾಂಕ್ ಅಗರ್ವಾಲ್ ಪಂದ್ಯಶ್ರೇಷ್ಠ ತಮ್ಮದಾಗಿಸಿದರು.

Rahul Dravid: ಕೋಚ್ ಆದ ಚೊಚ್ಚಲ ಟೆಸ್ಟ್​ ಸರಣಿಯಲ್ಲೇ ಗೆಲುವು: ಖುಷಿಯಲ್ಲಿ ರಾಹುಲ್ ದ್ರಾವಿಡ್ ಹೇಳಿದ್ದೇನು ಗೊತ್ತಾ?

Virat Kohli: ಮೈದಾನದಲ್ಲೇ ಅಂಪೈರ್​ನ ಮೈಚಳಿ ಬಿಡಿಸಿದ ಕೊಹ್ಲಿ: ನೀವು ಫೀಲ್ಡ್ ಮಾಡಿ, ನಾನು ಅಂಪೈರ್ ಮಾಡ್ತೇನೆ ಎಂದ ವಿರಾಟ್

(Virat Kohli creates record and Talking after the emphatic win against New Zealand in Second Test)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ