Virat Kohli: ನಾ ಹಿಡಿದ ಈ ಅದ್ಭುತ ಕ್ಯಾಚ್ ನನ್ನ ಫ್ರೆಂಡ್​ಗೆ ಅರ್ಪಿಸುವೆ..!

IPL 2022: ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅನೂಜ್ ರಾವತ್ ಶೂನ್ಯಕ್ಕೆ ಔಟಾದರೆ, ಫಾಫ್ ಡುಪ್ಲೆಸಿಸ್​ 8 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

Virat Kohli: ನಾ ಹಿಡಿದ ಈ ಅದ್ಭುತ ಕ್ಯಾಚ್ ನನ್ನ ಫ್ರೆಂಡ್​ಗೆ ಅರ್ಪಿಸುವೆ..!
Virat Kohli
Follow us
TV9 Web
| Updated By: ಝಾಹಿರ್ ಯೂಸುಫ್

Updated on:Apr 17, 2022 | 5:06 PM

IPL 2022: ಐಪಿಎಲ್​ನ 27ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಆರ್​ಸಿಬಿ (RCB vs DC) ತಂಡವು ಜಯ ಸಾಧಿಸಿದೆ. ಆರ್​ಸಿಬಿ ನೀಡಿದ 190 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಡೆಲ್ಲಿ ಒಂದು ಹಂತದಲ್ಲಿ ಗೆಲುವಿನ ಸಮೀಪದಲ್ಲಿತ್ತು. ಏಕೆಂದರೆ 16 ಓವರ್​ನಲ್ಲಿ 142 ರನ್​ಗಳಿಸಿದ್ದ ಡೆಲ್ಲಿ ಪರ ಸ್ಪೋಟಕ ಬ್ಯಾಟ್ಸ್​ಮನ್ ರಿಷಭ್ ಪಂತ್ ಆಡುತ್ತಿದ್ದರು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್​ ಗೆಲ್ಲಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ 17ನೇ ಓವರ್​ನಲ್ಲಿ ವಿರಾಟ್ ಕೊಹ್ಲಿ (Virat Kohli) ಹಿಡಿದ ಒಂದು ಅದ್ಭುತ ಕ್ಯಾಚ್ ಇಡೀ ಪಂದ್ಯದ ಚಿತ್ರಣ ಬದಲಿಸಿತು. ಮೊಹಮ್ಮದ್ ಸಿರಾಜ್ ಎಸೆದ 17ನೇ ಓವರ್​ನ ಮೂರನೇ ಎಸೆತದಲ್ಲಿ ರಿಷಭ್ ಪಂತ್ ಡೀಪ್ ಕವರ್​ನತ್ತ ಭರ್ಜರಿ ಹೊಡೆತ ಬಾರಿಸಲು ಮುಂದಾಗಿದ್ದರು. ಆದರೆ 30 ಯಾರ್ಡ್​ ಸರ್ಕಲ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ವಿರಾಟ್ ಕೊಹ್ಲಿ ಚಂಗನೆ ಜಿಗಿಯುವ ಮೂಲಕ ಒಂದೇ ಕೈಯಲ್ಲಿ ಚೆಂಡನ್ನು ಹಿಡಿದರು. ಅತ್ತ ವಿರಾಟ್ ಕೊಹ್ಲಿಯ ಈ ಅದ್ಭುತ ಕ್ಯಾಚ ನೋಡಿ ಆರ್​ಸಿಬಿ ಅಭಿಮಾನಿಗಳು ದಂಗಾಗಿದ್ದರು. ಇನ್ನು ಕ್ಯಾಚ್ ಹಿಡಿದ ಬಳಿಕ ತನ್ನನ್ನು ಹುರಿದುಂಬಿಸುತ್ತಿದ್ದ ಪತ್ನಿ ಅನುಷ್ಕಾ ಶರ್ಮಾ ಅವರತ್ತ ಕೈ ಬೀಸಿ ಕೊಹ್ಲಿ ಸಂಭ್ರಮಿಸಿದ್ದರು.

ಆದರೆ ಈ ಅತ್ಯಾಧ್ಬುತ ಕ್ಯಾಚ್ ಅನ್ನು ವಿರಾಟ್ ಕೊಹ್ಲಿ ಅರ್ಪಿಸಿದ್ದು ಮಾತ್ರ ಮತ್ತೊಬ್ಬರಿಗೆ ಎಂಬುದು ವಿಶೇಷ. ಹೌದು, ಪಂದ್ಯದ ಬಳಿಕ ಮಾತನಾಡಿರುವ ವಿರಾಟ್ ಕೊಹ್ಲಿ ತಾನು ಹಿಡಿದ ಈ ಫೆಂಟಾಸ್ಟಿಕ್ ಕ್ಯಾಚ್ ಅನ್ನು ಎಬಿ ಡಿವಿಲಿಯರ್ಸ್​ಗೆ ಅರ್ಪಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ ದಿನೇಶ್ ಕಾರ್ತಿಕ್ ಅವರ ಭರ್ಜರಿ ಹೊಡೆತಗಳನ್ನು ಕೂಡ ಎಬಿಡಿಗೆ ಸಮರ್ಪಿಸುತ್ತಿದ್ದೇವೆ. ಏಕೆಂದರೆ ಅವರು ಆರ್​ಸಿಬಿ ತಂಡದಲ್ಲಿದ್ದಾಗ ಇವೆಲ್ಲವನ್ನೂ ಒಬ್ಬರಾಗಿ ಮಾಡುತ್ತಿದ್ದರು. ಇದೀಗ ನಾವು 2-3 ಮಂದಿ ಸೇರಿ ಎಬಿಡಿ ತಂಡಕ್ಕೆ ಮಾಡಿದ ಕೆಲಸಗಳನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಒಟ್ಟಿನಲ್ಲಿ ಭರ್ಜರಿ ಕ್ಯಾಚ್ ಅನ್ನು ತಮ್ಮ ಗೆಳೆಯ ಎಬಿ ಡಿವಿಲಿಯರ್ಸ್​ಗೆ ಅರ್ಪಿಸುವ ಮೂಲಕ ಮತ್ತೊಮ್ಮೆ ಕಿಂಗ್ ಕೊಹ್ಲಿ ಅಭಿಮಾನಿಗಳ ಮನಗೆದ್ದಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅನೂಜ್ ರಾವತ್ ಶೂನ್ಯಕ್ಕೆ ಔಟಾದರೆ, ಫಾಫ್ ಡುಪ್ಲೆಸಿಸ್​ 8 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ ರನೌಟ್ ಆಗಿ ಹೊರನಡೆದಿದ್ದರು. ಈ ಹಂತದಲ್ಲಿ ಅಬ್ಬರಿಸಿದ ಗ್ಲೆನ್ ಮ್ಯಾಕ್ಸ್​ವೆಲ್ 34 ಎಸೆತಗಳಲ್ಲಿ 55 ರನ್ ಬಾರಿಸಿ ನಿರ್ಗಮಿಸಿದರು.

ತಂಡದ ಮೊತ್ತ 95 ಕ್ಕೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆರ್​ಸಿಬಿಗೆ ಈ ಹಂತದಲ್ಲಿ ಆಸರೆಯಾಗಿದ್ದು ದಿನೇಶ್ ಕಾರ್ತಿಕ್ ಹಾಗೂ ಶಹಬಾಜ್ ಅಹ್ಮದ್. 6ನೇ ವಿಕೆಟ್​ಗೆ ಅತ್ಯುತ್ತಮ ಜೊತೆಯಾಟವಾಡಿದ ಈ ಜೋಡಿ ತಂಡದ ರನ್​ಗತಿಯನ್ನು ಹೆಚ್ಚಿಸಿದರು. ಅದರಲ್ಲೂ ದಿನೇಶ್ ಕಾರ್ತಿಕ್ ಅಕ್ಷರಶಃ ಅಬ್ಬರಿಸಿದರು. ಮುಸ್ತಫಿಜುರ್ ರೆಹಮಾನ್ ಎಸೆದ 18ನೇ ಓವರ್​ನಲ್ಲಿ 28 ರನ್​ ಬಾರಿಸುವ ಮೂಲಕ ಡಿಕೆ ಅರ್ಧಶತಕ ಪೂರೈಸಿದ್ದರು. ಅಲ್ಲದೆ ಅಂತಿಮ ಓವರ್​ಗಳಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿದ ಶಹಬಾಜ್ ಹಾಗೂ ದಿನೇಶ್ ಕಾರ್ತಿಕ್ ತಂಡದ ಮೊತ್ತವನ್ನು 20 ಓವರ್​ಗಳಲ್ಲಿ 189 ಕ್ಕೆ ತಂದು ನಿಲ್ಲಿಸಿದರು.

190 ರನ್​ಗಳ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಡೇವಿಡ್ ವಾರ್ನರ್ 38 ಎಸೆತಗಳಲ್ಲಿ 66 ರನ್ ಬಾರಿಸಿ ಅಬ್ಬರಿಸಿದರೆ, ಮಧ್ಯಮ ಕ್ರಮಾಂಕದಲ್ಲಿ 17 ಎಸೆತಗಳಲ್ಲಿ 34 ರನ್ ಬಾರಿಸಿ ರಿಷಭ್ ಪಂತ್ ಪಂದ್ಯ ಗೆಲ್ಲಿಸುವ ಭರವಸೆಯನ್ನು ಹುಟ್ಟುಹಾಕಿದ್ದರು. ಆದರೆ ಪಂತ್ ಔಟ್ ಆಗುತ್ತಿದ್ದಂತೆ ಡೆಲ್ಲಿ ತಂಡವು ದಿಢೀರ್ ಕುಸಿತಕ್ಕೊಳಗಾಯಿತು. ತಂಡದ ಪರ ಪೃಥ್ವಿ ಶಾ 16, ಮಿಚೆಲ್ ಮಾರ್ಷ್ 14, ರೋವ್ಮನ್ ಪೊವೆಲ್ 0, ಲಲಿತ್ ಯಾದವ್ 1 ವಿಫಲರಾಗಿದ್ದರು. ಅಂತಿಮವಾಗಿ 7 ವಿಕೆಟ್ ನಷ್ಟಕ್ಕೆ 173 ರನ್​ಗಳಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 16 ರನ್​ಗಳಿಂದ ಸೋಲೋಪ್ಪಿಕೊಂಡಿತು.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

Published On - 3:40 pm, Sun, 17 April 22

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ