AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ENG vs IND: ಇಂದು ಮೊದಲ ಏಕದಿನ: ಟೀಮ್ ಇಂಡಿಯಾದಲ್ಲಿ ನಡೆಯಲಿದೆ ಹೊಸ ಪ್ರಯೋಗ: ಏನದು?

England vs India, 1st ODI: ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಕದನ ಇಂದು ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಆಯೋಜಿಸಲಾಗಿದೆ. ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಭಾರತ-ಇಂಗ್ಲೆಂಡ್ ನಡುವಣ ಕಾದಾಟ ಸಾಕಷ್ಟು ಕುತೂಹಲ ಕೆರಳಿಸಿದೆ.

ENG vs IND: ಇಂದು ಮೊದಲ ಏಕದಿನ: ಟೀಮ್ ಇಂಡಿಯಾದಲ್ಲಿ ನಡೆಯಲಿದೆ ಹೊಸ ಪ್ರಯೋಗ: ಏನದು?
ENG vs IND 2nd ODI
TV9 Web
| Edited By: |

Updated on:Jul 12, 2022 | 7:43 AM

Share

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವೆ ಬಾಕಿ ಉಳಿದಿದ್ದ ಒಂದು ಟೆಸ್ಟ್ ಪಂದ್ಯದ ಜೊತೆ ಟಿ20 ಸರಣಿ ಕೂಡ ಮುಕ್ತಾಯಗೊಂಡಿದ್ದು ಇದೀಗ ಏಕದಿನ ಸರಣಿಗೆ ವೇದಿಕೆ ಸಜ್ಜಾಗಿದೆ. ಟೆಸ್ಟ್​ ಸಮಬಲದಿಂದ ಅಂತ್ಯಕಂಡರೆ ಟಿ20 ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ವಶಪಡಿಸಿಕೊಂಡಿತ್ತು. ಸದ್ಯ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಕದನ ಇಂದು ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಆಯೋಜಿಸಲಾಗಿದೆ. ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಉಭಯ ತಂಡಗಳ ನಡುವಣ ಕಾದಾಟ ಸಾಕಷ್ಟು ಕುತೂಹಲ ಕೆರಳಿಸಿದೆ. ಅಲ್ಲದೆ ಆಂಗ್ಲರಿಗೆ ಇದು ಪ್ರತಿಷ್ಠೆಯ ಸರಣಿ ಕೂಡ ಹೌದು. ಯಾಕೆಂದರೆ ಟಿ20 ಸರಣಿಯಲ್ಲಿ ನೀಡಿದ ಕಳಪೆ ಪ್ರದರ್ಶನದಿಂದ ಬಟ್ಲರ್ (Jos Buttler) ಪಡೆ ಹೊರಬರಬೇಕಿದೆ. ಇತ್ತ ರೋಹಿತ್ (Rohit Sharma) ಪಡೆ ಏಕದಿನಕ್ಕೆಂದು ಮಾಸ್ಟರ್ ಪ್ಲಾನ್ ರೂಪಿಸಿದೆ. ಹೀಗಾಗಿ ಇಂಡೋ-ಇಂಗ್ಲೆಂಡ್ ಮೊದಲ ಏಕದಿನ ಹೈವೋಲ್ಟೇಜ್ ಪಂದ್ಯ ಆಗುವುದರಲ್ಲಿ ಅನುಮಾನವಿಲ್ಲ.

ಕೊಹ್ಲಿ ಅಲಭ್ಯ:

ಟೀಮ್ ಇಂಡಿಯಾದ ಆಟಗಾರ ವಿರಾಟ್ ಕೊಹ್ಲಿ ಅವರು ತೊಡೆಸಂದು ನೋವಿನಿಂದ ಬಳಲುತ್ತಿದ್ದು, ಇಂದಿನ ಮೊದಲ ಏಕದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಆದರೆ ಕೊಹ್ಲಿ ಗಾಯದ ಬಗ್ಗೆ ಹೆಚ್ಚಿನ ವಿವರಗಳು ಖಚಿತವಾಗಿಲ್ಲ. ಗಾಯ ಎಷ್ಟು ಗಂಭೀರವಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಇದರ ಹೊರತಾಗಿಯೂ, ಭಾರತ ತಂಡದ ಆಡಳಿತ ಮಂಡಳಿ ಮೊದಲ ಪಂದ್ಯದಲ್ಲಿ ಅವರಿಗೆ ವಿರಾಮ ನೀಡಬಹುದು ಎಂಬ ವದಂತಿ ಕೇಳಿಬರುತ್ತಿದೆ. ಆದ್ದರಿಂದ ಕೊಹ್ಲಿ ಮುಂದಿನ ಎರಡು ಪಂದ್ಯಗಳಿಗೆ ಲಭ್ಯವಿರುತ್ತಾರೆ. ಅಲ್ಲದೆ ನಾಟಿಂಗ್‌ಹ್ಯಾಮ್‌ನಿಂದ ಲಂಡನ್‌ಗೆ ಬಂದ ಟೀಮ್ ಬಸ್‌ನಲ್ಲಿ ಕೂಡ ವಿರಾಟ್ ಬಂದಿಲ್ಲ. ವೈದ್ಯಕೀಯ ತಪಾಸಣೆಯು ಇದರ ಹಿಂದಿನ ಒಂದು ಕಾರಣವಾಗಿರಬಹುದು ಎನ್ನಲಾಗಿದೆ.

ಇದನ್ನೂ ಓದಿ
Image
CWG 2022: ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಪದಕಕ್ಕಾಗಿ ಸೆಣಸಾಡಲಿದ್ದಾರೆ ಭಾರತದ ಈ 215 ಕ್ರೀಡಾಪಟುಗಳು
Image
‘ನನಗೆ ಟೆನಿಸ್ ಅಗತ್ಯವಿಲ್ಲ ಎಂದು ಭಾವಿಸುತ್ತೇನೆ’; ನಿವೃತ್ತಿಯ ಮುನ್ಸೂಚನೆ ನೀಡಿದ ಟೆನಿಸ್ ಸ್ಟಾರ್ ರೋಜರ್ ಫೆಡರರ್!
Image
CWG 2022: ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಭಾರತ ಮಹಿಳಾ ಕ್ರಿಕೆಟ್ ತಂಡ ಪ್ರಕಟ; ಹರ್ಮನ್ಪ್ರೀತ್ ಕೌರ್​ಗೆ ನಾಯಕತ್ವ
Image
IND vs ENG: ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಭಾರತಕ್ಕೆ ಆಘಾತ; ಕೊಹ್ಲಿಗೆ ಇಂಜುರಿ! ಆಡುವುದು ಅನುಮಾನ?

ಧವನ್ ಕಮ್​ಬ್ಯಾಕ್:

ಬಹಳ ಸಮಯದ ನಂತರ ಶಿಖರ್ ಧವನ್ ಟೀಮ್ ಇಂಡಿಯಾಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ. ಇವರು ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸುವುದು ಖಚಿತ. ಸದ್ಯ ಕೇವಲ ಏಕದಿನ ಸರಣಿಯಲ್ಲಿ ಮಾತ್ರ ಆಡುತ್ತಿರುವ ​ ಧವನ್​ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಉತ್ತಮ ವೇದಿಕೆಯಾಗಿದೆ. ಇಲ್ಲಿ ರನ್ ಗಳಿಸಲು ಪರದಾಡಿದರೆ ಧವನ್ ಮುಂದಿನ ಹಾದಿ ಕಠಿಣವಾಗಲಿದೆ. ಯಾಕೆಂದರೆ ಧವನ್ ಜಾಗಕ್ಕೆ ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ ಕೂಡ ಕಾದುಕುಳಿತಿದ್ದಾರೆ.

ಇನ್ನು ಕೊಹ್ಲಿ ಹೊರಗುಳಿದರೆ ಮೂರನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್​​ಗೆ ಸ್ಥಾನ ಸಿಗಲಿದೆ. ಸೂರ್ಯಕುಮಾರ್ ಯಾದವ್ ಕೂಡ ತಂಡದಲ್ಲಿದ್ದು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿದ್ದಾರೆ. ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಆಲ್ರೌಂಡರ್​ಗಳಾದ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ನಂತರದ ಸ್ಥಾನದಲ್ಲಿ ಆಡಲಿದ್ದಾರೆ.

ಟೀಮ್ ಇಂಡಿಯಾದ ಬೌಲಿಂಗ್ ಆಯ್ಕೆ ಕೊಂಚ ಕಷ್ಟವಾಗಿದೆ. ಮತ್ತೊಬ್ಬ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಆಡಿಸಬೇಕೊ ಅಥವಾ ಪ್ರಸಿದ್ಧ್ ಕೃಷ್ಣ ಆಯ್ಕೆ ಮಾಡುತ್ತಾರೊ ನೋಡಬೇಕಿದೆ. ಉಳಿದಂತೆ ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ ಮತ್ತು ಯುಜ್ವೇಂದ್ರ ಚಹಲ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವುದು ಖಚಿತ.

ಇತ್ತ ಜೋಸ್ ಬಟ್ಲರ್​ಗೆ ಇದು ಮೊದಲ ಅಗ್ನಿಪರೀಕ್ಷೆ. ಇಂಗ್ಲೆಂಡ್ ತಂಡದ ನಾಯಕನಾಗಿದ್ದ ಇಯಾನ್ ಮಾರ್ಗನ್ ನಾಯಕತ್ವ ತೊರೆದ ಬಳಿಕ ಕ್ಯಾಪ್ಟನ್ ಆಗಿರುವ ಬಟ್ಲರ್​ಗೆ ಇಂದು ಮೊದಲ ಏಕದಿನ ಸರಣಿಯಾಗಿದೆ. ಹೀಗಾಗಿ, ಗೆಲುವು ಸಾಧಿಸುವ ಉತ್ಸಾಹದಲ್ಲಿದ್ದಾರೆ. ಆಂಗ್ಲರ ತಂಡದಲ್ಲಿ ಬೆನ್​ ಸ್ಟೋಕ್ಸ್​, ಜೋ ರೂಟ್​, ಬೈರ್​ಸ್ಟೋರಂತಹ ಬಲಿಷ್ಠ ಆಟಗಾರರಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ಸಂಜೆ 5:30 ಕ್ಕೆ ಪ್ರಾರಂಭವಾಗಲಿದೆ. ಪಂದ್ಯದ ನೇರ ಪ್ರಸಾರವನ್ನು ಸೋನಿ ನೆಟ್‌ವರ್ಕ್‌ನ ಚಾನೆಲ್‌ನಲ್ಲಿ ನೋಡಬಹುದು. ಜೊತೆಗೆ ಹಿಂದಿಯಲ್ಲಿ ಸೋನಿ ಟೆನ್ 3 ನಲ್ಲಿ ವೀಕ್ಷಿಸಬಹುದು.

Published On - 7:43 am, Tue, 12 July 22

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ