AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ವಿರಾಟ್ ಕೊಹ್ಲಿಯನ್ನು ಅವಮಾನಿಸಿದ ಇಂಗ್ಲೆಂಡ್‌ ಮಾಜಿ ನಾಯಕ

Virat Kohli Retirement: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಗೆ ಮುನ್ನ, ಮಾಜಿ ಇಂಗ್ಲೆಂಡ್ ನಾಯಕ ಮೈಕೆಲ್ ವಾನ್ ವಿರಾಟ್ ಕೊಹ್ಲಿಯ ಇಂಗ್ಲೆಂಡ್‌ನಲ್ಲಿನ ಬ್ಯಾಟಿಂಗ್ ಸರಾಸರಿಯನ್ನು ಟೀಕಿಸಿದ್ದಾರೆ. ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದರೂ, ಅವರ ಅನುಪಸ್ಥಿತಿಯ ಪ್ರಭಾವವನ್ನು ವಾನ್ ಚರ್ಚಿಸಿದ್ದಾರೆ. ವಾನ್ ಕೊಹ್ಲಿಯ ಒಟ್ಟಾರೆ ಟೆಸ್ಟ್ ದಾಖಲೆಯನ್ನು ಮೆಚ್ಚಿಕೊಂಡರೂ, ಇಂಗ್ಲೆಂಡ್‌ನಲ್ಲಿ ಅವರ ಸಾಧನೆಯನ್ನು ಕಡಿಮೆ ಅಂದಾಜು ಮಾಡಿದ್ದಾರೆ.

IND vs ENG: ವಿರಾಟ್ ಕೊಹ್ಲಿಯನ್ನು ಅವಮಾನಿಸಿದ ಇಂಗ್ಲೆಂಡ್‌ ಮಾಜಿ ನಾಯಕ
Michael Wagon
ಪೃಥ್ವಿಶಂಕರ
|

Updated on: Jun 20, 2025 | 4:34 PM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಟೆಸ್ಟ್ ಸರಣಿಯ ಮೊದಲ ಪಂದ್ಯ ಲೀಡ್ಸ್ ಮೈದಾನದಲ್ಲಿ ನಡೆಯುತ್ತಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ (Michael Vaughan), ವಿರಾಟ್ ಕೊಹ್ಲಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದು ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ ಮೂಡಿಸಿದೆ. 2025 ರ ಐಪಿಎಲ್ ಸಮಯದಲ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗಿರುವ ವಿರಾಟ್ ಕೊಹ್ಲಿ (Virat Kohli), ಇನ್ನು ಮುಂದೆ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಆಡುವುದನ್ನು ನಾವು ಕಾಣಬಹುದು. ಟೆಸ್ಟ್ ಕ್ರಿಕೆಟ್‌ನಲ್ಲಿ ಕೊಹ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದರೂ, ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್, ಕೊಹ್ಲಿಯ ಬ್ಯಾಟಿಂಗ್ ಸರಾಸರಿಯನ್ನು ಟೀಕಿಸಿದ್ದಾರೆ.

ಮೈಕೆಲ್ ವಾನ್ ಹೇಳಿದ್ದೇನು?

ರಾಟ್ ಕೊಹ್ಲಿಯನ್ನು ಗುರಿಯಾಗಿಸಿಕೊಂಡು ಫಾಕ್ಸ್ ಸ್ಪೋರ್ಟ್ಸ್‌ ಜೊತೆ ಮಾತನಾಡಿರುವ ಮೈಕಲ್ ವಾನ್, ‘ಈ ಪ್ರವಾಸದಲ್ಲಿ ಟೀಂ ಇಂಡಿಯಾ ವಿರಾಟ್ ಕೊಹ್ಲಿಯನ್ನು ಹೆಚ್ಚು ಮಿಸ್ ಮಾಡಿಕೊಳ್ಳುವುದಿಲ್ಲ. ಏಕೆಂದರೆ ಇಂಗ್ಲೆಂಡ್‌ನಲ್ಲಿ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಸರಾಸರಿ ಕೇವಲ 33.21 ರಷ್ಟಿದೆ. ವಿರಾಟ್ ಇಂಗ್ಲೆಂಡ್‌ನಲ್ಲಿ 17 ಟೆಸ್ಟ್ ಪಂದ್ಯಗಳನ್ನಾಡಿದ್ದು, ಎರಡು ಶತಕ ಮತ್ತು ಐದು ಅರ್ಧಶತಕಗಳ ಸಹಾಯದಿಂದ 1096 ರನ್ ಗಳಿಸಿದ್ದಾರೆ.

ಕೊಹ್ಲಿಯನ್ನು ಮಿಸ್ ಮಾಡಿಕೊಳ್ಳುವುದಿಲ್ಲ

ಈ ಅಂಕಿ ಅಂಶವನ್ನು ಮುಂದಿಟ್ಟಿರುವ ವಾನ್, ಭಾರತ ತಂಡ ವಿರಾಟ್ ಅವರನ್ನು ಬ್ಯಾಟ್ಸ್‌ಮನ್ ಆಗಿ ಮಿಸ್ ಮಾಡಿಕೊಳ್ಳುವುದಿಲ್ಲ. ಆದರೆ ಡ್ರೆಸ್ಸಿಂಗ್ ರೂಮ್‌ನಲ್ಲಿ ದಂತಕಥೆಯಾಗಿ ಅವರನ್ನು ತಂಡ ಖಂಡಿತವಾಗಿಯೂ ಮಿಸ್ ಮಾಡಿಕೊಳ್ಳುತ್ತದೆ. ನಾಯಕನಾಗಿ ಅವರು ತಂಡಕ್ಕೆ ಮಾಡಿದ ಸಾಧನೆ ಸ್ಮರಿಸುವಂತದ್ದು, ಆದರೆ ಬ್ಯಾಟ್ಸ್‌ಮನ್ ಆಗಿ ಅವರನ್ನು ಮಿಸ್ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ. ಆದಾಗ್ಯೂ ಅನುಭವಿ ಜೋಡಿ ರೋಹಿತ್ ಮತ್ತು ವಿರಾಟ್ ಅನುಪಸ್ಥಿತಿಯಲ್ಲಿ ಯುವ ಆಟಗಾರರ ಉತ್ತಮ ಪ್ರದರ್ಶನವನ್ನು ಬೆಂಬಲಿಸಿರುವ ವಾನ್, ಇಂಗ್ಲೆಂಡ್‌ನಲ್ಲಿ ಯುವ ಆಟಗಾರರು ನಿಜವಾಗಿಯೂ ಉತ್ತಮವಾಗಿ ಆಡಿದರೆ ಯಾರೂ ಆಶ್ಚರ್ಯಪಡಬೇಕಾಗಿಲ್ಲ. ಬಹುಶಃ ಅವರು ಈ ಕ್ಷಣಕ್ಕಾಗಿ ಕಾಯುತ್ತಿದ್ದರು ಎಂದು ವಾನ್ ಹೇಳಿದ್ದಾರೆ.

IND vs ENG: ಟೆಸ್ಟ್‌ನಲ್ಲಿ ಕೊಹ್ಲಿ ಸ್ಥಾನವನ್ನು ತುಂಬುವವರು ಯಾರು? ಉತ್ತರಿಸಿದ ರಿಷಬ್ ಪಂತ್

ಟೆಸ್ಟ್‌ನಲ್ಲಿ ವಿರಾಟ್ ಸಾಧನೆ

ಟೀಂ ಇಂಡಿಯಾದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕರಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅವರು 123 ಟೆಸ್ಟ್ ಪಂದ್ಯಗಳಲ್ಲಿ 46.85 ಸರಾಸರಿಯಲ್ಲಿ 9230 ರನ್ ಗಳಿಸಿದ್ದು, ಇದರಲ್ಲಿ 30 ಶತಕಗಳು ಮತ್ತು 31 ಅರ್ಧಶತಕಗಳು ಸೇರಿವೆ. 2014 ರಲ್ಲಿ ಇಂಗ್ಲೆಂಡ್‌ನಲ್ಲಿ ತಮ್ಮ ಮೊದಲ ಟೆಸ್ಟ್ ಪಂದ್ಯವನ್ನು ಆಡಿದ ಕೊಹ್ಲಿ, 2021-22 ರ ಕೊನೆಯ ಟೆಸ್ಟ್ ಸರಣಿಯಲ್ಲಿ ಆಡಿದ 5 ಪಂದ್ಯಗಳ 9 ಇನ್ನಿಂಗ್ಸ್‌ಗಳಲ್ಲಿ 27.66 ಸರಾಸರಿಯಲ್ಲಿ 249 ರನ್ ಗಳಿಸಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ