AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajat Patidar: ಪಟಿದಾರ್ ಶತಕವನ್ನು ತನ್ನ ಶತಕದಂತೆ ಸಂಭ್ರಮಿಸಿದ ವಿರಾಟ್ ಕೊಹ್ಲಿ: ವಿಡಿಯೋ ನೋಡಿ

LSG vs RCB, Eliminator: ಲಖನೌ ಸೂಪರ್ ಜೇಂಟ್ಸ್ ವಿರುದ್ಧ ನಡೆದ ರೋಚಕ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ 14 ರನ್​ಗಳಿಂದ ಗೆದ್ದು ಬೀಗಿತು. ಬೆಂಗಳೂರು ಪರ ಅಕ್ಷರಶಃ ಅಬ್ಬರಿಸಿದ ರಜತ್ ಪಟಿದಾರ್ (Rajat Patidar) ಆಕರ್ಷಕ ಶತಕ ಸಿಡಿಸಿ ತಂಡದ ಮೊತ್ತ 200ರ ಗಡಿ ದಾಟಲು ನೆರವಾದರು.

Rajat Patidar: ಪಟಿದಾರ್ ಶತಕವನ್ನು ತನ್ನ ಶತಕದಂತೆ ಸಂಭ್ರಮಿಸಿದ ವಿರಾಟ್ ಕೊಹ್ಲಿ: ವಿಡಿಯೋ ನೋಡಿ
Rajat Patidar and Virat Kohli LSG vs RCB
TV9 Web
| Updated By: Vinay Bhat|

Updated on:May 26, 2022 | 7:56 AM

Share

ಇಂಡಿಯನ್ ಪ್ರೀಮಿಯರ್ ಲೀಗ್ 2022 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡ ಎರಡನೇ ಕ್ವಾಲಿಫೈಯರ್​ಗೆ ಲಗ್ಗೆಯಿಟ್ಟಿದೆ. ಲಖನೌ ಸೂಪರ್ ಜೇಂಟ್ಸ್ ವಿರುದ್ಧ ನಡೆದ ರೋಚಕ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ (LSG vs RCB) 14 ರನ್​ಗಳಿಂದ ಗೆದ್ದು ಬೀಗಿತು. ಬೆಂಗಳೂರು ಪರ ಅಕ್ಷರಶಃ ಅಬ್ಬರಿಸಿದ ರಜತ್ ಪಟಿದಾರ್ (Rajat Patidar) ಆಕರ್ಷಕ ಶತಕ ಸಿಡಿಸಿ ತಂಡದ ಮೊತ್ತ 200ರ ಗಡಿ ದಾಟಲು ನೆರವಾದರು. ಕೇವಲ 54 ಎಸೆತಗಳಲ್ಲಿ 12 ಫೋರ್ ಹಾಗೂ 7 ಅಮೋಘ ಸಿಕ್ಸರ್​ಗಳನ್ನು ಸಿಡಿಸಿ ಅಜೇಯ 112 ರನ್ ಚಚ್ಚಿದರು. ಈ ಮೂಲಕ ವಿಶೇಷ ದಾಖಲೆಯನ್ನೂ ಬರೆದರು. 49 ಎಸೆತಗಳಲ್ಲಿ ಶತಕದ ಗಡಿ ಮುಟ್ಟಿದ ಪಟಿದಾರ್ ಐಪಿಎಲ್ ಇತಿಹಾಸದಲ್ಲಿ ಪ್ಲೇ ಆಫ್‌ನಲ್ಲಿ ವೇಗದ ಶತಕ ಸಿಡಿಸಿದ ಪಟ್ಟಿಯಲ್ಲಿ ಸೇರಿಕೊಂಡಿದ್ದಾರೆ. ಜೊತೆಗೆ ನಾಕೌಟ್/ಪ್ಲೇಆಫ್ ಹಂತದಲ್ಲಿ ಆರ್​ಸಿಬಿ ಪರ ಶತಕ ಸಿಡಿಸಿದ ಮೊಟ್ಟ ಮೊದಲ ಬ್ಯಾಟ್ಸ್​ಮನ್​ ಎಂಬ ದಾಖಲೆ ಕೂಡ ರಜತ್ ಪಾಲಾಗಿದೆ.

ವಿಶೇಷ ಎಂದರೆ ರಜತ್ ಅವರನ್ನು ಐಪಿಎಲ್ 2022 ಹರಾಜಿನಲ್ಲಿ ಯಾವೊಂದು ತಂಡ ಖರೀದಿ ಮಾಡಿರಲಿಲ್ಲ. ಟೂರ್ನಿ ಆರಂಭವಾದ ಬಳಿಕ ಲವಿತ್ ಸಿಸ್ನೋಡಿಯಾ ಗಾಯಾಕ್ಕೆ ತುತ್ತಾದ ಪರಿಣಾಮ ಇವರ ಬದಲು ಆರ್‌ಸಿಬಿ ತಂಡವನ್ನು ರಜತ್ ಸೇರಿಕೊಂಡರು. ಆದರೆ, ಇವರು ಈ ಮಟ್ಟಿಗೆ ಬ್ಯಾಟಿಂಗ್ ಆಡಿ ತಂಡದ ಗೆಲುವಿಗೆ ಮುಖ್ಯ ಕೊಡುಗೆ ನೀಡುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಪ್ಲೇಆಫ್ ಹಂತದಲ್ಲಿ ಸೆಂಚುರಿ ಸಿಡಿಸಿದ 5ನೇ ಆಟಗಾರ ಎಂಬ ದಾಖಲೆ ಬರೆದ ಪಟಿದಾರ್ ಶತಕ ಆರ್​ಸಿಬಿ ಪಾಳಯದಲ್ಲಿ ಸಂಭ್ರಮ ತಂದಿತು. ಅದರಲ್ಲೂ ವಿರಾಟ್ ಕೊಹ್ಲಿ ಇದು ತಮ್ಮದೇ ಶತಕ ಎಂಬಂತೆ ಡಗೌಟ್​ನಲ್ಲಿ ಕುಣಿದು ಕುಪ್ಪಳಿಸಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
Rajat Patidar: ಸೆಂಚುರಿ ಸಿಡಿಸಿ ಭರ್ಜರಿ ದಾಖಲೆ ಬರೆದ ರಜತ್ ಪಾಟಿದಾರ್
Image
ಐಪಿಎಲ್ ಬೆಟ್ಟಿಂಗ್​​ನಲ್ಲಿ ₹1ಕೋಟಿ ಕಳೆದುಕೊಂಡ ಪೋಸ್ಟ್ ಮಾಸ್ಟರ್; ಬೆಟ್ಟಿಂಗ್​​ಗೆ ಬಳಸಿದ್ದು 24 ಕುಟುಂಬಗಳ ಸ್ಥಿರ ಠೇವಣಿ
Image
IPL 2022 Eliminator: LSG vs RCB ಪಂದ್ಯಕ್ಕೆ ವರುಣನ ಅಡ್ಡಿ: ಹೀಗೆ ನಡೆಯಲಿದೆ ಮ್ಯಾಚ್
Image
LSG vs RCB IPL 2022 Eliminator Highlights: ರಜತ್ ಅಬ್ಬರದ ಶತಕ; 2ನೇ ಕ್ವಾಲಿಫೈಯರ್​ಗೆ ಆರ್​ಸಿಬಿ ಎಂಟ್ರಿ

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಆರಂಭದಲ್ಲೇ ಆಘಾತ ಅನುಭವಿಸಿತು. ಮೊದಲ ಓವರ್‌ನಲ್ಲಿಯೇ ಫಾಫ್ ಡು ಪ್ಲೆಸಿಸ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ನಂತರ ವಿರಾಟ್ ಕೊಹ್ಲಿ ಹಾಗೂ ರಜತ್ ಪಾಟಿದಾರ್ ಜೊತೆ ಉತ್ತಮ ಜೊತೆಯಾಟವಾಡುವ ಸೂಚನೆ ನೀಡಿದರು. ಆದರೆ, 25 ರನ್‌ಗಳ ಇನ್ನಿಂಗ್ಸ್ ಕಟ್ಟಿದರಷ್ಟೆ. ಉತ್ತಮವಾಗಿ ಆಡುತ್ತಿದ್ದ ಕೊಹ್ಲಿ 25 ರನ್​ಗೆ ವಿಕೆಟ್ ಒಪ್ಪಿಸಿದರು. ಇದರ ನಡುವೆ ಪಟಿದಾರ್ ಅರ್ಧಶತಕ ಸಿಡಿಸಿದರು. ಇನ್ನೊಂದೆಡೆ ದೊಡ್ಡ ಹೊಡತಕ್ಕೆ ಮುಂದಾದ ಮ್ಯಾಕ್ಸ್‌ವೆಲ್ ಕೇವಲ 9 ರನ್ ಗಳಿಸಿ ಔಟ್ ಆದರು. ಇದರಿಂದಾಗಿ ಆರ್‌ಸಿಬಿ 86ಕ್ಕೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಒಳಗಾಯಿತು. ಮಹಿಪಾಲ್ ಲುಮ್ರೂರ್ ಕೂಡ 14 ರನ್​ಗೆ ಬ್ಯಾಟ್ ಕೆಳಗಿಟ್ಟರು.

LSG vs RCB Match Report: ಆರ್​ಸಿಬಿ ಸಾಂಘಿಕ ಹೋರಾಟಕ್ಕೆ ಮಣಿದ ಲಕ್ನೋ; ಮುಂದಿನ ಎದುರಾಳಿ ರಾಜಸ್ಥಾನ

ನಂತರ ನಡೆದಿದ್ದು ರಜತ್ ಪಾಟಿದಾರ್ ಮತ್ತು ದಿನೇಶ್ ಕಾರ್ತಿಕ್ ಆಟ. ಈ ಜೋಡಿ ಮುರಿಯದ ಐದನೇ ವಿಕೆಟ್‌ಗೆ 43 ಎಸೆತಗಳಲ್ಲಿ 92 ರನ್‌ಗಳ ಕಾಣಿಕೆ ನೀಡಿದರು. ಬೌಲಿಂಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಎಲ್ಲ ಬೌಲರ್‌ಗಳು ದುಬಾರಿಯಾದರು. ಪಟಿದಾರ್ ಅಜೇಯ 112 ರನ್ ಗಳಿಸಿದರೆ, ಕಾರ್ತಿಕ್ 23 ಎಸೆತಗಳಲ್ಲಿ 5 ಫೋರ್, 1 ಸಿಕ್ಸರ್​ನೊಂದಿಗೆ ಅಜೇಯ 37 ರನ್ ಸಿಡಿಸಿದರು. ಆರ್​ಸಿಬಿ 20 ಓವರ್​ಗೆ 4 ವಿಕೆಟ್ ನಷ್ಟಕ್ಕೆ 207 ರನ್ ಕಲೆಹಾಕಿತು.

208 ರನ್‌ಗಳ ಬೃಹತ್ ಮೊತ್ತ ಬೆನ್ನತ್ತಿದ ಲಖನೌ ಕೂಡ ಆರಂಭದಲ್ಲಿಯೇ ಕ್ವಿಂಟನ್ ಡಿ ಕಾಕ್ ವಿಕೆಟ್ ಕಳೆದುಕೊಂಡಿತು. ನಂತರ ಕೆಎಲ್ ರಾಹುಲ್ ಮತ್ತು ಮನನ್ ವೋಹ್ರಾ ಬಿರುಸಿನ ಬ್ಯಾಟಿಂಗ್ ಮೂಲಕ ಆರ್‌ಸಿಬಿ ಬೌಲರ್‌ಗಳ ಬೆವರಿಳಿಸಿದರು. ನಂತರ ಉತ್ತಮವಾವಿ ಬ್ಯಾಟಿಂಗ್ ಆಡುತ್ತಿರುವ ಮನನ್ ವೋಹ್ರಾ (19) ವಿಕೆಟ್ ಒಪ್ಪಿಸಿದರು. ಬಳಿಕ ದೀಪಕ್ ಹೂಡಾ ಮತ್ತು ಕೆಎಲ್ ರಾಹುಲ್ ಉತ್ತಮ ಜೊತೆಯಾಟವಾಡಿದರೂ ತಂಡಕ್ಕೆ ಜಯ ತಂದುಕೊಡಲು ಸಾಧ್ಯವಾಗಲಿಲ್ಲ. ರಾಹುಲ್‌ 58 ಎಸೆತಗಳಿಂದ 3 ಬೌಂಡರಿ ಮತ್ತು 5 ಸಿಕ್ಸರ್‌ ನೆರವಿನಿಂದ 79 ರನ್‌ ಗಳಿಸಿದರೆ ದೀಪಕ್‌ ಹೂಡಾ 45 ರನ್‌ ಹೊಡೆದರು. ಇವರಿಬ್ಬರನ್ನು ಹೊರತುಪಡಿಸಿ ತಂಡದ ಇತರ ಆಟಗಾರರು ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಲು ವಿಫ‌ಲರಾದರು. ಆರ್​ಸಿಬಿ ಪರ ಜೋಶ್‌ ಹ್ಯಾಜೆಲ್‌ವುಡ್‌ 3 ವಿಕೆಟ್‌ ಕಿತ್ತು ಮಿಂಚಿದರು. ಈ ಗೆಲುವಿನೊಂದಿಗೆ ಆರ್​ಸಿಬಿ ಕ್ವಾಲಿಫೈಯರ್ 2 ಗೆ ಕಾಲಿಟ್ಟಿದ್ದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:56 am, Thu, 26 May 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?