Virat Kohli: ಜೋಹನ್ಸ್​ಬರ್ಗ್​​ನಲ್ಲಿ ಕಿಂಗ್ ಕೊಹ್ಲಿಯದ್ದೇ ಕಾರುಬಾರು: ಹೊಸ ದಾಖಲೆಯತ್ತ ವಿರಾಟ್

South Africa vs India: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡನೇ ಟೆಸ್ಟ್ ಪಂದ್ಯ ಸೋಮವಾರದಿಂದ ಆರಂಭವಾಗಲಿದೆ. ಜೋಹನ್ಸ್​ಬರ್ಗ್​​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಅಬ್ಬರಿಸಿದರೆ ವಿಶೇಷ ದಾಖಲೆ ನಿರ್ಮಾಣವಾಗಲಿದೆ.

Virat Kohli: ಜೋಹನ್ಸ್​ಬರ್ಗ್​​ನಲ್ಲಿ ಕಿಂಗ್ ಕೊಹ್ಲಿಯದ್ದೇ ಕಾರುಬಾರು: ಹೊಸ ದಾಖಲೆಯತ್ತ ವಿರಾಟ್
Virat Kohli IND vs SA
Follow us
TV9 Web
| Updated By: Vinay Bhat

Updated on: Jan 02, 2022 | 1:15 PM

ಸೌತ್ ಆಫ್ರಿಕಾ (India vs South Africa) ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿ ಪೈಕಿ ಭಾರತ ಈಗಾಗಲೇ ಮೊದಲ ಪಂದ್ಯ ಗೆದ್ದು 1-0 ಮುನ್ನಡೆ ಪಡೆದುಕೊಂಡಿದೆ. ಇದೀಗ ಎರಡನೇ ಕದನಕ್ಕೆ ಸಜ್ಜಾಗಿರುವ ಟೀಮ್ ಇಂಡಿಯಾ (Team India) ಜೋಹನ್ಸ್​ಬರ್ಗ್​​ಗೆ (Johannesburg) ಬಂದಿಳಿದಿದ್ದು, ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ. ಜ. 3 ಸೋಮವಾರದಿಂದ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈ ಪಂದ್ಯ ಭಾರತಕ್ಕೆ ಹಾಗೂ ನಾಯಕ ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ್ದು. ಟೀಮ್ ಇಂಡಿಯಾ ಗೆದ್ದರೆ ಇದೇ ಮೊದಲ ಬಾರಿಗೆ ಹರಿಣಗಳ ನಾಡಲ್ಲಿ ಟೆಸ್ಟ್ ಸರಣಿ ಗೆದ್ದ ಐತಿಹಾಸಿಕ ಸಾಧನೆ ಮಾಡಲಿದೆ. ಇತ್ತ ಕಿಂಗ್ ಕೊಹ್ಲಿ ಅಬ್ಬರಿಸಲೇ ಬೇಕಾದ ಒತ್ತಡದಲ್ಲಿದ್ದಾರೆ. ಒಂದು ಕಡೆ ಕೊಹ್ಲಿ ಎರಡು ವರ್ಷಗಳಿಂದ ಶತಕದ ಬರ ಎದುರಿಸುತ್ತಿದ್ದರೆ ಮತ್ತೊಂದೆಡೆ ಫಾರ್ಮ್ ಸಮಸ್ಯೆ ಬೆಂಬಿಡದೆ ಕಾಡುತ್ತಿದೆ. ಇದಕ್ಕೆಲ್ಲ ನಾಂದಿ ಹಾಡ್ತಾರ ಎಂಬುದು ಕುತೂಹಲ. ಇದರ ನಡುವೆ ನೂತನ ದಾಖಲೆ ಬರೆಯುವ ಹೊಸ್ತಿಲಲ್ಲಿದ್ದಾರೆ ಕಿಂಗ್ ಕೊಹ್ಲಿ.

ಹೌದು, ಜೋಹನ್ಸ್​ಬರ್ಗ್​​ನಲ್ಲಿ ವಿರಾಟ್ ಅಬ್ಬರಿಸಿದರೆ ವಿಶೇಷ ದಾಖಲೆ ನಿರ್ಮಾಣವಾಗಲಿದೆ. ಜೋಹನ್ಸ್​ಬರ್ಗ್​​ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಅತಿ ಹೆಚ್ಚುನ ರನ್ ಕಲೆಹಾಕಿದವರ ಪೈಕಿ ವಿರಾಟ್ ಕೊಹ್ಲಿ ಸದ್ಯ ಎರಡನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ನ್ಯೂಜಿಲೆಂಡ್​ನ ಜಾನ್ ರೈಡ್ ಇದ್ದು, ಇವರು 316 ರನ್ ಬಾರಿಸಿದ್ದಾರೆ. ಕೊಹ್ಲಿ 310 ರನ್ ಗಳಿಸಿದ್ದು, ಇನ್ನು ಕೇವಲ 7 ರನ್ ಬಾರಿಸಿದರೆ ಜೋಹನ್ಸ್​ಬರ್ಗ್​​ನಲ್ಲಿ ನಡೆದ ಟೆಸ್ಟ್​ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಸಾಧನೆ ಮಾಡಲಿದ್ದಾರೆ.

ಈ ಮೈದಾನದಲ್ಲಿ ಕೊಹ್ಲಿ ಭರ್ಜರಿ ಪ್ರದರ್ಶನ ತೋರಿದ್ದಾರೆ. ಆಡಿದ ಎರಡು ಟೆಸ್ಟ್ ಪಂದ್ಯಗಳಲ್ಲಿ ಒಂದು ಶತಕ ಮತ್ತು ಎರಡು ಅರ್ಧಶತಕ ಸಿಡಿಸಿದ್ದಾರೆ. ಚೇತೇಶ್ವರ್ ಪೂಜಾರ ಕೂಡ ಈ ಮೈದಾನದಲ್ಲಿ 229 ರನ್ ಗಳಿಸಿದ್ದು ಕೊಹ್ಲಿ ದಾಖಲೆಯನ್ನು ಮುರಿಯುವ ಅವಕಾಶವಿದೆ.

ಕೊಹ್ಲಿ ಬ್ಯಾಟ್​ನಿಂಶ ಶತಕ ಬಂದು ಎರಡು ವರ್ಷಗಳೇ ಕಳೆದಿವೆ. ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕೊಹ್ಲಿ ಬ್ಯಾಟ್​ನಿಂದ ಸೆಂಚುರಿ ಬಂದರೆ ಅದೊಂದು ದೊಡ್ಡ ದಾಖಲೆಯೇ ಆಗಲಿದೆ. ವಿರಾಟ್ ಕೊಹ್ಲಿ ಪ್ರಸ್ತುತ ಎಲ್ಲಾ ಮೂರು ಮಾದರಿಯ ಕ್ರಿಕೆಟ್ ನಲ್ಲಿ 70 ಶತಕ ಸಿಡಿಸಿದ್ದಾರೆ. ಇದರಲ್ಲಿ 41 ನಾಯಕನಾಗಿ ಶತಕ ಗಳಿಸಿದ್ದಾರೆ. ಕೊಹ್ಲಿ ಒಂದು ಶತಕ ಸಿಡಿಸಿದರೆ ಆಸ್ಟ್ರೇಲಿಯಾದ ದಿಗ್ಗಜ ಬ್ಯಾಟರ್ ರಿಕಿ ಪಾಂಟಿಂಗ್ ನಾಯಕನಾಗಿ ಗಳಿಸಿದ್ದ 41 ಶತಕಗಳ ದಾಖಲೆಯನ್ನು ಹಿಂದಿಕ್ಕಲಿದ್ದಾರೆ.

ಇನ್ನು ಆಫ್ರಿಕಾ ವಿರುದ್ಧದ 13 ಟೆಸ್ಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಈವರೆಗೆ 1128 ರನ್ ಕಲೆಹಾಕಿದ್ದಾರೆ. ಕೊಹ್ಲಿಗಿಂತ ಅಧಿಕವಾಗಿ ಮೂರು ಭಾರತೀಯ ಬ್ಯಾಟರ್​ಗಳು ಮಾತ್ರ ಈ ಸಾಧನೆ ಮಾಡಿದ್ದಾರೆ. ಸಚಿನ್ ತೆಂಡೂಲ್ಕರ್ 1741 ರನ್, ವಿರೇಂದ್ರ ಸೆಹ್ವಾಗ್ 1306 ರನ್ ಮತ್ತು ರಾಹುಲ್ ದ್ರಾವಿಡ್ 1252 ರನ್ ಕಲೆಹಾಕಿದ್ದಾರೆ. ದ. ಆಫ್ರಿಕಾ ವಿರುದ್ಧ ಭಾರತ ಇನ್ನೂ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಇಲ್ಲಿ ಕೊಹ್ಲಿ 124 ರನ್ ಬಾರಿಸಿದರೆ ಕೋಚ್ ರಾಹುಲ್ ದ್ರಾವಿಡ್ ದಾಖಲೆಯನ್ನು ಅಳಿಸಿ ಹಾಕಲಿದ್ದಾರೆ.

South Africa vs India: ಭಾರತ- ದಕ್ಷಿಣ ಆಫ್ರಿಕಾ 2ನೇ ಟೆಸ್ಟ್ ಯಾವಾಗ?, ಎಲ್ಲಿ?, ಎಷ್ಟು ಗಂಟೆಗೆ ಆರಂಭ?: ಇಲ್ಲಿದೆ ಮಾಹಿತಿ

South Africa vs India: ನ್ಯೂ ಇಯರ್ ಪಾರ್ಟಿ ಆಯ್ತು ಇದೀಗ ಪ್ರ್ಯಾಕ್ಟೀಸ್ ಸೆಷನ್: ನೆಟ್​ನಲ್ಲಿ ಕೊಹ್ಲಿ ಹುಡುಗರ ಭರ್ಜರಿ ಅಭ್ಯಾಸ

(Virat Kohli eye a huge record at Johannesburg on India vs South Africa 2nd Test Match)

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ