ಕೊಹ್ಲಿ ಸೆಲ್ಫಿಗಾಗಿ ಓಡಿ ಬಂದ ಅಭಿಮಾನಿ: ವಿರಾಟ್ ಆಡಿದ ಮಾತು ಕೇಳಿದ್ರೆ ಶಾಕ್ ಆಗ್ತೀರಾ

Virat Kohli With Fan: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗೆ ವಿಶ್ವದಲ್ಲಿ ಕೋಟ್ಯಾಂತರ ಅಭಿಮಾನಿಗಳಿದ್ದಾರೆ. ಅವರ ಜೊತೆ ಫೋಟೋ ತೆಗೆಯಲು ಕಾದು ಕುಳಿತಿರುತ್ತಾರೆ. ಇದೀಗ ಕೊಹ್ಲಿ ಜೊತೆ ಸೆಲ್ಫಿ ಬೇಕು ಎಂದು ಓಡಿ ಬಂದ ಅಭಿಮಾನಿಗೆ ವಿರಾಟ್ ಆಡಿದ ಮಾತು ಎಲ್ಲಡೆ ವೈರಲ್ ಆಗುತ್ತಿದೆ. ಇಲ್ಲಿದೆ ನೋಡಿ ಆ ವಿಡಿಯೋ.

ಕೊಹ್ಲಿ ಸೆಲ್ಫಿಗಾಗಿ ಓಡಿ ಬಂದ ಅಭಿಮಾನಿ: ವಿರಾಟ್ ಆಡಿದ ಮಾತು ಕೇಳಿದ್ರೆ ಶಾಕ್ ಆಗ್ತೀರಾ
Virat Kohli with Fan
Follow us
Vinay Bhat
|

Updated on: Aug 14, 2023 | 9:56 AM

ಟೀಮ್ ಇಂಡಿಯಾದ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ (Virat Kohli) ಅವರಿಗೆ ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಕೋಟ್ಯಾಂತರ ಅಭಿಮಾನಿಗಳಿದ್ದಾರೆ. ಕೇವಲ ಕ್ರಿಕೆಟ್ ಲೋಕದಲ್ಲಿ ಮಾತ್ರವಲ್ಲದೆ ಇತರೆ ಕ್ರೀಡೆಗಳಲ್ಲೂ ಕೊಹ್ಲಿ ಫ್ಯಾನ್ಸ್ ಬಳಗವಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿಯಲ್ಲಿದ್ದ ಕಾರಣ ಕೊಹ್ಲಿ ಈಗ ತನ್ನ ಸಮಯವನ್ನು ಹೆಂಡತಿ ಮತ್ತು ಮಗಳೊಂದಿಗೆ ಕಳೆಯುತ್ತಿದ್ದಾರೆ. ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಕೊಹ್ಲಿ ಅಪಪೂರಕ್ಕೆ ಜನರ ಕಣ್ಣಿಗೆ ಕಾಣಿಸುತ್ತಾರೆ. ಹಾಗೆ ಕಂಡಾಗಲೆಲ್ಲ ಅಭಿಮಾನಿಗಳು ಇವರನ್ನು ನೋಡಲು ಮುಗಿ ಬೀಳುತ್ತಾರೆ. ಈಗ ಅಂತಹದೆ ಘಟನೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಕೊಹ್ಲಿ ತಮ್ಮ ಕಾರಿಗೆ ಹತ್ತಲು ಮುಂದಾದಾಗ ಅಭಿಮಾನಿಯೊಬ್ಬರು ಅವರ ಬಳಿಗೆ ಬಂದು ಒಂದು ಸೆಲ್ಫಿ ಪ್ಲೀಸ್ ಎಂದು ಕೇಳಿದ್ದಾರೆ. ಆಗ ವಿರಾಟ್ ಅಭಿಮಾನಿಯ ಜೊತೆ ಯಾವುದೇ ಕೋಪ ಅಥವಾ ಅಸಮಾಧಾನವನ್ನು ತೋರಿಸದೆ, ಪ್ರ್ಯಾಕ್ಟೀಸ್​ಗೆ ತೆರಳುವ ಮೊದಲು ಸೆಲ್ಫಿ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಭಾರತದ ಏಷ್ಯಾಕಪ್ ತಂಡವು ಆಗಸ್ಟ್ 23 ರಂದು ಬೆಂಗಳೂರಿನಿಂದ ಶ್ರೀಲಂಕಾಕ್ಕೆ ತೆರಳಲಿದೆ. ಇದರ ಮೊದಲು ನಿಮ್ಮ ಜೊತೆ ಸೆಲ್ಫಿ ಕ್ಲಿಕ್ಕಿಸುತ್ತೇನೆ ಎಂದು ಕೊಹ್ಲಿ ತನ್ನ ಅಭಿಮಾನಿಗೆ ಹೇಳಿದ್ದಾರೆ.

ಇದನ್ನೂ ಓದಿ
Image
ಕೆರಿಬಿಯನ್ ಪ್ರವಾಸ ಮುಕ್ತಾಯ: ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?
Image
#HarGharTiranga: ಪ್ರಧಾನಿ ಕರೆಗೆ ಓಗೊಟ್ಟು ಟ್ವಿಟರ್​ನಲ್ಲಿ ಬ್ಲ್ಯೂ ಟಿಕ್ ಕಳೆದುಕೊಂಡ ಬಿಸಿಸಿಐ
Image
IND vs WI: ಶುಭ್​ಮನ್ ಗಿಲ್ ಬೇಜವಬ್ದಾರಿ ಆಟಕ್ಕೆ ಸೋಲಿನ ಬೆಲೆ ತೆತ್ತ ಭಾರತ..! ವಿಡಿಯೋ ನೋಡಿ
Image
IND vs WI: ಪೆವಿಲಿಯನ್‌ ಪರೇಡ್ ನಡುವೆಯೂ ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ಸಂಜು ಸ್ಯಾಮ್ಸನ್‌

ವಿರಾಟ್ ಕೊಹ್ಲಿ ಸೆಲ್ಫಿ ಕುರಿತು ಅಭಿಮಾನಿಗೆ ಹೇಳಿದ ವಿಡಿಯೋ ಇಲ್ಲಿದೆ:

ವಿರಾಟ್ ಕೊಹ್ಲಿ ಸದ್ಯ ವಿಶ್ರಾಂತಿಯಲ್ಲಿದ್ದು ಏಷ್ಯಾಕಪ್‌ಗಾಗಿ ಕೆಲವೇ ದಿನಗಳಲ್ಲಿ ಅಭ್ಯಾಸ ಆರಂಭಿಸಲಿದ್ದಾರೆ. ಕೊಹ್ಲಿ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾದ ಪ್ರಮುಖ ಸದಸ್ಯರಾಗಿದ್ದಾರೆ. ಏಷ್ಯಾಕಪ್ 2023 ಪಂದ್ಯಾವಳಿಯು ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ಆಯೋಜಿಸಲಾಗಿದೆ. ಆದರೆ, ಭಾರತ ತಂಡ ಪಾಕ್​ಗೆ ಪ್ರಯಾಣಿಸದ ಕಾರಣ ತಮ್ಮ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ. ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೆಪ್ಟೆಂಬರ್ 2 ರಂದು ಕಣಕ್ಕಿಳಿಯಲಿದೆ.

ಹೀನಾಯ ಸೋಲು: ಪಂದ್ಯ ಮುಗಿದ ಬಳಿಕ ತನಗೆ ತಾನೇ ಬೈದುಕೊಂಡ ಹಾರ್ದಿಕ್ ಪಾಂಡ್ಯ: ಏನಂದ್ರು ನೋಡಿ

ವಿರಾಟ್ ಕೊಹ್ಲಿ ಏಷ್ಯಾಕಪ್​ನಲ್ಲಿ ಅಪರೂಪದ ಸಾಧನೆ ಮಾಡಲು ಎದುರು ನೋಡುತ್ತಿದ್ದಾರೆ. ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 13,000 ರನ್ ಗಳಿಸಿದ 5ನೇ ಬ್ಯಾಟ್ಸ್‌ಮನ್ ಆಗಲು ಕೊಹ್ಲಿಗಿನ್ನು ಕೇವಲ 102 ರನ್​ಗಳ ಅಗತ್ಯವಿದೆಯಷ್ಟೆ. ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಭಾಗವಾಗಿದ್ದರು, ಆದರೆ ಒಂದೇ ಒಂದು ಪಂದ್ಯದಲ್ಲಿ ಬ್ಯಾಟ್ ಮಾಡಲು ಸಾಧ್ಯವಾಗಲಿಲ್ಲ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ