AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ವಿರಾಟ್ ಕೊಹ್ಲಿ ಅಭಿಮಾನಿಯನ್ನು ಜೈಲಿಗಟ್ಟಿದ ಕೋಲ್ಕತ್ತಾ ಪೊಲೀಸರು

Virat Kohli Fan Arrested: ಐಪಿಎಲ್ 2025 ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿತು. ಆರ್​ಸಿಬಿ ಪರ ವಿರಾಟ್ ಕೊಹ್ಲಿ 31 ಎಸೆತಗಳಲ್ಲಿ 59 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದರು. ಅವರು ಬ್ಯಾಟಿಂಗ್ ಮಾಡುತ್ತಿದ್ದಾಗ, ಅಭಿಮಾನಿಯೊಬ್ಬ ಮೈದಾನಕ್ಕೆ ಪ್ರವೇಶಿಸಿದ್ದು, ಈಗ ಆತನನ್ನು ಬಂಧಿಸಲಾಗಿದೆ.

IPL 2025: ವಿರಾಟ್ ಕೊಹ್ಲಿ ಅಭಿಮಾನಿಯನ್ನು ಜೈಲಿಗಟ್ಟಿದ ಕೋಲ್ಕತ್ತಾ ಪೊಲೀಸರು
Virat Kohli
ಪೃಥ್ವಿಶಂಕರ
|

Updated on:Mar 23, 2025 | 4:54 PM

Share

ಐಪಿಎಲ್ 2025 (IPL 2025) ರ ಮೊದಲ ಪಂದ್ಯ ಮಾರ್ಚ್ 22 ರಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಈ ಪಂದ್ಯವನ್ನು ವೀಕ್ಷಿಸಲು ಸಾವಿರಾರು ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ತಂಡವನ್ನು ಮಣಿಸಿದ ಬೆಂಗಳೂರು ತಂಡವು ಭರ್ಜರಿ ಗೆಲುವು ಸಾಧಿಸಿತು. ಆರ್​ಸಿಬಿ ಪರ ವಿರಾಟ್ ಕೊಹ್ಲಿ (Virat Kohli) ಕೂಡ ಅದ್ಭುತ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಆದರೆ ಈ ಪಂದ್ಯದಲ್ಲಿ ಭದ್ರತಾ ಲೋಪ ಎಸಗಿದ ಕಿಂಗ್ ಕೊಹ್ಲಿಯ ಅಭಿಮಾನಿಯನ್ನು ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಸೆಕ್ಷನ್ 329 ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಪೊಲೀಸರ ಈ ಕ್ರಮಕ್ಕೆ ಕಾರಣವೇನು?

ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್ ನೀಡಿದ 175 ರನ್​ಗಳ ಬೆನ್ನಟ್ಟಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಮಾಡಿ ಕೇವಲ 31 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. 13 ನೇ ಓವರ್‌ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಕೊಹ್ಲಿ ಅರ್ಧಶತಕ ಪೂರೈಸಿದ ತಕ್ಷಣ, ಅವರ ಅಭಿಮಾನಿಯೊಬ್ಬರು ಬ್ಯಾರಿಕೇಡ್ ಅನ್ನು ಮುರಿದು ಮೈದಾನಕ್ಕೆ ಪ್ರವೇಶಿಸಿದರು. ಕೊಹ್ಲಿ ಇರುವ ಕಡೆಗೆ ಓಡಿ ಬಂದ ಆತ, ಕೊಹ್ಲಿಯ ಕಾಲಿಗೆ ಬಿದ್ದು, ಆ ನಂತರ ಅವರನ್ನು ಅಪ್ಪಿಕೊಂಡನು. ಆದರೆ, ಅಷ್ಟೊತ್ತಿಗೆ ಭದ್ರತಾ ಸಿಬ್ಬಂದಿ ಬಂದು ಅಭಿಮಾನಿಯನ್ನು ಮೈದಾನದಿಂದ ಹೊರಗೆ ಕಳೆದೊಯ್ದಿದ್ದರು.

ಮೈದಾನದಲ್ಲಿ ಭದ್ರತಾ ಲೋಪವನ್ನು ಎಸಗಿ ಕೊಹ್ಲಿಯನ್ನು ತಬ್ಬಿಕೊಂಡಿದ್ದ ಅಭಿಮಾನಿಯನ್ನು ಕೋಲ್ಕತ್ತಾ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ವಾಸ್ತವವಾಗಿ ಅಭಿಮಾನಿಯ ಈ ನಡೆ ಕ್ರೀಡಾಂಗಣದಲ್ಲಿ ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿತು. ಆದರೆ ಕೊಹ್ಲಿಯ ಈ ಅಭಿಮಾನಿಗೆ ಸಾಮಾಜಿಕ ಮಾಧ್ಯಮದಲ್ಲಿ ಇತರ ಅಭಿಮಾನಿಗಳಿಂದ ಬೆಂಬಲ ಸಿಕ್ಕಿತು. ಕೊಹ್ಲಿ ಅವರನ್ನು ಭೇಟಿ ಮಾಡಲು ಇಂತಹ ಹೆಜ್ಜೆ ಇಟ್ಟಿರುವುದನ್ನು ನೋಡಿ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಕೂಡ ಆಶ್ಚರ್ಯಚಕಿತರಾಗಿದಲ್ಲದೆ, ‘ವಿರಾಟ್ ಕೊಹ್ಲಿಗೆ ಅಪಾರ ಅಭಿಮಾನಿಗಳಿದ್ದಾರೆ’ ಎಂತಲೂ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದರು.

ಕೊಹ್ಲಿ ಅರ್ಧಶತಕ ಸಿಡಿಸುತ್ತಿದ್ದಂತೆ ಮೈದಾನಕ್ಕೆ ನುಗ್ಗಿ ಕಾಲಿಗೆ ಬಿದ್ದ ಅಭಿಮಾನಿ; ವಿಡಿಯೋ ನೋಡಿ

ಕೊಹ್ಲಿ ಅದ್ಭುತ ಇನ್ನಿಂಗ್ಸ್

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು 175 ರನ್‌ ಪೇರಿಸಿತು. ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿ ಮೊದಲ ವಿಕೆಟ್‌ಗೆ 95 ರನ್‌ಗಳ ಪಾಲುದಾರಿಕೆಯನ್ನು ಮಾಡಿದರು. ಸಾಲ್ಟ್ ಔಟಾದ ನಂತರವೂ ಆಟ ಮುಂದುವರೆಸಿದ ಕೊಹ್ಲಿ ಕೊನೆಯವರೆಗೂ ಇದ್ದು, 36 ಎಸೆತಗಳಲ್ಲಿ 163 ಸ್ಟ್ರೈಕ್ ರೇಟ್‌ನಲ್ಲಿ ಅಜೇಯ 59 ರನ್ ಗಳಿಸಿ ಇನ್ನೂ 22 ಎಸೆತಗಳು ಬಾಕಿ ಇರುವಾಗಲೇ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Sun, 23 March 25

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?