AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಬಗ್ಗೆ ಗೇಲಿ ಮಾಡಿದಕ್ಕೆ ರೋಹಿತ್ ಶರ್ಮಾ ಅಭಿಮಾನಿಯನ್ನು ಕೊಂದ ಕೊಹ್ಲಿ ಫ್ಯಾನ್..!

Virat Kohli - Rohit Sharma: ತಮಿಳುನಾಡಿನ ಅರಿಯಾಲೂರು ಜಿಲ್ಲೆಯ ಪೊಯ್ಯೂರು ಗ್ರಾಮದರಾಗಿರುವ ವಿಘ್ನೇಶ್ ಹಾಗೂ ಧರ್ಮರಾಜ್ ಇಬ್ಬರೂ ಅಪ್ಪಟ ಕ್ರಿಕೆಟ್ ಪ್ರೇಮಿಗಳಾಗಿದ್ದರು.

RCB ಬಗ್ಗೆ ಗೇಲಿ ಮಾಡಿದಕ್ಕೆ ರೋಹಿತ್ ಶರ್ಮಾ ಅಭಿಮಾನಿಯನ್ನು ಕೊಂದ ಕೊಹ್ಲಿ ಫ್ಯಾನ್..!
Rohit Sharma- Virat kohli
TV9 Web
| Updated By: ಝಾಹಿರ್ ಯೂಸುಫ್|

Updated on: Oct 15, 2022 | 3:21 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ವಿರಾಟ್‌ ಕೊಹ್ಲಿ (Virat Kohli) ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದಕ್ಕೆ ತನ್ನ ಗೆಳೆಯನನ್ನೇ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. ಇಲ್ಲಿ ಕೊಲೆ ಮಾಡಿದ 21 ವರ್ಷದ ಎಸ್​. ಧರ್ಮರಾಜ್ ವಿರಾಟ್ ಕೊಹ್ಲಿಯ ಅಪ್ಪಟ ಅಭಿಮಾನಿಯಾಗಿದ್ದರೆ, ದುರಂತ ಅಂತ್ಯ ಕಂಡ ವಿಘ್ನೇಶ್ ರೋಹಿತ್ ಶರ್ಮಾ (Rohit Sharma) ಅವರ ಅಭಿಮಾನಿ.

ತಮಿಳುನಾಡಿನ ಅರಿಯಾಲೂರು ಜಿಲ್ಲೆಯ ಪೊಯ್ಯೂರು ಗ್ರಾಮದರಾಗಿರುವ ವಿಘ್ನೇಶ್ ಹಾಗೂ ಧರ್ಮರಾಜ್ ಇಬ್ಬರೂ ಅಪ್ಪಟ ಕ್ರಿಕೆಟ್ ಪ್ರೇಮಿಗಳಾಗಿದ್ದರು. ಅದರಲ್ಲೂ ಧರ್ಮರಾಜ್ ಆರ್​ಸಿಬಿ ತಂಡದ ಪಕ್ಕಾ ಅಭಿಮಾನಿ. ಮತ್ತೊಂದೆಡೆ ವಿಘ್ನೇಶ್ ಹಿಟ್​​ಮ್ಯಾನ್ ಹಾಗೂ ಮುಂಬೈ ಇಂಡಿಯನ್ಸ್ ತಂಡವನ್ನು ಇಷ್ಟಪಡುತ್ತಿದ್ದರು.

ಈ ಇಬ್ಬರು ಸ್ನೇಹಿತರಉ ಮಂಗಳವಾರ ರಾತ್ರಿ ಮಲ್ಲೂರು ಬಳಿಯ ಸಿಡ್ಕೊ ಇಂಡಸ್ಟ್ರಿಯಲ್ ಎಸ್ಟೇಟ್ ಪ್ರದೇಶದಲ್ಲಿ ಮದ್ಯ ಸೇವಿಸಿ ಪಾರ್ಟಿ ಮಾಡಿದ್ದರು. ಇದೇ ವೇಳೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಡುವೆ ಯಾರು ಉತ್ತಮ ಆಟಗಾರ ಎಂಬ ಚರ್ಚೆ ಶುರುವಾಗಿದೆ. ಈ ತರ್ಕವು ವಿಪರೀತ ಹಂತಕ್ಕೆ ಹೋಗಿ ಇಬ್ಬರು ಗಲಾಟೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಇದೇ ವೇಳೆ ವಿಘ್ನೇಶ್ ವಿರಾಟ್ ಕೊಹ್ಲಿ ಹಾಗೂ ಆರ್​ಸಿಬಿ ತಂಡವನ್ನು ಅಪಹಾಸ್ಯ ಮಾಡಿದ್ದರು. ಇದರಿಂದ ಕುಪಿತಗೊಂಡ ಧರ್ಮರಾಜ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಬ್ಯಾಟ್​ನಿಂದ ತಲೆಗೆ ಹೊಡೆದಿದ್ದ. ಇದರಿಂದ ಗಂಭೀರ ಗಾಯಗೊಂಡ ವಿಘ್ನೇಶ್ ಮೃತಪಟ್ಟಿದ್ದಾರೆ. ಈ ಘಟನೆ ಬಳಿಕ ಪರಾರಿಯಾಗಿದ್ದ ಧರ್ಮರಾಜ್​ರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಒಟ್ಟಿನಲ್ಲಿ ಅಭಿಮಾನವು ಅತಿರೇಕಕ್ಕೆ ಹೋಗಿ ಇದೀಗ ಓರ್ವ ಜೈಲು ಪಾಲಾದರೆ, ಮತ್ತೋರ್ವ ದುರಂತ ಅಂತ್ಯ ಕಾಣುವಂತಾಗಿದೆ.

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ