IND vs ENG 1st Test: ರೋಹಿತ್ ಶರ್ಮಾ ಬ್ಯಾಟಿಂಗ್ ಮಾಡುತ್ತಿರುವಾಗ ಮೈದಾನಕ್ಕೆ ಓಡಿ ಬಂದ ಕೊಹ್ಲಿ ಅಭಿಮಾನಿ: ಏನಾಯಿತು ನೋಡಿ
Rohit Sharma and Virat Kohli Fan ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದ ನಡುವೆ ವಿರಾಟ್ ಕೊಹ್ಲಿ ಅಭಿಮಾನಿಯೊಬ್ಬರು ಭದ್ರತಾ ಕ್ರಮಗಳನ್ನು ಮುರಿದು ರೋಹಿತ್ ಶರ್ಮಾ ಅವರನ್ನು ಭೇಟಿ ಮಾಡಲು ಮೈದಾನಕ್ಕೆ ಪ್ರವೇಶಿಸಿದರು. ರೋಹಿತ್ ಅವರ ಪಾದಗಳಿಗೆ ನಮಸ್ಕರಿಸಿದರು. ಇದರ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಿನ ಮೊದಲ ಟೆಸ್ಟ್ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಎರಡನೇ ದಿನದಾಟ ಶುರುವಾಗಿದೆ. ಗುರುವಾರ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ಮೊದಲ ಇನಿಂಗ್ಸ್ನಲ್ಲಿ ಕೇವಲ 246 ರನ್ ಗಳಿಗೆ ಆಲೌಟ್ ಆಯಿತು. ಆ ಬಳಿಕ ತನ್ನ ಮೊದಲ ಇನ್ನಿಂಗ್ಸ್ ಶುರುಮಾಡಿದ ಟೀಮ್ ಇಂಡಿಯಾಕ್ಕೆ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ಒದಗಿಸಿದರು. ಆದರೆ, ಇದರ ನಡುವೆ ಅನಿರೀಕ್ಷಿತ ಘಟನೆಯೊಂದು ನಡೆಯಿತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಅಭಿಮಾನಿಯೊಬ್ಬರು ಭದ್ರತಾ ಕ್ರಮಗಳನ್ನು ಉಲ್ಲಂಘಿಸಿ ರೋಹಿತ್ ಶರ್ಮಾ ಅವರನ್ನು ಭೇಟಿ ಮಾಡಲು ಮೈದಾನಕ್ಕೆ ಪ್ರವೇಶಿಸಿದ್ದಾರೆ. ರೋಹಿತ್ ಶರ್ಮಾ ಬಳಿ ತೆರಳಿ ಅವರ ಪಾದಗಳಿಗೆ ನಮಸ್ಕರಿಸಿದ್ದಾರೆ. ಅಭಿಮಾನಿ ವಿರಾಟ್ ಕೊಹ್ಲಿ ಅವರ ಜೆರ್ಸಿ ಸಂಖ್ಯೆ 18 ಅನ್ನು ಧರಿಸಿದ್ದರು. ಜೆರ್ಸಿಯಲ್ಲಿ ಕೊಹ್ಲಿ ಮತ್ತು 18 ನಂಬರ್ ಬರೆಯಲಾಗಿತ್ತು. ರೋಹಿತ್ ಅವರು ವಿರಾಟ್ ಅಭಿಮಾನಿಗೆ ಬೇಸರ ಮಾಡಲಿಲ್ಲ. ಕಾಲುಗಳನ್ನು ಮುಟ್ಟಲು ಅನುಮತಿ ನೀಡಿದರು. ಆದರೆ ಕ್ಷಣಮಾತ್ರದಲ್ಲಿ ಭದ್ರತಾ ಸಿಬ್ಬಂದಿ ಸ್ಪಂದಿಸಿ ಪರಿಸ್ಥಿತಿಯನ್ನು ಸರಿಪಡಿಸಿದರು. ಈ ಘಟನೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದ ಕೆಲಕಾಲ ಆಟಕ್ಕೆ ಕೂಡ ಅಡ್ಡಿಯಾಯಿತು.
Lucky Fan Meeted Rohit 🥲🥹#INDvENG #RohitSharma pic.twitter.com/7IN2yYsRmH
— Kiran (@KIRANPSPK45) January 25, 2024
ವಿರಾಟ್ ಕೊಹ್ಲಿ ಮೊದಲ ಎರಡು ಟೆಸ್ಟ್‌ಗಳಲ್ಲಿ ಆಡುವುದಿಲ್ಲ. ವೈಯಕ್ತಿಕ ಕಾರಣದಿಂದ ಮೊದಲ ಮತ್ತು ಎರಡನೇ ಟೆಸ್ಟ್ನಿಂದ ಹೊರಗುಳಿಯುತ್ತೇನೆ ಎಂದು ಬಿಸಿಸಿಐಗೆ ತಿಳಿಸಿದ್ದಾರೆ. ಅಲ್ಲದೆ, ಬಿಸಿಸಿಎ ಕೂಡ ಟ್ವೀಟ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಿದೆ. ಇನ್ನುಳಿದ ಮೂರು ಟೆಸ್ಟ್ ಪಂದ್ಯಗಳಲ್ಲಿ ಆಡುತ್ತಾರಾ ಎಂಬುದು ನೋಡಬೇಕಿದೆ.
ICC Awards 2023: ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿ ಗೆದ್ದ ಉಸ್ಮಾನ್ ಖವಾಜಾ..!
ಪಂದ್ಯದ ಕುರಿತು ಮಾತನಾಡುತ್ತಾ, ಇಂಗ್ಲೆಂಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ಭಾರತದ ಸ್ಪಿನ್ನರ್‌ಗಳಾದ ರವಿ ಅಶ್ವಿನ್, ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಬೌಲಿಂಗ್ಗೆ ತತ್ತರಿಸಿ ಹೋಯಿತು. ಇಂಗ್ಲೆಂಡ್ ಪರ ಬೆನ್ ಸ್ಟೋಕ್ಸ್ ಅತ್ಯುತ್ತಮ ಇನ್ನಿಂಗ್ಸ್ ಆಡಿದರು. ಅವರು 70 ರನ್ ಗಳಿಸಿ ಔಟಾದರು. ಇದರೊಂದಿಗೆ ಇಂಗ್ಲೆಂಡ್ 246 ರನ್‌ಗಳಿಗೆ ಆಲೌಟ್ ಆಯಿತು.
ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತಕ್ಕೆ ಯಶಸ್ವಿ ಜೈಸ್ವಾಲ್ ಹಾಗೂ ನಾಯಕ ರೋಹಿತ್ ಶರ್ಮಾ (24) ಸ್ಫೋಟಕ ಆರಂಭ ನೀಡಿದರು (80 ರನ್ಗಳ ಜೊತೆಯಾಟ). ಆರಂಭದಿಂದಲೂ ಹೊಡಿಬಡಿ ಆಟಕ್ಕೆ ಮುಂದಾದ ಜೈಸ್ವಾಲ್ 70 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 70 ರನ್ ಕಲೆಹಾಕಿದ್ದಾರೆ. ಗಿಲ್ ಅಜೇಯ 14 ರನ್ ಗಳಿಸಿ ಇಂದಿಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:17 am, Fri, 26 January 24