AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಭರ್ಜರಿ ಫೀಲ್ಡಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ ಕಿಂಗ್ ಕೊಹ್ಲಿ

Virat Kohli Fielding Video: ಟಿಮ್ ಡೇವಿಡ್ ಕ್ರೀಸ್​ನಲ್ಲಿದ್ದ ಕಾರಣ ಅಂತಿಮ ಓವರ್​ಗಳ ವೇಳೆ ಬಿಗ್ ಹಿಟ್ ಅನ್ನು ನಿರೀಕ್ಷಿಸಲಾಗಿತ್ತು. ಆದರೆ ಈ ವೇಳೆ ವಿರಾಟ್ ಕೊಹ್ಲಿ ಮಾಡಿದ ಅತ್ಯಾಧ್ಬುತ ಫೀಲ್ಡಿಂಗ್​ನಿಂದ ಟಿಮ್ ಡೇವಿಡ್ ಹೊರನಡೆಯಬೇಕಾಯಿತು.

VIDEO: ಭರ್ಜರಿ ಫೀಲ್ಡಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ ಕಿಂಗ್ ಕೊಹ್ಲಿ
Virat Kohli
TV9 Web
| Edited By: |

Updated on: Oct 17, 2022 | 3:54 PM

Share

T20 World Cup 2022: ಬ್ರಿಸ್ಬೇನ್​ನಲ್ಲಿ ನಡೆದ ಮೊದಲ ಅಭ್ಯಾಸದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ (Team India) 6 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿಗಳೆಂದರೆ ಮೊಹಮ್ಮದ್ ಶಮಿ (Mohammed Shami) ಹಾಗೂ ವಿರಾಟ್ ಕೊಹ್ಲಿ (Virat Kohli). ಇಲ್ಲಿ ಶಮಿ ಬೌಲಿಂಗ್ ಮೂಲಕ ಮಿಂಚಿದರೆ, ಕಿಂಗ್ ಕೊಹ್ಲಿ ಅದ್ಭುತ ಫೀಲ್ಡಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಆರೋನ್ ಫಿಂಚ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಕೆಎಲ್ ರಾಹುಲ್ ಟೀಮ್ ಇಂಡಿಯಾ ಭರ್ಜರಿ ಆರಂಭ ಒದಗಿಸಿದ್ದರು. ಒಂದೆಡೆ ರೋಹಿತ್ ಶರ್ಮಾ ರನ್​ ಖಾತೆ ತೆರೆಯುವ ಮೂಲಕ ಕೆಎಲ್​ಆರ್ ಅಬ್ಬರಿಸಲಾರಂಭಿಸಿದರು. ಪರಿಣಾಮ ಮೊದಲ ವಿಕೆಟ್​ಗೆ 78 ರನ್​ಗಳ ಜೊತೆಯಾಟ ಮೂಡಿಬಂತು.

ಈ ಹಂತದಲ್ಲಿ ರೋಹಿತ್ ಶರ್ಮಾ (15) ಔಟಾದರೆ, ಆ ಬಳಿಕ ಬಂದ ವಿರಾಟ್ ಕೊಹ್ಲಿ (19) ಹೆಚ್ಚು ಹೊತ್ತು ನಿಲ್ಲಲಿಲ್ಲ. ಇನ್ನು ಹಾರ್ದಿಕ್ ಪಾಂಡ್ಯ ಕೂಡ 2 ರನ್​​ಗಳಿಸಿ ಇನಿಂಗ್ಸ್​ ಅಂತ್ಯಗೊಳಿಸಿದ್ದರು. ಮತ್ತೊಂದೆಡೆ ಕೆಎಲ್ ರಾಹುಲ್ 33 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 6 ಫೋರ್​ನೊಂದಿಗೆ 57 ರನ್ ಬಾರಿಸಿ ಮಿಂಚಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್ 33 ಎಸೆತಗಳಲ್ಲಿ 6 ಪೋರ್ ಹಾಗೂ 1 ಸಿಕ್ಸ್​ನೊಂದಿಗೆ ಅರ್ಧಶತಕ ಬಾರಿಸಿದರು. ಪರಿಣಾಮ ಟೀಮ್ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 186 ರನ್​ ಕಲೆಹಾಕಿತು.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಆಸ್ಟ್ರೇಲಿಯಾಗೆ ನಾಯಕ ಆರೋನ್ ಫಿಂಚ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಆರಂಭದಿಂದಲೇ ಟೀಮ್ ಇಂಡಿಯಾ ಬೌಲರುಗಳನ್ನು ದಂಡಿಸಲಾರಂಭಿಸಿದ ಫಿಂಚ್ ಆಸ್ಟ್ರೇಲಿಯಾ ತಂಡಕ್ಕೆ ಗೆಲುವಿನ ಆಸೆ ಚಿಗುರಿಸಿದ್ದರು. ಆದರೆ ಮತ್ತೊಂದು ತುದಿಯಿಂದ ಫಿಂಚ್​ಗೆ ಉತ್ತಮ ಸಾಥ್ ದೊರಕಿರಲಿಲ್ಲ.

ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಸ್ಟೀವ್ ಸ್ಮಿತ್ (11), ಗ್ಲೆನ್ ಮ್ಯಾಕ್ಸ್​ವೆಲ್ (23), ಮಾರ್ಕಸ್ ಸ್ಟೊಯಿನಿಸ್ (7) ಕೈ ಕೊಟ್ಟಿದ್ದರು. ಪರಿಣಾಮ ಕೊನೆಯ 2 ಓವರ್​ಗಳಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು 16 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆಯೂ ಆರೋನ್ ಫಿಂಚ್ ಕ್ರೀಸ್​ನಲ್ಲಿದ್ದರು. ಹೀಗಾಗಿ ಆಸೀಸ್ ತಂಡ ಗೆಲ್ಲುವ ವಿಶ್ವಾಸದಲ್ಲಿತ್ತು. ಆದರೆ ಮೊದಲ ಎಸೆತದಲ್ಲೇ ಫಿಂಚ್ (79) ವಿಕೆಟ್ ಕಬಳಿಸುವ ಮೂಲಕ ಹರ್ಷಲ್ ಪಟೇಲ್ ಯಶಸ್ಸು ತಂದುಕೊಟ್ಟರು.

ಇದಾಗ್ಯೂ ಟಿಮ್ ಡೇವಿಡ್ ಕ್ರೀಸ್​ನಲ್ಲಿದ್ದ ಕಾರಣ ಅಂತಿಮ ಓವರ್​ಗಳ ವೇಳೆ ಬಿಗ್ ಹಿಟ್ ಅನ್ನು ನಿರೀಕ್ಷಿಸಲಾಗಿತ್ತು. ಆದರೆ ಈ ವೇಳೆ ವಿರಾಟ್ ಕೊಹ್ಲಿ ಮಾಡಿದ ಅತ್ಯಾಧ್ಬುತ ಫೀಲ್ಡಿಂಗ್​ನಿಂದ ಟಿಮ್ ಡೇವಿಡ್ ಹೊರನಡೆಯಬೇಕಾಯಿತು. 19ನೇ ಓವರ್​ನ 2ನೇ ಎಸೆತದಲ್ಲಿ ಜೋಶ್ ಇಂಗ್ಲಿಸ್ ಫ್ರಂಟ್​ನಲ್ಲೇ ಬಾರಿಸಿ ಟಿಮ್ ಡೇವಿಡ್​ಗೆ ಸ್ಟ್ರೈಕ್ ನೀಡುವ ಯತ್ನ ಮಾಡಿದ್ದರು. ಆದರೆ ಅಲ್ಲೇ ಫೀಲ್ಡಿಂಗ್​ನಲ್ಲಿ ವಿರಾಟ್ ಕೊಹ್ಲಿ ಚಕ್ಕನೆ ಚೆಂಡನ್ನು ಹಿಡಿದು ವಿಕೆಟ್ ನೇರವಾಗಿ ಎಸೆಯುವ ಮೂಲಕ ಅದ್ಭುತ ರನೌಟ್ ಮಾಡಿದರು. ಈ ಮೂಲಕ ಟೀಮ್ ಇಂಡಿಯಾಗೆ ಮತ್ತೊಂದು ಯಶಸ್ಸು ತಂದುಕೊಟ್ಟರು.

ಅಂತಿಮವಾಗಿ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು 11 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ದಾಳಿಗಿಳಿದ ಮೊಹಮ್ಮದ್ ಶಮಿ ಅವರ ಮೊದಲೆರಡು ಎಸೆತಗಳಲ್ಲಿ ಪ್ಯಾಟ್ ಕಮಿನ್ಸ್​ ಎರೆಡೆರಡು ರನ್ ಓಡಿದರು. 3ನೇ ಎಸೆತದಲ್ಲಿ ಭರ್ಜರಿ ಹೊಡೆತ ಬಾರಿಸಿದ ಕಮಿನ್ಸ್ ಚೆಂಡು ಸಿಕ್ಸ್ ಆಗುವ ನಿರೀಕ್ಷೆಯಲ್ಲಿದ್ದರು.

ಆದರೆ ಲಾಂಗ್ ಆನ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ವಿರಾಟ್ ಕೊಹ್ಲಿ ಅತ್ಯಾದ್ಭುತವಾಗಿ ಜಿಗಿಯುವ ಮೂಲಕ ಒಂದೇ ಕೈಯಲ್ಲಿ ಚೆಂಡನ್ನು ಹಿಡಿದರು. ಈ ಅಧ್ಭುತ ಕ್ಯಾಚ್ ಫಲವಾಗಿ ಆಸ್ಟ್ರೇಲಿಯಾದ ಸಿಕ್ಸ್ ಕೈತಪ್ಪಿತು. ಅಷ್ಟೇ ಅಲ್ಲದೆ ಡೇಂಜರಸ್ ಪ್ಯಾಟ್ ಕಮಿನ್ಸ್ ಕೂಡ ಔಟಾದರು. ಇದೀಗ ವಿರಾಟ್ ಕೊಹ್ಲಿಯ ಈ ಅತ್ಯಾಧ್ಭುತ ಫೀಲ್ಡಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಲ್ಲದೆ ಮೈದಾನದಲ್ಲಿ ಫೀಲ್ಡಿಂಗ್ ಮೂಲಕವೇ ಪರಾಕ್ರಮ ಮೆರೆದ ಕಿಂಗ್ ಕೊಹ್ಲಿಯ ಪ್ರದರ್ಶನಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ