Virat Kohli: 8 ವರ್ಷಗಳ ನಂತರ ಆರಂಭಿಕನಾದ ವಿರಾಟ್ ಕೊಹ್ಲಿ: ಫಲಿತಾಂಶ ಒಂದೇ..!

India vs Bangladesh 2nd ODI: ಏಕದಿನ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿಯ ಕಳಪೆ ಫಾರ್ಮ್​ ಮುಂದುವರೆದಿದೆ. ಕಳೆದ 7 ಏಕದಿನ ಪಂದ್ಯಗಳಲ್ಲಿ ಕೊಹ್ಲಿ 10.42 ಸರಾಸರಿಯಲ್ಲಿ ಕೇವಲ 73 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ.

Virat Kohli: 8 ವರ್ಷಗಳ ನಂತರ ಆರಂಭಿಕನಾದ ವಿರಾಟ್ ಕೊಹ್ಲಿ: ಫಲಿತಾಂಶ ಒಂದೇ..!
Virat Kohli
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 07, 2022 | 5:46 PM

India vs Bangladesh 2nd ODI:  ಢಾಕಾದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಪರ ಆರಂಭಿಕನಾಗಿ ವಿರಾಟ್ ಕೊಹ್ಲಿ (Virat Kohli) ಕಣಕ್ಕಿಳಿದಿದ್ದರು. ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 7 ವಿಕೆಟ್ ನಷ್ಟಕ್ಕೆ 271 ಕಲೆಹಾಕಿತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಲು ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಮೈದಾನಕ್ಕಿಳಿದಿದ್ದರು. ಫೀಲ್ಡಿಂಗ್​ ವೇಳೆ ಟೀಮ್ ಇಂಡಿಯಾನ ರೋಹಿತ್ ಶರ್ಮಾ ಅವರ ಹೆಬ್ಬೆರಳಿಗೆ ಗಾಯವಾಗಿದ್ದು, ಹೀಗಾಗಿ ಅವರು ಅರ್ಧದಲ್ಲೇ ಮೈದಾನ ತೊರೆದಿದ್ದರು. ಅಲ್ಲದೆ ಗಾಯ ಗಂಭೀರವಾಗಿದ್ದ ಕಾರಣ ಅವರು ಬ್ಯಾಟಿಂಗ್​ಗೆ ಇಳಿದಿರಲಿಲ್ಲ. ಹೀಗಾಗಿ ವಿರಾಟ್ ಕೊಹ್ಲಿ ಆರಂಭಿಕನಾಗಿ ಕಣಕ್ಕಿಳಿಯಬೇಕಾಯಿತು.

ವಿಶೇಷ ಎಂದರೆ 8 ವರ್ಷಗಳ ಬಳಿಕ ಏಕದಿನ ಕ್ರಿಕೆಟ್​ನಲ್ಲಿ ಆರಂಭಿಕನಾಗಿ ಕ್ರೀಸ್​ಗೆ ಬಂದ ವಿರಾಟ್ ಕೊಹ್ಲಿ 8 ನಿಮಿಷಗಳ ಕಾಲ ಕ್ರೀಸ್‌ನಲ್ಲಿ ಉಳಿಯಲು ಸಾಧ್ಯವಾಗಲಿಲ್ಲ. ಅಂದರೆ ಒನ್​ಡೇ ಕ್ರಿಕೆಟ್​ನಲ್ಲಿ ಕೊಹ್ಲಿ ಕೊನೆಯ ಬಾರಿ ಟೀಮ್ ಇಂಡಿಯಾ ಪರ​ ಆರಂಭಿಕನಾಗಿ ಆಡಿದ್ದು 2014 ರಲ್ಲಿ. ಅಂದು ನ್ಯೂಜಿಲೆಂಡ್ ವಿರುದ್ಧ ಆರಂಭಿಕರಾಗಿ ಆಡಿದ್ದ ಕೊಹ್ಲಿ 3 ರನ್​ಗಳಿಸಿ ಔಟಾಗಿದ್ದರು.

ಇದೀಗ ಬಾಂಗ್ಲಾದೇಶ್ ವಿರುದ್ಧ ಕೂಡ ಆರಂಭಿಕನಾಗಿ ವಿಫಲರಾಗಿದ್ದಾರೆ. ಇಬಾದತ್ ಹುಸೇನ್​ ಎಸೆದ 2ನೇ ಓವರ್​ನ 5 ಎಸೆತದಲ್ಲಿ ಬ್ಯಾಟ್ ಎಡ್ಜ್​ ಆಗಿ ವಿರಾಟ್ ಕೊಹ್ಲಿ ಬೌಲ್ಡ್ ಆದರು. ಇದರೊಂದಿಗೆ 8 ವರ್ಷಗಳ ಬಳಿಕ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿಯ ಇನಿಂಗ್ಸ್​ ಅಂತ್ಯವಾಯಿತು.

ಇದನ್ನೂ ಓದಿ
Image
IPL 2023: RCB ಈ ನಾಲ್ವರು ಆಟಗಾರರ ಖರೀದಿಗೆ ಮುಂದಾಗಬಹುದು..!
Image
IPL 2023: ಈ ಬಾರಿಯ ಐಪಿಎಲ್​ನಿಂದ 5 ಆಟಗಾರರು ಔಟ್..!
Image
IPL 2023 Mini Auction: ಐಪಿಎಲ್ ಮಿನಿ ಹರಾಜು ಲೀಸ್ಟ್ ಔಟ್: ಯಾವ ದೇಶದಿಂದ ಎಷ್ಟು ಆಟಗಾರರು?
Image
New Record: ಅತ್ಯಧಿಕ ಟೆಸ್ಟ್ ಶತಕ: ಕೊಹ್ಲಿ, ರೂಟ್​ರನ್ನು ಹಿಂದಿಕ್ಕಿದ ಸ್ಟೀವ್ ಸ್ಮಿತ್

ಏಕದಿನ ಕ್ರಿಕೆಟ್​ನಲ್ಲಿ ಕಳಪೆ ಫಾರ್ಮ್:

ಏಕದಿನ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿಯ ಕಳಪೆ ಫಾರ್ಮ್​ ಮುಂದುವರೆದಿದೆ. ಕಳೆದ 7 ಏಕದಿನ ಪಂದ್ಯಗಳಲ್ಲಿ ಕೊಹ್ಲಿ 10.42 ಸರಾಸರಿಯಲ್ಲಿ ಕೇವಲ 73 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಅಚ್ಚರಿಯೆಂದರೆ ಕಳೆದ 7 ಇನ್ನಿಂಗ್ಸ್‌ನಲ್ಲಿ ಒಮ್ಮೆಯು 20ರ ಗಡಿದಾಟಿಲ್ಲ. ಅಂದರೆ 5, 9, 17, 16, 0, 18, 8 ರನ್​ಗಳಿಸಿ ಔಟಾಗಿದ್ದರು. ಇದೀಗ 5 ರನ್​ನೊಂದಿಗೆ 8ನೇ ಬಾರಿಗೆ ಬೇಗನೆ ವಿಕೆಟ್ ಒಪ್ಪಿಸಿದ್ದಾರೆ. ಮುಂಬರುವ ಏಕದಿನ ವಿಶ್ವಕಪ್​ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿಯ ಕಳಪೆ ಫಾರ್ಮ್ ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ.

ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು