ICC Test Rankings: ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ರೋಹಿತ್ ಹಿಂದಿಕ್ಕಿದ ಕಿಂಗ್ ಕೊಹ್ಲಿ! ನಂ.1 ಯಾರು ಗೊತ್ತಾ?

Virat Kohli: ಐಸಿಸಿ ಇತ್ತೀಚೆಗೆ ಬಿಡುಗಡೆಗೊಳಿಸಿರುವ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಕೊಹ್ಲಿ ಐದನೇ ಸ್ಥಾನಕ್ಕೇರಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಭಾರತದ ನಂಬರ್ ಒನ್ ಟೆಸ್ಟ್ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ICC Test Rankings: ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ರೋಹಿತ್ ಹಿಂದಿಕ್ಕಿದ ಕಿಂಗ್ ಕೊಹ್ಲಿ! ನಂ.1 ಯಾರು ಗೊತ್ತಾ?
ಕೊಹ್ಲಿ
Follow us
TV9 Web
| Updated By: ಪೃಥ್ವಿಶಂಕರ

Updated on:Mar 09, 2022 | 3:11 PM

ಐಸಿಸಿ ಟೆಸ್ಟ್ ಶ್ರೇಯಾಂಕ (ICC Test Rankings)ದಲ್ಲಿ ವಿರಾಟ್ ಕೊಹ್ಲಿಗೆ ದೊಡ್ಡ ಉಡುಗೂರೆ ಸಿಕ್ಕಿದೆ. ಐಸಿಸಿ ಇತ್ತೀಚೆಗೆ ಬಿಡುಗಡೆಗೊಳಿಸಿರುವ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಕೊಹ್ಲಿ ಐದನೇ ಸ್ಥಾನಕ್ಕೇರಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ (Virat Kohli) ಭಾರತದ ನಂಬರ್ ಒನ್ ಟೆಸ್ಟ್ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಈ ಹಿಂದೆ ಏಳನೇ ಸ್ಥಾನದಲ್ಲಿದ್ದ ಅವರು ಈಗ ಎರಡು ಸ್ಥಾನ ಮೇಲೇರಿ ಐದನೇ ಸ್ಥಾನಕ್ಕೆ ತಲುಪಿದ್ದಾರೆ. ಕೊಹ್ಲಿ ನಂತರ ರೋಹಿತ್ ಶರ್ಮಾ (Rohit Sharma) ಇದ್ದು, ಅವರಿಗ ಆರನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯದ ಮಾರ್ನಸ್ ಲ್ಯಾಬುಸ್ಚಾಗ್ನೆ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಇಂಗ್ಲೆಂಡ್ ನಾಯಕ ಜೋ ರೂಟ್ ಎರಡನೇ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಮೂರನೇ ಸ್ಥಾನ ತಲುಪಿದ್ದಾರೆ. ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಬೌಲರ್‌ಗಳ ಬಗ್ಗೆ ಮಾತನಾಡುವುದಾದರೆ, ಪ್ಯಾಟ್ ಕಮಿನ್ಸ್ ನಂಬರ್ ಒನ್ ಸ್ಥಾನದಲ್ಲಿ ಉಳಿದಿದ್ದಾರೆ. ಅವರ ನಂತರ ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡ, ಶಾಹೀನ್ ಅಫ್ರಿದಿ ಮತ್ತು ಕೈಲ್ ಜೇಮಿಸನ್ ಇದ್ದಾರೆ. ನೀಲ್ ವ್ಯಾಗ್ನರ್ ಮತ್ತು ಜೋಶ್ ಹ್ಯಾಜಲ್‌ವುಡ್ ಟಾಪ್-10 ರಲ್ಲಿ ಸ್ಥಾನ ಪಡೆದಿದ್ದಾರೆ. ವ್ಯಾಗ್ನರ್ ಈಗ ಎಂಟನೇ ಸ್ಥಾನದಲ್ಲಿದ್ದರೆ, ಹ್ಯಾಜಲ್‌ವುಡ್ ಒಂಬತ್ತನೇ ಸ್ಥಾನದಲ್ಲಿದ್ದಾರೆ.

ಹೆಡ್ ಬದಲಿಗೆ ಕೊಹ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಮೊಹಾಲಿ ಟೆಸ್ಟ್‌ಗೆ ಮೊದಲು, ವಿರಾಟ್ ಕೊಹ್ಲಿ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಏಳನೇ ಸ್ಥಾನದಲ್ಲಿದ್ದರು. ಇದೀಗ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ವೈಫಲ್ಯದಿಂದ ಕೊಹ್ಲಿ ಲಾಭ ಪಡೆದಿದ್ದಾರೆ. ಪಾಕಿಸ್ತಾನ ವಿರುದ್ಧದ ರಾವಲ್ಪಿಂಡಿ ಟೆಸ್ಟ್‌ನಲ್ಲಿ ಹೆಡ್‌ ಕಳಪೆ ಆಟ ಪ್ರದರ್ಶಿಸಿದ್ದಾರೆ. ಅದೇ ಸಮಯದಲ್ಲಿ, ಮೊಹಾಲಿ ಟೆಸ್ಟ್‌ನಲ್ಲಿ ಕೊಹ್ಲಿ ಏಕೈಕ ಇನ್ನಿಂಗ್ಸ್‌ನಲ್ಲಿ 45 ರನ್ ಗಳಿಸಿದರು. ಹೀಗಾಗಿ ವಿರಾಟ್ ಐದನೇ ಸ್ಥಾನಕ್ಕೆ ತಲುಪಿದ್ದಾರೆ. ಅದೇ ಸಮಯದಲ್ಲಿ, ಹೆಡ್ ಏಳನೇ ಸ್ಥಾನಕ್ಕೆ ಜಾರಿದ್ದಾರೆ. ರೋಹಿತ್ ಶರ್ಮಾ ಮೊದಲಿನಂತೆ ಆರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಪಂತ್ 10ನೇ ಸ್ಥಾನ ಇತ್ತೀಚಿನ ಐಸಿಸಿ ಶ್ರೇಯಾಂಕದಲ್ಲಿ ರಿಷಬ್ ಪಂತ್ 2 ಸ್ಥಾನ ಮೇಲಕ್ಕೇರಿ 10 ನೇ ಸ್ಥಾನಕ್ಕೆ ತಲುಪಿದ್ದಾರೆ. ಮೊಹಾಲಿ ಟೆಸ್ಟ್‌ನಲ್ಲಿ ಪಂತ್ 96 ರನ್‌ಗಳ ಇನ್ನಿಂಗ್ಸ್ ಆಡಿದ್ದರು. ಟಾಪ್-10ರಲ್ಲಿ ಬೇರೆ ಯಾವುದೇ ಬದಲಾವಣೆ ಇಲ್ಲ. ಶ್ರೀಲಂಕಾ ನಾಯಕ ದಿಮುತ್ ಕರುಣಾರತ್ನೆ ಎಂಟನೇ ಸ್ಥಾನದಲ್ಲಿದ್ದು, ಪಾಕ್ ನಾಯಕ ಬಾಬರ್ ಅಜಮ್ ಒಂಬತ್ತನೇ ಸ್ಥಾನದಲ್ಲಿದ್ದಾರೆ.

ಭಾರತದ ಆಲ್ ರೌಂಡರ್ ರವೀಂದ್ರ ಜಡೇಜಾ ಬ್ಯಾಟಿಂಗ್​ನಲ್ಲಿ ಭರ್ಜರಿ ಜಿಗಿತ ನಡೆಸಿದ್ದಾರೆ. ಅವರ ಅಜೇಯ 175 ರ ಕಾರಣದಿಂದಾಗಿ ಜಡೇಜಾ 17 ಸ್ಥಾನಗಳನ್ನು ಮೇಲಕ್ಕೆರಿದ್ದಾರೆ. ಅವರು ಈಗ ಟೆಸ್ಟ್ ಶ್ರೇಯಾಂಕದಲ್ಲಿ 37 ನೇ ಸ್ಥಾನದಲ್ಲಿದ್ದು, ಇದು ಅವರ ಅತ್ಯುತ್ತಮ ಶ್ರೇಯಾಂಕವಾಗಿದೆ.

ಇದನ್ನೂ ಓದಿ:IND vs SL: 222 ರನ್​ಗಳಿಂದ ಸೋತ ಶ್ರೀಲಂಕಾ! ಕೊಹ್ಲಿಗೆ ಗೆಲುವಿನ ಗಿಫ್ಟ್ ಕೊಟ್ಟ ಟೀಂ ಇಂಡಿಯಾ

Published On - 2:31 pm, Wed, 9 March 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್