Virat Kohli: ಏಷ್ಯಾಕಪ್‌ಗಾಗಿ ಪೂರ್ವ ತಯಾರಿ ಆರಂಭಿಸಿದ ಕೊಹ್ಲಿ; ವಿಡಿಯೋ ನೋಡಿ
Virat Kohli: ಕಳಪೆ ಫಾರ್ಮ್ನಿಂದ ಬಳಲುತ್ತಿರುವ ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ಕೆಲವೇ ರನ್ ಗಳಿಸಿದ್ದಾರೆ. ಐಪಿಎಲ್ 2022 ರಲ್ಲಿ ಎರಡು ಅರ್ಧಶತಕಗಳನ್ನು ಹೊರತುಪಡಿಸಿ, ಈ ವರ್ಷ ಟಿ 20 ಕ್ರಿಕೆಟ್‌ನಲ್ಲಿ ಅವರ ಬ್ಯಾಟ್‌ನಿಂದ ಕೇವಲ ಒಂದು ಅರ್ಧಶತಕ ಮಾತ್ರ ಬಂದಿದೆ.
2022ರ ಏಷ್ಯಾಕಪ್‌ಗೆ (Asia Cup 2022) ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದ್ದು, ಕೆಲವು ದಿನಗಳಿಂದ ಊಹಾಪೋಹದಲ್ಲಿದ್ದ ಹಲವು ಹಲವು ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ಈ ಪ್ರಶ್ನೆಗಳಲ್ಲಿ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಈ ಪಂದ್ಯಾವಳಿಗೆ ಆಯ್ಕೆ ಆಗ್ತಾರ ಎಂಬುದು ಒಂದು ಪ್ರಶ್ನೆಯಾಗಿತ್ತು. ಆಗಸ್ಟ್ 27 ರಿಂದ ಆರಂಭವಾಗಲಿರುವ ಟೂರ್ನಿಯಲ್ಲಿ ಕೊಹ್ಲಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಕೊಹ್ಲಿ ಕಳೆದ ಸುಮಾರು 3 ವಾರಗಳಿಂದ ಮೈದಾನದಿಂದ ಹೊರಗುಳಿದು ವಿಶ್ರಾಂತಿ ಪಡೆಯುತ್ತಿದ್ದರೂ ಇದೀಗ ಈ ಅನುಭವಿ ಬ್ಯಾಟ್ಸ್‌ಮನ್ ಪಾಕಿಸ್ತಾನವನ್ನು ಎದುರಿಸಲು ತಯಾರಿ ಆರಂಭಿಸಿದ್ದಾರೆ.
ಏಷ್ಯಾಕಪ್‌ನಲ್ಲಿ ಭಾರತದ ಮೊದಲ ಪಂದ್ಯ ಆಗಸ್ಟ್ 28 ರಂದು ಪಾಕಿಸ್ತಾನದ ವಿರುದ್ಧ ನಡೆಯಲಿದೆ. ಟೀಂ ಇಂಡಿಯಾ ಕೂಡ ಈ ಪಂದ್ಯಕ್ಕಾಗಿ ತನ್ನ ತಯಾರಿಯಲ್ಲಿ ತೊಡಗಿಸಿಕೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಅತ್ಯುತ್ತಮ ಲಯದಲ್ಲಿ ಕಾಣುತ್ತಿದೆ. ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯನ್ನು ತಂಡ ಗೆದ್ದುಕೊಂಡಿದೆ. ಆದರೆ, ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ರನ್ ಗಳಿಸಲು ಸಾಧ್ಯವಾಗಲಿಲ್ಲ, ಅಲ್ಲದೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಅವರು ಬ್ರೇಕ್ ತೆಗೆದುಕೊಂಡಿದ್ದರು. ಹೀಗಿರುವಾಗ ಪಂದ್ಯಾವಳಿಗೂ ಮುನ್ನ ತನ್ನನ್ನು ತಾನು ಫಿಟ್ ಆಗಿಟ್ಟುಕೊಂಡು ಪಂದ್ಯದಲ್ಲಿ ವೇಗ ಪಡೆದುಕೊಳ್ಳಲು ಕೊಹ್ಲಿ ಮುಂಬೈನಲ್ಲಿ ತರಬೇತಿ ಆರಂಭಿಸಿದ್ದಾರೆ.
ರನ್ನಿಂಗ್ ಆರಂಭಿಸಿದ ಕೊಹ್ಲಿ
ಇತ್ತೀಚೆಗೆ ಮುಂಬೈನಲ್ಲಿರುವ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಒಳಾಂಗಣ ಕ್ರೀಡಾಂಗಣದಲ್ಲಿ ಕೊಹ್ಲಿ ಅಭ್ಯಾಸ ನಡೆಸಲಿದ್ದಾರೆ ಎಂಬ ವರದಿಗಳು ಕೇಳಿಬಂದಿದ್ದವು. ಇದೀಗ ಕೊಹ್ಲಿ ಅವರೇ ತಮ್ಮ ಅಭ್ಯಾಸದ ಮೊದಲ ವಿಡಿಯೋವನ್ನು ಅಭಿಮಾನಿಗಳ ಮುಂದೆ ಪ್ರಸ್ತುತಪಡಿಸಿದ್ದಾರೆ. ಆಗಸ್ಟ್ 11, ಗುರುವಾರದಂದು ಕೊಹ್ಲಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದು, ಇದರಲ್ಲಿ ಅವರು ಒಳಾಂಗಣ ಕ್ರೀಡಾಂಗಣದ ನೆಟ್ಸ್‌ನಲ್ಲಿ ಓಡುತ್ತಿರುವುದನ್ನು ಕಾಣಬಹುದಾಗಿದೆ. ಈ ವಿಡಿಯೋವನ್ನು ಪೋಸ್ಟ್ ಮಾಡಿರುವ ಕೊಹ್ಲಿ, ಅಭ್ಯಾಸ ವಾರದ ರೇಸ್ ಆರಂಭವಾಗಿದೆ ಎಂದು ಬರೆದುಕೊಂಡಿದ್ದಾರೆ.
#ViratKohli has started the practice for #AsiaCup 2022 at BKC Complex Mumbai.pic.twitter.com/KkhgGWGYti
— Lakshya Lark (@lakshyalark) August 11, 2022
ಟಿ20ಯಲ್ಲೂ ಕಳಪೆ ಫಾರ್ಮ್
ಕಳಪೆ ಫಾರ್ಮ್ನಿಂದ ಬಳಲುತ್ತಿರುವ ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ಕೆಲವೇ ರನ್ ಗಳಿಸಿದ್ದಾರೆ. ಐಪಿಎಲ್ 2022 ರಲ್ಲಿ ಎರಡು ಅರ್ಧಶತಕಗಳನ್ನು ಹೊರತುಪಡಿಸಿ, ಈ ವರ್ಷ ಟಿ 20 ಕ್ರಿಕೆಟ್‌ನಲ್ಲಿ ಅವರ ಬ್ಯಾಟ್‌ನಿಂದ ಕೇವಲ ಒಂದು ಅರ್ಧಶತಕ ಮಾತ್ರ ಬಂದಿದೆ. ಫೆಬ್ರವರಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೊಹ್ಲಿ ಅರ್ಧಶತಕ ಗಳಿಸಿದ್ದರು, ಆದರೆ ಆ ಅರ್ಧಶತಕ ಗಳಿಸಲು ವಿರಾಟ್ ಹಲವು ಎಸೆತಗಳನ್ನು ಎದುರಿಸಿದ್ದರು. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾದ ಹೊಸ ಮತ್ತು ಬದಲಾದ ಚಿಂತನೆ ಮತ್ತು ವಿಧಾನಕ್ಕೆ ಹೊಂದಿಕೊಳ್ಳುವ ಮೂಲಕ ರನ್ ಗಳಿಸುವುದಷ್ಟೇ ಅಲ್ಲ, ಆ ರೀತಿಯಲ್ಲಿ ಬ್ಯಾಟಿಂಗ್ ಮಾಡುವ ಸವಾಲು ಕೊಹ್ಲಿ ಮುಂದಿದೆ.