AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಈ ವಿಷಯದಲ್ಲಿ ವಿರಾಟ್ ಕೊಹ್ಲಿ ‘ಝೀರೋ’

Champions Trophy 2025 Virat Kohli: ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ 4 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಎದುರಿಸಿರುವುದು ಬರೋಬ್ಬರಿ 261 ಎಸೆತಗಳನ್ನು. ಈ ಎಸೆತಗಳಲ್ಲಿ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ಮೂಡಿಬಂದ ಬೌಂಡರಿಗಳ ಸಂಖ್ಯೆ 15 ಮಾತ್ರ. ಅಂದರೆ ಕೊಹ್ಲಿ ಕಲೆಹಾಕಿದ 217 ರನ್​ಗಳಲ್ಲಿ ಕೇವಲ 15 ಫೋರ್​ಗಳು ಮಾತ್ರ ಮೂಡಿಬಂದಿವೆ.

Champions Trophy 2025: ಈ ವಿಷಯದಲ್ಲಿ ವಿರಾಟ್ ಕೊಹ್ಲಿ 'ಝೀರೋ'
Virat Kohli
ಝಾಹಿರ್ ಯೂಸುಫ್
|

Updated on: Mar 08, 2025 | 2:04 PM

Share

ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಳ್ಳಲು ವಿರಾಟ್ ಕೊಹ್ಲಿಗೆ ಬೇಕಿರುವುದು ಕೇವಲ 46 ರನ್​ಗಳು ಮಾತ್ರ. ಈ 46 ರನ್​ಗಳೊಂದಿಗೆ ಕ್ರಿಸ್ ಗೇಲ್ ಹೆಸರಿನಲ್ಲಿರುವ 791 ರನ್​ಗಳ ದಾಖಲೆ ಮುರಿಯುವ ಅವಕಾಶ ವಿರಾಟ್ ಕೊಹ್ಲಿ ಮುಂದಿದೆ. ಇದೀಗ ಫೈನಲ್ ಪಂದ್ಯಕ್ಕೆ ಸಜ್ಜಾಗಿರುವ ಕೊಹ್ಲಿ ಅಂತಿಮ ಪಂದ್ಯದಲ್ಲಿ 46 ರನ್​ ಬಾರಿಸಿ ಈ ಸಾಧನೆ ಮಾಡಲಿದ್ದಾರಾ ಎಂಬುದೇ ಕುತೂಹಲ. ಈ ಕುತೂಹಲದೊಂದಿಗೆ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ಒಂದೇ ಒಂದು ಸಿಕ್ಸ್ ಮೂಡಿಬರಲಿ ಎಂದು ಅಭಿಮಾನಿಗಳು ಕೂಡ ಆಶಿಸುತ್ತಿದ್ದಾರೆ.

ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ 4 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 72.33 ರ ಸರಾಸರಿಯಲ್ಲಿ ಒಟ್ಟು 217 ರನ್ ಗಳಿಸಿದ್ದಾರೆ. ಈ 217 ರನ್​ಗಳಲ್ಲಿ ಒಂದೇ ಒಂದು ಸಿಕ್ಸ್ ಇಲ್ಲ ಎಂಬುದು ವಿಶೇಷ.

ಅಂದರೆ ನಾಲ್ಕು ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಒಂದೇ ಒಂದು ಸಿಕ್ಸ್ ಬಾರಿಸಿಲ್ಲ. ಇದಾಗ್ಯೂ ಅವರ ಬ್ಯಾಟ್​ನಿಂದ ಒಟ್ಟು 15 ಬೌಂಡರಿಗಳು ಮೂಡಿಬಂದಿವೆ. ಆದರೆ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ಆಕರ್ಷಕ ಸಿಕ್ಸ್​ ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ನಾಲ್ಕು ಪಂದ್ಯಗಳಲ್ಲೂ ನಿರಾಸೆ ಕಾದಿತ್ತು. ಇದೀಗ ಕೊನೆಯ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಸಜ್ಜಾಗಿದ್ದಾರೆ. ಅದು ಕೂಡ ಕಿವೀಸ್ ಪಡೆ ವಿರುದ್ಧ.

ಇದನ್ನೂ ಓದಿ
Image
ವಿರಾಟ್ ಕೊಹ್ಲಿಗೆ 100 ಕೋಟಿ ರೂ: ಶುಭ್​ಮನ್ ಗಿಲ್​ಗೆ ಎಷ್ಟು?
Image
VIDEO: ಅಳುತ್ತಿದ್ದ ಅಭಿಮಾನಿಯನ್ನು ಸಮಾಧಾನ ಮಾಡಿದ ಕೆಎಲ್ ರಾಹುಲ್
Image
ನಾನು ಹೊಡೀತಿದ್ದೆ ಅಲ್ವಾ... ವಿರಾಟ್ ಕೊಹ್ಲಿ ಮುಂದೆ ಕೆಎಲ್ ರಾಹುಲ್ ಹತಾಶೆ
Image
Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

ನಾಳೆ (ಮಾ.9) ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ವಿರಾಟ್ ಕೊಹ್ಲಿ ಸಿಕ್ಸ್ ಬಾರಿಸಲಿ ಎಂಬುದೇ ಅಭಿಮಾನಿಗಳ ಅಂಬೋಣ.

ಏಕೆಂದರೆ ಈ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಭರ್ಜರಿ ಪ್ರದರ್ಶನ ನೀಡಿದರೆ, ಈ ಬಾರಿಯ ಟೂರ್ನಿಯಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದ್ದಾರೆ. ಸದ್ಯ ಟಾಪ್-3 ನಲ್ಲಿರುವ ಬೆನ್ ಡಕೆಟ್ (227) 25 ಫೋರ್ ಹಾಗೂ 3 ಸಿಕ್ಸ್ ಬಾರಿಸಿದ್ದರೆ, ರಚಿನ್ ರವೀಂದ್ರ (226) 25 ಫೋರ್ ಹಾಗೂ 2 ಸಿಕ್ಸ್ ಸಿಡಿಸಿದ್ದಾರೆ. ಇನ್ನು ಜೋ ರೂಟ್ 19 ಫೋರ್ ಹಾಗೂ 2 ಸಿಕ್ಸ್​ಗಳೊಂದಿಗೆ 225 ರನ್ ಕಲೆಹಾಕಿದ್ದಾರೆ.

ಇದನ್ನೂ ಓದಿ: IPL 2026: ಐಪಿಎಲ್​ಗೆ ಪಾಕಿಸ್ತಾನ್ ವೇಗಿ ಮೊಹಮ್ಮದ್ ಅಮೀರ್

ಅಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಂದೇ ಒಂದು ಸಿಕ್ಸ್ ಬಾರಿಸದೇ 200+ ರನ್ ಕಲೆಹಾಕಿರುವುದು ವಿರಾಟ್ ಕೊಹ್ಲಿ ಮಾತ್ರ. ಹೀಗಾಗಿ ಕೊನೆಯ ಪಂದ್ಯದಲ್ಲಾದರೂ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ಸಿಕ್ಸ್ ಮೂಡಿಬರಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ