Virat Kohli: ಮೈದಾನಕ್ಕಿಳಿಯದೆ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

| Updated By: ಝಾಹಿರ್ ಯೂಸುಫ್

Updated on: Jun 08, 2022 | 9:24 AM

Virat kohli: ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ದದ ಸರಣಿಗೆ ಸಜ್ಜಾಗಿದ್ದು, ಈ ಸರಣಿಯಿಂದ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದಾರೆ. ಅತ್ತ ಔಟ್ ಆಫ್ ಫಾರ್ಮ್​ನಲ್ಲಿರುವ ಕೊಹ್ಲಿ ಐಪಿಎಲ್​ನಲ್ಲೂ ನಿರೀಕ್ಷಿತ ಆಟ ಪ್ರದರ್ಶಿಸಿರಲಿಲ್ಲ.

Virat Kohli: ಮೈದಾನಕ್ಕಿಳಿಯದೆ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ
Virat Kohli
Follow us on

ಪ್ರಸ್ತುತ ಕ್ರಿಕೆಟ್​​ನ ದಾಖಲೆಯ ಸರದಾರ ವಿರಾಟ್ ಕೊಹ್ಲಿ (Virat Kohli) ಮೈದಾನಕ್ಕೆ ಇಳಿದರೆ ದಾಖಲೆಗಳ ಮೇಲೆ ದಾಖಲೆಗಳು ನಿರ್ಮಾಣವಾಗುವುದು ಗೊತ್ತೇ ಇದೆ. ಇದಾಗ್ಯೂ ಮೈದಾನಕ್ಕಿಳಿಯದೇ ಹೊಸ ದಾಖಲೆ ಬರೆಯುವ ಮೂಲಕ ಇದೀಗ ಕಿಂಗ್ ಕೊಹ್ಲಿ ಇಡೀ ವಿಶ್ವದ ಗಮನ ಸೆಳೆದಿದ್ದಾರೆ. ಅದು ಕೂಡ ಸೋಷಿಯಲ್ ಮೀಡಿಯಾ ಮೂಲಕ ಎಂಬುದು ವಿಶೇಷ. ಹೌದು, ಇನ್​ಸ್ಟಾಗ್ರಾಮ್​ನಲ್ಲಿ ಇದೀಗ ವಿರಾಟ್​ ಕೊಹ್ಲಿ 200 ಮಿಲಿಯನ್ ಮಂದಿ ಫಾಲೋವರ್ಸ್​ ಇದ್ದಾರೆ. ಇಷ್ಟೊಂದು ಫಾಲೋವರ್ಸ್​ ಇರುವ ವಿಶ್ವದ ಏಕೈಕ ಕ್ರಿಕೆಟಿಗ ಎಂಬ ದಾಖಲೆ ಕಿಂಗ್ ಕೊಹ್ಲಿಯ ಪಾಲಾಗಿದೆ.

ಅಷ್ಟೇ ಅಲ್ಲದೆ ಕ್ರೀಡಾಕ್ಷೇತ್ರದಲ್ಲಿ ಅತೀ ಹೆಚ್ಚು ಫಾಲೋವರ್ಸ್​ ಹೊಂದಿದ ವಿಶ್ವದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಪೋರ್ಚುಗಲ್​ನ ಖ್ಯಾತ ಫುಟ್​ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಅಗ್ರಸ್ಥಾನದಲ್ಲಿದ್ದಾರೆ. ರೊನಾಲ್ಡೊಗೆ 451 ಮಿಲಿಯನ್ ಫಾಲೋವರ್ಸ್​ ಇದ್ದರೆ, 2ನೇ ಸ್ಥಾನದಲ್ಲಿರುವ ಅರ್ಜೆಂಟೀನಾ ಫುಟ್​​ಬಾಲ್​ ಕಿಂಗ್​ ಲಿಯೋನಲ್ ಮೆಸ್ಸಿ 334 ಫಾಲೋವರ್ಸ್​ ಹೊಂದಿದ್ದಾರೆ. ಇದೀಗ 20 ಕೋಟಿ ಫಾಲೋವರ್ಸ್​ನೊಂದಿಗೆ ವಿರಾಟ್ ಕೊಹ್ಲಿ ಮೂರನೇ ಆಟಗಾರನಾಗಿ ಹೊರಹೊಮ್ಮಿದ್ದಾರೆ.

ಈ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ವಿಶ್ವದ ಟಾಪ್ 3 ಸ್ಪೋರ್ಟ್ಸ್​​ ಪರ್ಸನಾಲಿಟಿಯಾಗಿ ವಿರಾಟ್ ಕೊಹ್ಲಿ ಗುರುತಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಇನ್​ಸ್ಟಾಗ್ರಾಮ್​ನಲ್ಲಿ ಇದುವರೆಗೆ 1373 ಪೋಸ್ಟ್​ಗಳನ್ನು ಹಾಕಿದ್ದು, ಈ ಮುಖಾಂತರ 20 ಕೋಟಿ ಫಾಲೋವರ್ಸ್​ ಅನ್ನು ಸಂಪಾದಿಸಿದ್ದಾರೆ. ಇನ್ನು 245 ಮಂದಿಯನ್ನು ವಿರಾಟ್ ಕೊಹ್ಲಿ ಇನ್​ಸ್ಟಾದಲ್ಲಿ ಫಾಲೋ ಮಾಡುತ್ತಿದ್ದಾರೆ.

ಇದನ್ನೂ ಓದಿ
India vs South Africa T20: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಪ್ರಕಟ
Ashish Nehra: ಎಳನೀರು, ಪೆನ್ನು ಪೇಪರ್​ನಲ್ಲೇ 9 ತಂಡಗಳನ್ನ ಮುಗಿಸಿಬಿಟ್ರು..!
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಸದ್ಯ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ದದ ಸರಣಿಗೆ ಸಜ್ಜಾಗಿದ್ದು, ಈ ಸರಣಿಯಿಂದ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದಾರೆ. ಅತ್ತ ಔಟ್ ಆಫ್ ಫಾರ್ಮ್​ನಲ್ಲಿರುವ ಕೊಹ್ಲಿ ಐಪಿಎಲ್​ನಲ್ಲೂ ನಿರೀಕ್ಷಿತ ಆಟ ಪ್ರದರ್ಶಿಸಿರಲಿಲ್ಲ. ಈ ಬಾರಿ ಆಡಿದ 16 ಪಂದ್ಯಗಳಲ್ಲಿ 341 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಈ ವೇಳೆ 2 ಅರ್ಧಶತಕಗಳು ಮೂಡಿಬಂದರೆ, 3 ಬಾರಿ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದ್ದರು.

ಅಷ್ಟೇ ಅಲ್ಲದೆ ಕಳೆದ ಎರಡು ವರ್ಷಗಳಿಂದ ವಿರಾಟ್ ಕೊಹ್ಲಿ ಶತಕವನ್ನು ಎದುರು ನೋಡುತ್ತಿದ್ದಾರೆ. ಏಕೆಂದರೆ 2019 ರ ಬಳಿಕ ಕೊಹ್ಲಿ ಬ್ಯಾಟ್​ನಿಂದ ಸೆಂಚುರಿ ಮೂಡಿಬಂದಿಲ್ಲ. ಬಾಂಗ್ಲಾದೇಶ ವಿರುದ್ದ ಟೆಸ್ಟ್​ನಲ್ಲಿ ಕೊನೆಯ ಬಾರಿ ಶತಕ ಬಾರಿಸಿದ ಆ ಬಳಿಕ ಮೂರಂಕಿ ರನ್​ಗಳಿಸಿಲ್ಲ ಎಂಬುದೇ ಅಚ್ಚರಿ. ಇದೀಗ ಸೋಷಿಯಲ್​ ಮೀಡಿಯಾದಲ್ಲಿ 200 ಮಿಲಿಯನ್​​ ಫಾಲೋವರ್ಸ್​ ಮೂಲಕ ದಾಖಲೆ ಬರೆದಿರುವ ಕೊಹ್ಲಿ, ಬ್ಯಾಟ್​ ಮೂಲಕ 100 ರನ್​ಗಳಿಸಿ ಶತಕ ಬರ ನೀಗಿಸಲಿ ಎಂಬುದೇ ಅಭಿಮಾನಿಗಳ ಅಂಬೋಣ.

 

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.