AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AB De Villiers: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಮತ್ತೆ ಬರ್ತಾರಂತೆ ABD

Virat Kohli: ಐಪಿಎಲ್ 2022 ರಲ್ಲಿ ವಿರಾಟ್ ಕೊಹ್ಲಿ ಅತ್ಯಂತ ಕಳಪೆ ಫಾರ್ಮ್‌ನಲ್ಲಿದ್ದಾರೆ. 12 ಪಂದ್ಯಗಳಲ್ಲಿ ಕೇವಲ 216 ರನ್ ಗಳಿಸಿದ್ದಾರೆ. ಈ ವೇಳೆ ಅವರು ಮೂರು ಬಾರಿ ಗೋಲ್ಡನ್ ಡಕ್​ಗೆ ಬಲಿಯಾಗಿದ್ದಾರೆ.

AB De Villiers: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಮತ್ತೆ ಬರ್ತಾರಂತೆ ABD
Virat Kohli-ABD
TV9 Web
| Edited By: |

Updated on:May 11, 2022 | 7:47 PM

Share

RCB ತಂಡದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ (AB De Villiers) ಈ ಬಾರಿಯ ಐಪಿಎಲ್​ಗೂ ಮೊದಲೇ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದರು. ಆರ್​ಸಿಬಿ ತಂಡದ ಪ್ರಮುಖ ಅಂಗವಾಗಿದ್ದ ಎಬಿಡಿ ಐಪಿಎಲ್​ನಲ್ಲಿ ಆರ್​ಸಿಬಿ ಪರ 156 ಪಂದ್ಯಗಳಾಡಿದ್ದರು. ಈ ವೇಳೆ ಒಟ್ಟು 4,491 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದರು. ಇನ್ನು ಆರ್​ಸಿಬಿ ಪರ ವಿರಾಟ್‌ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ. ಇದಾಗ್ಯೂ ದಿಢೀರಣೆ ನಿವೃತ್ತಿ ಘೋಷಿಸಿ ಎಬಿಡಿ ಎಲ್ಲರಿಗೂ ಶಾಕ್ ನೀಡಿದ್ದರು.

ಎಬಿಡಿ ಅವರ ಈ ನಿರ್ಧಾರ ಆರ್​ಸಿಬಿ ಅಭಿಮಾನಿಗಳ ನೋವಿಗೆ ಕಾರಣವಾಗಿತ್ತು. ಆದರೀಗ ಎಬಿಡಿ ಮತ್ತೆ ಆರ್​ಸಿಬಿಗೆ ಕಂಬ್ಯಾಕ್ ಸಾಧ್ಯತೆಯಿದೆ. ಈ ಬಗ್ಗೆ ಸುಳಿವು ನೀಡಿದ್ದಾರೆ ಎಬಿಡಿ ಅವರ ಆಪ್ತ ವಿರಾಟ್ ಕೊಹ್ಲಿ. ಈ ಬಗ್ಗೆ ಮಾತನಾಡಿರುವ ಕೊಹ್ಲಿ ‘ನಾನು ಎಬಿ ಡಿವಿಲಿಯರ್ಸ್ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಾನು ಅವರೊಂದಿಗೆ ಮಾತನಾಡುತ್ತಿರುತ್ತೇನೆ. ವಿಶೇಷ ಎಂದರೆ ಎಬಿಡಿ ಈಗಲೂ ಆರ್​ಸಿಬಿ ತಂಡದ ಅಪ್​ಡೇಟ್​ಗಳನ್ನು ಪಡೆಯುತ್ತಿರುತ್ತಾರೆ.

ಇತ್ತೀಚೆಗೆ ಎಬಿಡಿ ತಮ್ಮ ಕುಟುಂಬದೊಂದಿಗೆ ಗಾಲ್ಫ್ ವೀಕ್ಷಿಸಲು ಅಮೆರಿಕಕ್ಕೆ ಹೋಗಿದ್ದರು. ಅಲ್ಲಿಂದಲೂ RCB ಯ ಪ್ರದರ್ಶನದ ಎಲ್ಲಾ ರೀತಿಯ ಮಾಹಿತಿಗಳನ್ನು ಪಡೆಯುತ್ತಿದ್ದರು. ಅಲ್ಲದೆ ಮುಂದಿನ ವರ್ಷ ಅವರು ಹೊಸ ಪಾತ್ರದಲ್ಲಿ ತಂಡದೊಂದಿಗೆ ಇರಲಿದ್ದಾರೆ ಎಂದು ವಿಶ್ವಾಸವಿದೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ಇದನ್ನೂ ಓದಿ
Image
IPL 2022: ಸಚಿನ್​ರ 13 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಗಿಲ್
Image
IPL 2022: ಸೋಲುತ್ತೆ ನಿಜ, ಆದರೆ ಇದು?, LSG ಆಟಗಾರರ ವಿರುದ್ದ ಗಂಭೀರ್ ಗರಂ
Image
IPL 2022: ಅಂದು ಲಯನ್ಸ್, ಇಂದು ಟೈಟನ್ಸ್: ಗುಜರಾತ್ ತಂಡದ ಫ್ಯಾನ್ಸ್​ಗೆ ಹೊಸ ಚಿಂತೆ ಶುರು..!
Image
AB De Villiers: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಮತ್ತೆ ಬರ್ತಾರಂತೆ ABD

ಐಪಿಎಲ್ 2022 ರಲ್ಲಿ ವಿರಾಟ್ ಕೊಹ್ಲಿ ಅತ್ಯಂತ ಕಳಪೆ ಫಾರ್ಮ್‌ನಲ್ಲಿದ್ದಾರೆ. 12 ಪಂದ್ಯಗಳಲ್ಲಿ ಕೇವಲ 216 ರನ್ ಗಳಿಸಿದ್ದಾರೆ. ಈ ವೇಳೆ ಅವರು ಮೂರು ಬಾರಿ ಗೋಲ್ಡನ್ ಡಕ್​ಗೆ ಬಲಿಯಾಗಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಕೊಹ್ಲಿ ಇದುವರೆಗೆ ಕೇವಲ ಒಂದು ಅರ್ಧಶತಕ ಮಾತ್ರ ಗಳಿಸಿದ್ದಾರೆ. ಹೀಗಾಗಿಯೇ ವಿರಾಟ್ ಕೊಹ್ಲಿ ವೃತ್ತಿಜೀವನದ ಅತ್ಯಂತ ಕೆಟ್ಟ ಫಾರ್ಮ್​ನಲ್ಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದರ ನಡುವೆ ಎಬಿಡಿ ಮತ್ತೆ ಆರ್​ಸಿಬಿ ತಂಡವನ್ನು ಮುಂದಿನ ವರ್ಷ ಸೇರಿಕೊಳ್ಳುವ ನಿರೀಕ್ಷೆಯಿದೆ ಎಂದು ಕೊಹ್ಲಿ ಹೇಳಿರುವುದು ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ.

ಏಕೆಂದರೆ ಈ ಹಿಂದೆ ಆರ್​ಸಿಬಿ ತಂಡ ಕೋಚ್ ಸಂಜಯ್ ಬಂಗಾರ್, ಪ್ರತಿ ತಂಡಕ್ಕೂ ಬ್ಯಾಟಿಂಗ್ ಕೋಚ್ ಇರಬೇಕಾಗಿರುವುದು ಅನಿವಾರ್ಯ. ಅದರಲ್ಲೂ ಎಬಿಡಿ ಅವರಂತಹ ಆಟಗಾರನಿಗೆ ಬ್ಯಾಟಿಂಗ್ ಕೋಚ್ ಸ್ಥಾನ ನೀಡುವುದು ಅದು ತಂಡಕ್ಕೆ ಮತ್ತು ಆಟಗಾರರಿಗೆ ಒಳ್ಳೆಯದು ಎಂದಿದ್ದರು. ಇದೀಗ ವಿರಾಟ್ ಕೊಹ್ಲಿ ಕೂಡ ಎಬಿಡಿ ಹೊಸ ಪಾತ್ರದಲ್ಲಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದಿರುವುದು, ಎಬಿಡಿ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್ ಅಥವಾ ಮೆಂಟರ್ ಆಗುವುದನ್ನು ಪುಷ್ಠೀಕರಿಸಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:29 pm, Wed, 11 May 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ