VIDEO: ಕನ್ನಡಿಗನ ಸ್ಪೋಟಕ ಅರ್ಧಶತಕ: ಕೆಎಲ್ ರಾಹುಲ್ ಎದೆಗೆ ಮುತ್ತಿಟ್ಟ ವಿರಾಟ್ ಕೊಹ್ಲಿ

India vs Bangaldesh 2nd Test: ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ದಾಂಡಿಗ ಕೆಎಲ್ ರಾಹುಲ್ ಕೇವಲ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಈ ಮೂಲಕ ತಮ್ಮ ಟೆಸ್ಟ್​ ವೃತ್ತಿಜೀವನದಲ್ಲೇ ಅತೀ ವೇಗದ ಸೆಂಚುರಿ ಸಿಡಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ.

VIDEO: ಕನ್ನಡಿಗನ ಸ್ಪೋಟಕ ಅರ್ಧಶತಕ: ಕೆಎಲ್ ರಾಹುಲ್ ಎದೆಗೆ ಮುತ್ತಿಟ್ಟ ವಿರಾಟ್ ಕೊಹ್ಲಿ
Virat Kohli - KL Rahul
Follow us
|

Updated on: Oct 01, 2024 | 11:17 AM

ಕಾನ್ಪುರದ ಗ್ರೀನ್ ಪಾರ್ಕ್​ನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದರಲ್ಲೂ ಕಳಪೆ ಫಾರ್ಮ್​​ನಿಂದ ಬಳಲುತ್ತಿದ್ದ ಕೆಎಲ್ ರಾಹುಲ್ ವಿಸ್ಪೋಟಕ ಬ್ಯಾಟಿಂಗ್​ನೊಂದಿಗೆ ಅಬ್ಬರಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 233 ರನ್​​ಗಳಿಸಿ ಆಲೌಟ್ ಆಗಿತ್ತು.

ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಮೊದಲ ವಿಕೆಟ್​ಗೆ 55 ರನ್ ಪೇರಿಸಿದ ಬಳಿಕ ರೋಹಿತ್ ಶರ್ಮಾ (23) ಔಟಾದರು. ಇನ್ನು ಶುಭ್​ಮನ್ ಗಿಲ್ 39 ರನ್ ಬಾರಿಸಿದರೆ, ರಿಷಭ್ ಪಂತ್ 9 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಮತ್ತೊಂದೆಡೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಯಶಸ್ವಿ ಜೈಸ್ವಾಲ್ 51 ಎಸೆತಗಳಲ್ಲಿ 12 ಫೋರ್ ಹಾಗೂ 2 ಸಿಕ್ಸ್​ನೊಂದಿಗೆ 72 ರನ್ ಚಚ್ಚಿದರು. ಇನ್ನು ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು.

ಅದರಲ್ಲೂ ಸ್ಪೋಟಕ ಇನಿಂಗ್ಸ್​ಗೆ ಒತ್ತು ನೀಡಿದ ಕೆಎಲ್ ರಾಹುಲ್ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ತಲುಪಿಸಿದರು. ಅಲ್ಲದೆ ಕೇವಲ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅತ್ತ ಕೆಎಲ್ ರಾಹುಲ್ ಹಾಫ್ ಸೆಂಚುರಿ ಪೂರೈಸುತ್ತಿದ್ದಂತೆ ವಿರಾಟ್ ಕೊಹ್ಲಿ ಫುಲ್ ಖುಷಿಯಾದರು.

ಅಲ್ಲದೆ ರಾಹುಲ್ ಅವರನ್ನು ಅಪ್ಪುಗೆಯೊಂದಿಗೆ ಅಭಿನಂದಿಸಿದ ಕೊಹ್ಲಿ ಎದೆಗೆ ಮುತ್ತಿಟ್ಟು ಖುಷಿ ಹಂಚಿಕೊಂಡರು. ವಿರಾಟ್ ಕೊಹ್ಲಿಯ ಈ ಅಪ್ಪುಗೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ವಿರಾಟ್ ಕೊಹ್ಲಿಯ ಅಪ್ಪುಗೆಯ ವಿಡಿಯೋ:

ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 35 ಎಸೆತಗಳಲ್ಲಿ 47 ರನ್ ಬಾರಿಸಿದರೆ, ಕೆಎಲ್ ರಾಹುಲ್ 43 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 68 ರನ್ ಸಿಡಿಸಿದರು. ಈ ಮೂಲಕ ಟೀಮ್ ಇಂಡಿಯಾ 34.4 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 285 ರನ್​ಗಳಿಸಿ ಪ್ರಥಮ ಇನಿಂಗ್ಸ್ ಡಿಕ್ಲೇರ್ ಘೋಷಿಸಿದೆ.

ಇದನ್ನೂ ಓದಿ: IND vs BAN Test: ದಾಖಲೆಗಳ ಮೇಲೆ ದಾಖಲೆ ಬರೆದ ಟೀಮ್ ಇಂಡಿಯಾ

ಇದೀಗ 52 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಬಾಂಗ್ಲಾದೇಶ್ ತಂಡವು 30 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 94 ರನ್ ಕಲೆಹಾಕಿದೆ. ಹೀಗಾಗಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲುವ ಚಾನ್ಸ್ ಹೆಚ್ಚಿದೆ ಎನ್ನಬಹುದು.

ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು