AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡ ವಿರಾಟ್ ಕೊಹ್ಲಿ; ಅಫ್ಘಾನಿಸ್ತಾನದ ವಿರುದ್ಧದ ಏಕದಿನ ಸರಣಿಯಿಂದ ಔಟ್

ವಿರಾಟ್ ಕೊಹ್ಲಿ ಗಾಯದ ಕಾರಣ ಅಫ್ಘಾನಿಸ್ತಾನ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಈ ಬಾರಿಯ ಐಪಿಎಲ್ ಫೈನಲ್ ವೇಳೆ ಅವರ ಬ್ಯಾಟ್​ನಿಂದ 75 ರನ್​​ಗಳು ಬಂದಿದ್ದವು. ಕಾಲಿನಲ್ಲಿ ಉಂಟಾದ ಸಮಸ್ಯೆ ಅವರ ಆಟದ ಮೇಲೆ ನೇರ ಪರಿಣಾಮ ಬೀಳುತ್ತಾ ಇತ್ತು. ಅವರು ಗಾಯದ ಮಧ್ಯೆಯೂ ಆಟ ಮುಂದುವರಿಸಿದ್ದರು.

ಗಾಯಗೊಂಡ ವಿರಾಟ್ ಕೊಹ್ಲಿ; ಅಫ್ಘಾನಿಸ್ತಾನದ ವಿರುದ್ಧದ ಏಕದಿನ ಸರಣಿಯಿಂದ ಔಟ್
ವಿರಾಟ್
ರಾಜೇಶ್ ದುಗ್ಗುಮನೆ
|

Updated on: Jun 04, 2026 | 12:00 PM

Share

ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಈಗಾಗಲೇ ಟೆಸ್ಟ್ ಹಾಗೂ ಟಿ20 ಮಾದರಿಯ ಕ್ರಿಕೆಟ್​​ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಐಪಿಎಲ್ ಹೊರತುಪಡಿಸಿ ಅವರ ಆಟ ನೋಡ ಸಿಗೋದು ಏಕದಿನ ಪಂದ್ಯಗಳಲ್ಲಿ ಮಾತ್ರ. ಅವರು ಅಪ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಬೇಕಿತ್ತು. ಆದರೆ, ಸ್ನಾಯು ಸೆಳೆತದ ಕಾರಣದಿಂದ ಈ ಸರಣಿಯಿಂದ ಹೊರ ನಡೆದಿದ್ದು, ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಅಪ್ಘಾನಿಸ್ತಾನ ತಂಡ ಭಾರತಕ್ಕೆ ಆಗಮಿಸುತ್ತಿದ್ದು, ಜೂನ್ 6-10ರವರೆಗೆ ಒಂದು ಟೆಸ್ಟ್ ಪಂದ್ಯ ಆಡಲಿದೆ. ಜೂನ್ 13ರಿಂದ ಮೂರು ಏಕದಿನ ಸರಣಿಗಳು ನಡೆಯಲಿವೆ. ಆದರೆ, ಇಂಜೂರಿ ಕಾರಣದಿಂದ ಕೊಹ್ಲಿ ಅವರು ಈ ಸರಣಿಯಿಂದ ಹೊರಗುಳಿಯಬೇಕಾದ ಪರಿಸ್ಥಿತಿ ಇದೆ. ಇನ್ನು, ಹಿರಿಯ ಆಟಗಾರ ರೋಹಿತ್ ಶರ್ಮಾ ಅವರ ಇರುವಿಕೆ ಕೂಡ ಖಾತ್ರಿ ಆಗಿಲ್ಲ. ಐಪಿಎಲ್ ಸಂದರ್ಭದಲ್ಲಿ ಅವರೂ ಗಾಯಕ್ಕೆ ಒಳಗಾಗಿ, ಕೆಲವು ಪಂದ್ಯಗಳಲ್ಲಿ ವಿಶ್ರಾಂತಿ ಪಡೆದಿದ್ದರು. ಇಬ್ಬರು ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಅಪ್ಘಾನಿಸ್ತಾನದ ವಿರುದ್ಧ ಕಣಕ್ಕೆ ಇಳಿಯಬೇಕಿದೆ.

ವಿರಾಟ್ ಕೊಹ್ಲಿ ಅವರು ಗಾಯದ ಕಾರಣ ನೀಡಿ ಪಂದ್ಯಗಳಿಂದ ಹೊರಗೆ ಉಳಿದಿದ್ದು ತುಂಬಾನೇ ಕಡಿಮೆ. ಈ ಬಾರಿಯ ಐಪಿಎಲ್ ಫೈನಲ್ ವೇಳೆ ಅವರ ಬ್ಯಾಟ್​ನಿಂದ 75 ರನ್​​ಗಳು ಬಂದಿದ್ದವು. ಕಾಲಿನಲ್ಲಿ ಉಂಟಾದ ಸಮಸ್ಯೆ ಅವರ ಆಟದ ಮೇಲೆ ನೇರ ಪರಿಣಾಮ ಬೀಳುತ್ತಾ ಇತ್ತು. ಅವರು ಗಾಯದ ಮಧ್ಯೆಯೂ ಆಟ ಮುಂದುವರಿಸಿದ್ದರು. ಈಗ ಗಾಯದಿಂದ ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅವರು ಈ ಸರಣಿಯಿಂದ ಹೊರಗುಳಿಯಬೇಕಾದ ಪರಿಸ್ಥಿತಿ ಬಂದಿದೆ.

ಇದನ್ನೂ ಓದಿ: ಆರ್‌ಸಿಬಿಗೆ ಬರ್ತಾರೆ ಪಾಂಡ್ಯ? ದಿನೇಶ್ ಕಾರ್ತಿಕ್ ಜೊತೆಗಿನ ಫೋಟೋದ ಅಸಲಿ ಕಥೆಯೇ ಬೇರೆ ಆರ್​​ಸಿಬಿ ಸತತ ಎರಡನೇ ಬಾರಿ ಕಪ್ ಗೆದ್ದ ಬಳಿಕ ವಿರಾಟ್ ಕೊಹ್ಲಿ ಅವರು ಪತ್ನಿ ಅನುಷ್ಕಾ ಶರ್ಮಾ ಜೊತೆ ಸೇರಿ ಮಥುರಾ ಮತ್ತು ಬೃಂದಾವನದ ಪ್ರಸಿದ್ಧ ಸಂತ ಪ್ರೇಮಾನಂದ್ ಗುರೂಜಿ ಅವರ ಆಶ್ರಮಕ್ಕೆ ಭೇಟಿ ನೀಡಿದ್ದರು. ದೀರ್ಘ ಹಾಗೂ ಒತ್ತಡದ ಕ್ರಿಕೆಟ್ ಸೀಸನ್ ಮುಗಿದ ನಂತರ, ಮನಸ್ಸಿನ ಶಾಂತಿ ಮತ್ತು ಧನ್ಯತಾ ಭಾವದೊಂದಿಗೆ ಅವರು ಪತ್ನಿ ಅನುಷ್ಕಾ ಶರ್ಮಾ ಜೊತೆಗೂಡಿ ಪ್ರಸಿದ್ಧ ಆಶ್ರಮಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಹೆಚ್ಚಿನ ಕ್ರೀಡಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ