VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
India vs Bangladesh: ಬಾಂಗ್ಲಾದೇಶ್ ವಿರುದ್ಧ ಟೀಮ್ ಇಂಡಿಯಾ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಈ ಸರಣಿಯ ಮೊದಲ ಪಂದ್ಯವು ಗುರುವಾರ (ಸೆ.19) ಶುರುವಾಗಲಿದೆ. ಇನ್ನು ಎರಡನೇ ಟೆಸ್ಟ್ ಪಂದ್ಯವು ಸೆಪ್ಟೆಂಬರ್ 27 ರಿಂದ ಆರಂಭವಗಾಲಿದೆ. ಈ ಪಂದ್ಯಕ್ಕೆ ಕಾನ್ಪುರದ ಗ್ರೀನ್ ಪಾರ್ಕ್ ಮೈದಾನ ಆತಿಥ್ಯವಹಿಸಲಿದೆ.
ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ಚಿಟ್ ಚಾಟ್ವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿಟ್ ಚಾಟ್ ಮೂಲಕ ವಿರಾಟ್ ಕೊಹ್ಲಿ ಹಾಗೂ ಗಂಭೀರ್ ತಮ್ಮಿಬ್ಬರ ನಡುವೆ ಹಬ್ಬಿರುವ ಮಸಾಲ ಸುದ್ದಿಗಳಿಗೆ ತೆರೆ ಎಳೆಯಲು ನಿರ್ಧರಿಸಿದ್ದಾರೆ.
ಬಿಸಿಸಿಐ ಹಂಚಿಕೊಂಡಿರುವ ವಿಡಿಯೋ ಚಾಟ್ನಲ್ಲಿ ಗಂಭೀರ್ ಹಾಗೂ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಅದರಲ್ಲೂ ಆಸೀಸ್ ವಿರುದ್ಧ ರನ್ ಸುರಿಮಳೆಗೈದಿದ್ದ ಕಿಂಗ್ ಕೊಹ್ಲಿಯ ಪರಾಕ್ರಮವನ್ನು ಗಂಭೀರ್ ಹಾಡಿ ಹೊಗಳಿದ್ದಾರೆ.
ಈ ಹೊಗಳಿಕೆಯ ನಡುವೆ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ವಾಕ್ಸಮರವನ್ನು ಪ್ರಸ್ತಾಪಿಸಿದ್ದಾರೆ. ಇದೇ ವೇಳೆ ಗಂಭೀರ್ ನನಗಿಂತ ಹೆಚ್ಚು ವಾಗ್ವಾದಗಳನ್ನು ನೀನೇ ಮಾಡಿರುವೆ ಎಂದು ಕಾಲೆಳೆದಿದ್ದಾರೆ. ಇದೀಗ ಈ ಚಿಟ್ ಚಾಟ್ ವಿಡಿಯೋದ ಝಲಕ್ ಅನ್ನು ಬಿಸಿಸಿಐ ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ. ಅಲ್ಲದೆ ಶೀಘ್ರದಲ್ಲೇ ಈ ಸಂದರ್ಶನದ ವಿಡಿಯೋ ಹೊರಬೀಳಲಿದೆ.
ಭಾರತ ಮತ್ತು ಬಾಂಗ್ಲಾದೇಶ್ ಸರಣಿ ಯಾವಾಗ ಶುರು?
ಭಾರತ-ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ 2 ಟೆಸ್ಟ್ ಪಂದ್ಯಗಳನ್ನಾಡಲಾಗುತ್ತಿದ್ದು, ಇದಾದ ಬಳಿಕ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಸೆಪ್ಟೆಂಬರ್ 19 ರಿಂದ ಚೆನ್ನೈನ ಚೆಪಾಕ್ ಮೈದಾನದಲ್ಲಿ ಮೊದಲ ಟೆಸ್ಟ್ ಪಂದ್ಯ ಶುರುವಾಗಲಿದೆ. ಇನ್ನು ಎರಡನೇ ಟೆಸ್ಟ್ ಪಂದ್ಯವು ಸೆಪ್ಟೆಂಬರ್ 27 ರಿಂದ ಕಾನ್ಪುರ ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆಯಲಿದೆ.