AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಅಭಿಮಾನಿಗಳನ್ನು ಮನೆಯೊಳಗೆ ಕರೆದು ಆಟ್ರೋಗ್ರಾಫ್ ನೀಡಿದ ವಿರಾಟ್ ಕೊಹ್ಲಿ

Virat Kohli: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ, ತನಗಾಗಿ ಗಂಟೆಗಟಲೇ ಕಾಯುತ್ತ ಕುಳಿತ್ತಿದ್ದ ಅಭಿಮಾನಿಗಳನ್ನು ಗುರುಗ್ರಾಮದಲ್ಲಿರುವ ತಮ್ಮ ಮನೆಯೊಳಗೆ ಆಹ್ವಾನಿಸಿದ್ದಾರೆ. ಇದರ ಜೊತೆಗೆ ಅವರು ಅಭಿಮಾನಿಗಳಿಗೆ ಆಟೋಗ್ರಾಫ್ ನೀಡಿದ್ದಾರೆ. ಇದೀಗ ಕೊಹ್ಲಿಯ ಈ ಸರಳತೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

Virat Kohli: ಅಭಿಮಾನಿಗಳನ್ನು ಮನೆಯೊಳಗೆ ಕರೆದು ಆಟ್ರೋಗ್ರಾಫ್ ನೀಡಿದ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
ಪೃಥ್ವಿಶಂಕರ
|

Updated on:Feb 03, 2025 | 5:43 PM

Share

ವಿಶ್ವ ಕ್ರಿಕೆಟ್​ನ ರನ್ ಸಾಮ್ರಾಟ ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವುದು ಹೊಸ ವಿಷಯವೆನ್ನಲ್ಲ. ಆದಾಗ್ಯೂ ತನ್ನ ಹಳೆಯ ಫಾರ್ಮ್​ ಕಂಡುಕೊಳ್ಳಲು ಕೊಹ್ಲಿ ನಾನಾ ಪ್ರಯತ್ನ ಮಾಡುತ್ತಿದ್ದಾರೆಯಾದರೂ ಅದ್ಯಾಕೋ ಯಾವುದು ಕೊಹ್ಲಿ ಅಂದುಕೊಂಡಂತೆ ನಡೆಯುತ್ತಿಲ್ಲ. ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಒಂದು ಶತಕ ಸಿಡಿಸಿದ್ದನ್ನು ಬಿಟ್ಟರೆ ಕೊಹ್ಲಿ ಬ್ಯಾಟ್ ಭಾಗಶಃ ಮೌನಕ್ಕೆ ಶರಣಾಗಿತ್ತು. ಹೀಗಾಗಿ ದೇಶೀ ಕ್ರಿಕೆಟ್​ನತ್ತ ಮುಖ ಮಾಡಿದ್ದ ಕೊಹ್ಲಿ ಅಲ್ಲೂ ಕೂಡ ಒಂದಂಕಿಗೆ ಸುಸ್ತಾಗಿದ್ದರು. ಹೀಗಾಗಿ ಕೊಹ್ಲಿಯ ಆಟವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದ ಅಭಿಮಾನಿಗಳು ಕೂಡ ಭಾರಿ ನಿರಾಸೆಗೊಂಡಿದ್ದರು. ಇದೀಗ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಗಾಗಿ ಗುರುಗ್ರಾಮದಲ್ಲಿರುವ ತಮ್ಮ ಹೊಸ ಮನೆಯಲ್ಲಿಯೇ ಅಭ್ಯಾಸ ನಡೆಸುತ್ತಿರುವ ಕೊಹ್ಲಿ ತಮ್ಮ ಸರಳತೆಯಿಂದಾಗಿ ಭಾರಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಅಭಿಮಾನಿಗಳನ್ನು ಮನೆಗೆ ಆಹ್ವಾನಿಸಿದ ಕೊಹ್ಲಿ

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಏಕದಿನ ಸರಣಿ ಇದೇ ಫೆಬ್ರವರಿ 6 ರಿಂದ ಆರಂಭವಾಗಲಿದೆ. ಅದರ ತಯಾರಿಗಾಗಿ ವಿರಾಟ್ ಕೊಹ್ಲಿ ಗುರುಗ್ರಾಮದಲ್ಲಿರುವ ತಮ್ಮ ಮನೆಯಲ್ಲಿ ವಾಸ್ತ್ಯವ ಹೂಡಿದ್ದಾರೆ. ಈ ವೇಳೆ ಕೊಹ್ಲಿಯನ್ನು ಕಾಣುವ ಸಲುವಾಗಿ ನೂರಾರು ಅಭಿಮಾನಿಗಳು ಅವರ ಮನೆಯ ಬಳಿ ಜಮಾಯಿಸುತ್ತಿದ್ದಾರೆ. ಇದರಲ್ಲಿ ಕೆಲವು ಅಭಿಮಾನಿಗಳು ಅವರನ್ನು ನೋಡುವ ಭರವಸೆಯಿಂದ ತಡರಾತ್ರಿಯವರೆಗೂ ಮನೆ ಮುಂದೆ ಕಾದುಕುಳಿತಿದ್ದಾರೆ. ಅಂತಿಮವಾಗಿ ತನ್ನ ಅಭಿಮಾನಿಗಳ ಈ ಅಭಿಮಾನಕ್ಕೆ ಕರಗಿದ ಕೊಹ್ಲಿ ಅವರನ್ನು ತಮ್ಮ ಮನೆಗೆ ಆಹ್ವಾನಿಸಿದ್ದಲ್ಲದೆ, ವೈಯಕ್ತಿಕವಾಗಿ ಅವರಿಗೆ ಆಟೋಗ್ರಾಫ್‌ಗಳನ್ನು ನೀಡಿದ್ದಾರೆ. ಈ ಹೃದಯಸ್ಪರ್ಶಿ ಘಟನೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಪ್ರಪಂಚದಾದ್ಯಂತದ ಕ್ರಿಕೆಟ್ ಪ್ರಿಯರು ಕೊಹ್ಲಿಯನ್ನು ಮನಸಾರೆ ಹೊಗಳಿದ್ದಾರೆ.

ರಣಜಿಯಲ್ಲೂ ವಿರಾಟ್ ಫೇಲ್

ಇನ್ನು ಕಿಂಗ್ ಕೊಹ್ಲಿಯ ಇತ್ತೀಚಿನ ಪ್ರದರ್ಶನದ ಬಗ್ಗೆ ಹೇಳುವುದಾದರೆ… ಬಿಸಿಸಿಐನ ಆದೇಶದ ಮೇರೆಗೆ ಸುಮಾರು 13 ವರ್ಷಗಳ ನಂತರ ಕೊಹ್ಲಿ ದೆಹಲಿ ಪರ ರಣಜಿ ಟ್ರೋಫಿ ಪಂದ್ಯವನ್ನು ಆಡಿದ್ದರು. ಅವರ ಆಟವನ್ನು ವೀಕ್ಷಿಸಲು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಸಾವಿರಾರು ಅಭಿಮಾನಿಗಳು ನೆರೆದಿದ್ದರು. ಆದಾಗ್ಯೂ, ದೇಶೀಯ ಕ್ರಿಕೆಟ್‌ಗೆ ಅವರ ಮರಳುವಿಕೆ ನಿರೀಕ್ಷೆಯಂತೆ ಇರಲಿಲ್ಲ. ರೈಲ್ವೇಸ್ ವಿರುದ್ಧದ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 15 ಎಸೆತಗಳನ್ನು ಎದುರಿಸಿದ್ದ ಕೇವಲ 6 ರನ್‌ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಎರಡನೇ ಇನ್ನಿಂಗ್ಸ್​ನಲ್ಲಿ ಕೊಹ್ಲಿಗೆ ಬ್ಯಾಟಿಂಗ್ ಮಾಡುವ ಅವಕಾಶವೇ ಸಿಗಲಿಲ್ಲ.

ಏಕದಿನ ಸರಣಿಯತ್ತ ಕೊಹ್ಲಿ ಚಿತ್ತ

ರಣಜಿ ಪಂದ್ಯದಲ್ಲಿ ಅಗ್ಗವಾಗಿ ಔಟಾಗಿದ್ದರೂ, ವಿರಾಟ್ ಈಗ ಇಂಗ್ಲೆಂಡ್ ವಿರುದ್ಧ ಭಾರತದ ತವರಿನಲ್ಲಿ ನಡೆಯಲಿರುವ ಏಕದಿನ ಸರಣಿಯತ್ತ ಗಮನ ಹರಿಸಲಿದ್ದಾರೆ. ದುಬೈನಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತದ ಸಿದ್ಧತೆಗೆ ಅವರ ಫಾರ್ಮ್ ನಿರ್ಣಾಯಕವಾಗಲಿದೆ. ಈ ಸರಣಿಗಾಗಿ ವಿರಾಟ್ ಮತ್ತು ನಾಯಕ ರೋಹಿತ್ ಶರ್ಮಾ ನಾಗ್ಪುರ ತಲುಪಿದ್ದಾರೆ. ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಲ್ಲಿಂದ ಆರಂಭವಾಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:11 pm, Mon, 3 February 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ