AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PBKS vs RCB: ಪಂಜಾಬ್ ವಿರುದ್ಧ ಅಬ್ಬರಿಸಿ ಎರಡೆರಡು ದಾಖಲೆ ಸೃಷ್ಟಿಸಿದ ಕೊಹ್ಲಿ

Virat Kohli's IPL 2026 Record: ಐಪಿಎಲ್ 2026ರಲ್ಲಿ ವಿರಾಟ್ ಕೊಹ್ಲಿ ತಮ್ಮ ಅದ್ಭುತ ಪ್ರದರ್ಶನ ಮುಂದುವರಿಸಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ 9ನೇ ಬಾರಿ 500+ ರನ್ ಗಳಿಸಿದ ಏಕೈಕ ಆಟಗಾರ ಎಂಬ ದಾಖಲೆ ನಿರ್ಮಿಸಿದರು. ಇದಲ್ಲದೆ, ಒಂದೇ ಫ್ರಾಂಚೈಸಿ ಪರ ಆರಂಭಿಕರಾಗಿ 5500 ರನ್ ಗಳಿಸಿದ ಮೊದಲ ಆಟಗಾರರಾಗಿ ಇತಿಹಾಸ ಸೃಷ್ಟಿಸಿದ್ದಾರೆ. ಕೊಹ್ಲಿಯ ಈ ದಾಖಲೆಗಳು ಕ್ರಿಕೆಟ್ ಲೋಕದಲ್ಲಿ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸಿವೆ.

PBKS vs RCB: ಪಂಜಾಬ್ ವಿರುದ್ಧ ಅಬ್ಬರಿಸಿ ಎರಡೆರಡು ದಾಖಲೆ ಸೃಷ್ಟಿಸಿದ ಕೊಹ್ಲಿ
Virat Kohli
ಪೃಥ್ವಿಶಂಕರ
|

Updated on:May 17, 2026 | 5:02 PM

Share

ಐಪಿಎಲ್ 2026 (IPL 2026) ರ ನಿರ್ಣಾಯಕ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ತಂಡಗಳ ನಡುವೆ ನಡೆಯಿತು. ಧರ್ಮಶಾಲಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​​ಸಿಬಿ ಪರ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat kohli) ತಂಡಕ್ಕೆ ಮತ್ತೊಮ್ಮೆ ಅಡಿಪಾಯ ಹಾಕಿಕೊಟ್ಟರು. ಕಳೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಅಜೇಯ ಶತಕ ಬಾರಿಸಿದ್ದ ಕೊಹ್ಲಿ, ಪಂಜಾಬ್ ವಿರುದ್ಧವೂ ಅದೇ ಆಟವನ್ನು ಮುಂದುವರೆಸಿದರು. ಪರಿಣಾಮವಾಗಿ ಸತತ ಎರಡನೇ ಪಂದ್ಯದಲ್ಲೂ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಮೂಲಕ 9 ಐಪಿಎಲ್ ಸೀಸನ್​ಗಳಲ್ಲಿ 500+ ರನ್ ಕಲೆಹಾಕಿದ ಏಕೈಕ ಆಟಗಾರ ಎಂಬ ದಾಖಲೆಯನ್ನು ಸೃಷ್ಟಿಸಿದರು.

ಪಂಜಾಬ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ 37 ಎಸೆತಗಳನ್ನು ಎದುರಿಸಿದ ಕೊಹ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 58 ರನ್ ಬಾರಿಸಿ ಔಟಾದರು. ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಈ ಆವೃತ್ತಿಯಲ್ಲಿ 500 ರನ್​ಗಳ ಗಡಿ ಕೂಡ ದಾಟಿದರು. ಇಲ್ಲಿಯವರೆಗೆ ನಡೆದಿರುವ 19 ಆವೃತ್ತಿಗಳಲ್ಲಿ ಕೊಹ್ಲಿ 500 ಕ್ಕೂ ಅಧಿಕ ರನ್ ಕಲೆಹಾಕಿರುವ 9ನೇ ಸೀಸನ್ ಇದಾಗಿದೆ. ಈ ಮೂಲಕ ಅಧಿಕ ಬಾರಿ 500+ ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಡೇವಿಡ್ ವಾರ್ನರ್ ಹಾಗೂ ಕನ್ನಡಿಗ ಕೆಎಲ್ ರಾಹುಲ್ ತಲಾ ಏಳು ಸೀಸನ್​ಗಳಲ್ಲಿ 500+ ರನ್ ಕಲೆಹಾಕಿದ್ದಾರೆ.

9 ಆವೃತ್ತಿಗಳಲ್ಲಿ 500+ ರನ್

  • 2011 ರ ಐಪಿಎಲ್‌: 557 ರನ್‌
  • 2013 ರ ಐಪಿಎಲ್‌: 634 ರನ್‌
  • 2015 ರ ಐಪಿಎಲ್‌: 505 ರನ್‌
  • 2016 ರ ಐಪಿಎಲ್‌: 973 ರನ್‌
  • 2018 ರ ಐಪಿಎಲ್‌: 530 ರನ್‌
  • 2023 ರ ಐಪಿಎಲ್‌: 639 ರನ್‌
  • 2024 ರ ಐಪಿಎಲ್‌: 741 ರನ್‌
  • 2025 ರ ಐಪಿಎಲ್‌: 657 ರನ್‌
  • 2026 ರ ಐಪಿಎಲ್‌: 500* ರನ್‌

ಆರಂಭಿಕನಾಗಿ 5500 ರನ್

ಇದರ ಜೊತೆಗೆ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಮತ್ತೊಂದು ಇತಿಹಾಸವನ್ನು ನಿರ್ಮಿಸಿದರು. ಐಪಿಎಲ್ ಇತಿಹಾಸದಲ್ಲಿ ಒಂದೇ ಫ್ರಾಂಚೈಸಿಯ ಪರ ಆರಂಭಿಕ ಆಟಗಾರನಾಗಿ 5500 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ. ಇಲ್ಲಿಯವರೆಗೆ, ಐಪಿಎಲ್‌ನಲ್ಲಿ ಒಂದೇ ಫ್ರಾಂಚೈಸಿ ಪರ ಆಡುವಾಗ ಯಾವುದೇ ಬ್ಯಾಟ್ಸ್‌ಮನ್ ಈ ಸಾಧನೆ ಮಾಡಿಲ್ಲ.

PBKS vs RCB IPL 2026 Live Score: ಆರ್​ಸಿಬಿ 200 ರನ್ ಪೂರ್ಣ

ಪಂಜಾಬ್ ವಿರುದ್ಧದ ಪಂದ್ಯಕ್ಕೂ ಮುನ್ನ ಕೊಹ್ಲಿಗೆ ಏಳು ರನ್‌ಗಳು ಬೇಕಾಗಿದ್ದವು. ಅಮಾನತುಲ್ಲಾ ಉಮರ್ಜೈ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಈ ಮೈಲಿಗಲ್ಲು ಸಾಧಿಸಿದರು. ಒಟ್ಟಾರೆಯಾಗಿ, ಕೊಹ್ಲಿಗಿಂತ ಮೊದಲು, ಶಿಖರ್ ಧವನ್ ಮತ್ತು ಡೇವಿಡ್ ವಾರ್ನರ್ ಐಪಿಎಲ್‌ನಲ್ಲಿ ಆರಂಭಿಕರಾಗಿ 5500 ರನ್‌ಗಳನ್ನು ಗಳಿಸಿದ್ದಾರೆ. ಆದರೆ ಅವರು ವಿಭಿನ್ನ ಫ್ರಾಂಚೈಸಿಗಳಿಗಾಗಿ ಆಡುವಾಗ ಈ ಸಾಧನೆಯನ್ನು ಮಾಡಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:01 pm, Sun, 17 May 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More