IPL 2022: RCB ಆರಂಭಿಕ ಜೋಡಿ ಬದಲಾಗ್ತಾರಾ?

Virat Kohli: ರಾಜಸ್ಥಾನ್ ರಾಯಲ್ಸ್ ವಿರುದ್ದದ ಪಂದ್ಯದಿಂದ ಅನೂಜ್ ರಾವತ್​ ಅವರನ್ನು ಆರ್​ಸಿಬಿ ತಂಡದಿಂದ ಕೈ ಬಿಟ್ಟಿತು. ಹೀಗಾಗಿ ಆರಂಭಿಕನಾಗಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು.

IPL 2022: RCB ಆರಂಭಿಕ ಜೋಡಿ ಬದಲಾಗ್ತಾರಾ?
Virat Kohli-Faf du Plessis
Follow us
TV9 Web
| Updated By: Digi Tech Desk

Updated on:Apr 29, 2022 | 4:01 PM

IPL 2022: ಐಪಿಎಲ್​ ಸೀಸನ್​ 15 ನಲ್ಲಿ ಆರ್​ಸಿಬಿ (RCB) ತಂಡವು ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಇದೀಗ ಸತತವಾಗಿ ಎರಡು ಸೋಲನುಭವಿಸಿದೆ. ಕೊನೆಯ ಎರಡು ಪಂದ್ಯಗಳಲ್ಲಿನ ಹೀನಾಯ ಸೋಲಿಗೆ ಬ್ಯಾಟ್ಸ್​ಮನ್​ಗಳೇ ಕಾರಣ. ಅದರಲ್ಲೂ ಆರ್​ಸಿಬಿ ಆರಂಭಿಕರು ಕಳಪೆ ಪ್ರದರ್ಶನ ನೀಡುತ್ತಿರುವುದು ಸೋಲಿಗೆ ಮುಖ್ಯ ಕಾರಣ ಎನ್ನಬಹುದು. ಮೊದಲ 8 ಮ್ಯಾಚ್​ನಲ್ಲಿ ಆಡಿದ್ದ ಅನೂಜ್ ರಾವತ್ ಕಲೆಹಾಕಿದ್ದು ಕೇವಲ 129 ರನ್​ ಮಾತ್ರ. ಸತತ ವೈಫಲ್ಯ ಹೊಂದಿದ್ದರೂ ಅನೂಜ್​​ಗೆ ಹೆಚ್ಚಿನ ಅವಕಾಶ ನೀಡಿದ್ದು ಆರ್​ಸಿಬಿ ಮಾಡಿದ ದೊಡ್ಡ ತಪ್ಪು ಎನ್ನಬಹುದು.

ಆ ಬಳಿಕ ರಾಜಸ್ಥಾನ್ ರಾಯಲ್ಸ್ ವಿರುದ್ದದ ಪಂದ್ಯದಿಂದ ಅನೂಜ್ ರಾವತ್​ ಅವರನ್ನು ಆರ್​ಸಿಬಿ ತಂಡದಿಂದ ಕೈ ಬಿಟ್ಟಿತು. ಹೀಗಾಗಿ ಆರಂಭಿಕನಾಗಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು. ಮೊದಲೆರಡು ಪಂದ್ಯದಲ್ಲಿ ಝೀರೋಗೆ ಔಟ್ ಆಗಿದ್ದ ಕೊಹ್ಲಿ ಈ ಬಾರಿ ಉತ್ತಮ ಆಡಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ರಾಜಸ್ಥಾನ್ ರಾಯಲ್ಸ್ ವಿರುದ್ದ ಕೂಡ ಎರಡಂಕಿ ಮೊತ್ತಗಳಿಸುವಲ್ಲಿ ವಿಫಲರಾಗಿದ್ದಾರೆ. ಕೇವಲ 9 ರನ್​ಗಳಿಸಿ ಕೊಹ್ಲಿ ಸುಲಭ ಕ್ಯಾಚ್ ನೀಡಿ ಔಟ್ ಆಗಿದ್ದರು.

ಅಂದರೆ ಆರಂಭಿಕನಾಗಿ ಆಡಿದ್ರು ವಿರಾಟ್ ಕೊಹ್ಲಿ ಫಾರ್ಮ್​ಗೆ ಮರಳಿಲ್ಲ. ಇತ್ತ ಆರಂಭಿಕರು ಫೇಲ್ ಆಗುತ್ತಿರುವ ಕಾರಣ, ಫಿನ್ ಅಲೆನ್, ಮಹಿಪಾಲ್​ ಲೋಮ್ರರ್​ಗೆ ಅವಕಾಶ ನೀಡಬೇಕೆಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ ಮುಂದಿನ ಪಂದ್ಯದಲ್ಲೂ ಆರಂಭಿಕ ಆಟಗಾರ ಬದಲಾಗುವುದಿಲ್ಲ ಎಂಬ ಸೂಚನೆ ನೀಡಿದ್ದಾರೆ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್.

ವಿರಾಟ್ ಕೊಹ್ಲಿಯನ್ನು ತಂಡದಿಂದ ಕೈ ಬಿಡಲು ಸಾಧ್ಯವಿಲ್ಲ. ಏಕೆಂದರೆ ಅವರು ಶ್ರೇಷ್ಠ ಆಟಗಾರ. ಈ ರೀತಿಯ ಕಳಪೆ ಫಾರ್ಮ್​ ಹಂತಗಳನ್ನು ಅವರು ಹಾದು ಹೋಗುತ್ತಾರೆ. ಇದು ಆತ್ಮವಿಶ್ವಾಸದ ಆಟವಾಗಿದೆ. ಅವರು ಮತ್ತೆ ಪುಟಿದೇಳುವ ವಿಶ್ವಾಸವಿದೆ. ಎಲ್ಲಾ ಶ್ರೇಷ್ಠ ಆಟಗಾರರು ಇಂತಹ ದುರ್ಬಲ ಹಂತಗಳನ್ನು ಎದುರಿಸುತ್ತಾರೆ. ಹೀಗಾಗಿ ಕೊಹ್ಲಿ ಕಂಬ್ಯಾಕ್ ಮಾಡುವ ವಿಶ್ವಾಸವಿದೆ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಕಳಪೆ ಫಾರ್ಮ್​ನಲ್ಲಿರುವ ಕಾರಣ ಅವರ ಬ್ಯಾಟಿಂಗ್ ಕ್ರಮಾಂಕ ಬದಲಿಸಲಾಗಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ದ ಅವರು ಉತ್ತಮವಾಗಿ ಆಡ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಇದಾಗ್ಯೂ ಉತ್ತಮ ಆರಂಭ ಪಡೆದಿದ್ದರೂ ದೊಡ್ಡ ಮೊತ್ತವಾಗಿಸುವಲ್ಲಿ ಎಡವಿದ್ದರು. ಹೀಗಾಗಿ ಮುಂದಿನ ಪಂದ್ಯದಲ್ಲೂ ಅವರೇ ಓಪನರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಹೀಗಾಗಿ ಗುಜರಾತ್ ವಿರುದ್ದದ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಪ್ಲೇಯಿಂಗ್ 11 ನಲ್ಲಿ ಕಾಣಿಸಿಕೊಳ್ಳುವುದು ಖಚಿತ. ಅದರಂತೆ ಗುಜರಾತ್ ಟೈಟನ್ಸ್ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಮತ್ತೊಮ್ಮೆ ಇನಿಂಗ್ಸ್ ಆರಂಭಿಸಲಿದ್ದಾರೆ. ಈ ಮೂಲಕ ಕಿಂಗ್ ಕೊಹ್ಲಿ ತಮ್ಮ ಹಳೆಯ ಫಾರ್ಮ್​ಗೆ ಮರಳಲಿದ್ದಾರಾ ಕಾದು ನೋಡಬೇಕಿದೆ.

RCB ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

Published On - 10:52 pm, Thu, 28 April 22

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ