Virat Kohli: ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ವಿರಾಟ್ ಕೊಹ್ಲಿ: ಈವರೆಗೆ ಯಾರೂ ಮಾಡಿರದ ಸಾಧನೆ
RCB vs SRH, IPL 2025: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಇನ್ನೂ 67 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಟಿ20 ಕ್ರಿಕೆಟ್ ಇತಿಹಾಸದಲ್ಲಿ ಒಂದೇ ತಂಡದ ಪರ ಆಡುವಾಗ 9000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಬೆಂಗಳೂರು (ಮೇ. 23): ಇಂಡಿಯನ್ ಪ್ರೀಮಿಯರ್ ಲೀಗ್ 2025 ರಲ್ಲಿ (Indian Premier League) ವಿರಾಟ್ ಕೊಹ್ಲಿ ಬ್ಯಾಟ್ ಜೋರಾಗಿ ಸದ್ದು ಮಾಡುತ್ತಿದೆ. ಈವರೆಗೆ ಇವರು 11 ಇನ್ನಿಂಗ್ಸ್‌ಗಳಲ್ಲಿ 63.13 ಸರಾಸರಿಯಲ್ಲಿ 505 ರನ್ ಗಳಿಸಿದ್ದಾರೆ. ಕೊಹ್ಲಿಯ ಈ ಅದ್ಭುತ ಪ್ರದರ್ಶನದ ಆಧಾರದ ಮೇಲೆ, ಆರ್‌ಸಿಬಿ ತಂಡವು ಈಗಾಗಲೇ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಸದ್ಯ ಆರ್‌ಸಿಬಿ ಗಮನವು ಋತುವಿನ ಉಳಿದ 2 ಲೀಗ್ ಪಂದ್ಯಗಳನ್ನು ಗೆಲ್ಲುವ ಮೂಲಕ ಅಗ್ರ -2 ರಲ್ಲಿ ಸ್ಥಾನ ಪಡೆಯುವತ್ತ ಸಾಗುತ್ತಿದೆ. ಆರ್‌ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 23 ರಂದು ಅಂದರೆ ಇಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಬೇಕಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ನಿರ್ಮಿಸುವ ಅವಕಾಶವನ್ನು ಹೊಂದಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಲು ಕೊಹ್ಲಿಗೆ ಕೇವಲ 67 ರನ್‌ಗಳ ಅವಶ್ಯಕತೆಯಿದೆ
ವಿರಾಟ್ ಕೊಹ್ಲಿ 2008 ರಿಂದ ಆರ್‌ಸಿಬಿ ಪರ ಆಡುತ್ತಿದ್ದಾರೆ, ಇದರಲ್ಲಿ ಅವರು ಐಪಿಎಲ್ ಹೊರತುಪಡಿಸಿ ಚಾಂಪಿಯನ್ಸ್ ಲೀಗ್‌ನಲ್ಲಿ ಕೂಡ ತಂಡಕ್ಕಾಗಿ ಆಡಿದ್ದಾರೆ. ಆರ್‌ಸಿಬಿ ಪರ ಕೊಹ್ಲಿ 278 ಟಿ20 ಪಂದ್ಯಗಳನ್ನು ಆಡಿದ್ದು, 39.52 ಸರಾಸರಿಯಲ್ಲಿ 8933 ರನ್ ಗಳಿಸಿದ್ದಾರೆ. ಕೊಹ್ಲಿ ಬ್ಯಾಟ್‌ನಿಂದ 8 ಶತಕಗಳು ಮತ್ತು 64 ಅರ್ಧಶತಕ ಇನ್ನಿಂಗ್ಸ್‌ಗಳು ದಾಖಲಾಗಿವೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಇನ್ನೂ 67 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಟಿ20 ಕ್ರಿಕೆಟ್ ಇತಿಹಾಸದಲ್ಲಿ ಒಂದೇ ತಂಡದ ಪರ ಆಡುವಾಗ 9000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕೊಹ್ಲಿ ದಾಖಲೆ
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕೊಹ್ಲಿ ಅವರ ದಾಖಲೆಯನ್ನು ನೋಡಿದರೆ, ಅವರು 23 ಪಂದ್ಯಗಳಲ್ಲಿ 36.29 ಸರಾಸರಿಯಲ್ಲಿ 762 ರನ್ ಗಳಿಸಿದ್ದಾರೆ, ಇದರಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕ ಇನ್ನಿಂಗ್ಸ್‌ಗಳು ಸೇರಿವೆ. ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಕೊಹ್ಲಿ ಪ್ರಸ್ತುತ ಸಂಜು ಸ್ಯಾಮ್ಸನ್ ನಂತರ ಎರಡನೇ ಸ್ಥಾನದಲ್ಲಿದ್ದಾರೆ. ಹೈದರಾಬಾದ್ ವಿರುದ್ಧ ಸ್ಯಾಮ್ಸನ್ ಒಟ್ಟು 867 ರನ್ ಗಳಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಲೀಗ್ ಹಂತದಲ್ಲಿ 2-2 ಪಂದ್ಯಗಳನ್ನು ಬಾಕಿ ಉಳಿಸಿಕೊಂಡಿವೆ. ಈ ಎರಡೂ ತಂಡಗಳು ತಮ್ಮ ಉಳಿದ ಪಂದ್ಯಗಳನ್ನು ಗೆದ್ದರೆ, 21-21 ಅಂಕಗಳೊಂದಿಗೆ ಲೀಗ್ ಹಂತವನ್ನು ಮುಗಿಸಬಹುದು. ಅಂದರೆ ಈ ಎರಡೂ ತಂಡಗಳು ಅಗ್ರ -2 ರಲ್ಲಿ ಉಳಿಯುತ್ತವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಉಳಿದ ಎರಡು ಪಂದ್ಯಗಳನ್ನು ಹೈದರಾಬಾದ್ ಮತ್ತು ಲಕ್ನೋ ತಂಡಗಳ ವಿರುದ್ಧ ಆಡಬೇಕಾಗಿದೆ. ಅತ್ತ ಪಂಜಾಬ್ ದೆಹಲಿ ಮತ್ತು ಮುಂಬೈ ತಂಡಗಳನ್ನು ಎದುರಿಸಬೇಕಾಗಿದೆ. ಮತ್ತೊಂದೆಡೆ, ಮುಂಬೈ ತಂಡವು ಗರಿಷ್ಠ 18 ಅಂಕಗಳನ್ನು ಮಾತ್ರ ತಲುಪಬಹುದು. ಟಾಪ್ನಲ್ಲಿ ಆರ್‌ಸಿಬಿ ಉಳಿದುಕೊಂಡರೆ ಫೈನಲ್ಗೇರುವ ಸಾಧ್ಯತೆ ಹೆಚ್ಚಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




