Asia Cup 2022: ಏಷ್ಯಾಕಪ್​ನಲ್ಲಿ ಭಾರತದ ಪರ ಅತಿ ಹೆಚ್ಚು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿರುವ ಕ್ರಿಕೆಟಿಗರಿವರು

Asia Cup 2022: ಕೊಹ್ಲಿ ಏಕದಿನ ಮಾದರಿಯಲ್ಲಿ 61.30 ಸರಾಸರಿಯಲ್ಲಿ 613 ರನ್ ಗಳಿಸಿದ್ದರೆ, ಇದರೊಂದಿಗೆ ಟಿ20 ಮಾದರಿಯಲ್ಲಿ 76.5 ಸರಾಸರಿಯಲ್ಲಿ 153 ರನ್ ಗಳಿಸಿದ್ದಾರೆ.

Asia Cup 2022: ಏಷ್ಯಾಕಪ್​ನಲ್ಲಿ ಭಾರತದ ಪರ ಅತಿ ಹೆಚ್ಚು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿರುವ ಕ್ರಿಕೆಟಿಗರಿವರು
India
Follow us
TV9 Web
| Updated By: ಪೃಥ್ವಿಶಂಕರ

Updated on: Aug 25, 2022 | 2:37 PM

ಬಹುನಿರೀಕ್ಷಿತ ಏಷ್ಯಾಕಪ್ 2022 (Asia Cup 2022) ಆಗಸ್ಟ್ 27 ರಿಂದ ಪ್ರಾರಂಭವಾಗುತ್ತಿದ್ದು, ಭಾರತದ ಮೊದಲ ಪಂದ್ಯ ಪಾಕಿಸ್ತಾನದ ವಿರುದ್ಧ ಆಗಸ್ಟ್ 28 ರಂದು ನಡೆಯಲಿದೆ. ಈ ಪಂದ್ಯಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಏಕೆಂದರೆ ಈ ಉಭಯ ತಂಡಗಳು ಐಸಿಸಿ ಈವೆಂಟ್​ಗಳಲ್ಲಿ ಮಾತ್ರ ಕಣಕ್ಕಿಳಿಯುವುದರಿಂದ ಕ್ರಿಕೆಟ್​ ಅಭಿಮಾನಿಗಳಿಗೆ ಇದೊಂದು ಹಬ್ಬವೇ ಸರಿ. ಆದರೆ ಅದಕ್ಕೂ ಮುನ್ನ ಏಷ್ಯಾಕಪ್​ನ​ಲ್ಲಿ ಭಾರತದ ಪರ ಶ್ರೇಷ್ಠ ಪ್ರದರ್ಶನ ನೀಡಿರುವ ಆಟಗಾರರ ಬಗ್ಗೆ ಒಂದಿಷ್ಟು ಗಮನಹರಿಸೋಣ. ಭಾರತದ ಅನೇಕ ಆಟಗಾರರು ಏಷ್ಯಾಕಪ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಟೂರ್ನಿಯಲ್ಲಿ ಅತಿ ಹೆಚ್ಚು ‘ಪ್ಲೇಯರ್ ಆಫ್ ದಿ ಮ್ಯಾಚ್’ ಪ್ರಶಸ್ತಿ ಪಡೆದ ಭಾರತೀಯ ಆಟಗಾರರ ಬಗ್ಗೆ ಹೇಳುವುದಾದರೆ, ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಸುರೇಶ್ ರೈನಾ (Suresh Raina) ಎರಡನೇ ಸ್ಥಾನದಲ್ಲಿದ್ದಾರೆ.

ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ‘ಮ್ಯಾನ್ ಆಫ್ ದಿ ಮ್ಯಾಚ್’ ಪ್ರಶಸ್ತಿಗಳನ್ನು ಗೆದ್ದ ಭಾರತೀಯ ಆಟಗಾರ ಕೊಹ್ಲಿ. ಅವರು ಇಲ್ಲಿಯವರೆಗೆ 5 ಬಾರಿ ಈ ಪ್ರಶಸ್ತಿಯನ್ನು ಗೆದ್ದಿದ್ದು, ಸುರೇಶ್ ರೈನಾ ಈ ಪ್ರಶಸ್ತಿಯನ್ನು 3 ಬಾರಿ ಪಡೆದಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಕೂಡ ಮೂರು ಬಾರಿ ಈ ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಟೂರ್ನಿಯಲ್ಲಿ ಕೊಹ್ಲಿ ಮತ್ತು ರೈನಾ ರನ್ ಮಷಿನ್​ನಂತೆ ಆಡಿದ್ದಾರೆ. ಇವರಿಬ್ಬರೂ ಭಾರತದ ಪರ ಹಲವು ಮಹತ್ವದ ಇನ್ನಿಂಗ್ಸ್‌ಗಳನ್ನು ಆಡಿ ತಂಡಕ್ಕೆ ಗೆಲುವು ನೀಡಿದ್ದಾರೆ. ಹೀಗಾಗಿ ಈ ಟೂರ್ನಿಯಲ್ಲಿ ಕೊಹ್ಲಿ ಮತ್ತೊಮ್ಮೆ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

ಏಷ್ಯಾಕಪ್‌ನಲ್ಲಿ ಕೊಹ್ಲಿ ಪ್ರದರ್ಶನ ಹೀಗಿದೆ

ಇದನ್ನೂ ಓದಿ
Image
Asia Cup 2022: ಕಿಂಗ್ ಕೊಹ್ಲಿ ಎಂದರೆ ಪಾಕ್ ತಂಡಕ್ಕೆ ಯಾಕಷ್ಟು ಭಯ? ಈ ರೆಕಾರ್ಡ್​ ನೋಡಿ
Image
Asia Cup 2022: ಏಷ್ಯಾಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಟೀಂ ಇಂಡಿಯಾ ಕ್ರಿಕೆಟಿಗರಿವರು
Image
Asia Cup 2022: ಏಷ್ಯಾಕಪ್ ಕ್ವಾಲಿಫೈಯರ್‌ನಲ್ಲಿ ಕುವೈತ್​ಗೆ ಗೆಲುವು; ಯುಎಇ ಸೋಲಿಗೆ ಕಾರಣನಾದ ದಾವೂದ್‌..!

ಏಷ್ಯಾಕಪ್‌ನಲ್ಲಿ ಕೊಹ್ಲಿ ಉತ್ತಮ ಪ್ರದರ್ಶನ ನೀಡಿರುವುದು ಉಲ್ಲೇಖಾರ್ಹ. ಅವರು ಏಕದಿನ ಮತ್ತು ಟಿ20 ಮಾದರಿಗಳಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ್ದಾರೆ. ಕೊಹ್ಲಿ ಏಕದಿನ ಮಾದರಿಯಲ್ಲಿ 61.30 ಸರಾಸರಿಯಲ್ಲಿ 613 ರನ್ ಗಳಿಸಿದ್ದರೆ, ಇದರೊಂದಿಗೆ ಟಿ20 ಮಾದರಿಯಲ್ಲಿ 76.5 ಸರಾಸರಿಯಲ್ಲಿ 153 ರನ್ ಗಳಿಸಿದ್ದಾರೆ. ವಿರಾಟ್ ಬಹಳ ದಿನಗಳಿಂದ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದು, ಟೀಂ ಇಂಡಿಯಾ ಅಭಿಮಾನಿಗಳಲ್ಲಿ ಆತಂಕ ಮನೆಮಾಡಿದೆ. ಆದರೆ ಉತ್ತಮ ಪ್ರದರ್ಶನ ನೀಡುವ ಸಲುವಾಗಿ ಕಿಂಗ್​ ಕೊಹ್ಲಿ ಏಷ್ಯಾಕಪ್ ಆರಂಭಕ್ಕೆ ಒಂದು ವಾರ ಮುನ್ನವೇ ಅಭ್ಯಾಸ ಆರಂಭಿಸಿದ್ದರು. ಹೀಗಾಗಿ ಈ ಸೀಸನ್​ನಲ್ಲಿ ಕೊಹ್ಲಿ ಮತ್ತೆ ತಮ್ಮ ಹಳೆಯ ಫಾರ್ಮ್​ಗೆ ಮರಳುವ ಎಲ್ಲಾ ಸಾಧ್ಯತೆಗಳು ಇವೆ.

ಏಷ್ಯಾಕಪ್‌ನಲ್ಲಿ ಪಾಕ್ ವಿರುದ್ಧ 183 ರನ್‌ಗಳ ಇನಿಂಗ್ಸ್‌

ಏಷ್ಯಾಕಪ್ ಬಗ್ಗೆ ಮಾತನಾಡುವುದಾದರೆ, ವಿರಾಟ್ ಕೊಹ್ಲಿ ಪಾಕಿಸ್ತಾನದ ವಿರುದ್ಧ 68 ಕ್ಕಿಂತ ಹೆಚ್ಚು ಸರಾಸರಿ ಹೊಂದಿದ್ದಾರೆ. ವಿರಾಟ್, ಪಾಕ್ ವಿರುದ್ಧ 3 ಪಂದ್ಯಗಳಲ್ಲಿ 206 ರನ್ ಗಳಿಸಿದ್ದು, ಜೊತೆಗೆ ಶತಕ ಕೂಡ ಸಿಡಿಸಿದ್ದಾರೆ. ವಿರಾಟ್ ಕೊಹ್ಲಿ ಏಷ್ಯಾಕಪ್ (ಏಷ್ಯಾ ಕಪ್ 2022) ನಲ್ಲಿ ಪಾಕಿಸ್ತಾನದ ವಿರುದ್ಧ 183 ರನ್‌ಗಳ ಇನ್ನಿಂಗ್ಸ್‌ ಆಡಿದ್ದು, ಇದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ವಿರಾಟ್ ಕೊಹ್ಲಿ ಏಕದಿನ ಹಾಗೂ ಟಿ20 ಮಾದರಿಯಲ್ಲಿ ಪಾಕಿಸ್ತಾನ ವಿರುದ್ಧ ಒಟ್ಟು 2 ಶತಕಗಳನ್ನು ಗಳಿಸಿದ್ದಾರೆ. ಇದರೊಂದಿಗೆ 2 ಅರ್ಧಶತಕಗಳು ಕೂಡ ಅವರ ಬ್ಯಾಟ್‌ನಿಂದ ಹೊರಬಿದ್ದಿವೆ. ಇದರರ್ಥ ಪ್ರತಿ ಸೀಮಿತ ಓವರ್‌ಗಳ ಸ್ವರೂಪದಲ್ಲಿ, ಪ್ರತಿ ಪಂದ್ಯಾವಳಿಯಲ್ಲಿ, ಕೊಹ್ಲಿ ಪಾಕಿಸ್ತಾನದ ವಿರುದ್ಧ ಮಿಂಚಿದ್ದಾರೆ.

ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ