ತ್ರಿಮೂರ್ತಿಗಳಿಗೆ ವಿಶ್ರಾಂತಿ: ಟೀಮ್ ಇಂಡಿಯಾ ನಾಯಕ ಯಾರು?

India vs Englad: ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 22 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 8 ಪಂದ್ಯಗಳು ನಡೆಯಲಿದೆ. ಮೊದಲಿಗೆ 5 ಪಂದ್ಯಗಳ ಟಿ20 ಸರಣಿ ಜರುಗಿದರೆ, ಇದರ ಬೆನ್ನಲ್ಲೇ 3 ಮ್ಯಾಚ್​ಗಳ ಏಕದಿನ ಸರಣಿ ಸಹ ನಡೆಯಲಿದೆ. ಈ ಸರಣಿಯ ಬಳಿಕ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಕಣಕ್ಕಿಳಿಯಲಿದೆ.

ತ್ರಿಮೂರ್ತಿಗಳಿಗೆ ವಿಶ್ರಾಂತಿ: ಟೀಮ್ ಇಂಡಿಯಾ ನಾಯಕ ಯಾರು?
Virat Kohli. Rohit Sharma and Jasprit Bumrah
Follow us
ಝಾಹಿರ್ ಯೂಸುಫ್
|

Updated on:Jan 02, 2025 | 7:16 AM

ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯ ವೇಳೆ ಟೀಮ್ ಇಂಡಿಯಾದ ತ್ರಿಮೂರ್ತಿಗಳಾದ ವಿರಾಟ್ ಕೊಹ್ಲಿ, ಜಸ್​ಪ್ರೀತ್ ಬುಮ್ರಾ ಹಾಗೂ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲು ಬಿಸಿಸಿಐ ಚಿಂತಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಸರಣಿ ಮುಕ್ತಾಯದ ಬೆನ್ನಲ್ಲೇ ಆಂಗ್ಲರ ವಿರುದ್ಧದ ಟಿ20 ಹಾಗೂ ಏಕದಿನ ಸರಣಿ ಶುರುವಾಗಲಿದೆ.

ಈ ಸರಣಿಯು ಜನವರಿ 22 ರಿಂದ ಆರಂಭವಾಗಲಿದ್ದು, ಮೊದಲಿಗೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಇದಾದ ಬಳಿಕ ಏಕದಿನ ಸರಣಿ ಶುರುವಾಗಲಿದೆ. ಈಗಾಗಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಕಾರಣ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಇದೇ ವೇಳೆ ಜಸ್​ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಿದ್ದಾರೆ.

ಇನ್ನು ಫೆಬ್ರವರಿ 6 ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೂ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಲಿದ್ದಾರೆ. ಬುಮ್ರಾ ಅವರೊಂದಿಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲು ಬಿಸಿಸಿಐ ಚಿಂತಿಸಿದೆ ಎಂದು ವರದಿಯಾಗಿದೆ.

ಆಸ್ಟ್ರೇಲಿಯಾ ವಿರುದ್ಧ ದೀರ್ಘ ಪ್ರವಾಸದ ಬಳಿಕ ಮೂವರ ಕಾರ್ಯಭಾರವನ್ನು ನಿರ್ವಹಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದ್ದು, ಈ ಬಗ್ಗೆ ಬುಮ್ರಾ, ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಮೂವರು ತ್ರಿಮೂರ್ತಿಗಳು ಕಾಣಿಸಿಕೊಳ್ಳದಿದ್ದರೂ ಅಚ್ಚರಿಪಡಬೇಕಿಲ್ಲ.

ಟೀಮ್ ಇಂಡಿಯಾ ನಾಯಕ ಯಾರು?

ಭಾರತ ತಂಡದ ಮೂವರು ಪ್ರಮುಖ ಆಟಗಾರರು ಹೊರಗುಳಿದರೆ ಟೀಮ್ ಇಂಡಿಯಾವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಈಗಾಗಲೇ ಉತ್ತರವಂತು ಸ್ಪಷ್ಟವಾಗಿದೆ.

ಟಿ20 ತಂಡದ ನಾಯಕರಾಗಿ ಸೂರ್ಯಕುಮಾರ್ ಯಾದವ್ ಇದ್ದು, ಅವರೇ ಇಂಗ್ಲೆಂಡ್ ವಿರುದ್ಧದ ಚುಟುಕು ಸರಣಿಯಲ್ಲಿ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಏಕದಿನ ತಂಡದ ನಾಯಕರಾಗುತ್ತಾರೆ ಎಂಬುದೇ ಕುತೂಹಲ. ಈ ಕುತೂಹಲಕ್ಕೆ ಉತ್ತರ ಉಪನಾಯಕ ಶುಭ್​​ಮನ್ ಗಿಲ್. ಶುಭ್​ಮನ್ ಅವರನ್ನು ಈಗಾಗಲೇ ಟೀಮ್ ಇಂಡಿಯಾದ ವೈಸ್ ಕ್ಯಾಪ್ಟನ್ ಆಗಿ ಆಯ್ಕೆ ಮಾಡಲಾಗಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ಗಿಲ್ ಭಾರತ ತಂಡದ ಸಾರಥ್ಯವಹಿಸಿಕೊಳ್ಳಲಿದ್ದಾರೆ.

ಅದರಂತೆ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೂಲಕ ಶುಭ್​​ಮನ್ ಗಿಲ್ ಟೀಮ್ ಇಂಡಿಯಾ ಏಕದಿನ ತಂಡದ ನಾಯಕರಾಗಿ ಪಾದಾರ್ಪಣೆ ಮಾಡಲಿದ್ದಾರೆ ಎನ್ನಬಹುದು. ಇನ್ನು ಈ ತಂಡದಲ್ಲಿ ಏಕದಿನ ವಿಶ್ವಕಪ್ ಟೀಮ್​ನಲ್ಲಿದ್ದ ಅನುಭವಿ ಆಟಗಾರರಾದ ಕೆಎಲ್ ರಾಹುಲ್, ಮೊಹಮ್ಮದ್ ಶಮಿ ಹಾಗೂ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಭಾರತ ಮತ್ತು ಇಂಗ್ಲೆಂಡ್ ವೇಳಾಪಟ್ಟಿ:

  • 1ನೇ T20I: ಜನವರಿ 22 (ಚೆನ್ನೈ)
  • 2ನೇ T20I: ಜನವರಿ 25 (ಕೋಲ್ಕತ್ತಾ)
  • 3ನೇ T20I: ಜನವರಿ 28 (ರಾಜ್‌ಕೋಟ್)
  • 4ನೇ T20I: ಜನವರಿ 31 (ಪುಣೆ)
  • 5ನೇ T20I: ಫೆಬ್ರವರಿ 2 (ಮುಂಬೈ)

ಇದನ್ನೂ ಓದಿ: ಬುಮ್ರಾ ಬೂಮ್ ಬೂಮ್​ಗೆ ಪಾಕ್ ವೇಗಿಯ ಸರ್ವಶ್ರೇಷ್ಠ ದಾಖಲೆ ಶೇಕಿಂಗ್..!

  • 1ನೇ ODI: ಫೆಬ್ರವರಿ 6 (ನಾಗ್ಪುರ)
  • 2ನೇ ODI: ಫೆಬ್ರವರಿ 9 (ಕಟಕ್)
  • 3ನೇ ODI: ಫೆಬ್ರವರಿ 12 (ಅಹಮದಾಬಾದ್)

Published On - 7:15 am, Thu, 2 January 25

ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ