AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಂಗ್ ಕೊಹ್ಲಿಯ ಜೊತೆಗೂಡಿ ಹಲವು ದಾಖಲೆ ಬರೆದ ಕೆಎಲ್ ರಾಹುಲ್

Virat Kohli and KL Rahul: ಈ ಅತ್ಯುತ್ತಮ ಜುಗಲ್​ಬಂದಿಯೊಂದಿಗೆ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಏಷ್ಯಾಕಪ್​ನಲ್ಲಿ ಅತ್ಯಧಿಕ ರನ್​ಗಳ ಜೊತೆಯಾಟವಾಡಿದ ವಿಶೆಷ ದಾಖಲೆಯನ್ನು ನಿರ್ಮಿಸಿದರು. ಇದರ ಜೊತೆಗೆ ಇನ್ನೂ ಕೆಲ ರೆಕಾರ್ಡ್​ಗಳನ್ನು ಬರೆದರು. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಕಿಂಗ್ ಕೊಹ್ಲಿಯ ಜೊತೆಗೂಡಿ ಹಲವು ದಾಖಲೆ ಬರೆದ ಕೆಎಲ್ ರಾಹುಲ್
KL Rahul - Virat Kohli
TV9 Web
| Updated By: ಝಾಹಿರ್ ಯೂಸುಫ್|

Updated on: Sep 11, 2023 | 8:59 PM

Share

ಕೊಲಂಬೊದಲ್ಲಿ ನಡೆದ ಏಷ್ಯಾಕಪ್​ನ ಸೂಪರ್-4 ಹಂತದ 3ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ (Virat Kohli) ಹಾಗೂ ಕೆಎಲ್ ರಾಹುಲ್ (KL Rahul) ಭರ್ಜರಿ ಶತಕಗಳನ್ನು ಬಾರಿಸಿ ಹಲವು ದಾಖಲೆಗಳನ್ನು ನಿರ್ಮಿಸಿದ್ದು ವಿಶೇಷ.

ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕಿಂಗ್ ಕೊಹ್ಲಿ 94 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 122 ರನ್ ಬಾರಿಸಿದರೆ, 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದರೆ ಕೆಎಲ್ ರಾಹುಲ್ 106 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 111 ರನ್​ ಸಿಡಿಸಿದರು.

ಈ ಅತ್ಯುತ್ತಮ ಜುಗಲ್​ಬಂದಿಯೊಂದಿಗೆ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಏಷ್ಯಾಕಪ್​ನಲ್ಲಿ ಅತ್ಯಧಿಕ ರನ್​ಗಳ ಜೊತೆಯಾಟವಾಡಿದ ವಿಶೆಷ ದಾಖಲೆಯನ್ನು ನಿರ್ಮಿಸಿದರು. ಇದರ ಜೊತೆಗೆ ಇನ್ನೂ ಕೆಲ ರೆಕಾರ್ಡ್​ಗಳನ್ನು ಬರೆದರು. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

ಭಾರತ-ಪಾಕ್ ಪಂದ್ಯದಲ್ಲಿ ಅತ್ಯುತ್ತಮ ಜೊತೆಯಾಟ: ಈ ಪಂದ್ಯದಲ್ಲಿ ಮೂರನೇ 3ನೇ ವಿಕೆಟ್​ಗೆ ಜೊತೆಗೂಡುವ ಮೂಲಕ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅಜೇಯ 233 ರನ್​ಗಳ ಜೊತೆಯಾಟವಾಡಿದರು. ಇದರೊಂದಿಗೆ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಅತ್ಯಧಿಕ ರನ್​ಗಳ ಜೊತೆಯಾಟವಾಡಿದ ಜೋಡಿ ಎಂಬ ದಾಖಲೆ ಕಿಂಗ್ ಕೊಹ್ಲಿ ಹಾಗೂ ಕ್ಲಾಸ್ ರಾಹುಲ್ ಪಾಲಾಯಿತು.​

  1. 233* ರನ್ – ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್, ಕೊಲಂಬೊ, ಸೆಪ್ಟೆಂಬರ್ 11, 2023 (RPS)
  2. 231 ರನ್ – ನವಜೋತ್ ಸಿಧು ಮತ್ತು ಸಚಿನ್ ತೆಂಡೂಲ್ಕರ್, ಶಾರ್ಜಾ, 1996
  3. 210 ರನ್ – ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ, ದುಬೈ (DSc), 2018
  4. 201 ರನ್ – ರಾಹುಲ್ ದ್ರಾವಿಡ್ ಮತ್ತು ವಿ ಸೆಹ್ವಾಗ್, ಕೊಚ್ಚಿ, 2005

ಏಷ್ಯಾಕಪ್​ನ ಅತ್ಯುತ್ತಮ ಜೊತೆಯಾಟ: 233 ರನ್​​ಗಳ ಜೊತೆಯಾಟದೊಂದಿಗೆ ಏಷ್ಯಾಕಪ್ ಇತಿಹಾಸದಲ್ಲೇ ಅತ್ಯಧಿಕ ರನ್​ಗಳ ಪಾಲುದಾರಿಕೆ ಪ್ರದರ್ಶಿಸಿದ ಜೋಡಿ ಎಂಬ ಹೆಗ್ಗಳಿಕೆಗೂ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಪಾತ್ರರಾದರು.

  1. 233 – ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ vs ಪಾಕಿಸ್ತಾನ್ (2023)
  2. 224 – ಮೊಹಮ್ಮದ್ ಹಫೀಜ್ ಮತ್ತು ನಾಸಿರ್ ಜಮ್ಶೆಡ್ vs ಭಾರತ (2012)
  3. 223 – ಶೊಯೇಬ್ ಮಲಿಕ್ ಮತ್ತು ಯೂನಿಸ್ ಖಾನ್ vs ಹಾಂಗ್​ಕಾಂಗ್ (2004)
  4. 214 – ಬಾಬರ್ ಮತ್ತು ಇಫ್ತಿಕರ್ ಅಹ್ಮದ್ vs ನೇಪಾಳ (2023)

ಇದನ್ನೂ ಓದಿ: Virat Kohli: ಭರ್ಜರಿ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ

ಭಾರತದ ಪರ 3ನೇ ಮತ್ತು 4ನೇ ಕ್ರಮಾಂಕದಲ್ಲಿ ಶತಕ: ಟೀಮ್ ಇಂಡಿಯಾ ಪರ 3ನೇ ಮತ್ತು 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶತಕ ಬಾರಿಸಿದ 3ನೇ ಜೋಡಿ ಎಂಬ ದಾಖಲೆ ಕೂಡ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಪಾಲಾಗಿದೆ.

  1. ರಾಹುಲ್ ದ್ರಾವಿಡ್ ಮತ್ತು ಸಚಿನ್ ತೆಂಡೂಲ್ಕರ್ vs ಕೀನ್ಯಾ (ಬ್ರಿಸ್ಟಲ್, 1999)
  2. ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿ vs ಶ್ರೀಲಂಕಾ (ಕೋಲ್ಕತ್ತಾ, 2009)
  3. ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ vs ಪಾಕಿಸ್ತಾನ್ (ಕೊಲಂಬೊ, 2023)
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್