IND vs SA: ಹರಿಣಗಳ ನಾಡಿನಲ್ಲಿ ಮೊದಲ ಅಭ್ಯಾಸ ಸೆಷನ್ ಮುಗಿಸಿದ ಟೀಮ್ ಇಂಡಿಯಾ: ಫೋಟೋ ಹಂಚಿಕೊಂಡ ಕೊಹ್ಲಿ

India tour of South Africa 2021/2022: BCCI ಟ್ವಿಟರ್ ಮೂಲಕ ದಕ್ಷಿಣ ಆಫ್ರಿಕಾ ನೆಲದಲ್ಲಿ ಟೀಮ್ ಇಂಡಿಯಾದ ಮೊದಲ ಅಭ್ಯಾಸ ಅವಧಿಯ ಚಿತ್ರಗಳನ್ನು ಹಂಚಿಕೊಂಡಿದೆ. ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಅಲಭ್ಯತೆಯಿಂದ ಉಪನಾಯಕನಾಗಿ ಆಯ್ಕೆಯಾಗಿರುವ ಕೆಎಲ್ ರಾಹುಲ್, ಪೂಜಾರ ಹಾಗೂ ತಂಡದ ಅಶ್ವಿನ್ ಸೆಂಚುರಿಯನ್ ನಲ್ಲಿ ಅಭ್ಯಾಸ ನಡೆಸಿದ್ದಾರೆ.

IND vs SA: ಹರಿಣಗಳ ನಾಡಿನಲ್ಲಿ ಮೊದಲ ಅಭ್ಯಾಸ ಸೆಷನ್ ಮುಗಿಸಿದ ಟೀಮ್ ಇಂಡಿಯಾ: ಫೋಟೋ ಹಂಚಿಕೊಂಡ ಕೊಹ್ಲಿ
Team India training session
Follow us
TV9 Web
| Updated By: Vinay Bhat

Updated on: Dec 19, 2021 | 10:15 AM

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಮತ್ತು ಏಕದಿನ ಸರಣಿಗಾಗಿ ಹರಿಣಗಳ ನಾಡಿಗೆ ತೆರಳಿರುವ ಭಾರತ (India vs South Africa) ತಂಡ ಕ್ವಾರಂಟೈನ್​ನಲ್ಲಿದ್ದುಕೊಂಡೆ ಅಭ್ಯಾಸ ಶುರು ಮಾಡಿದೆ. ಆಫ್ರಿಕಾ ನೆಲದಲ್ಲಿ ಮೊಟ್ಟಮೊದಲ ಟೆಸ್ಟ್ ಸರಣಿ ಗೆಲ್ಲುವ ಪ್ಲಾನ್​ನಲ್ಲಿ ವಿರಾಟ್ ಕೊಹ್ಲಿ (Virat Kohli) ಪಡೆಯಿದ್ದು, ಮೊದಲ ಅಬ್ಯಾಸ ಸೆಷನ್ ಮುಗಿಸಿದೆ. ಈ ಬಗ್ಗೆ ವಿರಾಟ್ ಕೊಹ್ಲಿ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ (IND vs SA 1st Test) ಡಿಸೆಂಬರ್ 26 ರಿಂದ 30ರವರೆಗೆ ಸೆಂಚುರಿಯನ್​ನಲ್ಲಿ (Centurion) ನಡೆಯಲಿದೆ. ಬಾಕ್ಸಿಂಗ್ ಡೇ (Boxing Day) ದಿನ ಆರಂಭವಾಗಲಿರುವ ಈ ಪಂದ್ಯ ಉಭಯ ತಂಡಗಳಿಗೆ ಮಹತ್ವದ್ದಾಗಿದೆ.

“ನಾವಿಲ್ಲಿ ಸಮುದ್ರ ಮಟ್ಟಕ್ಕಿಂತ ಬಹಳಷ್ಟು ಎತ್ತರದಲ್ಲಿದ್ದೇವೆ. ಹೀಗಾಗಿ ಇಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು 2-3 ದಿನ ಬೇಕಾಗುತ್ತದೆ. ಭಾರತ ತಂಡದ ಆಟಗಾರರ ಮುಂದೆ ನಾವು ಬಹಳಷ್ಟು ಕ್ರೀಡೆಗಳ ಆಯ್ಕೆ ನೀಡಿದ್ದೆವು. ಅವರು ಫುಟ್ ವಾಲಿಯನ್ನೇ ಆಯ್ದುಕೊಂಡರು. ಇದು ಈಗ ಇಂಡಿಯಾ ಕ್ರಿಕೆಟ್‌ ಟೀಮ್‌ ಗೇಮ್‌ ಎಂದೇ ಕರೆಯಲ್ಪಡುತ್ತಿದೆ’ ಎಂದು ಭಾರತ ತಂಡದ ಸ್ಟ್ರೆಂತ್‌ ಆಯಂಡ್‌ ಕಂಡೀಷನಿಂಗ್‌ ಕೋಚ್‌ ಸೋಹಮ್‌ ದೇಸಾಯಿ ಹೇಳಿದ್ದಾರೆ.

View this post on Instagram

A post shared by Virat Kohli (@virat.kohli)

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟ್ವಿಟರ್ ಮೂಲಕ ದಕ್ಷಿಣ ಆಫ್ರಿಕಾ ನೆಲದಲ್ಲಿ ಟೀಮ್ ಇಂಡಿಯಾದ ಮೊದಲ ಅಭ್ಯಾಸ ಅವಧಿಯ ಚಿತ್ರಗಳನ್ನು ಹಂಚಿಕೊಂಡಿದೆ. ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಅಲಭ್ಯತೆಯಿಂದ ಉಪನಾಯಕನಾಗಿ ಆಯ್ಕೆಯಾಗಿರುವ ಕೆಎಲ್ ರಾಹುಲ್, ಅನುಭವಿ ಚೇತೇಶ್ವರ ಪೂಜಾರ ಹಾಗೂ ತಂಡದ ರವಿಚಂದ್ರನ್ ಅಶ್ವಿನ್ ಸೆಂಚುರಿಯನ್ ನಲ್ಲಿ ಅಭ್ಯಾಸ ನಡೆಸಿದ್ದಾರೆ.

ಭಾರತ ತಂಡ ಈವರೆಗೂ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಪಂದ್ಯ ಗೆದ್ದಿದ್ದರೂ ಟೆಸ್ಟ್ ಸರಣಿ ಗೆಲ್ಲುವಲ್ಲಿ ಯಶಸ್ಸು ಕಂಡಿಲ್ಲ. ಈ ಬಾರಿಯೂ ಗಾಯದ ಸಮಸ್ಯೆಯೊಂದಿಗೆ ಟೀಮ್ ಇಂಡಿಯಾ ಹರಿಣಗಳ ನಾಡಿಗೆ ಕಾಲಿಟ್ಟಿದೆ. ರೋಹಿತ್ ಶರ್ಮ ಅಲ್ಲದೆ, ಕಳೆದ ನ್ಯೂಜಿಲೆಂಡ್ ವಿರುದ್ಧ ತವರಿನ ಟೆಸ್ಟ್ ಸರಣಿಯಲ್ಲಿ ಮೊಣಕಾಲು ಗಾಯಕ್ಕೆ ತುತ್ತಾಗಿರುವ ಅಗ್ರ ಆಲ್ರೌಂಡರ್ ರವೀಂದ್ರ ಜಡೇಜಾ ಕೂಡ ಟೆಸ್ಟ್ ಸರಣಿಗೆ ಲಭ್ಯರಿಲ್ಲ. ಹೀಗಾಗಿ ಯುವ ಆಟಗಾರರ ಮೇಲೆ ಸಾಕಷ್ಟು ನಂಬಿಕೆ ಇಡಲಾಗಿದೆ.

ಮುಂಬಯಿಯಲ್ಲಿ 3 ದಿನಗಳ ಕಠಿನ ಕ್ವಾರಂಟೈನ್‌ಗೆ ಒಳಗಾದ ಬಳಿಕ ಭಾರತ ತಂಡ 10 ಗಂಟೆಗಳ ಸುದೀರ್ಘ‌ ಪ್ರಯಾಣ ನಡೆಸಿ ಜೊಹಾನ್ಸ್‌ಬರ್ಗ್‌ಗೆ ಬಂದಿಳಿದಿತ್ತು. ದಕ್ಷಿಣ ಆಫ್ರಿಕಾದಲ್ಲಿ ಒಮಿಕ್ರಾನ್‌ ಕಾಟ ಇರುವುದರಿಂದ ಅತ್ಯುತ್ತಮ ಹಾಗೂ ಅತ್ಯಂತ ಕಠಿನವೆನಿಸಿದ ಜೈವಿಕ ಸುರಕ್ಷತೆಯನ್ನು ಹೊಂದಿರುವ ಪ್ರತ್ಯೇಕ ರೆಸಾರ್ಟ್‌ ಒಂದನ್ನು ಟೀಮ್‌ ಇಂಡಿಯಾಕ್ಕೆ ವ್ಯವಸ್ಥೆ ಮಾಡಲಾಗಿದೆ.

ಭಾರತದ ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್.ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಪ್ರಿಯಾಂಕ್ ಪಾಂಚಾಲ್.

BWF World Championships: ಫೈನಲ್​ಗೆ ಲಗ್ಗೆಯಿಟ್ಟು ಐತಿಹಾಸಿಕ ಸಾಧನೆ ಮಾಡಿದ ಶ್ರೀಕಾಂತ್ ಕಿಡಂಬಿ

India Tour of SA: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಯಾವಾಗ ಪ್ರಕಟ?: ಯಾರಿಗೆ ಚಾನ್ಸ್?

(Virat Kohli-led Team India completed their first training session on Saturday before start IND vs SA 1st Test)

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!