RCB vs PBKS: ಆರ್‌ಸಿಬಿ ಗೆದ್ದ ತಕ್ಷಣ ಮೈದಾನದಿಂದ ಅನುಷ್ಕಾಗೆ ವಿಡಿಯೋ ಕಾಲ್ ಮಾಡಿದ ಕೊಹ್ಲಿ: ಏನು ಮಾತಾಡಿದ್ರು?

Virat Kohli Video Call to Anushka Sharma: ವಿರಾಟ್ ಕೊಹ್ಲಿ ಅವರು ಪಂದ್ಯ ಮುಗಿದ ಬಳಿಕ ಡ್ರೆಸ್ಸಿಂಗ್ ರೂಮ್​ಗೆ ಹಿಂತಿರುಗುವ ಮೊದಲು ಅನುಷ್ಕಾ ಶರ್ಮಾಗೆ ವಿಡಿಯೋ ಕರೆ ಮಾಡಿ ಮಾತನಾಡಿದ್ದಾರೆ. ಈ ಕರೆಯಲ್ಲಿ ಕೊಹ್ಲಿ ಮಗಳು ವಾಮಿಕಾ ಕೂಡ ಇದ್ದಂತೆ ಕಾಣುತ್ತಿದೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

RCB vs PBKS: ಆರ್‌ಸಿಬಿ ಗೆದ್ದ ತಕ್ಷಣ ಮೈದಾನದಿಂದ ಅನುಷ್ಕಾಗೆ ವಿಡಿಯೋ ಕಾಲ್ ಮಾಡಿದ ಕೊಹ್ಲಿ: ಏನು ಮಾತಾಡಿದ್ರು?
Virat Kohli Video Call
Follow us
Vinay Bhat
|

Updated on: Mar 26, 2024 | 10:03 AM

ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ ಆರ್‌ಸಿಬಿ ಖಾತೆ ತೆರೆದಿದೆ. ವಿರಾಟ್ ಕೊಹ್ಲಿ (Virat Kohli) ಹಾಗೂ ಅನುಭವಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಬೆಂಗಳೂರು ತಂಡಕ್ಕೆ ಭರ್ಜರಿ ಜಯ ದಕ್ಕಿತು. ಈ ಜಯದ ಮೂಲಕ ಆರ್​ಸಿಬಿ ಪಾಯಿಂಟ್ಸ್ ಟೇಬಲ್​ನಲ್ಲಿ ಆರನೇ ಸ್ಥಾನಕ್ಕೆ ಜಿಗಿದಿದೆ. ಪಂದ್ಯದ ನಂತರ ವಿರಾಟ್ ಕೊಹ್ಲಿ ಅವರು ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ವಿಡಿಯೋ ಕಾಲ್‌ನಲ್ಲಿ ಸಮಯ ಕಳೆಯುತ್ತಿರುವುದು ಕಂಡುಬಂತು. ಇದರ ವಿಡಿಯೋ ವೈರಲ್ ಆಗುತ್ತಿದೆ.

ಕೊಹ್ಲಿ ಅವರು ಪಂದ್ಯ ಮುಗಿದ ಬಳಿಕ ಡ್ರೆಸ್ಸಿಂಗ್ ರೂಮ್​ಗೆ ಹಿಂತಿರುಗುವ ಮೊದಲು ಅನುಷ್ಕಾ ಶರ್ಮಾಗೆ ವಿಡಿಯೋ ಕರೆ ಮಾಡಿ ಮಾತನಾಡಿದ್ದಾರೆ. ಈ ಕರೆಯಲ್ಲಿ ಕೊಹ್ಲಿ ಮಗಳು ವಾಮಿಕಾ ಕೂಡ ಇದ್ದಂತೆ ಕಾಣುತ್ತಿದೆ. ವಿರಾಟ್ ತನ್ನ ಮಗಳ ಜೊತೆ ಆಡುತ್ತಿರುವುದು ಕೂಡ ವಿಡಿಯೋದಲ್ಲಿದೆ. ನಂತರ ಫ್ಲೈಯಿಂಗ್ ಕಿಸ್ ನೀಡಿದ್ದಾರೆ. ಕೊಹ್ಲಿ ತಮ್ಮ ಕುಟುಂಬ ಸದಸ್ಯರೊಂದಿಗೆ ಹರಟೆ ಹೊಡೆಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ.

ಪಂದ್ಯದ ಮಧ್ಯೆ ಪಂಜಾಬ್ ಆಟಗಾರನನ್ನು ನಿಂದಿಸಿದ ವಿರಾಟ್ ಕೊಹ್ಲಿ: ವಿಡಿಯೋ

ಅನುಷ್ಕಾ ಜೊತೆ ವಿಡಿಯೋ ಕಾಲ್​ನಲ್ಲಿರುವ ವಿರಾಟ್ ಕೊಹ್ಲಿ ವಿಡಿಯೋ ಇಲ್ಲಿದೆ:

ಪಂಜಾಬ್ ನೀಡಿದ್ದ 177 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ಆರಂಭಿಕ ಓವರ್‌ಗಳಲ್ಲಿ ನಾಯಕ ಫಾಫ್ ಡುಪ್ಲೆಸಿಸ್ ಮತ್ತು ಕ್ಯಾಮರೂನ್ ಗ್ರೀನ್ ಅವರನ್ನು ಕಗಿಸೊ ರಬಾಡ ಪೆವಿಲಿಯನ್​ಗೆ ಅಟ್ಟಿದರು. ಆದಾಗ್ಯೂ, ಸ್ಟಾರ್ ಬ್ಯಾಟ್ಸ್‌ಮನ್‌ಗಳಾದ ವಿರಾಟ್ ಕೊಹ್ಲಿ ಮತ್ತು ದಿನೇಶ್ ಕಾರ್ತಿಕ್ ಆರ್‌ಸಿಬಿಗೆ ಪಂಜಾಬ್ ಕಿಂಗ್ಸ್ ವಿರುದ್ಧ 4 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಲು ಸಹಾಯ ಮಾಡಿದರು. ಕೊಹ್ಲಿ 77 ರನ್ ಗಳಿಸಿ ಔಟಾದರೆ, ಕಾರ್ತಿಕ್- ಮಹಿಪಾಲ್ ಲೊಮ್ರೋರ್ ಜೊತೆಗೂಡಿ 28 ರನ್ ಗಳಿಸಿ ಉಪಯುಕ್ತ ಕಾಣಿಕೆ ನೀಡಿದರು.

ರೋಚಕ ಗೆಲುವಿನ ಬಳಿಕ ಪೋಸ್ಟ್ ಮ್ಯಾಚ್​ನಲ್ಲಿ ಆರ್​ಸಿಬಿ ನಾಯಕ ಡುಪ್ಲೆಸಿಸ್ ಏನೆಲ್ಲ ಹೇಳಿದ್ರು ಗೊತ್ತೇ?

ಇದಕ್ಕೂ ಮುನ್ನ ಆರ್​ಸಿಬಿ ಬೌಲರ್‌ಗಳಾದ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಯಶ್ ದಯಾಲ್ ಪಂಜಾಬ್ ಬ್ಯಾಟ್ಸ್‌ಮನ್‌ಗಳನ್ನು ನಿರ್ಬಂಧಿಸುವಲ್ಲಿ ಯಶಸ್ವಿಯಾದರು. ಪಂಜಾಬ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್​ಗಳ ಸಾಧಾರಣ ಮೊತ್ತವನ್ನು ದಾಖಲಿಸಿತು. ಶಿಖರ್ ಧವನ್ 45 ರನ್‌ಗಳು ಕೊಡುಗೆ ನೀಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?