AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕೊಹ್ಲಿಯ ಒಂದು ಶತಕಕ್ಕಾಗಿ ಕಾದು ಕುಳಿತಿರುವ ಕ್ರಿಕೆಟ್ ಪ್ರೇಮಿಗಳು: ಸೆಂಚುರಿ ಬಂದರೆ ಸೃಷ್ಟಿಯಾಗಲಿದೆ ವಿಶ್ವ ದಾಖಲೆ

South Africa vs India: ವಿರಾಟ್ ಕೊಹ್ಲಿ ಬ್ಯಾಟ್​ನಿಂಶ ಶತಕ ಬಂದು ಎರಡು ವರ್ಷಗಳೇ ಕಳೆದಿವೆ. ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕೊಹ್ಲಿ ಬ್ಯಾಟ್​ನಿಂದ ಸೆಂಚುರಿ ಬಂದರೆ ಅದೊಂದು ದೊಡ್ಡ ದಾಖಲೆಯೇ ಆಗಲಿದೆ. ವಿರಾಟ್ ಕೊಹ್ಲಿ ಪ್ರಸ್ತುತ ಎಲ್ಲಾ ಮೂರು ಮಾದರಿಯ ಕ್ರಿಕೆಟ್ ನಲ್ಲಿ 70 ಶತಕ ಸಿಡಿಸಿದ್ದಾರೆ.

Virat Kohli: ಕೊಹ್ಲಿಯ ಒಂದು ಶತಕಕ್ಕಾಗಿ ಕಾದು ಕುಳಿತಿರುವ ಕ್ರಿಕೆಟ್ ಪ್ರೇಮಿಗಳು: ಸೆಂಚುರಿ ಬಂದರೆ ಸೃಷ್ಟಿಯಾಗಲಿದೆ ವಿಶ್ವ ದಾಖಲೆ
TV9 Web
| Edited By: |

Updated on: Dec 24, 2021 | 10:32 AM

Share

ಸೌತ್ ಆಫ್ರಿಕಾ (India vs South Africa) ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೆ ಇನ್ನೇನು ಕೇವಲ ಎರಡು ದಿನವಷ್ಟೇ ಬಾಕಿಯಿದೆ. ಡಿಸೆಂಬರ್ 26 ರಂದು ಸೆಂಚುರಿಯನ್​ನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ವಿರಾಟ್ ಕೊಹ್ಲಿ (Virat Kohli) ಪಡೆ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಟೀಮ್ ಇಂಡಿಯಾ (Team India) ಆಟಗಾರರು ಮೈದಾನದಲ್ಲಿ ಬೆವರು ಹರಿಸುತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅನೇಕ ವಿಚಾರಗಳಿಂದ ಎಲ್ಲರ ಕಣ್ಣು ವಿರಾಟ್ ಕೊಹ್ಲಿ ಮೇಲಿದೆ. ಒಂದು ಕಡೆ ಎರಡು ವರ್ಷಗಳಿಂದ ಶತಕದ ಬರ ಎದುರಿಸುತ್ತಿದ್ದರೆ ಮತ್ತೊಂದೆಡೆ ಆಫ್ರಿಕಾಕ್ಕೆ ತೆರಳುವ ಮುನ್ನ ನಡೆಸಿದ ಸುದ್ದಿಗೋಷ್ಠಿಯಲ್ಲಿ ಕೊಹ್ಲಿ ಆಡಿದ ಮಾತು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು. ಹೀಗೆ ಅನೇಕ ಕಾರಣಗಳಿಂದ ಕೊಹ್ಲಿ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಹೌದು, ಕೊಹ್ಲಿ ಬ್ಯಾಟ್​ನಿಂಶ ಶತಕ ಬಂದು ಎರಡು ವರ್ಷಗಳೇ ಕಳೆದಿವೆ. ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕೊಹ್ಲಿ ಬ್ಯಾಟ್​ನಿಂದ ಸೆಂಚುರಿ ಬಂದರೆ ಅದೊಂದು ದೊಡ್ಡ ದಾಖಲೆಯೇ ಆಗಲಿದೆ. ವಿರಾಟ್ ಕೊಹ್ಲಿ ಪ್ರಸ್ತುತ ಎಲ್ಲಾ ಮೂರು ಮಾದರಿಯ ಕ್ರಿಕೆಟ್ ನಲ್ಲಿ 70 ಶತಕ ಸಿಡಿಸಿದ್ದಾರೆ. ಇದರಲ್ಲಿ 41 ನಾಯಕನಾಗಿ ಶತಕ ಗಳಿಸಿದ್ದಾರೆ. ಕೊಹ್ಲಿ ಒಂದು ಶತಕ ಸಿಡಿಸಿದರೆ ಆಸ್ಟ್ರೇಲಿಯಾದ ದಿಗ್ಗಜ ಬ್ಯಾಟರ್ ರಿಕಿ ಪಾಂಟಿಂಗ್ ನಾಯಕನಾಗಿ ಗಳಿಸಿದ್ದ 41 ಶತಕಗಳ ದಾಖಲೆಯನ್ನು ಹಿಂದಿಕ್ಕಲಿದ್ದಾರೆ.

ಇನ್ನು ಹರಿಣಗಳ ನಾಡಲ್ಲಿ ಈ ಹಿಂದೆ ವಿರಾಟ್ ಪ್ರದರ್ಶನ ಹೇಗಿತ್ತು ಎಂಬ ಅಂಕಿಅಂಶವನ್ನು ನೋಡಿದರೆ, ಇಲ್ಲಿ ಕಿಂಗ್ ಕೊಹ್ಲಿಯದ್ದೇ ಪಾರುಪತ್ಯ. ಆಫ್ರಿಕಾನ್ನರ ನಾಡಿನಲ್ಲಿ ಇವರು ಒಟ್ಟು 6 ಶತಕ ಮತ್ತು 5 ಅರ್ಧಶತಕ ಸಿಡಿಸಿ ಅಬ್ಬರಿಸಿದ್ದಾರೆ. ದ. ಆಫ್ರಿಕಾದಲ್ಲಿ ಒಟ್ಟು 5 ಟೆಸ್ಟ್ ಪಂದ್ಯಗಳನ್ನು ಆಡಿರುವ ಕೊಹ್ಲಿ 10 ಇನ್ನಿಂಗ್ಸ್​ಗಳಲ್ಲಿ ತಲಾ 2 ಶತಕ ಮತ್ತು ಅರ್ಧಶತಕ ಬಾರಿಸಿದ್ದಾರೆ. ಗರಿಷ್ಠ ಸ್ಕೋರ್ 153 ರನ್ ಆಗಿದೆ. ಒಟ್ಟು 558 ರನ್ ಕಲೆಹಾಕಿದ್ದಾರೆ. ಏಕದಿನ ಪಂದ್ಯಗಳ ಅಂಕಿಅಂಶ ನೋಡುವುದಾದರೆ, 17 ಓಡಿಐ ಆಡಿದ್ದಾರೆ. ಇದರಲ್ಲಿ 3 ಶತಕ ಮತ್ತು 4 ಅರ್ಧಶತಕ ಸೇರಿವೆ. ಅಜೇಯ 160 ರನ್ ಗರಿಷ್ಠ ಸ್ಕೋರ್ ಆಗಿದೆ. ಒಟ್ಟು 877 ರನ್ ಚಚ್ಚಿದ್ದಾರೆ. ಹೀಗೆ ಆಫ್ರಿಕಾದಲ್ಲಿ ಕೊಹ್ಲಿ ದಾಖಲೆ ಚೆನ್ನಾಗಿಯೇ ಇದೆ.

ಇತ್ತ ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು ತಲುಪುವ ಹೊಸ್ತಿಲಲ್ಲಿದ್ದಾರೆ. ಅದಕೂಡ ಕೋಚ್ ರಾಹುಲ್ ದ್ರಾವಿಡ್ ಅವರ ಸಾಧನೆ ಹಿಂದಿಕ್ಕಿ ಎಂಬುದು ವಿಶೇಷ. ಆಫ್ರಿಕಾ ವಿರುದ್ಧದ 12 ಟೆಸ್ಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಈವರೆಗೆ 59.72 ಸರಾಸರಿಯಲ್ಲಿ 1075 ರನ್ ಕಲೆಹಾಕಿದ್ದಾರೆ. ಕೊಹ್ಲಿಗಿಂತ ಅಧಿಕವಾಗಿ ಮೂರು ಭಾರತೀಯ ಬ್ಯಾಟರ್ಗಳು ಮಾತ್ರ ಈ ಸಾಧನೆ ಮಾಡಿದ್ದಾರೆ. ಸಚಿನ್ ತೆಂಡೂಲ್ಕರ್ 1741 ರನ್, ವಿರೇಂದ್ರ ಸೆಹ್ವಾಗ್ 1306 ರನ್ ಮತ್ತು ರಾಹುಲ್ ದ್ರಾವಿಡ್ 1252 ರನ್ ಕಲೆಹಾಕಿದ್ದಾರೆ. ದ. ಆಫ್ರಿಕಾ ವಿರುದ್ಧ ಭಾರತ ಮೂರು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಇಲ್ಲಿ ಕೊಹ್ಲಿ 232 ರನ್ ಬಾರಿಸಿದರೆ ಕೋಚ್ ರಾಹುಲ್ ದ್ರಾವಿಡ್ ಹಾಗೂ ವಿರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಅಳಿಸಿ ಹಾಕಿ ಎರಡನೇ ಸ್ಥಾನಕ್ಕೇರಲಿದ್ದಾರೆ.

Cheteshwar Pujara: ಆಫ್ರಿಕಾ ವಿರುದ್ಧದ ಅಗ್ನಿಪರೀಕ್ಷೆಗೂ ಮುನ್ನ ಮಹತ್ವದ ಮತುಗಳನ್ನಾಡಿದ ಚೇತೇಶ್ವರ್ ಪೂಜಾರ

Virat Kohli: ವಿರಾಟ್ ಕೊಹ್ಲಿ ಹಾಗೂ ಬಿಸಿಸಿಐ ವಿವಾದದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ರವಿಶಾಸ್ತ್ರಿ

(Virat Kohli manages to score a century in 1st test against South Africa its will create history)

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ