AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG Test: ಲಂಡನ್‌ನಲ್ಲಿರುವ ತಮ್ಮ ಮನೆಗೆ ಕರೆದು ಗಿಲ್- ಪಂತ್ ಜೊತೆ ಕೊಹ್ಲಿ ಮೀಟಿಂಗ್

Virat Kohli Meeting Shubman Gill- Rishabh Pant: ವಿರಾಟ್ ಕೊಹ್ಲಿ ಇಂಗ್ಲೆಂಡ್ ಸರಣಿಯ ಮೇಲೆ ನಿಗಾ ಇಟ್ಟಿದ್ದಾರೆ. ಲೀಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್‌ಗೆ ಕೆಲವು ದಿನಗಳ ಮೊದಲು, ಹೊಸ ಟೆಸ್ಟ್ ನಾಯಕ ಶುಭ್ಮನ್ ಗಿಲ್, ಉಪನಾಯಕ ರಿಷಭ್ ಪಂತ್ ಮತ್ತು ಇತರ ಕೆಲವು ಆಟಗಾರರನ್ನು ಲಂಡನ್‌ನಲ್ಲಿರುವ ತಮ್ಮ ಮನೆಗೆ ಆಹ್ವಾನಿಸಿದ್ದಾರೆ

IND vs ENG Test: ಲಂಡನ್‌ನಲ್ಲಿರುವ ತಮ್ಮ ಮನೆಗೆ ಕರೆದು ಗಿಲ್- ಪಂತ್ ಜೊತೆ ಕೊಹ್ಲಿ ಮೀಟಿಂಗ್
Kohli Gill And Pant
Vinay Bhat
|

Updated on: Jun 18, 2025 | 8:40 AM

Share

ಬೆಂಗಳೂರು (ಜೂ. 18): ಜೂನ್ 20 ರಿಂದ ಲೀಡ್ಸ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ (India vs England Test) ನಡುವೆ ರೋಮಾಂಚಕಾರಿ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಕಠಿಣ ಪ್ರವಾಸದಲ್ಲಿ ಯುವ ಆಟಗಾರ ಶುಭ್​ಮನ್ ಗಿಲ್ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ, ಶುಭ್​ಮನ್ ಗಿಲ್ ಅವರನ್ನು ಈ ಸ್ವರೂಪದಲ್ಲಿ ಭಾರತದ ನಾಯಕರನ್ನಾಗಿ ಮಾಡಲಾಗಿದೆ. ಅದೇ ಸಮಯದಲ್ಲಿ, ರಿಷಭ್ ಪಂತ್ ಅವರಿಗೆ ಉಪನಾಯಕನ ಸ್ಥಾನ ಸಿಕ್ಕಿದೆ. ರೋಹಿತ್ ಶರ್ಮಾ ನಿವೃತ್ತಿಯ ನಂತರ, ಭಾರತದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದರು.

ಇಂಗ್ಲೆಂಡ್‌ನ ಪ್ರಮುಖ ಸರಣಿಗೆ ಮೊದಲು ಇಬ್ಬರೂ ಅನುಭವಿ ಆಟಗಾರರ ನಿವೃತ್ತಿ ಭಾರತಕ್ಕೆ ಆಘಾತವನ್ನುಂಟು ಮಾಡಿತು. ಸದ್ಯ ಭಾರತದ ಯುವ ತಂಡ ಇಂಗ್ಲೆಂಡ್ ತಲುಪಿದ್ದು, ಇಲ್ಲಿ ಕಠಿಣ ಅಭ್ಯಾಸ ಮಾಡುತ್ತಿದೆ. ಅವರು ಇಂಟ್ರಾ-ಸ್ಕ್ವಾಡ್ ಪಂದ್ಯಗಳನ್ನು ಸಹ ಆಡಿದ್ದಾರೆ. ವಿರಾಟ್ ಕೊಹ್ಲಿ ಪ್ರಸ್ತುತ ತಮ್ಮ ಕುಟುಂಬದೊಂದಿಗೆ ಲಂಡನ್‌ನಲ್ಲಿದ್ದಾರೆ. ಐಪಿಎಲ್ ಆಡಿದ ನಂತರ ಕೊಹ್ಲಿ ಲಂಡನ್‌ಗೆ ಮರಳಿದರು.

ವಿರಾಟ್ ಕೊಹ್ಲಿ ಮನೆಯಲ್ಲಿ 2 ಗಂಟೆಗಳ ಕಾಲ ಮೀಟಿಂಗ್:

ಇದನ್ನೂ ಓದಿ
Image
13 ಭರ್ಜರಿ ಸಿಕ್ಸ್​... ಮ್ಯಾಕ್ಸ್​ವೆಲ್​ ಬ್ಯಾಟ್​ನಿಂದ ತೂಫಾನ್ ಸೆಂಚುರಿ
Image
ಭಾರತದಲ್ಲಿ ನಿವೃತ್ತಿ ಘೋಷಿಸಲು ನಿರ್ಧರಿಸಿದ ಸೋಫಿ ಡಿವೈನ್
Image
ಸರಣಿ ಆರಂಭಕ್ಕೆ 2 ದಿನಗಳಿರುವಾಗ ಟೀಮ್ ಇಂಡಿಯಾಗೆ ಯುವ ವೇಗಿ ಎಂಟ್ರಿ
Image
ಇಂಡೊ-ಇಂಗ್ಲೆಂಡ್ ಟೆಸ್ಟ್ ಸರಣಿಗೆ ಹೆಸರು ಫೈನಲ್: ಪಟೌಡಿಗೆ ವಿಶೇಷ ಗೌರವ

ನಿವೃತ್ತಿಯ ಹೊರತಾಗಿಯೂ ವಿರಾಟ್ ಕೊಹ್ಲಿ ಇಂಗ್ಲೆಂಡ್ ಸರಣಿಯ ಮೇಲೆ ನಿಗಾ ಇಟ್ಟಿದ್ದಾರೆ. ಲೀಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್‌ಗೆ ಕೆಲವು ದಿನಗಳ ಮೊದಲು, ಹೊಸ ಟೆಸ್ಟ್ ನಾಯಕ ಶುಭ್​ಮನ್ ಗಿಲ್, ಉಪನಾಯಕ ರಿಷಭ್ ಪಂತ್ ಮತ್ತು ಇತರ ಕೆಲವು ಆಟಗಾರರನ್ನು ಲಂಡನ್‌ನಲ್ಲಿರುವ ತಮ್ಮ ಮನೆಗೆ ಆಹ್ವಾನಿಸಿದ್ದಾರೆ ಎಂದು ಹೇಳಿಕೊಳ್ಳುವ ರೆವ್‌ಸ್ಪೋರ್ಟ್ಜ್‌ನ ವಿಡಿಯೋ ವರದಿಯಿಂದ ಇದು ಸ್ಪಷ್ಟವಾಗಿದೆ. ಸೋಮವಾರ ಕೆಂಟ್‌ನಲ್ಲಿ ನಡೆದ ಇಂಟ್ರಾ-ಸ್ಕ್ವಾಡ್ ಪಂದ್ಯ ಮುಗಿದ ನಂತರ ಭಾರತ ತಂಡಕ್ಕೆ ಒಂದು ದಿನದ ರಜೆ ಇತ್ತು. ಈ ಸಂದರ್ಭ ಆಟಗಾರರು ಕೊಹ್ಲಿಯನ್ನು ಭೇಟಿ ಮಾಡಲು ಲಭ್ಯವಿದ್ದರು.

IND vs ENG: ಇಂಡೊ-ಇಂಗ್ಲೆಂಡ್ ಟೆಸ್ಟ್ ಸರಣಿಗೆ ಹೆಸರು ಫೈನಲ್: ಪಟೌಡಿಗೆ ವಿಶೇಷ ಗೌರವ

ಈ ಸಭೆ ಯಾವುದರ ಬಗ್ಗೆ ಎಂದು ವರದಿಯಲ್ಲಿ ಸ್ಪಷ್ಟಪಡಿಸಲಾಗಿಲ್ಲ. ಮುಂಬರುವ ಸರಣಿಯ ಬಗ್ಗೆ ಅಥವಾ ಗಿಲ್ ಮತ್ತು ಪಂತ್ ಯುವ ತಂಡವನ್ನು ಹೇಗೆ ಮುನ್ನಡೆಸಬಹುದು ಎಂಬುದರ ಬಗ್ಗೆ ಇದು ಇದ್ದಿರಬಹುದು ಎಂದು ಊಹಿಸಲಾಗಿದೆ. ಆದಾಗ್ಯೂ, ಚರ್ಚೆ ಸುಮಾರು ಎರಡು ಗಂಟೆಗಳ ಕಾಲ ನಡೆಯಿತು ಎಂದು ತಿಳಿದುಬಂದಿದೆ. ಭಾರತ ತಂಡವು ಇಂದು ಲೀಡ್ಸ್ ತಲುಪುವ ನಿರೀಕ್ಷೆಯಿದೆ, ಅಲ್ಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ತಂಡವನ್ನು ಭೇಟಿಯಾಗಲಿದ್ದಾರೆ.

ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ:

ಭಾರತ-ಇಂಗ್ಲೆಂಡ್ ಸರಣಿ ಆರಂಭಕ್ಕೆ 2 ದಿನಗಳ ಮೊದಲು, ಮತ್ತೊಬ್ಬ ಆಟಗಾರ ಇದ್ದಕ್ಕಿದ್ದಂತೆ ಟೀಮ್ ಇಂಡಿಯಾವನ್ನು ಪ್ರವೇಶಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ವೇಗಿ ಹರ್ಷಿತ್ ರಾಣಾ ಭಾರತೀಯ ಟೆಸ್ಟ್ ತಂಡವನ್ನು ಸೇರಿಕೊಂಡಿದ್ದಾರೆ. ಜೂನ್ 20 ರಿಂದ ಲೀಡ್ಸ್‌ನಲ್ಲಿ ಮೊದಲ ಪಂದ್ಯ ಆರಂಭವಾಗಲಿದೆ. ರಾಣಾ ಅವರನ್ನು 18 ಸದಸ್ಯರ ತಂಡದಲ್ಲಿ ಈ ಮೊದಲು ಆಯ್ಕೆ ಮಾಡಿರಲಿಲ್ಲ. ಆದರೆ ಮಂಗಳವಾರ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಯಿತು. ಮೊದಲ ಟೆಸ್ಟ್ ನಂತರ ಅವರು ತಂಡದಲ್ಲಿಯೇ ಇರುತ್ತಾರೋ ಇಲ್ಲವೋ ಎಂಬುದು ಇನ್ನೂ ನಿರ್ಧರಿಸಲಾಗಿಲ್ಲ. 23 ವರ್ಷದ ದೆಹಲಿ ವೇಗದ ಬೌಲರ್ ಅವರನ್ನು ಭಾರತ ಎ ತಂಡದಲ್ಲಿ ಸೇರಿಸಿಕೊಳ್ಳಲಾಗಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ