
ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ 2ನೇ ಟಿ20 ಪಂದ್ಯಕ್ಕಾಗಿ ಟೀಮ್ ಇಂಡಿಯಾ (Team India) ಗೌಹಾಟಿಯ ಬರಸ್ಪೋರಾ ಸ್ಟೇಡಿಯಂನಲ್ಲಿ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಇದೇ ವೇಳೆ ಅಭ್ಯಾಸ ಮುಗಿಸಿ ಮರಳುತ್ತಿದ್ದ ವಿರಾಟ್ ಕೊಹ್ಲಿ (Virat Kohli) ಜೊತೆ ಫೋಟೋ ತೆಗೆಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಆದರೆ ಯಾವುದೇ ಕೋಪ ತಾಪ ತೋರಿಸದೇ ಅಭಿಮಾನಿಗಳ ಜೊತೆ ಕಿಂಗ್ ಕೊಹ್ಲಿ ಪೋಸ್ ನೀಡಿದರು. ಇದೀಗ ಕೊಹ್ಲಿಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನು ಗೌಹಾಟಿಯಲ್ಲಿ ನಡೆಯಲಿರುವ 2ನೇ ಟಿ20 ಪಂದ್ಯದಲ್ಲಿ ಗೆದ್ದರೆ ಸರಣಿ ಟೀಮ್ ಇಂಡಿಯಾ ವಶವಾಗಲಿದೆ. ಇದಕ್ಕೂ ಮುನ್ನ 3 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್ಗಳಿಂದ ಭರ್ಜರಿ ಜಯ ಸಾಧಿಸಿತು. ಇದೀಗ 2ನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ವಶಪಡಿಸಿಕೊಳ್ಳುವ ಇರಾದೆಯಲ್ಲಿದೆ.
Virat Kohli clicks pictures with fans at Barsapara Stadium in #Guwahati. #Assam #ViratKohli @imVkohli @BCCI @assamcric pic.twitter.com/3Tth1d3d8c
— G Plus (@guwahatiplus) October 1, 2022
ಇತ್ತ ಭರ್ಜರಿ ಅಭ್ಯಾಸದಲ್ಲಿರುವ ನಿರತರಾಗಿದ್ದ ವಿರಾಟ್ ಕೊಹ್ಲಿ ಮೊದಲ ಟಿ20 ಪಂದ್ಯದಲ್ಲಿ ಕೇವಲ 3 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಆದರೆ ಇದಕ್ಕೂ ಮುನ್ನ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಅತ್ಯುತ್ತಮ ಅರ್ಧಶತಕವನ್ನು ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ಇದೀಗ 2ನೇ ಪಂದ್ಯದಲ್ಲಿ ಮತ್ತೊಮ್ಮೆ ಅಬ್ಬರಿಸಲು ಕಿಂಗ್ ಕೊಹ್ಲಿ ಸಜ್ಜಾಗಿದ್ದಾರೆ.
2ನೇ ಟಿ20 ಪಂದ್ಯವು ಸೌತ್ ಆಫ್ರಿಕಾ ಪಾಲಿಗೆ ನಿರ್ಣಾಯಕವಾಗಿದ್ದು, ಹೀಗಾಗಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಜೊತೆ ಕಣಕ್ಕಿಳಿಯಲಿದೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.
ಭಾರತದ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಆರ್. ಅಶ್ವಿನ್, ದೀಪಕ್ ಚಹರ್ ಮತ್ತು ಅರ್ಷದೀಪ್ ಸಿಂಗ್.
ದಕ್ಷಿಣ ಆಫ್ರಿಕಾದ ಸಂಭಾವ್ಯ ಪ್ಲೇಯಿಂಗ್ 11: ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್, ಟೆಂಬಾ ಬವುಮಾ, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವೇಯ್ನ್ ಪೆರ್ನೆಲ್, ಕಗಿಸೊ ರಬಾಡ, ತಬ್ರೇಝ್ ಶಮ್ಸಿ, ಕೇಶವ್ ಮಹಾರಾಜ್ ಮತ್ತು ಅನ್ರಿಕ್ ನೋಕಿಯಾ.