AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಸದ್ಯದಲ್ಲೇ ಟೀಮ್ ಇಂಡಿಯಾಕ್ಕೆ ಕಾದಿದೆ ಮತ್ತೊಂದು ಶಾಕ್: ಬಿಸಿಸಿಐ ಬಳಿ ವಿಶೇಷ ಮನವಿಯಿಟ್ಟ ವಿರಾಟ್ ಕೊಹ್ಲಿ

South Africa vs India: ಸದ್ಯದಲ್ಲೇ ಟೀಮ್ ಇಂಡಿಯಾಕ್ಕೆ ಮತ್ತೊಂದು ಆಘಾತಕಾರಿ ಸುದ್ದಿ ಹೊರಬೀಳಲಿದೆ. ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹಿಂದೆ ಸರಿಯಲು ಬಿಸಿಸಿಐ ಬಳಿ ಮನವಿ ಮಾಡಿದ್ದಾರೆ ಎಂದು ಖಾಸಗಿ ಪತ್ರಿಕೆಯೊಂದು ವರದಿ ಮಾಡಿದೆ.

Virat Kohli: ಸದ್ಯದಲ್ಲೇ ಟೀಮ್ ಇಂಡಿಯಾಕ್ಕೆ ಕಾದಿದೆ ಮತ್ತೊಂದು ಶಾಕ್: ಬಿಸಿಸಿಐ ಬಳಿ ವಿಶೇಷ ಮನವಿಯಿಟ್ಟ ವಿರಾಟ್ ಕೊಹ್ಲಿ
Virat Kohli and BCCI
TV9 Web
| Edited By: |

Updated on: Jan 04, 2022 | 11:26 AM

Share

ಭಾರತ ಕ್ರಿಕೆಟ್ ತಂಡ ಸದ್ಯ ದಕ್ಷಿಣ ಆಫ್ರಿಕಾ (India vs South Africa) ಪ್ರವಾಸದಲ್ಲಿದ್ದು ಟೆಸ್ಟ್ ಸರಣಿಯನ್ನು ಆಡುತ್ತಿದೆ. ಮೊದಲ ಟೆಸ್ಟ್​ ಪಂದ್ಯದಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಟೀಮ್ ಇಂಡಿಯಾ (Team India) ಇದೀಗ ಎರಡನೇ ಟೆಸ್ಟ್ ಗೆದ್ದು ಸರಣಿ ವಶಪಡಿಸಿಕೊಂಡು ಇತಿಹಾಸ ಸೃಷ್ಟಿಸುವತ್ತ ಎದುರು ನೋಡುತ್ತಿದೆ. ಇದರ ನಡುವೆ ಭಾರತಕ್ಕೆ ಬರಸಿಡಿಲಿನಂತೆ ಒಂದೊಂದೆ ಆಘಾತಕಾರಿ ಸುದ್ದಿ ಅಪ್ಪಳಿಸುತ್ತಿದೆ. ಎರಡನೇ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ನಾಯಕ ವಿರಾಟ್‌ ಕೊಹ್ಲಿ (Virat Kohli) ಬೆನ್ನು ನೋವಿನಿಂದಾಗಿ ಹೊರಗುಳಿದಿದ್ದಾರೆ. ಅಂತಿಮ ಮೂರನೇ ಟೆಸ್ಟ್​ಗೆ ಇವರ ಲಭ್ಯತೆ ಬಗ್ಗೆ ಮಾಹಿತಿಯಿಲ್ಲ. ಇದೀಗ ಕೊಹ್ಲಿ ವಿಚಾರವಾಗಿ ಮತ್ತೊಂದು ಸುದ್ದಿ ಹರಿದಾಡುತ್ತಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದಲೂ ಕೊಹ್ಲಿ ಹೊರಗುಳಿಯುವ ನಿರ್ಧಾರ ಮಾಡಿದ್ದಾರಂತೆ. ಹೀಗಾದಲ್ಲಿ ಇದು ಟೀಮ್ ಇಂಡಿಯಾಕ್ಕೆ ದೊಡ್ಡ ಹಿನ್ನಡೆಯಾಗುವುದು ಖಚಿತ.

ಹೌದು, ಆಫ್ರಿಕಾ ವಿರುದ್ಧದ ಏಕದಿನ ಪಂದ್ಯಕ್ಕೆ ಭಾರತ ತಂಡ ಪ್ರಕಟವಾಗುವ ಮುನ್ನ ವಿರಾಟ್ ಕೊಹ್ಲಿ ಈ ಸರಣಿಯಿಂದ ಹೊರಗುಳಿಯಲು ತೀರ್ಮಾನಿಸಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಬಳಿಕ ಹರಿಣಗಳ ನಾಡಿಗೆ ಪ್ರವಾಸಕ್ಕೆ ತೆರಳುವ ಮುನ್ನ ಸ್ವತಃ ಕೊಹ್ಲಿಯೇ ಸುದ್ದಿಗೋಷ್ಠಿ ನಡೆಸಿ ಈ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದರು. “ಮೂರು ಪಂದ್ಯಗಳ ಏಕದಿನ ಸರಣಿಗೆ ತಾನು ಲಭ್ಯವಿರುತ್ತೇನೆ. ಏಕದಿನ ಸರಣಿ ಆಡಲು ತಾನು ಸಿದ್ಧನಿದ್ದೇನೆ, ನಾನು ಬಿಸಿಸಿಐನಿಂದ ವಿಶ್ರಾಂತಿ ನೀಡಲು ಮನವಿ ಮಾಡಿಲ್ಲ. ನನಗೆ ಯಾವುದೇ ವಿಶ್ರಾಂತಿಯ ಅಗತ್ಯವಿಲ್ಲ” ಎಂದು ಹೇಳಿದ್ದರು.

ಇದೀಗ ಕೊಹ್ಲಿ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹಿಂದೆ ಸರಿಯಲು ಬಿಸಿಸಿಐ ಬಳಿ ಮನವಿ ಮಾಡಿದ್ದಾರೆ ಎಂದು ಖಾಸಗಿ ಪತ್ರಿಕೆಯೊಂದು ವರದಿ ಮಾಡಿದೆ. ಕುಟುಂಬದ ಜೊತೆ ಸಮಯ ಕಳೆಯಲು ನಿರ್ಧಾರ ಮಾಡಿರುವುದರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ನಾನು ಹಿಂದೆ ಸರಿಯುತ್ತಿದ್ದೇನೆ. ಇದಕ್ಕೆ ನಿಮ್ಮ ಅನುಮತಿಗಾಗಿ ಕಾಯುತ್ತಿದ್ದೇನೆ ಎಂದು ಕೊಹ್ಲಿ ಬಿಸಿಸಿಐ ಬಳಿ ಮನವಿ ಮಾಡಿದ್ದಾರಂತೆ.

ರೋಹಿತ್ ಕೂಡ ಅಲಭ್ಯ:

ರೋಹಿತ್ ಶರ್ಮಾ ಹೆಗಲಿಗೆ ಭಾರತ ಏಕದಿನ ತಂಡದ ನಾಯಕತ್ವವನ್ನು ಹಾಕಿದ ಬೆನ್ನಲ್ಲೇ ಮುಂಬೈನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಗಾಯದ ಸಮಸ್ಯೆಗೆ ಒಳಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಬಿದ್ದರು. ಇನ್ನು ಟೆಸ್ಟ್ ಸರಣಿಯಿಂದ ಹೊರಬಿದ್ದ ರೋಹಿತ್ ಶರ್ಮಾ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್‌ನೆಸ್ ಪಡೆದುಕೊಳ್ಳಲು ಶ್ರಮಿಸಿದ್ದು ಈಗಲೂ ಫಿಟ್ ಆಗದ ಕಾರಣ ಏಕದಿನ ಸರಣಿಗೂ ಅಲಭ್ಯರಾಗಿದ್ದಾರೆ. ಹೀಗಾಗಿ ಭಾರತ ಏಕದಿನ ತಂಡದ ನಾಯಕತ್ವವನ್ನು ಕನ್ನಡಿಗ ಕೆಎಲ್ ರಾಹುಲ್ ಹೆಗಲಿಗೆ ಬಿಸಿಸಿಐ ಹಾಕಿದೆ.

ಏಕದಿನ ಸರಣಿ ವೇಳಾಪಟ್ಟಿ:

ಮೊದಲ ಏಕದಿನ: ಜನವರಿ 19 , ಬೆಟ್ವೇ, ಸಮಯ – 2.00 PM

ಎರಡನೇ ಏಕದಿನ: ಜನವರಿ 21, ಪಾರ್ಕ್, ಪಾರ್ಲ್, ಸಮಯ – 2.00 PM

ಮೂರನೇ ಏಕದಿನ: ಜನವರಿ 23, ನ್ಯೂಲ್ಯಾಂಡ್ಸ್, ಕೇಪ್‌ ಟೌನ್, ಸಮಯ – 2.00 PM

ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಯುಜ್ವೇಂದ್ರ ಚಾಹಲ್, ಆರ್. ಅಶ್ವಿನ್, ವಾಷಿಂಗ್ಟನ್ ಸುಂದರ್, ಜಸ್​ಪ್ರೀತ್ ಬುಮ್ರಾ (ಉಪ ನಾಯಕ), ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್.

Mohammed Siraj Injury: ಭಾರತಕ್ಕೆ ಶಾಕ್ ಮೇಲೆ ಶಾಕ್: ಇಂದು ಈ ಆಟಗಾರ ಕಣಕ್ಕಿಳಿಯುವುದು ಅನುಮಾನ

South Africa vs India: ಎರಡನೇ ದಿನದಾಟಕ್ಕೆ ಇದೆಯೇ ಮಳೆಯ ಕಾಟ?: ಜೋಹನ್ಸ್​​ಬರ್ಗ್​​ ವಾತಾವರಣ ಹೇಗಿದೆ?

(Virat Kohli might miss the three-match ODI series against South Africa sought permission from BCCI)

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು