Virat Kohli: ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯರು ರೆಡಿಯಾದ ವಿರಾಟ್ ಕೊಹ್ಲಿ: ಇದುವರೆಗೆ ಯಾರೂ ಮಾಡಿರದ ಸಾಧನೆ

| Updated By: Vinay Bhat

Updated on: Oct 30, 2022 | 10:20 AM

India vs South Africa, T20 World Cup: ಟಿ20 ವಿಶ್ವಕಪ್​ನಲ್ಲಿ ಇಂದಿನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 11 ರನ್ ಗಳಿಸಿದರೆ ಭಾರತ ಪರ ಟಿ20 ವಿಶ್ವಕಪ್​ನಲ್ಲಿ 1000 ರನ್ ಗಳಿಸಿದ ಮೊಟ್ಟ ಮೊದಲ ಕ್ರಿಕೆಟಿಗ ಆಗಲಿದ್ದಾರೆ.

Virat Kohli: ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯರು ರೆಡಿಯಾದ ವಿರಾಟ್ ಕೊಹ್ಲಿ: ಇದುವರೆಗೆ ಯಾರೂ ಮಾಡಿರದ ಸಾಧನೆ
Virat Kohli IND vs SA
Follow us on

ಕಾಂಗರೂಗಳ ನಾಡಿನಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ 2022 ಟೂರ್ನಿ (ICC T20 World Cup) ದಿನದಿಂದ ದಿನಕ್ಕೆ ರೋಚಕತೆ ಪಡೆಯುತ್ತಿದೆ. ಪ್ರತಿ ಪಂದ್ಯದಲ್ಲಿ ನೂತನ ದಾಖಲೆಗಳು ನಿರ್ಮಾಣವಾಗುತ್ತಿದೆ. ಇಂದುಕೂಡ ಚುಟುಕು ವಿಶ್ವಕಪ್​ನಲ್ಲಿ ಮೂರು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಮುಖ್ಯವಾಗಿ ಸಂಜೆ 4:30ಕ್ಕೆ ಪರ್ತ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ತಂಡಗಳು ಮುಖಾಮುಖಿ ಆಗಲಿದೆ. ಈ ಟೂರ್ನಿಯಲ್ಲಿ ಒಂದೂ ಸೋಲು ಕಾಣದೆ ಮುನ್ನುಗ್ಗುತ್ತಿರುವ ಉಭಯ ತಂಡಗಳ ನಡುವಣ ಕಾದಾಟ ಸಾಕಷ್ಟು ಕುತೂಹಲ ಕೆರಳಿಸಿದೆ. ಭರ್ಜರಿ ಫಾರ್ಮ್​ನಲ್ಲಿರುವ ಭಾರತೀಯ ಬ್ಯಾಟರ್​ಗಳು ಯಾವರೀತಿ ಪ್ರದರ್ಶನ ನೀಡುತ್ತಾರೆ ಎಂಬುದು ನೋಡಬೇಕಿದೆ. ಇದರ ನಡುವೆ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ನೂತನ ದಾಖಲೆಯ ಹೊಸ್ತಿಲಲ್ಲಿದ್ದಾರೆ.

ಆಡಿದ ಎರಡೂ ಪಂದ್ಯಗಳಲ್ಲಿ ಅರ್ಧಶತಕ ಸಿಡಿಸಿ ಅಮೋಘ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ ಇದೀಗ ಒಂದೇ ಪಂದ್ಯದಲ್ಲಿ ಎರಡು ದಾಖಲೆ ಸೃಷ್ಟಿಸಲು ತಯಾರಾಗಿದ್ದಾರೆ. ಕೊಹ್ಲಿ ಈವರೆಗೆ ಆಡಿರುವ 23 ಟಿ20 ವಿಶ್ವಕಪ್ ಪಂದ್ಯದಲ್ಲಿ ಒಟ್ಟು 989 ರನ್ ಕಲೆಹಾಕಿದ್ದಾರೆ. ಇಂದಿನ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಕೇವಲ 11 ರನ್ ಗಳಿಸಿದರೆ ಭಾರತ ಪರ ಟಿ20 ವಿಶ್ವಕಪ್​ನಲ್ಲಿ 1000 ರನ್ ಗಳಿಸಿದ ಮೊಟ್ಟ ಮೊದಲ ಕ್ರಿಕೆಟಿಗ ಆಗಲಿದ್ದಾರೆ. ಇದರ ಜೊತೆಗೆ 28 ರನ್ ಬಾರಿಸಿದರೆ ಮತ್ತೊಂದು ದಾಖಲೆ ಕೂಡ ನಿರ್ಮಾಣವಾಗಲಿದೆ.

ಸದ್ಯ ಟಿ20 ವಿಶ್ವಕಪ್​ನಲ್ಲಿ ಅತಿ ಹೆಚ್ಚಿನ ರನ್ ಗಳಿಸಿದ ಕ್ರಿಕಟಿಗ ಶ್ರೀಲಂಕಾದ ಮಹೇಲ ಜಯವರ್ಧನೆ ಆಗಿದ್ದಾರೆ. ಇವರು 31 ಪಂದ್ಯಗಳಲ್ಲಿ 1016 ರನ್ ಗಳಿಸಿದ್ದಾರೆ. ಇದೀಗ ಕೊಹ್ಲಿ 28 ರನ್ ಕಲೆಹಾಕಿದರೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಧಿಕ ರನ್ ಗಳಿಸಿದ ಬ್ಯಾಟರ್ ಎಂಬ ಪಟ್ಟ ತೊಡಲಿದ್ದಾರೆ. ವಿರಾಟ್ ಟಿ20 ವಿಶ್ವಕಪ್​ನಲ್ಲಿ ಆಡಿರುವ 21 ಇನ್ನಿಂಗ್ಸ್​ಗಳಲ್ಲಿ 89.90 ಸರಾಸರಿಯೊಂದಿಗೆ 989 ರನ್ ಗಳಿಸಿದ್ದಾರೆ. ಇದರಲ್ಲಿ 12 ಅರ್ಧಶತಕ ಸೇರಿವೆ.

ಇದನ್ನೂ ಓದಿ
India vs South Africa: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI ಹೇಗಿರಲಿದೆ?: ಇಲ್ಲಿದೆ ನೋಡಿ
India vs South Africa: ಭಾರತಕ್ಕಿಂದು ದಕ್ಷಿಣ ಆಫ್ರಿಕಾ ಸವಾಲು: ಹ್ಯಾಟ್ರಿಕ್ ಜಯದ ವಿಶ್ವಾಸದಲ್ಲಿ ರೋಹಿತ್ ಪಡೆ
India Vs South Africa Live Streaming: ಗೆದ್ದವರಿಗೆ ಸೇಮಿಸ್ ಟಿಕೆಟ್ ಖಚಿತ; ಪಂದ್ಯ ಆರಂಭ ಯಾವಾಗ?
Virat Kohli: ಕಿಂಗ್ ಕೊಹ್ಲಿಯ ವಿಶ್ವ ದಾಖಲೆ ಮುರಿದ ಸಿಕಂದರ್ ರಾಝ

ಭಾರತ- ದಕ್ಷಿಣ ಆಫ್ರಿಕಾ ಪಂದ್ಯ:

ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿ ಸತತವಾಗಿ ಎರಡು ಪಂದ್ಯಗಳನ್ನು ಗೆದ್ದು ಬೀಗಿರುವ ಟೀಮ್ ಇಂಡಿಯಾ ಇದೀಗ ಹ್ಯಾಟ್ರಿಕ್ ಜಯದ ಮೇಲೆ ಕಣ್ಣಿಟ್ಟಿದೆ. ಇಂದು ಪರ್ತ್ ಸ್ಟೇಡಿಯಂನಲ್ಲಿ ಭಾರತ ತಂಡ ಬಲಿಷ್ಠ ದಕ್ಷಿಣ ಅಫ್ರಿಕಾ ತಂಡವನ್ನು ಎದುರಿಸುತ್ತಿದೆ. ಭಾರತೀಯ ಕಾಲಮಾನದ ಪ್ರಕಾರ ಸಂಜೆ 4:30ಕ್ಕೆ ಶುರುವಾಗಲಿದೆ. ಭಾರತ ಹಾಗೂ ಆಫ್ರಿಕಾ ನಡುವಣ ಪಂದ್ಯದ ಫಲಿತಾಂಶವು ಪಾಕಿಸ್ತಾನ ತಂಡದ ಸೆಮಿಫೈನಲ್‌ ಅವಕಾಶದ ಮೇಲೆ ಪರಿಣಾಮ ಬೀರಲಿದೆ. ಟೀಮ್ ಇಂಡಿಯಾ ಆಡಿರುವ ಎರಡು ಪಂದ್ಯಗಳ ಪೈಕಿ ಎರಡನ್ನೂ ಗೆದ್ದು 4 ಅಂಕದೊಂದಿಗೆ ಮೊದಲ ಸ್ಥಾನದಲ್ಲಿದೆ, +1.425 ರನ್​ರೇಟ್ ಹೊಂದಿದೆ. ಇತ್ತ ದಕ್ಷಿಣ ಆಫ್ರಿಕಾ ಎರಡು ಪಂದ್ಯಗಳಲ್ಲಿ ಒಂದು ಪಂದ್ಯ ಮಳೆಯಿಂದ ರದ್ದಾದರೆ, ಮತ್ತೊಂದರಲ್ಲಿ ಗೆಲುವು ಸಾಧಿಸಿತ್ತು.