Virat Kohli: ಟಿ-20 ಕ್ರಿಕೆಟ್​ನಲ್ಲಿ ವಿರಾಟ್ ಪಾರುಪತ್ಯ: ಹೊಸ ದಾಖಲೆ ಬರೆಯಲು ಸಜ್ಜಾದ ಕಿಂಗ್ ಕೊಹ್ಲಿ

RCB vs MI IPL 2021: ಕ್ರಿಕೆಟ್ ಲೋಕದಲ್ಲಿ ಪಾರುಪತ್ಯ ಮೆರೆದಿರುವ ಕಿಂಗ್ ಕೊಹ್ಲಿ ಸದ್ಯ ಟಿ-20 ಕ್ರಿಕೆಟ್​ನಲ್ಲಿ ಹೊಸ ದಾಖಲೆಯ ಹೊಸ್ತಿಲಲ್ಲಿದ್ದಾರೆ. ಇನ್ನು ಕೇವಲ 13 ರನ್ ಬಾರಿಸಿದರೆ ಕೊಹ್ಲಿ ಚುಟುಕು ಮಾದರಿಯ ಕ್ರಿಕೆಟ್​ನಲ್ಲಿ 10,000 ರನ್ ಪೂರೈಸಿದ ಸಾಧನೆ ಮಾಡಲಿದ್ದಾರೆ.

Virat Kohli: ಟಿ-20 ಕ್ರಿಕೆಟ್​ನಲ್ಲಿ ವಿರಾಟ್ ಪಾರುಪತ್ಯ: ಹೊಸ ದಾಖಲೆ ಬರೆಯಲು ಸಜ್ಜಾದ ಕಿಂಗ್ ಕೊಹ್ಲಿ
ಕೆಕೆಆರ್ ವಿರುದ್ದ ಸೋಲಿನ ಬಳಿಕ ಮಾತನಾಡಿರುವ ಕೊಹ್ಲಿ, ನನ್ನ ತಂಡಕ್ಕಾಗಿ ನಾಯಕನಾಗಿ ಏನು ಮಾಡಬೇಕು ಎಲ್ಲವನ್ನೂ ಮಾಡಿದ್ದೇನೆ. ಇನ್ಮುಂದೆ ಆಟಗಾರನಾಗಿ ಐಪಿಎಲ್​ನಲ್ಲಿ ಕಾಣಿಸಲಿದ್ದೇನೆ. ಅದು ಬೇರೆ ಯಾವ ತಂಡದಲ್ಲೂ ಅಲ್ಲ. ಇದೇ ಆರ್​ಸಿಬಿ ತಂಡದಲ್ಲೇ ಇರಲಿದ್ದೇನೆ.

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು (IPL 2021) ವಿರಾಟ್ ಕೊಹ್ಲಿ (Virat Kohli) ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರೋಹಿತ್ ಶರ್ಮಾ (Rohit Sharma) ನೇತೃತ್ವದ ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣೆಸಾಟ ನಡೆಸಲಿವೆ. ಉಭಯ ತಂಡಗಳು ಸೋಲಿನಿಂದ ಕಂಗೆಟ್ಟಿದ್ದು, ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್ ಮ್ಯಾಚ್ ನಿರೀಕ್ಷಿಸಲಾಗಿದೆ. ಈ ಪಂದ್ಯದಲ್ಲಿ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆಯುವ ಹೊಸ್ತಿಲಲ್ಲಿದ್ದಾರೆ.

ಹೌದು, ಕ್ರಿಕೆಟ್ ಲೋಕದಲ್ಲಿ ಪಾರುಪತ್ಯ ಮೆರೆದಿರುವ ಕಿಂಗ್ ಕೊಹ್ಲಿ ಸದ್ಯ ಟಿ-20 ಕ್ರಿಕೆಟ್​ನಲ್ಲಿ ಹೊಸ ದಾಖಲೆಯ ಹೊಸ್ತಿಲಲ್ಲಿದ್ದಾರೆ. ಟಿ-20 ಮಾದರಿಯ ಕ್ರಿಕೆಟ್​ನಲ್ಲಿ ಕೊಹ್ಲಿ ಸದ್ಯ 313 ಪಂದ್ಯಗಳನ್ನು ಆಡಿದ್ದು, 9987 ರನ್ ಗಳಿಸಿದ್ದಾರೆ. ಇನ್ನು ಕೇವಲ 13 ರನ್ ಬಾರಿಸಿದರೆ ಕೊಹ್ಲಿ ಚುಟುಕು ಮಾದರಿಯ ಕ್ರಿಕೆಟ್​ನಲ್ಲಿ 10,000 ರನ್ ಪೂರೈಸಿದ ಸಾಧನೆ ಮಾಡಲಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಮೊಟ್ಟ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆ ಕೊಹ್ಲಿ ತಮ್ಮ ಹೆಸರಿಗೆ ಸೇರಿಸಲಿದ್ದಾರೆ.

ಆರ್​ಸಿಬಿ ಒಟ್ಟು ಒಂಬತ್ತು ಪಂದ್ಯಗಳನ್ನು ಆಡಿದ್ದು ಈ ಪೈಕಿ ಐದರಲ್ಲಿ ಗೆಲುವು ಕಂಡರೆ ನಾಲ್ಕು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. 10 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಆದರೂ ಪ್ಲೇ ಆಫ್ ಪ್ರವೇಶ ಖಾತ್ರಿಪಡಿಸಿಕೊಳ್ಳುವ ಹಾದಿ ದೂರವೇ ಇದೆ. ಬೆಂಗಳೂರು ತಂಡಕ್ಕೆ ಬಾಕಿ ಇರುವುದು ಕೇವಲ ಐದು ಪಂದ್ಯಗಳು ಮಾತ್ರ. ಇದರಲ್ಲಿ ಪ್ಲೇ ಆಫ್​ಗೇರಲು ಕೊಹ್ಲಿ ಪಡೆ ಕನಿಷ್ಠ ಮೂರು ಪಂದ್ಯಗಳನ್ನಾದರೂ ಗೆಲ್ಲಲೇ ಬೇಕಿದೆ.

ಭಾರತದಲ್ಲಿ ನಡೆದ ಮೊದಲ ಚರಣದಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಆರ್​ಸಿಬಿ ಯುಎಇನಲ್ಲಿ ಮತ್ತದೆ ಹಳೇಯ ಚಾಳಿ ಮುಂದುವರೆಸಿದೆ. ವಿರಾಟ್ ಕೊಹ್ಲಿ ಫಾರ್ಮ್​ಗೆ ಬಂದಿರುವುದು ತಂಡದ ಪ್ಲಸ್ ಪಾಯಿಂಟ್. ದೇವದತ್ ಪಡಿಕ್ಕಲ್ ಕೂಡ ಭರ್ಜರಿ ಆರಂಭ ಒದಗಿಸುತ್ತಿದ್ದಾರೆ. ಆದರೆ, ಎಬಿ ಡಿವಿಲಿಯರ್ಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಕಳೆದ ಎರಡು ಪಂದ್ಯಗಳಲ್ಲೂ ವಿಫಲರಾಗಿದ್ದಾರೆ. ಆದರೂ ಇವರು ಯಾವುದೇ ಸಂದರ್ಭದಲ್ಲಿ ಅಬ್ಬರಿಸುವ ಸಾಮರ್ಥ್ಯ ಹೊಂದಿದ್ದಾರೆ.

ಚೊಚ್ಚಲ ಐಪಿಎಲ್ ಆಡಿದ ಟಿಮ್ ಡೇವಿಡ್ ನಿರಾಸೆ ಮೂಡಿಸಿದ್ದಾರೆ. ಆದರೆ, ಇವರಿಗೆ ಮತ್ತೊಂದು ಅವಕಾಶ ಸಿಗುವ ಅಂದಾಜಿದೆ. ಆರ್​ಸಿಬಿ ಬೌಲಿಂಗ್ ವಿಭಾಗ ಮಾತ್ರ ಸುಧಾರಿಸಿಲ್ಲ. ವಾನಿಂದು ಹಸರಂಗ ಮ್ಯಾಚಿಕ್ ಯುಎಇನಲ್ಲಿ ನಡೆಯುತ್ತಿಲ್ಲ. ಹೀಗಾಗಿ ಕೈಲ್ ಜೇಮಿಸನ್ ಮತ್ತೆ ಆಡುವ ಬಳದಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ.

ಉಭಯ ತಂಡಗಳು ಐಪಿಎಲ್​ನಲ್ಲಿ ಈವರೆಗೆ ಒಟ್ಟು 28 ಬಾರಿ ಮುಖಾಮುಖಿ ಆಗಿವೆ. ಇದರಲ್ಲಿ ಮುಂಬೈ ಇಂಡಿಯನ್ಸ್ 17 ಪಂದ್ಯಗಳಲ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು 11 ಪಂದ್ಯಗಳಲ್ಲಿ ಗೆದ್ದಿದೆ. ಅರಬ್ ರಾಷ್ಟ್ರದಲ್ಲಿ ಹ್ಯಾಟ್ರಿಕ್ ಸೋಲಿನ ಭೀತಿಯಲ್ಲಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಪ್ಲೇಆಫ್ ಹಂತಕ್ಕೇರುವ ದೃಷ್ಟಿಯಿಂದ ಈ ಪಂದ್ಯ ಮಹತ್ವ ಪಡೆದುಕೊಂಡಿದೆ.

IPL 2021 Points Table, Purple Cap and Orange Cap: ಯಾವ ಪ್ಲೇಯರ್ ಕೈಯಲ್ಲಿದೆ ಆರೆಂಜ್ ಕ್ಯಾಪ್-ಪರ್ಪಲ್ ಕ್ಯಾಪ್?

RCB Predicted Playing XI: ಹ್ಯಾಟ್ರಿಕ್ ಸೋಲಿನಿಂದ ಪಾರಾಗಲು ಕೊಹ್ಲಿ ಮಾಸ್ಟರ್ ಪ್ಲ್ಯಾನ್: ಮತ್ತೊಬ್ಬ ಆಟಗಾರ ಪದಾರ್ಪಣೆ?

(Virat Kohli needs 13 runs more to complete 10000 runs in T20 format in today match RCB vs MI IPL 2021)

Read Full Article

Click on your DTH Provider to Add TV9 Kannada