
ಆಸ್ಟ್ರೇಲಿಯಾ ಪ್ರವಾಸದಲ್ಲಿ ಮಿಶ್ರ ಪ್ರದರ್ಶನದಿಂದಾಗಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಭಾರತದಲ್ಲಿ ನಡೆದ ದಕ್ಷಿಣ ಆಫ್ರಿಕಾ (India vs South Africa) ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ತನ್ನನ್ನು ಟೀಕಿಸಿದ ಎಲ್ಲರಿಗೂ ತಮ್ಮ ಆಟದ ಮೂಲಕವೇ ಉತ್ತರ ನೀಡಿದ್ದಾರೆ. ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಶತಕ ಸಿಡಿಸಿ ಮಿಂಚಿದ್ದ ಕೊಹ್ಲಿ ಇದೀಗ ಸರಣಿ ನಿರ್ಧಾರಕ ಪಂದ್ಯದಲ್ಲಿ ಅಜೇಯ ಅರ್ಧಶತಕ ಬಾರಿಸಿ ತಂಡಕ್ಕೆ 9 ವಿಕೆಟ್ಗಳ ಜಯ ತಂದುಕೊಟ್ಟಿದ್ದಾರೆ. ಸರಣಿಯುದ್ದಕ್ಕೂ ಶ್ರೇಷ್ಠ ಪ್ರದರ್ಶನ ನೀಡಿದ ಕೊಹ್ಲಿಗೆ ಏಕದಿನ ವೃತ್ತಿಜೀವನದ 12ನೇ ಸರಣಿ ಶ್ರೇಷ್ಠ (Man of the Series) ಪ್ರಶಸ್ತಿಯೂ ಲಭಿಸಿದೆ. ಇದರ ಜೊತೆಗೆ 2.5 ಲಕ್ಷರ ರೂಗಳ ಬಹುಮಾನದ ಮೊತ್ತವೂ ಸಿಕ್ಕದೆ.
ವೈಜಾಗ್‌ನಲ್ಲಿ ನಡೆದ ಸರಣಿಯ ಮೂರನೇ ಏಕದಿನ ಪಂದ್ಯದಲ್ಲಿ ಎಂದಿನಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 45 ಎಸೆತಗಳಲ್ಲಿ 65 ರನ್ ಗಳಿಸಿ ಅಜೇಯರಾಗಿ ಉಳಿದರು. ಇದು ಏಕದಿನ ಪಂದ್ಯಗಳಲ್ಲಿ ಅವರ ಸತತ ನಾಲ್ಕನೇ ಐವತ್ತು ಪ್ಲಸ್ ಸ್ಕೋರ್ ಆಗಿದೆ. ಅಲ್ಲದೇ ಚೇಸ್ ಕಿಂಗ್ ಎಂದೇ ಖ್ಯಾತರಾಗಿರುವ ಕೊಹ್ಲಿ, ಗುರಿ ಬೆನ್ನಟ್ಟುವಾಗ ದಾಖಲಿಸಿದ 71ನೇ ಐವತ್ತು ಪ್ಲಸ್ ಸ್ಕೋರ್ ಆಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ 151 ಸರಾಸರಿಯಲ್ಲಿ 302 ರನ್ ಗಳಿಸಿದ್ದಾರೆ. ಇದರಲ್ಲಿ 24 ಬೌಂಡರಿಗಳು ಮತ್ತು 12 ಸಿಕ್ಸರ್‌ಗಳು ಸೇರಿವೆ. ವಿರಾಟ್ ಕೊಹ್ಲಿ ದ್ವಿಪಕ್ಷೀಯ ಸರಣಿಯಲ್ಲಿ 12 ಸಿಕ್ಸರ್‌ಗಳನ್ನು ಬಾರಿಸಿದ್ದು ಇದೇ ಮೊದಲು. ಈ ಸರಣಿಯಲ್ಲಿ ಅವರು ಕೊಹ್ಲಿ ಕಲೆಹಾಕಿದೆ 302 ರನ್‌ಗಳಲ್ಲಿ, ಎರಡು ಶತಕಗಳು ಮತ್ತು ಒಂದು ಅರ್ಧಶತಕ ಸೇರಿವೆ.
IND vs SA: ಇಡೀ ಕ್ರೀಡಾಂಗಣವನ್ನೇ ತುಂಬಿ ತುಳುಕುವಂತೆ ಮಾಡಿದ ಕಿಂಗ್ ಕೊಹ್ಲಿಯ ಏಕೈಕ ಶತಕ
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ, ವಿರಾಟ್ ಕೊಹ್ಲಿ ಅತ್ಯಧಿಕ ಸರಾಸರಿ ಹೊಂದಿರುವ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಈ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಏಕೈಕ ಬ್ಯಾಟ್ಸ್‌ಮನ್ ಅಥವಾ 300 ಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಬ್ಯಾಟ್ಸ್‌ಮನ್ ಕೊಹ್ಲಿ. ಇದು ಮಾತ್ರವಲ್ಲದೆ ಈ ಸರಣಿಯಲ್ಲಿ ಅತಿ ಹೆಚ್ಚು ಬೌಂಡರಿ ಹಾಗೂ ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಯಲ್ಲೂ ವಿರಾಟ್ ಅಗ್ರಸ್ಥಾನದಲ್ಲಿದ್ದಾರೆ. ಇದಲ್ಲದೆ, ಸರಣಿಯಲ್ಲಿ ಮೂರು ಐವತ್ತು ಪ್ಲಸ್ ಸ್ಕೋರ್‌ಗಳನ್ನು ಕಲೆಹಾಕಿದ ಏಕೈಕ ಬ್ಯಾಟ್ಸ್‌ಮನ್ ಕೊಹ್ಲಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ