AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಶ್ರಮಕ್ಕೆ ಭೇಟಿ ನೀಡಲು 5 ಕೋಟಿ ಪಡೆದಿದ್ದಾರೆ’; ಕೊಹ್ಲಿ ಮೇಲೆ ಗಂಭೀರ ಆರೋಪ

ವಿರಾಟ್ ಕೊಹ್ಲಿ ಪ್ರೇಮಾನಂದ ಮಹಾರಾಜ್ ಆಶ್ರಮಕ್ಕೆ ಭೇಟಿ ನೀಡಲು 5 ಕೋಟಿ ರೂ. ಪಡೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಫಲಹರಿ ಮಹಾರಾಜ್ ದಿನೇಶ್ ಶರ್ಮಾ ಈ ಆರೋಪ ಮಾಡಿದ್ದರು. ಆದರೆ, ಕೊಹ್ಲಿ ಅವರ ವಕ್ತಾರರು ಈ ಆರೋಪವನ್ನು ತೀವ್ರವಾಗಿ ನಿರಾಕರಿಸಿದ್ದು, ಇದು ಸುಳ್ಳು ಮತ್ತು ಆಧಾರರಹಿತ ಎಂದು ಸ್ಪಷ್ಟಪಡಿಸಿದ್ದಾರೆ. ಕೊಹ್ಲಿ ಅವರ ಆಶ್ರಮ ಭೇಟಿ ಕೇವಲ ನಂಬಿಕೆ ಮತ್ತು ಭಕ್ತಿಯನ್ನು ಆಧರಿಸಿದೆ ಎಂದಿದ್ದಾರೆ.

‘ಆಶ್ರಮಕ್ಕೆ ಭೇಟಿ ನೀಡಲು 5 ಕೋಟಿ ಪಡೆದಿದ್ದಾರೆ’; ಕೊಹ್ಲಿ ಮೇಲೆ ಗಂಭೀರ ಆರೋಪ
ವಿರಾಟ್ ಕೊಹ್ಲಿImage Credit source: PTI
ಪೃಥ್ವಿಶಂಕರ
|

Updated on: Oct 07, 2026 | 3:18 PM

Share

ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಸರಿ ಸುಮಾರು ಸಾವಿರ ಕೋಟಿ ರೂಗಳ ಒಡೆಯ ವಿರಾಟ್ ಕೊಹ್ಲಿ ಮೇಲೆ ಗಂಭೀರ ಆರೋಪವೊಂದು ಕೇಳಿಬಂದಿದೆ. ವಿರಾಟ್ ಕೊಹ್ಲಿ ಎಂತಹ ದೈವ ಭಕ್ತ ಎಂಬುದು ಎಲ್ಲರಿಗೂ ತಿಳಿದಿರುವಂತ್ತದ್ದೆ. ಕೊಹ್ಲಿ ಆಗಾಗ್ಗೆ ಪ್ರೇಮಾನಂದ ಮಹಾರಾಜ್ ಆಶ್ರಮಕ್ಕೆ ಭೇಟಿ ನೀಡುತ್ತಿರುತ್ತಾರೆ. ಕೊಹ್ಲಿ ತಮ್ಮ ಜೊತೆಗೆ ತಮ್ಮ ಮಡದಿ, ಕೆಲವೊಮ್ಮೆ ತಮ್ಮ ಮಕ್ಕಳನ್ನು ಆಶ್ರಮಕ್ಕೆ ಕರೆದುಕೊಂಡು ಬರುತ್ತಾರೆ. ಹೀಗಿರುವಾಗ ಕೊಹ್ಲಿ ಈ ಆಶ್ರಮಕ್ಕೆ ಭೇಟಿ ನೀಡಲು 5 ಕೋಟಿ ರೂ. ಹಣ ಪಡೆದಿದ್ದಾರೆ ಎಂಬ ಆರೋಪವನ್ನು ಫಲಹರಿ ಮಹಾರಾಜ್ ಎಂದೇ ಪ್ರಸಿದ್ಧರಾಗಿರುವ ದಿನೇಶ್ ಶರ್ಮಾ ಅವರು ಹೊರಿಸಿದ್ದಾರೆ. ದಿನೇಶ್ ಶರ್ಮಾ ಶ್ರೀ ಕೃಷ್ಣ ಜನ್ಮಭೂಮಿ ಸಂಘರ್ಷ ಟ್ರಸ್ಟ್‌ನ ಅಧ್ಯಕ್ಷರೂ ಆಗಿದ್ದು, ಅವರ ಈ ಆರೋಪ ದೊಡ್ಡ ವಿವಾದವನ್ನು ಸೃಷ್ಟಿಸಿತ್ತು. ಆದರೀಗ ಈ ವಿವಾದಕ್ಕೆ ತೆರೆ ಎಳೆದಿರುವ ಕೊಹ್ಲಿಯ ಮಾಧ್ಯಮ ವಕ್ತಾರರು, ಇದೆಲ್ಲ ಸುಳ್ಳು ಸುದ್ದಿ ಎಂದಿದ್ದಾರೆ.

5 ಕೋಟಿ ರೂ. ಪಡೆದಿದ್ದರು

‘ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ 2023 ರಲ್ಲಿ ಮೊದಲ ಬಾರಿಗೆ ಪ್ರೇಮಾನಂದ ಮಹಾರಾಜರ ಆಶ್ರಮಕ್ಕೆ ಭೇಟಿ ನೀಡಿದ್ದರು. ಆ ಸಮಯದಲ್ಲಿ ರಾಜಸ್ಥಾನದ ಖಾಸಗಿ ಕಂಪನಿಯೊಂದು ವಿರಾಟ್ ಕೊಹ್ಲಿಯನ್ನು ಆಶ್ರಮಕ್ಕೆ ಕರೆತರಲು 5 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿತ್ತು ಎಂದು ಫಲಹರಿ ಮಹಾರಾಜ್ ದಿನೇಶ್ ಶರ್ಮಾ ಆರೋಪ ಮಾಡಿದ್ದರು. ಅಲ್ಲದೆ ಈ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಪತ್ರವನ್ನೂ ಸಹ ಬರೆದಿದ್ದರು. ಆದರೆ ದಿನೇಶ್ ಶರ್ಮಾ ಅವರ ಹೇಳಿಕೆ ಆಧಾರರಹಿತವಾಗಿದ್ದು, ಸಂಪೂರ್ಣವಾಗಿ ಸುಳ್ಳು ಸುದ್ದಿ ಎಂದು ಕೊಹ್ಲಿ ಅವರ ಮಾಧ್ಯಮ ವಕ್ತಾರರು ಮಾಹಿತಿ ನೀಡಿದ್ದಾರೆ.

ಈ ಆರೋಪಗಳು ಸಂಪೂರ್ಣವಾಗಿ ಸುಳ್ಳು

ವಿರಾಟ್ ಕೊಹ್ಲಿ ಅವರ ವಕ್ತಾರರು ತಮ್ಮ ಅಧಿಕೃತ ಹೇಳಿಕೆಯಲ್ಲಿ, ‘ದಿನೇಶ್ ಶರ್ಮಾ ಹೇಳಿಕೆಗಳನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಕೊಹ್ಲಿ ಮತ್ತು ಪ್ರೇಮಾನಂದ ಮಹಾರಾಜ್ ಅವರ ಸಂಬಂಧವು ವೈಯಕ್ತಿಕ ನಂಬಿಕೆ ಮತ್ತು ಭಕ್ತಿಯನ್ನು ಆಧರಿಸಿದೆ. ಹೀಗಾಗಿ ಫಲಹರಿ ಮಹಾರಾಜ್ ದಿನೇಶ್ ಶರ್ಮಾ ಅವರು ವಿರಾಟ್ ಕೊಹ್ಲಿ ಬಗ್ಗೆ ಮಾಡಿರುವ ಆರೋಪಗಳು ಸಂಪೂರ್ಣವಾಗಿ ಸುಳ್ಳು, ಆಧಾರರಹಿತ ಎಂದು ನಾವು ಸ್ಪಷ್ಟವಾಗಿ ಹೇಳಲು ಬಯಸುತ್ತೇವೆ. ವಿರಾಟ್ ಕೊಹ್ಲಿ ಪ್ರೇಮಾನಂದ ಮಹಾರಾಜ್ ಜಿ ಅವರನ್ನು ನಂಬಿಕೆ ಮತ್ತು ಭಕ್ತಿಯಿಂದ ಮಾತ್ರ ಭೇಟಿ ಮಾಡುತ್ತಾರೆ’.

ಮುಂದುವರೆದು ಮಾತನಾಡಿರುವ ವಕ್ತಾರರು ‘ಮಾಧ್ಯಮ ಸಂಸ್ಥೆಗಳು ಮತ್ತು ಪತ್ರಕರ್ತರು ಇಂತಹ ಹೇಳಿಕೆಗಳನ್ನು ವರದಿ ಮಾಡುವ ಅಥವಾ ಭಿತ್ತರಿಸುವ ಮೊದಲು ಎಚ್ಚರಿಕೆಯಿಂದಿರಬೇಕು ಮತ್ತು ಸತ್ಯಗಳನ್ನು ಪರಿಶೀಲಿಸಬೇಕು. ನಾವು ಈ ಹೇಳಿಕೆಗಳನ್ನು ಬಲವಾಗಿ ನಿರಾಕರಿಸುತ್ತೇವೆ ಮತ್ತು ಅಂತಹ ಮಾಹಿತಿಯನ್ನು ವರದಿ ಮಾಡುವ ಅಥವಾ ಹರಡುವ ಮೊದಲು ಎಚ್ಚರಿಕೆ ವಹಿಸಲು, ಸತ್ಯಗಳನ್ನು ಪರಿಶೀಲಿಸಲು ಮತ್ತು ಜವಾಬ್ದಾರಿಯುತವಾಗಿ ವರದಿ ಮಾಡಲು ಮಾಧ್ಯಮಗಳನ್ನು ಒತ್ತಾಯಿಸುತ್ತೇವೆ’ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ