AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ನಾಯಕನಾಗಿ ಕೆಎಲ್ ರಾಹುಲ್ ಬದಲು ನಾನಿದಿದ್ರೆ ಏನಾದ್ರೂ ಮಾಡ್ತಿದ್ದೆ..!

India vs South Africa 3rd Test: ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ದಕ್ಷಿಣ ಆಫ್ರಿಕಾದಲ್ಲಿ ಸರಣಿ ಗೆದ್ದ ಭಾರತದ ಮೊದಲ ನಾಯಕ ಎಂಬ ಹೆಗ್ಗಳಿಕೆ ವಿರಾಟ್ ಕೊಹ್ಲಿ ಪಾಲಾಗಲಿದೆ.

Virat Kohli: ನಾಯಕನಾಗಿ ಕೆಎಲ್ ರಾಹುಲ್ ಬದಲು ನಾನಿದಿದ್ರೆ ಏನಾದ್ರೂ ಮಾಡ್ತಿದ್ದೆ..!
KL Rahul-Virat Kohli
TV9 Web
| Updated By: ಝಾಹಿರ್ ಯೂಸುಫ್|

Updated on:Jan 10, 2022 | 3:51 PM

Share

ಜೋಹಾನ್ಸ್​ಬರ್ಗ್​ನ ವಾಂಡರರ್ಸ್​ ಸ್ಟೇಡಿಯಂನಲ್ಲಿ ನಡೆದ ಭಾರತ-ದಕ್ಷಿಣ ಆಫ್ರಿಕಾ (India vs South Africa) ನಡುವಣ 2ನೇ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾ (Team India) ನಾಯಕ ವಿರಾಟ್ ಕೊಹ್ಲಿ (Virat Kohli) ಹೊರಗುಳಿದಿದ್ದರು. ಬೆನ್ನು ನೋವಿನ ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದ ಕೊಹ್ಲಿ 2ನೇ ಟೆಸ್ಟ್ ಪಂದ್ಯದ ವೇಳೆ ವಿಶ್ರಾಂತಿ ಪಡೆದಿದ್ದರು. ಕೊಹ್ಲಿಯ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಕೆಎಲ್ ರಾಹುಲ್ (KL Rahul) ಮುನ್ನಡೆಸಿದ್ದರು. ಚೊಚ್ಚಲ ಬಾರಿ ಟೀಮ್ ಇಂಡಿಯಾ ನಾಯಕನಾಗಿ ಕಾಣಿಸಿಕೊಂಡ ರಾಹುಲ್ ಮೊದಲ ಪಂದ್ಯದಲ್ಲೇ ಸೋಲಿನ ರುಚಿ ನೋಡಬೇಕಾಯಿತು.

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಕೆಎಲ್ ರಾಹುಲ್ ಅವರ ಅರ್ಧಶತಕದ ನೆರವಿನಿಂದ ಮೊದಲ ಇನಿಂಗ್ಸ್​​ನಲ್ಲಿ 202 ರನ್​ಗಳಿಸಿದರೆ, ಸೌತ್ ಆಫ್ರಿಕಾ 229 ರನ್​ ಕಲೆಹಾಕಿತ್ತು. ಇನ್ನು ಟೀಮ್ ಇಂಡಿಯಾ 2ನೇ ಇನಿಂಗ್ಸ್​ನಲ್ಲಿ 266 ರನ್​ ಬಾರಿಸಿತು. ಮೊದಲ ಇನಿಂಗ್ಸ್​ ಮುನ್ನಡೆ ಪಡೆದಿದ್ದ ದಕ್ಷಿಣ ಆಫ್ರಿಕಾ 2ನೇ ಇನಿಂಗ್ಸ್​ನಲ್ಲಿ 240 ರನ್​ಗಳ ಟಾರ್ಗೆಟ್ ಪಡೆಯಿತು. ಮೊದಲ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾವನ್ನು 229 ರನ್​ಗಳಿಗೆ ಆಲೌಟ್ ಮಾಡಿದ್ದ ಕಾರಣ ಈ ಪಂದ್ಯದಲ್ಲಿ ಭಾರತ ಗೆಲ್ಲಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಅಂತಿಮವಾಗಿ ದಕ್ಷಿಣ ಆಫ್ರಿಕಾ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಸರಣಿಯನ್ನು 1-1 ಅಂತರದಿಂದ ಸರಣಿಯನ್ನು ಸಮಬಲಗೊಳಿಸಿತ್ತು.

ಈ ಸೋಲಿನ ಬೆನ್ನಲ್ಲೇ ಕೆಎಲ್ ರಾಹುಲ್ ಅವರ ನಾಯಕತ್ವದ ಬಗ್ಗೆ ಟೀಕೆಗಳು ಕೇಳಿ ಬಂದಿದ್ದವು. ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಇದ್ದಿದ್ದರೆ ತಂಡವು ಗೆಲ್ಲುವ ಸಾಧ್ಯತೆ ಹೆಚ್ಚಿತ್ತು ಎಂಬ ಅಭಿಪ್ರಾಯಗಳು ವ್ಯಕ್ತವಾಗಿತ್ತು. ಇದೀಗ ಕೆಎಲ್ ರಾಹುಲ್ ಅವರ ಚೊಚ್ಚಲ ಪಂದ್ಯದ ನಾಯಕತ್ವದ ಬಗ್ಗೆ ಮಾತನಾಡಿರುವ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ, ರಾಹುಲ್ ಉತ್ತಮವಾಗಿಯೇ ತಂಡವನ್ನು ಮುನ್ನಡೆಸಿದ್ದರು ಎಂದು ಪ್ರಶಂಸಿದ್ದಾರೆ.

ಅಷ್ಟೇ ಅಲ್ಲದೆ ರಾಹುಲ್ ಎರಡನೇ ಇನ್ನಿಂಗ್ಸ್‌ನಲ್ಲಿ ವಿಕೆಟ್‌ಗಳನ್ನು ಪಡೆಯಲು ಪ್ರಯತ್ನಿಸಿದರು. ಆದರೆ ದಕ್ಷಿಣ ಆಫ್ರಿಕಾ ಉತ್ತಮ ಕ್ರಿಕೆಟ್ ಆಡಿತು. ವಿಕೆಟ್ ಪಡೆಯಲು ಪ್ರಯತ್ನಿಸುವುದನ್ನು ಹೊರತುಪಡಿಸಿ ಅಲ್ಲಿ ವಿಭಿನ್ನವಾಗಿ ಏನಾದ್ರೂ ಮಾಡಬಹುದೆಂದು ನನಗನಿಸಿಲ್ಲ. ಇದಾಗ್ಯೂ ನಾನು ಕಣದಲ್ಲಿದದ್ದರೆ ಬಹುಶಃ ಕೆಲವು ವಿಷಯಗಳನ್ನು ವಿಭಿನ್ನವಾಗಿ ಮಾಡುತ್ತಿದ್ದೆ ಎಂದು ಕೊಹ್ಲಿ ತಿಳಿಸಿದ್ದಾರೆ.

ಆದರೆ ಇಲ್ಲಿ ಉದ್ದೇಶವು ಒಂದೇ ಆಗಿದ್ದರೂ, ಪ್ರತಿ ವ್ಯಕ್ತಿಯ ನಾಯಕತ್ವದ ವಿಭಿನ್ನ ಶೈಲಿಯನ್ನು ಹೊಂದಿರುತ್ತದೆ. ಹೀಗಾಗಿ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ತಂಡವನ್ನು ಮುನ್ನಡೆಸುತ್ತಾರೆ. ಆದರೆ ಎಲ್ಲಾ ನಾಯಕರ ಉದ್ದೇಶ ತಂಡವನ್ನು ಗೆಲ್ಲಿಸುವುದೇ ಆಗಿರುತ್ತದೆ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

ಇನ್ನು ಭಾರತ-ದಕ್ಷಿಣ ಆಫ್ರಿಕಾ ನಡುವಣ 3ನೇ ಟೆಸ್ಟ್ ಪಂದ್ಯವು ಜನವರಿ 11 ರಿಂದ ಶುರುವಾಗಲಿದ್ದು, ಈ ಪಂದ್ಯದಲ್ಲಿ ನಾನು ಕಣಕ್ಕಿಳಿಯುವುದಾಗಿ ವಿರಾಟ್ ಕೊಹ್ಲಿ ಖಚಿತಪಡಿಸಿದ್ದಾರೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ದಕ್ಷಿಣ ಆಫ್ರಿಕಾದಲ್ಲಿ ಸರಣಿ ಗೆದ್ದ ಭಾರತದ ಮೊದಲ ನಾಯಕ ಎಂಬ ಹೆಗ್ಗಳಿಕೆ ವಿರಾಟ್ ಕೊಹ್ಲಿ ಪಾಲಾಗಲಿದೆ.

ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: Steve Smith: 11 ಶತಕ, 11 ಅರ್ಧಶತಕ: ವಿಶೇಷ ದಾಖಲೆ ಬರೆದ ಸ್ಟೀವ್ ಸ್ಮಿತ್

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(IND vs SA: Virat Kohli On KL Rahul’s Captaincy)

Published On - 3:51 pm, Mon, 10 January 22

ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ