AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಡುಪ್ಲೆಸಿಸ್​ಗೆ ಮಾರಕ ನೋ ಬಾಲ್ ಎಸೆದ ಸ್ಯಾಮ್ ಕುರ್ರನ್​ಗೆ ಹೊಡೆಯಲು ಮುಂದಾದ ವಿರಾಟ್ ಕೊಹ್ಲಿ

PBKS vs RCB, IPL 2023: ಆರ್​ಸಿಬಿ ಹಾಗೂ ಪಂಜಾಬ್ ನಡುವಣ ಪಂದ್ಯದಲ್ಲಿ ವಿಶೇಷ ಘಟನೆಯೊಂದು ನಡೆಯಿತು. ಸ್ಯಾಮ್ ಕುರ್ರನ್ ಅವರು ಫಾಫ್ ಡುಪ್ಲೆಸಿಸ್​ಗೆ ಮಾರಕ ಬಾಲ್ ಎಸೆದರು. ಈ ಸಂದರ್ಭ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ.

Virat Kohli: ಡುಪ್ಲೆಸಿಸ್​ಗೆ ಮಾರಕ ನೋ ಬಾಲ್ ಎಸೆದ ಸ್ಯಾಮ್ ಕುರ್ರನ್​ಗೆ ಹೊಡೆಯಲು ಮುಂದಾದ ವಿರಾಟ್ ಕೊಹ್ಲಿ
Duplessis Kohli and Curren
Vinay Bhat
|

Updated on:Apr 21, 2023 | 10:47 AM

Share

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿ ನಡೆದ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ತಂಡ ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಭರ್ಜರಿ ಪ್ರದರ್ಶನ ತೋರಿ 24 ರನ್​ಗಳ ಜಯ ಸಾಧಿಸಿತು. ಫಾಫ್ ಡುಪ್ಲೆಸಿಸ್ (Faf Duplessis) ಹಾಗೂ ವಿರಾಟ್ ಕೊಹ್ಲಿ (Virat Kohli) ಆಕರ್ಷಕ ಅರ್ಧಶತಕ ಸಿಡಿಸಿ ಬರೋಬ್ಬರಿ 137 ರನ್​ಗಳ ಜೊತೆಯಾಟ ಆಡಿ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು. ಈ ಗೆಲುವಿನ ಮೂಲಕ 6 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಜಿಗಿದಿದೆ. ಅಲ್ಲದೆ ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್ ಆರ್​ಸಿಬಿ ಆಟಗಾರರ ಕೈಯಲ್ಲಿದೆ.

ಆರ್​ಸಿಬಿ ಹಾಗೂ ಪಂಜಾಬ್ ನಡುವಣ ಪಂದ್ಯದಲ್ಲಿ ವಿಶೇಷ ಘಟನೆಯೊಂದು ನಡೆಯಿತು. ಕಠಿಣವಾದ ಪಿಚ್​ನಲ್ಲಿ ರನ್ ಗಳಿಸಲು ಕಷ್ಟಪಟ್ಟ ಉಭಯ ತಂಡಗಳಿಗೆ ಬೌಲರ್​ಗಳು ಮಾರಕವಾಗಿ ಪರಿಣಮಿಸಿದರು. ಮೊಹಾಲಿಯ ಬೌನ್ಸ್ ಪಿಚ್​ನಲ್ಲಿ ವೇಗಿಗಳು ಯಶಸ್ಸು ಸಾಧಿಸಿದರು. ಒಂದು ಹಂತದಲ್ಲಿ ಲಯ ಕಳೆದುಕೊಂಡ ಪಂಜಾಬ್ ನಾಯಕ ಸ್ಯಾಮ್ ಕುರ್ರನ್ ಅವರು ಫಾಫ್ ಡುಪ್ಲೆಸಿಸ್​ಗೆ ಮಾರಕ ಬಾಲ್ ಎಸೆದರು. ಈ ಸಂದರ್ಭ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ.

ಇದನ್ನೂ ಓದಿ
Image
PBKS vs RCB, IPL 2023: ಆರ್​ಸಿಬಿ-ಪಂಜಾಬ್ ಕಿಂಗ್ಸ್ ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ
Image
Twitter Blue Tick: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಹಲವು ಕ್ರಿಕೆಟಿಗರ ಟ್ವಿಟ್ಟರ್ ಖಾತೆಯಿಂದ ಬ್ಲೂ ಟಿಕ್ ಮಾಯ
Image
Virat Kohli: ಭರ್ಜರಿ ಗೆಲುವಿನ ಬಳಿಕ ಡುಪ್ಲೆಸಿಸ್ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಆಡಿದ ಮಾತುಗಳೇನು ಕೇಳಿ
Image
CSK vs SRH, IPL 2023: ಐಪಿಎಲ್​ನಲ್ಲಿಂದು ಚೆನ್ನೈ ಸೂಪರ್ ಕಿಂಗ್ಸ್-ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿ

IPL 2023 Points Table: ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲೇರಿದ RCB

16ನೇ ಓವರ್​ನಲ್ಲಿ ಸ್ಯಾಮ್ ಕುರ್ರನ್ ಮೊದಲ ಎಸೆತವನ್ನು ಹಾಕುವಾಗ ಲಯ ತಪ್ಪಿ ಚೆಂಡು ಯಾವುದೇ ಪಿಚ್ ಆಗದೆ ನೇರವಾಗಿ ಸ್ಟ್ರೈಕ್​ನಲ್ಲಿದ್ದ ಡುಪ್ಲೆಸಿಸ್ ಮುಖದ ಹತ್ತಿರದಿಂದ ಸಾಗಿತು. ನಿಯಂತ್ರಣ ತಪ್ಪಿ ಫಾಫ್ ಅಲ್ಲೆ ಕೆಳಗೆ ಬಿದ್ದರು. ಬಳಿಕ ಸ್ಯಾಮ್ ಅವರು ಡುಪ್ಲೆಸಿಸ್ ಬಳಿ ಬಂದು ಕ್ಷಮೆ ಕೇಳಿದರು. ಹೀಗೆ ಕ್ಷಮೆ ಕೇಳಿ ಹಿಂತಿರುಗುವಾಗ ನಾನ್​ಸ್ಟ್ರೈಕ್​ನಲ್ಲಿದ್ದ ವಿರಾಟ್ ಕೊಹ್ಲಿ ಅವರು ಕುರ್ರನ್​ಗೆ ತಮಾಷೆಯಾಗಿ ಹೊಡೆಯಲು ಮುಂದಾಗಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇಲ್ಲಿದೆ ನೋಡಿ ಆ ವಿಡಿಯೋ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಫಾಫ್ ಡುಪ್ಲೆಸಿಸ್ ಅವರ ಅಜೇಯ 84 ಮತ್ತು ವಿರಾಟ್ ಕೊಹ್ಲಿ ಅವರ 59 ರನ್​ಗಳ ನೆರವಿನಿಂದ 4 ವಿಕೆಟ್ ನಷ್ಟಕ್ಕೆ 174 ರನ್ ಕಲೆಹಾಕಿತು. ಹರ್ಪ್ರೀತ್ ಬ್ರಾರ್ 2 ವಿಕೆಟ್ ಪಡೆದರು. ಟಾರ್ಗೆಟ್ ಬೆನ್ನಟ್ಟಿದ ಪಂಜಾಬ್ ಸರಾಗವಾಗಿ ವಿಕೆಟ್ ಕಳೆದುಕೊಂಡು ಸಾಗಿತು. ತಂಡದ ಪರ ಪ್ರಭ್​ಸಿಮ್ರಾನ್ ಸಿಂಗ್ 46 ಹಾಗೂ ಜಿತೇಶ್ ಶರ್ಮಾ 41 ರನ್ ಗಳಿಸಿದರು. ಪಂಜಾಬ್ 18.2 ಓವರ್​ನಲ್ಲಿ 150 ರನ್​ಗೆ ಆಲೌಟ್ ಆಯಿತು. ಆರ್​ಸಿಬಿ ಪರ ಸಿರಾಜ್ 4 ವಿಕೆಟ್ ಕಿತ್ತು ಮಿಂಚಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:47 am, Fri, 21 April 23

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?