AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021, RCB vs CSK: ಇಂದು ಬೆಂಗಳೂರು-ಚೆನ್ನೈ ಕಾದಾಟ: ಪುಟಿದೇಳುವ ವಿಶ್ವಾಸದಲ್ಲಿ ಕೊಹ್ಲಿ ಬಳಗ

ಉಭಯ ತಂಡಗಳು ಐಪಿಎಲ್​ನಲ್ಲಿ ಈವರೆಗೆ ಒಟ್ಟು 27 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೇವಲ 9 ಪಂದ್ಯಗಳಲ್ಲಿ ಗೆದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡ 17 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ.

IPL 2021, RCB vs CSK: ಇಂದು ಬೆಂಗಳೂರು-ಚೆನ್ನೈ ಕಾದಾಟ: ಪುಟಿದೇಳುವ ವಿಶ್ವಾಸದಲ್ಲಿ ಕೊಹ್ಲಿ ಬಳಗ
RCB vs CSK
TV9 Web
| Edited By: |

Updated on: Sep 24, 2021 | 7:44 AM

Share

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ (Indian Premier League) 35ನೇ ಪಂದ್ಯದಲ್ಲಿ ಇಂದು ವಿರಾಟ್ ಕೊಹ್ಲಿ (Virat Kohli) ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಗೂ ಎಂ. ಎಸ್ ಧೋನಿ (MS Dhoni) ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (RCB vs CSK) ತಂಡಗಳು ಮುಖಾಮುಖಿ ಆಗುತ್ತಿವೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ಈ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಲಿದ್ದು, ಸಾಂಪ್ರದಾಯಿಕ ಎದುರಾಳಿಗರ ಕಾದಾಟಕ್ಕೆ ಕ್ರಿಕೆಟ್ ಪ್ರಿಯರು ಕಾದುಕುಳಿತಿದ್ದಾರೆ. ಐಪಿಎಲ್ (IPL 2021) ಎರಡನೇ ಚರಣವನ್ನು ಕೆಟ್ಟದಾಗಿ ಪ್ರಾರಂಭಿಸಿರುವ ಆರ್​ಸಿಬಿ ತಂಡ ಈವರೆಗೆ ಒಟ್ಟು 8 ಪಂದ್ಯಗಳನ್ನು ಆಡಿದ್ದು ಐದರಲ್ಲಿ ಗೆಲುವು ಕಂಡಿದೆ. ಮೂರು ಪಂದ್ಯಗಳಲ್ಲಷ್ಟೆ ಸೋತಿದೆ. ಒಟ್ಟು 10 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.706 ನೆಟ್​ರೇಟ್​ನೊಂದಿಗೆ ಮೂರನೇ ಸ್ಥಾನದಲ್ಲಿದೆ. ಚೆನ್ನೈ ಕೂಡ 8 ಪಂದ್ಯಗಳನ್ನು ಆಡಿದ್ದು ಆರರಲ್ಲಿ ಗೆಲುವು ಕಂಡಿದೆ. ಕೇವಲ ಎರಡು ಪಂದ್ಯಗಳಲ್ಲಷ್ಟೆ ಸೋತಿದೆ. ಒಟ್ಟು 12 ಅಂಕ ಸಂಪಾದಿಸಿದ್ದು, ಎರಡನೇ ಸ್ಥಾನದಲ್ಲಿದೆ.

ಪ್ಲೇ ಆಫ್ ರೇಸ್​ನಲ್ಲಿರುವ ಉಭಯ ತಂಡಗಳಿಗೆ ಈ ಪಂದ್ಯ ಮುಖ್ಯವಾಗಿದೆ. ಅದರಲ್ಲೂ ಕಳೆದ ಪಂದ್ಯದಲ್ಲಿ ಕೊಹ್ಲಿ ಪಡೆ ಕೇವಲ 92 ರನ್​ಗೆ ಆಲೌಟ್ ಆಗಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಕಮ್​ಬ್ಯಾಕ್ ಮಾಡಬೇಕಾದ ಒತ್ತಡದಲ್ಲಿದೆ. ಓಪನರ್​ಗಳೇ ತಂಡಕ್ಕೆ ಉತ್ತಮ ಆರಂಭ ಒದಗಿಸದಿರುವುದು ತಲೆನೋವಾಗಿದೆ. ಹೀಗಾಗಿ ದೇವದತ್ ಪಡಿಕ್ಕಲ್ ಜೊತೆ ನಾಯಕ ವಿರಾಟ್ ಕೊಹ್ಲಿ ಬದಲು ಹೊಸ ಆರಂಭಿಕ ಕಣಕ್ಕಿಳಿಯುತ್ತಾನ ಎಂಬ ಕುತೂಹಲ ಮೂಡಿಸಿದೆ.

ಕಳೆದ ಪಂದ್ಯದಲ್ಲಿ ನಿರೀಕ್ಷೆಗೆ ತಕ್ಕ ಬ್ಯಾಟಿಂಗ್ ಪ್ರದರ್ಶನ ನೀಡದ ಶ್ರೀಕರ್ ಭರತ್ ಮತ್ತು ಸಚಿನ್ ಬೇಬಿಗೆ ತಂಡದಲ್ಲಿ ಸ್ಥಾನ ಅನುಮಾನ. ರಜಿತ್ ಪಟಿದಾರ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಎಬಿ ಡಿವಿಲಿಯರ್ಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಸಾಕಷ್ಟು ನಂಬಿಕೆಯಿದ್ದು, ಎಚ್ಚರಿಕೆಯಿಂದ ಬ್ಯಾಟ್ ಬೀಸಬೇಕಿದೆ.

ಇನ್ನೂ ಆರ್​ಸಿಬಿ ಬೌಲರ್​ಗಳು ಕೂಡ ಜಾದು ಮಾಡುತ್ತಿಲ್ಲ. ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ, ಯುಜ್ವೇಂದ್ರ ಚಹಾಲ್ ಸ್ನಿನ್ ಕೆಲಸ ಮಾಡಬೇಕಿದೆ. ಕೈಲ್ ಜೆಮಿಸನ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್ ಕೂಡ ಮಾರಕವಾಗಿ ಪರಿಣಮಿಸಬೇಕಿದೆ.

ಇತ್ತ ಚೆನ್ನೈ ತಂಡದಲ್ಲಿ ಅನುಭವಿ ಆಟಗಾರರ ಕಳಪೆ ಫಾರ್ಮ್​ ಒಂದುಕಡೆಯಾದರೆ ಯಂಗ್ ಸ್ಟಾರ್ಸ್​ಗಳು ಬೊಂಬಾಟ್ ಪ್ರದರ್ಶನ ತೋರುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ರಜತ್ ಪಟಿದಾರ್ ಆಟ ಎಲ್ಲರ ಹುಬ್ಬೇರುವಂತೆ ಮಾಡಿದ್ದರು. ನಾಯಕ ಧೋನಿ, ಸುರೇಶ್ ರೈನಾ, ಡುಪ್ಲೆಸಿಸ್, ಅಂಬಟಿ ರಾಯುಡು ಆಡಲೇ ಬೇಕಾದ ಪಂದ್ಯವಾಗಿದ್ದರಿಂದ ಜವಾಬ್ದಾರಿ ವಹಿಸಬೇಕಿದೆ.

ಆಲ್ರೌಂಡರ್​ಗಳಾಗಿ ಡ್ವೇನ್ ಬ್ರಾವೋ ಮಿಂಚು ಹರಿಸುತ್ತಿದ್ದರೆ, ರವೀಂದ್ರ ಜಡೇಜಾ ಹಾಗೂ ಮೊಯೀನ್ ಅಲಿ ನಿರೀಕ್ಷೆಗೆ ತಕ್ಕಂತೆ ಆಟವಾಡುತ್ತಿಲ್ಲ. ಇಂದಿನ ಪಂದ್ಯದಲ್ಲಿ ಸ್ಯಾಮ್ ಕುರ್ರನ್ ಕಣಕ್ಕಿಳಿಯುವ ಸಾಧ್ಯತೆ ಕೂಡ ಇದೆ. ಶಾರ್ದೂಲ್ ಠಾಕೂರ್, ದೀಪಕ್ ಚಹಾರ್ ಮತ್ತು ಜೋಶ್ ಹ್ಯಾಜ್ಲೆವುಡ್ ಪ್ರಮುಖ ಅಸ್ತ್ರವಾಗಿದ್ದಾರೆ.

ಉಭಯ ತಂಡಗಳು ಐಪಿಎಲ್​ನಲ್ಲಿ ಈವರೆಗೆ ಒಟ್ಟು 27 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೇವಲ 9 ಪಂದ್ಯಗಳಲ್ಲಿ ಗೆದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡ 17 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ. ಫಲಿತಾಂಶವಿಲ್ಲದೆ 1 ಪಂದ್ಯ ಅಂತ್ಯಕಂಡಿದೆ.

IPL 2021: ವಿಕೆಟ್ ಕೀಪಿಂಗ್​ನಲ್ಲಿ ಧೋನಿ ಹೆಸರಲ್ಲಿದ್ದ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡ ದಿನೇಶ್ ಕಾರ್ತಿಕ್!

IPL 2021: ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ವಿಶಿಷ್ಟ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್!

(Virat Kohli RCB will resume their rivalry with MS Dhoni CSK in the 35th match of the IPL 2021)

ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್