IND VS WI: ಕೊಹ್ಲಿಗೆ ವಿಶ್ರಾಂತಿ ನೀಡುವ ಅವಶ್ಯಕತೆ ಏನಿತ್ತು? ಅಸಮಾಧಾನ ಹೊರಹಾಕಿದ ಕೋಚ್

IND VS WI: ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ ಮಾಡಿದ್ದನ್ನು ಇಲ್ಲಿಯವರೆಗೆ ಯಾರಿಂದಲೂ ಮಾಡಲು ಸಾಧ್ಯವಾಗಿಲ್ಲ. ಅವರ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಅವರು ಅದ್ಭುತ ಪುನರಾಗಮನವನ್ನು ಮಾಡುತ್ತಾರೆ ಎಂದಿದ್ದಾರೆ.

IND VS WI: ಕೊಹ್ಲಿಗೆ ವಿಶ್ರಾಂತಿ ನೀಡುವ ಅವಶ್ಯಕತೆ ಏನಿತ್ತು? ಅಸಮಾಧಾನ ಹೊರಹಾಕಿದ ಕೋಚ್
ವಿರಾಟ್ ಕೊಹ್ಲಿ
TV9kannada Web Team

| Edited By: pruthvi Shankar

Jul 06, 2022 | 6:13 PM

ಇಂಗ್ಲೆಂಡ್ ಪ್ರವಾಸದ ನಂತರ ಭಾರತ ಕ್ರಿಕೆಟ್ ತಂಡ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ತೆರಳಬೇಕಿದೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೀಂ ಇಂಡಿಯಾ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದ್ದು, ಇದಕ್ಕಾಗಿ ತಂಡವನ್ನು ಪ್ರಕಟಿಸಲಾಗಿದೆ. ಆಯ್ಕೆದಾರರು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್, ಜಸ್ಪ್ರೀತ್ ಬುಮ್ರಾ (Rohit Sharma, Virat Kohli, Rishabh Pant, Jasprit Bumrah) ಅವರಂತಹ ಆಟಗಾರರಿಗೆ ವಿಶ್ರಾಂತಿ ನೀಡಿದ್ದಾರೆ. ಇದೇ ವೇಳೆ ವಿರಾಟ್ ಕೊಹ್ಲಿ ಅವರ ಬಾಲ್ಯದ ಕೋಚ್ ರಾಜ್ ಕುಮಾರ್ ಶರ್ಮಾ ಅವರು ವಿರಾಟ್ ಕೊಹ್ಲಿಗೆ ವಿಶ್ರಾಂತಿ ಅಗತ್ಯವಿಲ್ಲ ಎಂದು ಹೇಳಿಕೆ ನೀಡಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ವಿರಾಟ್ ಸಂಪೂರ್ಣ ಫಿಟ್ ಆಗಿರುವುದರಿಂದ ವಿಶ್ರಾಂತಿಯ ಅಗತ್ಯವಿಲ್ಲ ಎಂದು ರಾಜ್ ಕುಮಾರ್ ಶರ್ಮಾ ಹೇಳಿದ್ದಾರೆ. ಜೊತೆಗೆ ಕೊಹ್ಲಿ ಶೀಘ್ರದಲ್ಲೇ ಫಾರ್ಮ್​ಗೆ ಮರಳಲಿದ್ದಾರೆ ಎಂದು ರಾಜ್‌ಕುಮಾರ್ ಶರ್ಮಾ ಭರವಸೆ ವ್ಯಕ್ತಪಡಿಸಿದ್ದಾರೆ.

ಎಎನ್‌ಐ ಜೊತೆಗಿನ ಸಂವಾದದಲ್ಲಿ ರಾಜ್‌ಕುಮಾರ್ ಶರ್ಮಾ ಮಾತನಾಡಿ, ವಿರಾಟ್ ಕೊಹ್ಲಿಗೆ ಬಹಳ ಸಮಯದಿಂದ ದೊಡ್ಡ ಇನ್ನಿಂಗ್ಸ್‌ಗಳನ್ನು ಆಡಲು ಸಾಧ್ಯವಾಗುತ್ತಿಲ್ಲ ಎಂದು ನಾನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ಈ ರೀತಿ ಕೆಲವೊಮ್ಮೆ ಉತ್ತಮ ಆಟಗಾರರಿಗೆ ಎದುರಾಗುವ ಸಮಸ್ಯೆಯಾಗಿದೆ. ಅಲ್ಲದೆ ವಿಂಡೀಸ್ ವಿರುದ್ಧದ 5ನೇ ಟೆಸ್ಟ್​ನ ಎರಡನೇ ಇನ್ನಿಂಗ್ಸ್‌ನಲ್ಲಿ ವಿಕೆಟ್ ಕಳೆದುಕೊಂಡ ಚೆಂಡು ಯಾವುದೇ ಬ್ಯಾಟ್ಸ್‌ಮನ್‌ಗೆ ಎದುರಿಸಲು ಕಷ್ಟಕರವಾಗಿತ್ತು. ಹಾಗಾಗಿ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡುವ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ, ಅವರು ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಎಂದು ಕೋಚ್ ತಿಳಿಸಿದ್ದಾರೆ.

ಇದನ್ನೂ ಓದಿ: ICC Test Ranking: 2053 ದಿನಗಳ ನಂತರ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಟಾಪ್ 10 ರಿಂದ ಹೊರಬಿದ್ದ ವಿರಾಟ್ ಕೊಹ್ಲಿ..!

ಕೊಹ್ಲಿ ಟೀಂ ಇಂಡಿಯಾಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ

ಇನ್ನು ರಾಜ್‌ಕುಮಾರ್ ಶರ್ಮಾ, ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ ಮಾಡಿದ್ದನ್ನು ಇಲ್ಲಿಯವರೆಗೆ ಯಾರಿಂದಲೂ ಮಾಡಲು ಸಾಧ್ಯವಾಗಿಲ್ಲ. ಅವರ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಅವರು ಅದ್ಭುತ ಪುನರಾಗಮನವನ್ನು ಮಾಡುತ್ತಾರೆ ಎಂದಿದ್ದಾರೆ. ವಿರಾಟ್ ಕೊಹ್ಲಿ ಕಳೆದ ಎರಡೂವರೆ ವರ್ಷಗಳಿಂದ ಶತಕ ಗಳಿಸಲು ಸಾಧ್ಯವಾಗಲಿಲ್ಲ ಮತ್ತು ಇದೀಗ ಕಳಪೆ ಪ್ರದರ್ಶನದಿಂದಾಗಿ, ಪೂರ್ಣ 6 ವರ್ಷಗಳ ನಂತರ, ಅವರು ಟೆಸ್ಟ್ ಶ್ರೇಯಾಂಕದಲ್ಲಿ ಟಾಪ್ 10 ರಿಂದ ಹೊರಗುಳಿದಿದ್ದಾರೆ. ಈ ಸಮಯದಲ್ಲಿ ವಿರಾಟ್ ಕೊಹ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದು, ಅವರು ಹೆಚ್ಚು ಹೆಚ್ಚು ಪಂದ್ಯಗಳನ್ನು ಆಡುವ ಮೂಲಕ ಫಾರ್ಮಗೆ ಮರಳಬೇಕಿದೆ.

ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ತಂಡವನ್ನು ಪ್ರಕಟಿಸಲಾಗಿದೆ. ವಿರಾಟ್, ರೋಹಿತ್, ಬುಮ್ರಾ ಮತ್ತು ಪಂತ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಧವನ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಜಡೇಜಾ ಅವರನ್ನು ಉಪನಾಯಕರನ್ನಾಗಿ ಮಾಡಲಾಗಿದೆ. ಹಾರ್ದಿಕ್ ಪಾಂಡ್ಯಗೂ ವಿಶ್ರಾಂತಿ ನೀಡಲಾಗಿದೆ. ಅದೇ ಸಮಯದಲ್ಲಿ, ಯುವ ಆಟಗಾರರಾದ ಸಂಜು ಸ್ಯಾಮ್ಸನ್, ಶುಬ್ಮನ್ ಗಿಲ್, ಅರ್ಷ್ದೀಪ್ ಸಿಂಗ್ ಮತ್ತು ಅವೇಶ್ ಖಾನ್ ಅವರು ಏಕದಿನ ತಂಡದಲ್ಲಿದ್ದಾರೆ.

ಇದನ್ನೂ ಓದಿ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ: ಶಿಖರ್ ಧವನ್ (ನಾಯಕ), ರವೀಂದ್ರ ಜಡೇಜಾ, ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada