Virat Kohli: ಆಸ್ಟ್ರೇಲಿಯಾದಿಂದ ಮುಂಬೈಗೆ ಬಂದಿಳಿದ ಕೊಹ್ಲಿ ಅಭಿಮಾನಿಗಳಿಗೆ ಹೇಳಿದ್ದೇನು? ವಿಡಿಯೋ ನೋಡಿ

Virat Kohli: ಈ ವಿಶ್ವಕಪ್‌ನಲ್ಲಿ ಕೊಹ್ಲಿ ಆಡಿದ 6 ಇನ್ನಿಂಗ್ಸ್‌ಗಳಲ್ಲಿ 4 ಅರ್ಧಶತಕಗಳೊಂದಿಗೆ ಟೂರ್ನಿಯಲ್ಲಿ ಗರಿಷ್ಠ 296 ರನ್ ಗಳಿಸಿದರು.

Virat Kohli: ಆಸ್ಟ್ರೇಲಿಯಾದಿಂದ ಮುಂಬೈಗೆ ಬಂದಿಳಿದ ಕೊಹ್ಲಿ ಅಭಿಮಾನಿಗಳಿಗೆ ಹೇಳಿದ್ದೇನು? ವಿಡಿಯೋ ನೋಡಿ
Virat Kohli
Follow us
TV9 Web
| Updated By: ಪೃಥ್ವಿಶಂಕರ

Updated on:Nov 12, 2022 | 6:20 PM

ಕಳೆದ 9 ವರ್ಷಗಳಂತೆ ಈ ವರ್ಷವೂ ಮತ್ತೊಮ್ಮೆ ಎಲ್ಲ ನಿರೀಕ್ಷೆಗಳು ಹುಸಿಯಾಗಿವೆ. ಮತ್ತೊಂದು ಐಸಿಸಿ ಟೂರ್ನಿಯ ಚಾಂಪಿಯನ್ ಪಟ್ಟ ಭಾರತದ ಕೈತಪ್ಪಿದೆ. ಟಿ20 ವಿಶ್ವಕಪ್‌ನ (T20 World Cup 2022) ಸೆಮಿಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಹೊರಬಿದ್ದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೆ. ಈ ಸೋಲು ಆಟಗಾರರನ್ನು ನಿರಾಸೆಗೊಳಿಸಿದ್ದಲ್ಲದೆ, ಕೋಟ್ಯಂತರ ಭಾರತೀಯ ಅಭಿಮಾನಿಗಳಿಗೆ ಆಘಾತ ನೀಡಿತ್ತು. ನಿಸ್ಸಂಶಯವಾಗಿ, ಅಭಿಮಾನಿಗಳು ಇದರಿಂದ ಚೇತರಿಸಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಆದರೆ ಈ ಸೋಲನ್ನು ಬದಿಗಿಟ್ಟಿರುವ ಟೀಂ ಇಂಡಿಯಾ ಆಟಗಾರರು ಮುಂದಿನ ಸರಣಿಗಾಗಿ ತಯಾರಿ ಆರಂಭಿಸಿದ್ದಾರೆ. ಇನ್ನು ಕೆಲವು ಹಿರಿಯ ಆಟಗಾರರು ಆಸ್ಟ್ರೇಲಿಯಾದಿಂದ ತವರಿಗೆ ಮರಳುತ್ತಿದ್ದಾರೆ. ಶನಿವಾರ ಬೆಳಗ್ಗೆ ಆಸ್ಟ್ರೇಲಿಯಾದಿಂದ ಮುಂಬೈಗೆ ವಾಪಸಾದವರಲ್ಲಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli) ಕೂಡ ಸೇರಿದ್ದಾರೆ.

ವಿಶ್ವಕಪ್‌ನಲ್ಲಿ ಭಾರತದ ಯಶಸ್ವಿ ಬ್ಯಾಟ್ಸ್‌ಮನ್ ಆಗಿದ್ದ ಕೊಹ್ಲಿ, ಸೆಮಿಫೈನಲ್‌ನಲ್ಲೂ ಉತ್ತಮ ಇನ್ನಿಂಗ್ಸ್ ಆಡಿದರು, ಆದರೆ ಅವರ ಇನ್ನಿಂಗ್ಸ್​ಗೆ ತಂಡಕ್ಕೆ ಜಯ ತಂದುಕೊಡಲು ಸಾಧ್ಯವಾಗಲಿಲ್ಲ. ಆದಾಗ್ಯೂ, ಈ ವಿಶ್ವಕಪ್​ನಲ್ಲಿ ಕೊಹ್ಲಿ ಅದ್ಭುತ ಬ್ಯಾಟಿಂಗ್ ಮೂಲಕ ಅಭಿಮಾನಿಗಳನ್ನು ರಂಜಿಸಿದರು. ಜೊತೆಗೆ ಟೀಂ ಇಂಡಿಯಾವನ್ನು ಸೆಮಿಫೈನಲ್​ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಅಭಿಮಾನಿಗಳಿಗೆ ಧನ್ಯವಾದ ಹೇಳಿದ ಕೊಹ್ಲಿ

ಅಡಿಲೇಡ್‌ನಲ್ಲಿ ನಡೆದ ಸೆಮಿಫೈನಲ್‌ನಲ್ಲಿ ಸೋತ ಬಳಿಕ ವಿರಾಟ್ ಕೊಹ್ಲಿ ನವೆಂಬರ್ 12 ಶನಿವಾರದಂದು ಅಡಿಲೇಡ್‌ನಿಂದ ಮುಂಬೈಗೆ ಬಂದಿಳಿದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಕೊಹ್ಲಿಯನ್ನು ಕಂಡ ಕೆಲವು ಅಭಿಮಾನಿಗಳು ಕೊಹ್ಲಿ ಬಳಿ ಫೋಟೋಗಾಗಿ ಮನವಿ ಮಾಡಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿರಾಸೆಗೊಳಿಸದ ಕೊಹ್ಲಿ ಎಲ್ಲರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ. ಹಾಗೆಯೇ ಇಡೀ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾವನ್ನು ಬೆಂಬಲಿಸಿದಕ್ಕೆ ಅಭಿಮಾನಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಅಭಿಮಾನಿಗಳು ಕೂಡ ಕೊಹ್ಲಿಯ ಉತ್ತಮ ಪ್ರದರ್ಶನಕ್ಕಾಗಿ ಪ್ರಶಂಸಿಸಿದರು. ಈಗ ಈ ವಿಡಿಯೋವನ್ನು ನೆಟ್ಟಿಗರೊಬ್ಬರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

ವಿರಾಟ್ ಕೊಹ್ಲಿ ಮುಂದಿನ ಪ್ಲ್ಯಾನ್ ಏನು?

ವೈಯಕ್ತಿಕವಾಗಿ, ಟಿ 20 ವಿಶ್ವಕಪ್ ಕೊಹ್ಲಿಗೆ ಉತ್ತಮವಾಗಿದೆ. ಈ ವಿಶ್ವಕಪ್‌ನಲ್ಲಿ ಕೊಹ್ಲಿ ಆಡಿದ 6 ಇನ್ನಿಂಗ್ಸ್‌ಗಳಲ್ಲಿ 4 ಅರ್ಧಶತಕಗಳೊಂದಿಗೆ ಟೂರ್ನಿಯಲ್ಲಿ ಗರಿಷ್ಠ 296 ರನ್ ಗಳಿಸಿದರು. ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲೂ ಕೊಹ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ್ದರು. ಆದಾಗ್ಯೂ, ಈ ಇನ್ನಿಂಗ್ಸ್ ಹೆಚ್ಚು ಪರಿಣಾಮಕಾರಿಯಾಗಿರಲಿಲ್ಲ. ಈ 50 ರನ್ ಬಾರಿಸುವುದಕ್ಕಾಗಿ ಕೊಹ್ಲಿ, ಬರೋಬ್ಬರಿ 40 ಎಸೆತಗಳನ್ನು ಆಡಿದರು.

ಈಗ ಪ್ರಸ್ತುತ ವರದಿಗಳ ಪ್ರಕಾರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂದಿನ ಕೆಲವು ದಿನಗಳಲ್ಲಿ ನಾಯಕ ರೋಹಿತ್ ಶರ್ಮಾ, ಕೋಚ್ ರಾಹುಲ್ ದ್ರಾವಿಡ್ ಮತ್ತು ಕೊಹ್ಲಿ ಅವರೊಂದಿಗೆ ಮಾತುಕತೆ ನಡೆಸಲಿದೆ. ಅದರಲ್ಲಿ ಭಾರತದ ಟಿ20 ಕ್ರಿಕೆಟ್​ಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲಿದೆ ಎಂದು ವರದಿಯಾಗಿದೆ. ಪ್ರಸ್ತುತ, ರೋಹಿತ್ ಮತ್ತು ಕೊಹ್ಲಿ ಸೇರಿದಂತೆ ಕೆಲವು ಇತರ ಭಾರತೀಯ ಆಟಗಾರರು ಕನಿಷ್ಠ ಎರಡು ವಾರಗಳ ಕಾಲ ವಿಶ್ರಾಂತಿ ಪಡೆದು ನಂತರ ಬಾಂಗ್ಲಾದೇಶ ಪ್ರವಾಸಕ್ಕೆ ತೆರಳಲಿದ್ದಾರೆ.

Published On - 6:20 pm, Sat, 12 November 22

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!