Virat Kohli: ನಿವೃತ್ತಿ ಸುಳಿವು ನೀಡಿದ ವಿರಾಟ್ ಕೊಹ್ಲಿ

Virat Kohli: ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಪರ 117 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1 ಶತಕ ಹಾಗೂ 37 ಅರ್ಧಶತಕಗಳೊಂದಿಗೆ ಒಟ್ಟು 4037 ರನ್ ಕಲೆಹಾಕಿದ್ದಾರೆ. ಹಾಗೆಯೇ ಈ ಬಾರಿಯ ಐಪಿಎಲ್‌ನಲ್ಲಿ 13 ಪಂದ್ಯಗಳನ್ನು ಆಡಿರುವ ಕಿಂಗ್ ಕೊಹ್ಲಿ 66.10 ರ ಸರಾಸರಿಯಲ್ಲಿ ಒಟ್ಟು 661 ರನ್ ಗಳಿಸಿದ್ದಾರೆ. ಈ ವೇಳೆ ಒಂದು ಭರ್ಜರಿ ಶತಕವನ್ನು ಸಹ ಸಿಡಿಸಿದ್ದಾರೆ.

Virat Kohli: ನಿವೃತ್ತಿ ಸುಳಿವು ನೀಡಿದ ವಿರಾಟ್ ಕೊಹ್ಲಿ
Virat Kohli
Follow us
ಝಾಹಿರ್ ಯೂಸುಫ್
|

Updated on:May 16, 2024 | 1:43 PM

ಟೀಮ್ ಇಂಡಿಯಾದ (Team India) ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ನಿವೃತ್ತಿ ಘೋಷಿಸಲಿದ್ದಾರಾ? ಈ ಪ್ರಶ್ನೆಗೆ ಉತ್ತರ, ಸದ್ಯಕ್ಕಂತು ಇಲ್ಲ. ಇದಾಗ್ಯೂ ಈ ಬಾರಿಯ ಟಿ20 ವಿಶ್ವಕಪ್​ ಬಳಿಕ ಕೊಹ್ಲಿ ಭಾರತ ಟಿ20 ತಂಡದಿಂದ ಹೊರಗುಳಿಯಲಿದ್ದಾರೆ. ಏಕೆಂದರೆ 35 ವರ್ಷದ ಕೊಹ್ಲಿಗೆ ಇದುವೇ ಕೊನೆಯ ಟಿ20 ವಿಶ್ವಕಪ್ ಎಂದು ಹೇಳಲಾಗುತ್ತಿದೆ. ಹೀಗಾಗಿ ಟೀಮ್ ಇಂಡಿಯಾ ಟಿ20 ತಂಡದಿಂದ ಕೊಹ್ಲಿ ನಿವೃತ್ತಿ ಘೋಷಿಸಿದರೂ ಅಚ್ಚರಿಪಡಬೇಕಿಲ್ಲ.

ಈ ಬಗ್ಗೆ ಮಾತನಾಡಿರುವ ವಿರಾಟ್ ಕೊಹ್ಲಿ, ಕ್ರೀಡಾಪಟುವಾಗಿ, ನಾವು ನಮ್ಮ ವೃತ್ತಿಜೀವನಕ್ಕೆ ಅಂತಿಮ ದಿನಾಂಕವನ್ನು ಹೊಂದಿದ್ದೇವೆ ಎಂದು ಭಾವಿಸುತ್ತೇನೆ. ‘ಅಯ್ಯೋ, ಆ ದಿನ ನಾನೇನು ಮಾಡಿದ್ದೆನೋ’ ಎಂದುಕೊಂಡು ನನ್ನ ವೃತ್ತಿಜೀವನವನ್ನು ಕೊನೆಗೊಳಿಸಲು ನಾನು ಬಯಸುವುದಿಲ್ಲ. ಯಾಕೆಂದರೆ ನಾನು ಸದಾ ಹೀಗೆ ಇರಲು ಸಾಧ್ಯವಿಲ್ಲ. ಹಾಗಾಗಿ ನಾನು ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡಲು ಬಯಸುವುದಿಲ್ಲ, ನಂತರ ನಾನು ವಿಷಾದಿಸಬಹುದು. ನಾನು ಹಾಗೆ ಮಾಡುವುದಿಲ್ಲ ಎಂದು ನನಗೆ ಖಚಿತತೆ ಇದೆ ಎಂದು ಕೊಹ್ಲಿ ಹೇಳಿದ್ದಾರೆ.

ಒಮ್ಮೆ ನನ್ನ ಕೆಲಸ ಮುಗಿದರೆ ನಾನು ನಿವೃತ್ತಿ ಘೋಷಿಸುತ್ತೇನೆ. ನೀವು ಸ್ವಲ್ಪ ಸಮಯದವರೆಗೆ ನನ್ನನ್ನು ನೋಡುವುದಿಲ್ಲ. ಹಾಗಾಗಿ ನಾನು ಆಟವಾಡುವವರೆಗೂ ನನ್ನ ಎಲ್ಲವನ್ನೂ ನೀಡಲು ಬಯಸುತ್ತೇನೆ. ಅಲ್ಲದೆ ಯಾವುದೇ ವಿಷಾದವಿಲ್ಲದೆ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಲು ಇಚ್ಛಿಸಿದ್ದೇನೆ ಎಂದು ಕೊಹ್ಲಿ ಹೇಳಿದ್ದಾರೆ.

ವಿರಾಟ್ ಕೊಹ್ಲಿಯ ಈ ಹೇಳಿಕೆಗಳು ಮುಂಬರುವ ಟಿ20 ವಿಶ್ವಕಪ್ ಬಳಿಕದ ನಿವೃತ್ತಿಯ ಮುನ್ಸೂಚನೆ ಎಂದು ವಿಶ್ಲೇಷಿಸಲಾಗುತ್ತಿದೆ. ಏಕೆಂದರೆ ಟಿ20 ವಿಶ್ವಕಪ್ ಬಳಿಕ ಕೊಹ್ಲಿಯನ್ನು ಭಾರತ ಟಿ20 ತಂಡದ ಆಯ್ಕೆಗೆ ಪರಿಗಣಿಸಲಾಗುವುದಿಲ್ಲ ಎಂಬುದು ಈಗಾಗಲೇ ಸ್ಪಷ್ಟವಾಗಿದೆ. ಹೀಗಾಗಿ ಟಿ20 ವಿಶ್ವಕಪ್ ಬಳಿಕ ಕೊಹ್ಲಿ ಚುಟುಕು ಕ್ರಿಕೆಟ್​ಗೆ ವಿದಾಯ ಹೇಳುವ ಸಾಧ್ಯಯಿದೆ.

ಸದ್ಯ ವಿರಾಟ್ ಕೊಹ್ಲಿಗೆ 35 ವರ್ಷ. ಸದ್ಯದ ಅವರ ಫಿಟ್‌ನೆಸ್ ಗಮನಿಸಿದರೆ ಅವರು ಇನ್ನು 2-3 ವರ್ಷಗಳ ಕಾಲ ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಾಗ್ಯೂ ಅವರು ಯಾವಾಗ ಬೇಕಿದ್ದರೂ ನಿವೃತ್ತಿ ನೀಡುವ ಬಗ್ಗೆ ಸುಳಿವು ನೀಡಿದ್ದಾರೆ. ಹಾಗಾಗಿ ಒಮ್ಮೆ ನಿವೃತ್ತಿಯತ್ತ ಮುಖ ಮಾಡಿದರೆ, ವಿರಾಟ್ ಕೊಹ್ಲಿ ಮತ್ತೆ ಮೈದಾನದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತ.

ಭರ್ಜರಿ ಫಾರ್ಮ್​ನಲ್ಲಿ ಕಿಂಗ್ ಕೊಹ್ಲಿ:

ಈ ಬಾರಿಯ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಇದುವರೆಗೆ ಒಟ್ಟು 13 ಪಂದ್ಯಗಳನ್ನು ಆಡಿರುವ ಕಿಂಗ್ ಕೊಹ್ಲಿ 66.10 ರ ಸರಾಸರಿಯಲ್ಲಿ ಒಟ್ಟು 661 ರನ್ ಗಳಿಸಿದ್ದಾರೆ. ಈ ಒಂದು ಶತಕ ಮತ್ತು ಐದು ಅರ್ಧ ಶತಕಗಳನ್ನು ಬಾರಿಸಿದ್ದಾರೆ.

ಇದನ್ನೂ ಓದಿ: IPL 2024: RCB vs CSK ಪಂದ್ಯಕ್ಕೆ ಐವರು ಆಟಗಾರರು ಅಲಭ್ಯ..!

ಈ ಅದ್ಭುತ ಫಾರ್ಮ್​​ನೊಂದಿಗೆ ಈ ಬಾರಿ ಟಿ20 ವಿಶ್ವಕಪ್ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಅಂದರೆ ಕಿಂಗ್ ಕೊಹ್ಲಿ ಈವರೆಗೆ ಟಿ20 ವಿಶ್ವಕಪ್​ ಗೆದ್ದಿಲ್ಲ. 2011 ರಲ್ಲಿ ಏಕದಿನ ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದ ಕೊಹ್ಲಿಗೆ ಟಿ20 ವಿಶ್ವಕಪ್​ ಅನ್ನು ಮುಡಿಗೇರಿಸಿಕೊಳ್ಳಲು ಭಾಗ್ಯ ಸಿಕ್ಕಿಲ್ಲ. ಇದೀಗ ಕೊನೆಯ ಬಾರಿಗೆ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿರುವ ಕೊಹ್ಲಿ ಟ್ರೋಫಿಯನ್ನು ಎತ್ತಿ ಹಿಡಿಯಲಿದ್ದಾರಾ ಕಾದು ನೋಡಬೇಕಿದೆ.

Published On - 12:53 pm, Thu, 16 May 24

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?