Virat Kohli: ನಾಯಕನಾಗಿ ಕೊನೆಯ ಪಂದ್ಯದಲ್ಲಿ ಬ್ಯಾಟಿಂಗ್ ಮಾಡದಿರುವ ಅಸಲಿ ಕಾರಣ ತಿಳಿಸಿದ ಕೊಹ್ಲಿ
Team India: ಏಕೆಂದರೆ 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬದಲಿಗೆ ಸೂರ್ಯ ಕುಮಾರ್ ಯಾದವ್ ಕಣಕ್ಕಿಳಿದಿದ್ದರು. ಅಂತಿಮವಾಗಿ ಟೀಮ್ ಇಂಡಿಯಾ 1 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟಿತ್ತು.
ಟಿ20 ವಿಶ್ವಕಪ್ನಲ್ಲಿ (T20 World Cup 2021) ಕೊನೆಯ ಬಾರಿ ನಾಯಕನಾಗಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ (Virat Kohli) ಬ್ಯಾಟಿಂಗ್ ಮಾಡಿರಲಿಲ್ಲ ಎಂಬುದು ವಿಶೇಷ. ನಮೀಬಿಯಾ ನೀಡಿದ ಕಡಿಮೆ ಮೊತ್ತ ಟಾರ್ಗೆಟ್ ಅನ್ನು ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಭರ್ಜರಿಯಾಗಿ ಬೆನ್ನತ್ತಿದರು. ಮೊದಲ ವಿಕೆಟ್ಗೆ 86 ರನ್ ಜೊತೆಯಾಟವಾಡಿ ರೋಹಿತ್ ಶರ್ಮಾ ವಿಕೆಟ್ ಒಪ್ಪಿಸಿದ್ದರು. ಈ ವೇಳೆ ಕೊನೆಯ ಬಾರಿ ನಾಯಕನಾಗಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆ ಕಾದಿತ್ತು.
ಏಕೆಂದರೆ 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬದಲಿಗೆ ಸೂರ್ಯ ಕುಮಾರ್ ಯಾದವ್ ಕಣಕ್ಕಿಳಿದಿದ್ದರು. ಅಂತಿಮವಾಗಿ ಟೀಮ್ ಇಂಡಿಯಾ 1 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟಿತ್ತು. ಪಂದ್ಯದ ಬಳಿಕ ಮಾತನಾಡಿದ ಕೊಹ್ಲಿಗೆ, ನೀವೇಕೆ ನಾಯಕನಾಗಿ ಕೊನೆಯ ಪಂದ್ಯವಾಡುತ್ತಿದ್ದರೂ ಬ್ಯಾಟಿಂಗ್ಗೆ ಬರಲಿಲ್ಲ ಕೇಳಲಾಗಿತ್ತು.
ಈ ಪ್ರಶ್ನೆಗೆ ಉತ್ತರಿಸಿದ ಕೊಹ್ಲಿ, ನಾನು ನಾಯಕನಾಗುವ ಮೊದಲು ತಂಡದ ಆಟಗಾರ. ಯಾವಾಗಲೂ ಯಾವುದಾದರೂ ರೀತಿಯಲ್ಲಿ ಕೊಡುಗೆ ನೀಡಲು ಬಯಸುತ್ತೇನೆ. ಈ ಬಾರಿಯ ವಿಶ್ವಕಪ್ನಲ್ಲಿ ಸೂರ್ಯ ಕುಮಾರ್ ಉತ್ತಮವಾಗಿ ಆಡುವ ಅವಕಾಶ ದೊರೆತಿರಲಿಲ್ಲ. ಇದು ಬೇರೆ ಕೊನೆಯ ಪಂದ್ಯ. ಹಾಗಾಗಿ ಸೂರ್ಯಕುಮಾರ್ ಯಾದವ್ಗೆ ಇದು ಸ್ಮರಣೀಯ ಇನಿಂಗ್ಸ್ ಆಗಲಿ ಎಂದು ಭಾವಿಸಿದೆ. ಹೀಗಾಗಿ ನಾನು ಸೂರ್ಯ ಕುಮಾರ್ ಅವರನ್ನು ಬ್ಯಾಟಿಂಗ್ಗೆ ಕಳುಹಿಸಿದೆ ಎಂದು ಕೊಹ್ಲಿ ತಿಳಿಸಿದರು. ಕೊಹ್ಲಿಯ ಈ ನಡೆಯ ಬಗ್ಗೆ ಇದೀಗ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ
ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ
ಇದನ್ನೂ ಓದಿ: India T20 squad: ಟೀಮ್ ಇಂಡಿಯಾಗೆ ಹೊಸ ನಾಯಕ: ಯುವ ಪಡೆಯನ್ನು ಪ್ರಕಟಿಸಿದ ಬಿಸಿಸಿಐ
(Virat Kohli Reveals Why He Did Not Get To Bat In His Last Game As T20 Captain)
Published On - 9:41 pm, Tue, 9 November 21