AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಒಂದೇ ದಿನ ಮೂವರು ದಿಗ್ಗಜರ ಯುಗಾಂತ್ಯ

T20 World Cup 2024: ವಿಶ್ವಕಪ್ ಗೆಲ್ಲಬೇಕೆಂಬ ರಾಹುಲ್ ದ್ರಾವಿಡ್ ಅವರ ಬಹುದೊಡ್ಡ ಕನಸು ಕೊನೆಗೂ ಈಡೇರಿದೆ. ಈ ಹಿಂದೆ ಭಾರತದ ಪರ ವಿಶ್ವಕಪ್​ ಟೂರ್ನಿಗಳನ್ನು ಆಡಿದರೂ ದ್ರಾವಿಡ್ ಅವರಿಗೆ ವಿಶ್ವ ಕಿರೀಟ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ ತಮ್ಮ ನಿವೃತ್ತಿಗೂ ಮುನ್ನ ವಿಶ್ವಕಪ್ ಎತ್ತಿ ಹಿಡಿಯುವಲ್ಲಿ ಕೊನೆಗೂ ರಾಹುಲ್ ದ್ರಾವಿಡ್ ಸಫಲರಾಗಿದ್ದಾರೆ.

T20 World Cup 2024: ಒಂದೇ ದಿನ ಮೂವರು ದಿಗ್ಗಜರ ಯುಗಾಂತ್ಯ
Virat Kohli-Rohit Sharma-Rahul Dravid
Follow us
ಝಾಹಿರ್ ಯೂಸುಫ್
|

Updated on: Jun 30, 2024 | 7:51 AM

T20 World Cup 2024: ಟಿ20 ವಿಶ್ವಕಪ್​ನಲ್ಲಿ ಭಾರತ ತಂಡ ವಿಶ್ವ ಚಾಂಪಿಯನ್ ಆಗುತ್ತಿದ್ದಂತೆ ಟೀಮ್ ಇಂಡಿಯಾ ಪರ ಮೂವರು ದಿಗ್ಗಜರ ಯುಗಾಂತ್ಯವಾಗಿದೆ. ಹೌದು, ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರೆ, ಅತ್ತ ರಾಹುಲ್ ದ್ರಾವಿಡ್ ಅವರ ಕೋಚ್ ಸ್ಥಾನದಿಂದ ಕೆಳಗಿಳಿದಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್​ನೊಂದಿಗೆ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿದಿದೆ. ಇನ್ಮುಂದೆ ಭಾರತ ತಂಡ ತರಬೇತುದಾರರಾಗಿ ಅವರು ಕಾಣಿಸಿಕೊಳ್ಳುವುದಿಲ್ಲ. ಹೀಗಾಗಿ ಟಿ20 ವಿಶ್ವಕಪ್ ಫೈನಲ್ ಪಂದ್ಯವು ದ್ರಾವಿಡ್ ಪಾಲಿಗೆ ತುಂಬಾ ಮಹತ್ವದ ಪಂದ್ಯವಾಗಿತ್ತು. ಅದರಂತೆ ಇದೀಗ ವಿಶ್ವಕಪ್ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಆಟಗಾರರು ಗುರುವಿಗೆ ಅತ್ಯುತ್ತಮ ಬೀಳ್ಕೊಡುಗೆ ನೀಡಿದ್ದಾರೆ.

ಇನ್ನು ಟಿ20 ವಿಶ್ವಕಪ್ ಗೆದ್ದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ ಇದುವೇ ನನ್ನ ಕೊನೆಯ ಟಿ20 ವಿಶ್ವಕಪ್ ಪಂದ್ಯ ಎಂದು ತಿಳಿಸಿದರು. ಅಲ್ಲದೆ ಮುಂದಿನ ಪೀಳಿಗೆಯು ಜವಾಬ್ದಾರಿ ಹೊತ್ತುಕೊಳ್ಳಲು ಇದು ಸರಿಯಾದ ಸಮಯ. ಈ ಗೆಲುವಿನೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುವುದಾಗಿ ತಿಳಿಸಿದ್ದಾರೆ.

ಇದರ ಬೆನ್ನಲ್ಲೇ ರೋಹಿತ್ ಶರ್ಮಾ ಕೂಡ ಟಿ20 ಅಂತಾರಾಷ್ಟ್ರೀಯ ಕೆರಿಯರ್​ಗೆ ನಿವೃತ್ತಿ ಘೋಷಿಸಿದ್ದಾರೆ. ವಿಶ್ವಕಪ್ ಗೆದ್ದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಹಿಟ್​ಮ್ಯಾನ್, ಭಾರತದ ಪರ ನನ್ನ ವೃತ್ತಿಜೀವನವು ಟಿ20 ಕ್ರಿಕೆಟ್​ನೊಂದಿಗೆ ಶುರುವಾಗಿತ್ತು. ಈ ಸ್ವರೂಪಕ್ಕೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ಹೀಗಾಗಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ: Virat Kohli: ವಿಶ್ವಕಪ್​ ಗೆದ್ದ ಬಳಿಕ ವಿರಾಟ್ ಕೊಹ್ಲಿಯ ಮಸ್ತ್ ಡ್ಯಾನ್ಸ್​: ವಿಡಿಯೋ ವೀಕ್ಷಿಸಿ

ಇದರೊಂದಿಗೆ ಭಾರತದ ಪರ ಒಂದೇ ದಿನ ಮೂವರು ದಿಗ್ಗಜರ ಯುಗಾಂತ್ಯವಾಗಿದೆ. ಇಲ್ಲಿ ಇಬ್ಬರು ಆಟಗಾರರಾದಾದರೆ, ಒಬ್ಬರು ಕೋಚ್ ಎಂಬುದಷ್ಟೇ ವ್ಯತ್ಯಾಸ. ಆದರೆ ಮೂವರು ಕೂಡ ವಿಶ್ವಕಪ್​ ಗೆಲ್ಲುವ ಕನಸು ಹೊತ್ತಿದ್ದರು. ಈ ಕನಸನ್ನು ನನಸು ಮಾಡಿ ಇದೀಗ ವಿದಾಯ ಹೇಳಿರುವುದು ವಿಶೇಷ.

ಫೈನಲ್ ಪಂದ್ಯ:

ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸಿದೆ.

ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ