AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಜಿಲೆಂಡ್ ನೆಲದಲ್ಲಿ ಕೊನೆಯ ಸರಣಿ; ಕೊಹ್ಲಿ-ರೋಹಿತ್‌ಗೆ ಈಗ ಪ್ರತಿಷ್ಠೆಯ ಕಣ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಗೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ 6 ವರ್ಷಗಳ ಬಳಿಕ ಕಿವೀಸ್ ನೆಲಕ್ಕೆ ಮರಳುತ್ತಿದ್ದಾರೆ. ಮುಂಬೈನಲ್ಲಿ ಭರ್ಜರಿ ಅಭ್ಯಾಸ ನಡೆಸಿರುವ ಕೊಹ್ಲಿ 2026ರಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಈ ಸರಣಿಯು ಅವರಿಗೆ ವಿಶೇಷವಾಗಿದ್ದು, ಅಭಿಮಾನಿಗಳು ಈ ಇಬ್ಬರು ದಿಗ್ಗಜರ ಸ್ಮರಣೀಯ ಪ್ರದರ್ಶನಕ್ಕಾಗಿ ಕಾತರದಿಂದ ಎದುರು ನೋಡುತ್ತಿದ್ದಾರೆ.

ನ್ಯೂಜಿಲೆಂಡ್ ನೆಲದಲ್ಲಿ ಕೊನೆಯ ಸರಣಿ; ಕೊಹ್ಲಿ-ರೋಹಿತ್‌ಗೆ ಈಗ ಪ್ರತಿಷ್ಠೆಯ ಕಣ
ವಿರಾಟ್ ಕೊಹ್ಲಿImage Credit source: BCCI X
ಪೃಥ್ವಿಶಂಕರ
|

Updated on:Oct 26, 2026 | 3:10 PM

Share

ಪ್ರಸ್ತುತ ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಇದಾದ ಬಳಿಕ ಉಭಯ ತಂಡಗಳ ನಡುವೆ ಏಕದಿನ ಸರಣಿ ನವೆಂಬರ್ 4ರಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳು ನಡೆಯಲಿವೆ. ಈ ಸರಣಿಯ ಮೂಲಕ ಬರೋಬ್ಬರಿ 6 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನ್ಯೂಜಿಲೆಂಡ್ ನೆಲದಲ್ಲಿ ಆಡಲು ಸಜ್ಜಾಗಿದ್ದಾರೆ. ಇದೇ ಈ ದೇಶದಲ್ಲಿ ಅವರ ಕೊನೆಯ ಸರಣಿಯಾಗುವ ಸಾಧ್ಯತೆಯಿರುವುದರಿಂದ ಅಭಿಮಾನಿಗಳು ಮಾತ್ರವಲ್ಲದೆ ಕ್ರಿಕೆಟ್ ಮಂಡಳಿಯೂ ಈ ಸರಣಿಯನ್ನು ವಿಶೇಷವಾಗಿಸಲು ಉತ್ಸುಕವಾಗಿದೆ. ಈ ಇಬ್ಬರು ಅನುಭವಿ ಆಟಗಾರರು ಕೂಡ ಈ ಸರಣಿಯನ್ನು ಸ್ಮರಣೀಯವಾಗಿಸಲು ಭರ್ಜರಿ ತಯಾರಿ ನಡೆಸುತ್ತಿದ್ದಾರೆ.

ಮುಂಬೈನಲ್ಲಿ ಕೊಹ್ಲಿ ಭರ್ಜರಿ ಅಭ್ಯಾಸ

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಶತಕಗಳ ಮೈಲಿಗಲ್ಲು ತಲುಪುವ ಗುರಿ ಹೊಂದಿರುವ ವಿರಾಟ್ ಕೊಹ್ಲಿ, ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗಾಗಿ ತಮ್ಮ ತಯಾರಿಯನ್ನು ಚುರುಕುಗೊಳಿಸಿದ್ದಾರೆ. ಇತ್ತೀಚೆಗೆ ಮುಂಬೈನ ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾಗೆ ಸೇರಿದ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಅವರು ಭರ್ಜರಿ ಅಭ್ಯಾಸ ನಡೆಸಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ನೆಟ್‌ನಲ್ಲಿ ಬ್ಯಾಟಿಂಗ್ ಮಾಡಿದ ಕೊಹ್ಲಿ, ಆಕರ್ಷಕ ಹೊಡೆತಗಳ ಮೂಲಕ ಗಮನ ಸೆಳೆದಿದ್ದಾರೆ. ಮತ್ತೊಂದೆಡೆ, ರೋಹಿತ್ ಶರ್ಮಾ ಕೂಡ ಮುಂಬೈನಲ್ಲಿ ಫಿಟ್‌ನೆಸ್ ಅಭ್ಯಾಸ ಆರಂಭಿಸಿದ್ದು, ತಮ್ಮ ದೈಹಿಕ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ.

2026ರಲ್ಲಿ ಕೊಹ್ಲಿ ಅದ್ಭುತ ಫಾರ್ಮ್

ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ವಿರಾಟ್ ಕೊಹ್ಲಿ ಅತ್ಯುತ್ತಮ ಫಾರ್ಮ್‌ನೊಂದಿಗೆ ಕಣಕ್ಕಿಳಿಯಲಿದ್ದಾರೆ. 2026ರಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಆಡಿರುವ 9 ಇನ್ನಿಂಗ್ಸ್‌ಗಳಲ್ಲಿ ಅವರು 69ರ ಸರಾಸರಿ ಮತ್ತು 118ರ ಸ್ಟ್ರೈಕ್‌ರೇಟ್‌ನೊಂದಿಗೆ ಒಟ್ಟು 552 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಕೊಹ್ಲಿ 2 ಶತಕ ಹಾಗೂ 3 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಒಂದು ಪಂದ್ಯದಲ್ಲಿ ಅವರು ಕೇವಲ 7 ರನ್‌ಗಳಿಂದ ಶತಕ ವಂಚಿತರಾಗಿ 93 ರನ್‌ಗಳಿಗೆ ಔಟಾಗಿದ್ದರು. ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ತಲಾ ಒಂದು ಶತಕ ಸಿಡಿಸಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.

ಕೊಹ್ಲಿ, ಬುಮ್ರಾ ಇಲ್ಲದ ಟೀಂ ಇಂಡಿಯಾ! ರಹಾನೆ ಆಯ್ಕೆಗೆ ಅಭಿಮಾನಿಗಳು ಸುಸ್ತು

ಇಂಗ್ಲೆಂಡ್ ಪ್ರವಾಸದಲ್ಲಿ ಶತಕ ಗಳಿಸಲು ಸಾಧ್ಯವಾಗದಿದ್ದರೂ, ಮೂರು ಪಂದ್ಯಗಳ ಸರಣಿಯಲ್ಲಿ 48ರ ಸರಾಸರಿಯಲ್ಲಿ 144 ರನ್ ಗಳಿಸಿದ್ದರು. ಈ ವೇಳೆ ಎರಡು ಅರ್ಧಶತಕಗಳನ್ನೂ ದಾಖಲಿಸಿದ್ದರು. ಹೀಗಾಗಿ, ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಏಕದಿನ ಸರಣಿಯಲ್ಲಿ ಕೊಹ್ಲಿ ಮತ್ತು ರೋಹಿತ್ ಅವರ ಪ್ರದರ್ಶನದ ಮೇಲೆ ಅಭಿಮಾನಿಗಳ ಕಣ್ಣಿರಲಿದೆ. ಇಬ್ಬರು ದಿಗ್ಗಜರು ತಮ್ಮ ಅನುಭವ ಹಾಗೂ ಬ್ಯಾಟಿಂಗ್ ಸಾಮರ್ಥ್ಯದ ಮೂಲಕ ಮತ್ತೊಮ್ಮೆ ಅಭಿಮಾನಿಗಳನ್ನು ರಂಜಿಸುತ್ತಾರೆಯೇ ಎಂಬ ಕುತೂಹಲ ಹೆಚ್ಚಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Mon, 26 October 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಲಖನೌದಲ್ಲಿ ಕಾರು ಪಾರ್ಕಿಂಗ್ ವಿಚಾರಕ್ಕೆ ಗುಂಡಿನ ದಾಳಿ
ಲಖನೌದಲ್ಲಿ ಕಾರು ಪಾರ್ಕಿಂಗ್ ವಿಚಾರಕ್ಕೆ ಗುಂಡಿನ ದಾಳಿ
ಕಾಮಗಾರಿ ವಿಳಂಬ: ಗುತ್ತಿಗೆದಾರರು, ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಾಮಗಾರಿ ವಿಳಂಬ: ಗುತ್ತಿಗೆದಾರರು, ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥರ ಬದಲಾವಣೆಗೆ ಬುರುಡೆ ಗ್ಯಾಂಗ್ ಒತ್ತಾಯ
ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥರ ಬದಲಾವಣೆಗೆ ಬುರುಡೆ ಗ್ಯಾಂಗ್ ಒತ್ತಾಯ
ಹೇಗಿದೆ ಗೊತ್ತಾ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್​​ ರೈಲು?
ಹೇಗಿದೆ ಗೊತ್ತಾ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್​​ ರೈಲು?
ಸಂಸತ್ ಭವನದ ನಾರ್ತ್ ಬ್ಲಾಕ್‌ನಲ್ಲಿ ಭಾರಿ ಅಗ್ನಿ ಅವಘಡ
ಸಂಸತ್ ಭವನದ ನಾರ್ತ್ ಬ್ಲಾಕ್‌ನಲ್ಲಿ ಭಾರಿ ಅಗ್ನಿ ಅವಘಡ
ವೃದ್ಧೆ ಕೊಂದು ಮನೆಯಲ್ಲಿದ್ದ ಚಿನ್ನಾಭರಣ ದರೋಡೆ ಮಾಡಿದ ದುರುಳರು
ವೃದ್ಧೆ ಕೊಂದು ಮನೆಯಲ್ಲಿದ್ದ ಚಿನ್ನಾಭರಣ ದರೋಡೆ ಮಾಡಿದ ದುರುಳರು
ಸ್ಟಿಂಗ್ ವಿಡಿಯೋದಲ್ಲಿದ್ದ ಮಹಿಳೆ ಹೇಳಿಕೆಗೆ ಯತೀಂದ್ರ ಏನಂದ್ರು ನೋಡಿ
ಸ್ಟಿಂಗ್ ವಿಡಿಯೋದಲ್ಲಿದ್ದ ಮಹಿಳೆ ಹೇಳಿಕೆಗೆ ಯತೀಂದ್ರ ಏನಂದ್ರು ನೋಡಿ
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ