AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND Squad WI Tour: ವೆಸ್ಟ್ ಇಂಡೀಸ್ ಪ್ರವಾಸದಿಂದ ಭಾರತದ ನಾಲ್ಕು ಆಟಗಾರರು ಹೊರಕ್ಕೆ?; ಇಲ್ಲಿದೆ ನೋಡಿ ಲಿಸ್ಟ್

India vs West Indies: ಟೀಮ್ ಇಂಡಿಯಾದ ಪ್ರಮುಖ ಹಿರಿಯ ಆಟಗಾರರಾದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್​ಗೆ ವಿಂಡೀಸ್ ಪ್ರವಾಸದಿಂದ ವಿಶ್ರಾಂತಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

IND Squad WI Tour: ವೆಸ್ಟ್ ಇಂಡೀಸ್ ಪ್ರವಾಸದಿಂದ ಭಾರತದ ನಾಲ್ಕು ಆಟಗಾರರು ಹೊರಕ್ಕೆ?; ಇಲ್ಲಿದೆ ನೋಡಿ ಲಿಸ್ಟ್
Team India
Vinay Bhat
|

Updated on: Jun 18, 2023 | 7:09 AM

Share

ಮುಖ್ಯಾಂಶಗಳು

  • ವಿಂಡೀಸ್ ಪ್ರವಾಸದಿಂದ ಕೆಲ ಆಟಗಾರರಿಗೆ ವಿಶ್ರಾಂತಿ
  • ಟೆಸ್ಟ್, ವೈಟ್-ಬಾಲ್ ಸರಣಿಯಿಂದ ಕೈಬಿಡುವ ಸಾಧ್ಯತೆ
  • ಹೆಚ್ಚು ಯುವ ಆಟಗಾರರಿಗೆ ಅವಕಾಶ

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ (WTC Final) ಸೋಲುಂಡ ಬಳಿಕ ಭಾರತ ಕ್ರಿಕೆಟ್ ತಂಡದ ಆಟಗಾರರು ತವರಿಗೆ ಮರಳಿ ವಿಶ್ರಾಂತಿಯಲ್ಲಿದ್ದು ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಭಾರತ ತಂಡ ತನ್ನ ಮುಂದಿನ ಸರಣಿಯನ್ನು ವೆಸ್ಟ್ ಇಂಡೀಸ್ (India vs West Indies) ವಿರುದ್ಧ ಆಡಲಿದೆ. ಕೆರಿಬಿಯನ್ನರ ನಾಡಿಗೆ ಟೀಮ್ ಇಂಡಿಯಾ (Team India) ಪ್ರವಾಸ ಬೆಳೆಸಲಿದ್ದು, ಜುಲೈ 12 ರಿಂದ ಎರಡು ಟೆಸ್ಟ್, ಮೂರು ಏಕದಿನ ಮತ್ತು ಐದು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಈ ಸರಣಿಗಳಿಗೆ ಭಾರತ ತಂಡ ಇನ್ನಷ್ಟೆ ಪ್ರಕಟವಾಗಬೇಕಿದೆ. ಆದರೆ, ಈ ಪ್ರವಾಸದಿಂದ ಕೆಲ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಟೀಮ್ ಇಂಡಿಯಾದ ಪ್ರಮುಖ ಹಿರಿಯ ಆಟಗಾರರಾದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್​ಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರೋಹಿತ್ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಸಂಪೂರ್ಣ ಟೆಸ್ಟ್ ಅಥವಾ ವೈಟ್-ಬಾಲ್ ಸರಣಿಯಿಂದ ಕೈಬಿಡುವ ಸಾಧ್ಯತೆಯಿದೆಯಂತೆ. ಅಂತೆಯೆ ಕೊಹ್ಲಿಗೆ ಕೂಡ ಇದೇ ಸೂತ್ರ ಅನ್ವಯ ಆಗುವ ಸಾಧ್ಯತೆ ಇದೆ. ಸಿರಾಜ್ ಹಾಗೂ ಶಮಿ ಸಂಪೂರ್ಣ ಪ್ರವಾಸಕ್ಕೆ ಗೈರಾಗಲಿದ್ದಾರೆ.

TNPL 2023: 8 ಸಿಕ್ಸ್, 7 ಫೋರ್​: ಅಜಿತೇಶ್ ಸ್ಪೋಟಕ ಶತಕ, ರಾಯಲ್ ಕಿಂಗ್ಸ್​ಗೆ ರೋಚಕ ಜಯ

ವೆಸ್ಟ್ ಇಂಡೀಸ್ ಈಗ ಬಲಷ್ಠ ತಂಡದಂತೆ ಗೋಚರಿಸುತ್ತಿಲ್ಲವಾದರೂ, ಭಾರತೀಯ ಆಯ್ಕೆ ಸಮಿತಿ ಹೆಚ್ಚು ಯುವ ಆಟಗಾರರಿಗೆ ಅವಕಾಶ ನೀಡುವಂತೆ ಗೋಚರಿಸುತ್ತಿದೆ. ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್, ಉಮ್ರಾನ್ ಮಲಿಕ್, ರಿಂಕು ಸಿಂಗ್‌, ಸಾಯಿ ಸುದ​ರ್ಶನ್‌, ತಿಲಕ್‌ ವರ್ಮಾ, ಅರ್ಶ್​ದೀಪ್ ಸಿಂಗ್ ಸೇರಿದಂತೆ ಕೆಲ ಆಟಗಾರರು ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಆಯ್ಕೆ ಆಗಲಿದ್ದಾರಂತೆ. ಇದರಲ್ಲಿ ಜೈಸ್ವಾಲ್ ಹಾಗೂ ಅರ್ಶ್​ದೀಪ್ ಟೆಸ್ಟ್ ತಂಡಕ್ಕೆ ಸೇರ್ಪಡೆ ಆಗಲಿದ್ದಾರೆ ಎಂಬ ಮಾತಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡವನ್ನು ಇದೇ ಜೂನ್ 27 ರಂದು ಪ್ರಕಟ ಮಾಡಲಿದೆ. ಟೀಮ್​ ಇಂಡಿಯಾದ ವೆಸ್ಟ್ ಇಂಡೀಸ್‌ ಪ್ರವಾಸವು ಎರಡು ಟೆಸ್ಟ್‌ಗಳೊಂದಿಗೆ ಪ್ರಾರಂಭವಾಗಲಿದೆ. ಜುಲೈ 12 ರಿಂದ 16 ರವರೆಗೆ ಮೊದಲ ಟೆಸ್ಟ್, ಜುಲೈ 20 ರಿಂದ 24 ರವರೆಗೆ ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಎರಡನೇ ಟೆಸ್ಟ್ ನಡೆಯಲಿದೆ.

ನಂತರ ಮೂರು ಏಕದಿನ ಪಂದ್ಯಗಳ ಸರಣಿಯು ನಡೆಯಲಿದೆ. ಜುಲೈ 27, 29 ಹಾಗೂ ಆಗಸ್ಟ್ 1 ರಂದು ಈ ಪಂದ್ಯವನ್ನು ಆಯೋಜಿಸಲಾಗಿದೆ. ಕೊನೆಯದಾಗಿ ಟಿ20 ಸರಣಿಯು ಆರಂಭಗೊಳ್ಳಲಿದ್ದು, ಆಗಸ್ಟ್ 3 ರಂದು ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ಮೊದಲ ಪಂದ್ಯವಿದೆ. ನಂತರ ಆಗಸ್ಟ್ 6 ಮತ್ತು 8 ರಂದು ಎರಡು ಮತ್ತು ಮೂರನೇ ಟಿ20, ಆಗಸ್ಟ್ 12 ರಂದು 4ನೇ ಪಂದ್ಯ, 5 ನೇ ಹಾಗೂ ಅಂತಿಮ ಪಂದ್ಯದ ಆ. 13 ರಂದು ಆಡಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಮುಂದಿನ ಪ್ಲ್ಯಾನ್ ಬಗ್ಗೆ ಮಾತಾಡಿದ ‘ಪ್ರೇಮದ ಊರಲಿ’ ನಟಿ ರಮಿಕಾ ಶಿವು
ಮುಂದಿನ ಪ್ಲ್ಯಾನ್ ಬಗ್ಗೆ ಮಾತಾಡಿದ ‘ಪ್ರೇಮದ ಊರಲಿ’ ನಟಿ ರಮಿಕಾ ಶಿವು
ಫಿಲಿಪೈನ್ಸ್ ಭೇಟಿ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ನರೇಂದ್ರ ಮೋದಿ
ಫಿಲಿಪೈನ್ಸ್ ಭೇಟಿ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ನರೇಂದ್ರ ಮೋದಿ
‘ಶಂಕರಾಭರಣ’ ಬಸ್ ಸಿಕ್ಕ ಬಳಿಕ ಶೈನ್ ಶೆಟ್ಟಿ ಬದುಕಿನಲ್ಲಿ ಚಮತ್ಕಾರ
‘ಶಂಕರಾಭರಣ’ ಬಸ್ ಸಿಕ್ಕ ಬಳಿಕ ಶೈನ್ ಶೆಟ್ಟಿ ಬದುಕಿನಲ್ಲಿ ಚಮತ್ಕಾರ
ಯಲ್ಲಮ್ಮ ದೇಗುಲದ ಗೋಡೆ ಮೇಲೆ ಅಶ್ಲೀಲ ಚಿಹ್ನೆ ಬಿಡಿಸಿ ವಿಕೃತಿ
ಯಲ್ಲಮ್ಮ ದೇಗುಲದ ಗೋಡೆ ಮೇಲೆ ಅಶ್ಲೀಲ ಚಿಹ್ನೆ ಬಿಡಿಸಿ ವಿಕೃತಿ
ಶಿವಣ್ಣನ ಜೊತೆ ಶಬರಿಮಲೆಗೆ ಹೋದ ಘಟನೆ ನೆನಪಿಸಿಕೊಂಡ ಪ್ರೇಮ್ ಪುತ್ರಿ ಅಮೃತಾ
ಶಿವಣ್ಣನ ಜೊತೆ ಶಬರಿಮಲೆಗೆ ಹೋದ ಘಟನೆ ನೆನಪಿಸಿಕೊಂಡ ಪ್ರೇಮ್ ಪುತ್ರಿ ಅಮೃತಾ
ಚಿಕಿತ್ಸೆಗೆ 5 ಸಾವಿರ ರೂ. ಕಡಿಮೆ ಇದ್ದಿದ್ದಕ್ಕೆ ಮೊಬೈಲ್ ನೀಡುವಂತೆ ಒತ್ತಾಯ
ಚಿಕಿತ್ಸೆಗೆ 5 ಸಾವಿರ ರೂ. ಕಡಿಮೆ ಇದ್ದಿದ್ದಕ್ಕೆ ಮೊಬೈಲ್ ನೀಡುವಂತೆ ಒತ್ತಾಯ
ದೇವಸ್ಥಾನದೊಳಗೆ ಹೋಗದಂತೆ ನಿಖಿಲ್​​ಗೆ​​ ಅಡ್ಡಿ: ಕ್ಷಮೆಯಾಚಿಸಿದ ಕೈ ಮುಖಂಡ!
ದೇವಸ್ಥಾನದೊಳಗೆ ಹೋಗದಂತೆ ನಿಖಿಲ್​​ಗೆ​​ ಅಡ್ಡಿ: ಕ್ಷಮೆಯಾಚಿಸಿದ ಕೈ ಮುಖಂಡ!
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ