AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಗೆ ಸೆಲ್ಯೂಟ್, ನಾವು ಒಗ್ಗಟ್ಟಾಗಿರುತ್ತೇವೆ: ಐಪಿಎಲ್ ಸ್ಥಗಿತ ಬೆನ್ನಲ್ಲೇ ವಿರಾಟ್ ಕೊಹ್ಲಿ ಪೋಸ್ಟ್

ಐಪಿಎಲ್ ಟೂರ್ನಿ ಸ್ಥಗಿತದ ನಂತರ, ವಿರಾಟ್ ಕೊಹ್ಲಿ ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಭಾರತ-ಪಾಕಿಸ್ತಾನದ ಉದ್ವಿಗ್ನತೆಯ ನಡುವೆ ದೇಶದ ರಕ್ಷಣೆಗಾಗಿ ಸೈನಿಕರ ತ್ಯಾಗವನ್ನು ಅವರು ಶ್ಲಾಘಿಸಿದ್ದಾರೆ. ಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ರಕ್ಷಿಸುವ ಸೇನೆ ಜತೆ ನಾವಿದ್ದೇವೆ ಎಂದು ಅವರು ಹೇಳಿದ್ದಾರೆ.

ಭಾರತೀಯ ಸೇನೆಗೆ ಸೆಲ್ಯೂಟ್, ನಾವು ಒಗ್ಗಟ್ಟಾಗಿರುತ್ತೇವೆ: ಐಪಿಎಲ್ ಸ್ಥಗಿತ ಬೆನ್ನಲ್ಲೇ ವಿರಾಟ್ ಕೊಹ್ಲಿ ಪೋಸ್ಟ್
ಭಾರತೀಯ ಸೇನೆಗೆ ಸಲ್ಯೂಟ್, ನಾವು ಒಗ್ಗಟ್ಟಾಗಿರುತ್ತೇವೆ: ವಿರಾಟ್ ಕೊಹ್ಲಿ
Ganapathi Sharma
|

Updated on: May 09, 2025 | 3:04 PM

Share

ನವದೆಹಲಿ, ಮೇ 9: ಭಾರತ ಮತ್ತು ಪಾಕಿಸ್ತಾನ ನಡುವಣ ಯುದ್ಧ ಭೀತಿಯಿಂದಾಗಿ ಐಪಿಎಲ್ (IPL) ಟೂರ್ನಿಯನ್ನು ಬಿಸಿಸಿಐ ಸ್ಥಗಿತಗೊಳಿಸಿದ ಬೆನ್ನಲ್ಲೇ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಮೌನ ಮುರಿದಿದ್ದಾರೆ. ಭಾರತೀಯ ಸೇನೆ ಪರ ಸಾಮಾಜಿಕ ಮಾಧ್ಯಮ ಇನ್​ಸ್ಟಾಗ್ರಾಂನಲ್ಲಿ ಸಂದೇಶ ಪ್ರಕಟಿಸಿದ ಅವರು, ನಾವು ಒಗ್ಗಟ್ಟಾಗಿರುತ್ತೇವೆ. ಭಾರತೀಯ ಸೇನೆಗೆ ಸೆಲ್ಯೂಟ್ ಎಂದಿದ್ದಾರೆ. ಇದರೊಂದಿಗೆ, ಐಪಿಎಲ್ ಸ್ಥಗಿತದ ನಂತರ ಮೊದಲ ಬಾರಿಗೆ ಕೊಹ್ಲಿ ಪ್ರತಿಕ್ರಿಯೆ ನೀಡಿದಂತಾಗಿದೆ.

‘‘ಈ ಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ರಕ್ಷಿಸುತ್ತಿರುವುದಕ್ಕಾಗಿ ಭಾರತೀಯ ಸೇನೆಗೆ ಸೆಲ್ಯೂಟ್. ನಾವು ನಮ್ಮ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟಿನಿಂದ ಇರುತ್ತೇವೆ. ನಮ್ಮ ವೀರ ಯೋಧರ ಅಚಲ ಧೈರ್ಯ, ಅವರು ಮತ್ತು ಅವರ ಕುಟುಂಬದವರು ನಮ್ಮ ದೇಶಕ್ಕಾಗಿ ಮಾಡುವ ತ್ಯಾಗಗಳಿಗೆ ನಾವು ಸದಾ ಕೃತಜ್ಞರಾಗಿರುತ್ತೇವೆ’’ ಎಂದು ವಿರಾಟ್ ಕೊಹ್ಲಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ಆ ಮೂಲಕ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಇದನ್ನೂ ಓದಿ
Image
ಅರ್ಧಕ್ಕೆ ನಿಂತ ಐಪಿಎಲ್; ಆಟಗಾರರ ವೇತನಕ್ಕೆ ಬೀಳುತ್ತಾ ಕತ್ತರಿ?
Image
ಐಪಿಎಲ್‌ನ ಉಳಿದ ಪಂದ್ಯಗಳು ಯಾವಾಗ ನಡೆಯುತ್ತವೆ?
Image
ಐಪಿಎಲ್ 2025: ಉಳಿದ 16 ಪಂದ್ಯಗಳು ಶೀಘ್ರದಲ್ಲೇ ಮರು ನಿಗದಿ
Image
ದೇಶಕ್ಕಿಂತ ಕ್ರಿಕೆಟ್ ದೊಡ್ಡದಲ್ಲ: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

ವಿರಾಟ್ ಕೊಹ್ಲಿ ಇನ್​​ಸ್ಟಾಗ್ರಾಂ ಪೋಸ್ಟ್

View this post on Instagram

A post shared by Virat Kohli (@virat.kohli)

ಜಮ್ಮು ಮತ್ತು ಪಠಾಣ್‌ಕೋಟ್ ಸೇರಿದಂತೆ ಗಡಿಯುದ್ದಕ್ಕೂ ಇರುವ ಅನೇಕ ನಗರಗಳು, ಪಂಜಾಬ್ ಮತ್ತು ರಾಜಸ್ಥಾನದ ಪ್ರದೇಶಗಳ ಮೇಲೆ ಪಾಕಿಸ್ತಾನ ದಾಳಿಗೆ ವಿಫಲ ಯತ್ನ ನಡೆಸಿತ್ತು. ಪಾಕಿಸ್ತಾನದ ಯತ್ನವನ್ನು ಭಾರತೀಯ ಸೇನೆ ಯಶಸ್ವಿಯಾಗಿ ತಡೆದಿತ್ತು. ಅದಾದ ಬೆನ್ನಲ್ಲೇ ಐಪಿಎಲ್ ಪಂದ್ಯ ಧರ್ಮಶಾಲಾದಲ್ಲಿ ರದ್ದಾಗಿತ್ತು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಕೊಹ್ಲಿ ಅವರು ಸೇನೆ ಪರ ಪೋಸ್ಟ್ ಮಾಡಿದ್ದಾರೆ.

ಪಾಕಿಸ್ತಾನದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನ ಸ್ಥಿತಿಯ ಕಾರಣ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐಪಿಎಲ್ ಟೂರ್ನಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ಶುಕ್ರವಾರ ನಿರ್ಧರಿಸಿದೆ. ಗುರುವಾರ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂದ್ಯವನ್ನು ಉದ್ವಿಗ್ನ ಪರಿಸ್ಥಿತಿಯಿಂದಾಗಿ ಅರ್ಧಕ್ಕೆ ರದ್ದುಗೊಳಿಸಲಾಯಿತು. ಗಡಿಗೆ ಹತ್ತಿರದಲ್ಲಿರುವ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಿಂದ ಆಟಗಾರರು ಮತ್ತು ಪ್ರೇಕ್ಷಕರನ್ನು ಸ್ಥಳಾಂತರಿಸಲಾಯಿತು.

ಇದನ್ನೂ ಓದಿ: ದೇಶಕ್ಕಿಂತ ಕ್ರಿಕೆಟ್ ದೊಡ್ಡದಲ್ಲ: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

ಈ ಬಾರಿ ಆರ್​​ಸಿಬಿ ಪಾಯಿಂಟ್ ಟೇಬಲ್​​ನಲ್ಲಿ ಎರಡನೇ ಸ್ಥಾನದಲ್ಲಿ ಇದ್ದು, ಕಪ್ ಗೆಲ್ಲಬಹುದಾದ ಫೇವರಿಟ್ ತಂಡಗಳಲ್ಲಿ ಒಂದಾಗಿದೆ. ಈ ಮೂಲಕ 18 ವರ್ಷಗಳ ಕಪ್ ಗೆಲ್ಲುವ ಕನಸು ನನಸಾಗಲಿದೆ ಎಂದು ಆರ್​ಸಿಬಿ ಅಭಿಮಾನಿಗಳು ಭಾವಿಸಿದ್ದರು. ಆದರೆ, ಈಗ ಐಪಿಎಲ್ ಪಂದ್ಯವೇ ಸ್ಥಗಿತವಾಗಿರುವುದು ಅಭಿಮಾನಿಗಳ ಕನಸಿಗೆ ತಣ್ಣೀರು ಎರಚಿದಂತೆ ಆಗಿದೆ. ಆದರೆ, ಇಷ್ಟೆಲ್ಲ ಆದರ ಹೊರತಾಗಿಯೂ ಕೊಹ್ಲಿ ಮಾತ್ರ ತಾವು ದೇಶದ, ಸೇನೆಯ ಪರ ಎಂಬ ಸಂದೇಶ ರವಾನಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ