T20 World Cup 2021: ಪಾಂಡ್ಯ ಬೌಲಿಂಗ್ ಮಾಡ್ತಾರಾ? ಮಾಡಲ್ವಾ? ಕೊಹ್ಲಿ ಹೇಳಿದ್ದೇನು?

India vs Pakistan Match: ತಂಡದಲ್ಲಿ ಆಲ್​ರೌಂಡರ್ ಆಗಿ ರವೀಂದ್ರ ಜಡೇಜಾ ಕೂಡ ಇದ್ದು, ಇವರಲ್ಲದೆ ಅಶ್ವಿನ್​ಗೂ ಸ್ಥಾನ ನೀಡುವ ಸಾಧ್ಯತೆಯಿದೆ. ಅತ್ತ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ಭುವನೇಶ್ವರ್​ ಕುಮಾರ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಟೀಮ್ ಇಂಡಿಯಾ ಐವರು ಬೌಲರುಗಳನ್ನು ಬಳಸಿಕೊಳ್ಳೋದು ಖಚಿತ.

T20 World Cup 2021: ಪಾಂಡ್ಯ ಬೌಲಿಂಗ್ ಮಾಡ್ತಾರಾ? ಮಾಡಲ್ವಾ? ಕೊಹ್ಲಿ ಹೇಳಿದ್ದೇನು?
Virat Kohli-Hardik Pandya
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 23, 2021 | 4:31 PM

ಭಾರತ-ಪಾಕಿಸ್ತಾನ್ (india vs pakistan) ನಡುವಣ ಹೈವೋಲ್ಟೇಜ್ ಪಂದ್ಯಕ್ಕಾಗಿ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಸಜ್ಜಾಗಿದೆ. ನಾಳೆ (ಅ.24) ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲ ಒಂದೆಡೆಯಾದರೆ, ತಂಡದಲ್ಲಿ ಕಾಣಿಸಿಕೊಂಡರೆ ಹಾರ್ದಿಕ್ ಪಾಂಡ್ಯ (Hardik pandya) ಬೌಲಿಂಗ್ ಮಾಡಲಿದ್ದಾರಾ ಎಂಬ ಪ್ರಶ್ನೆ ಮತ್ತೊಂದೆಡೆ ಚರ್ಚೆಗೆ ಕಾರಣವಾಗಿದೆ. ಏಕೆಂದರೆ ಪಾಂಡ್ಯ ದೀರ್ಘಕಾಲ ಬೌಲಿಂಗ್ ಮಾಡಿಲ್ಲ. ಇತ್ತೀಚೆಗೆ ಮುಕ್ತಾಯವಾದ ಐಪಿಎಲ್-2021 ರ ಎರಡನೇ ಹಂತದಲ್ಲೂ ಬೌಲಿಂಗ್ ಮಾಡಲಿಲ್ಲ. ಹೀಗಾಗಿ ತಂಡದಲ್ಲಿ ಪಾಂಡ್ಯರನ್ನು ಆಲ್​ರೌಂಡರ್ ಆಗಿ ಹೇಗೆ ಆಯ್ಕೆ ಮಾಡಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದೇ ಪ್ರಶ್ನೆಯನ್ನು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಮುಂದಿಡಲಾಗಿದೆ.

ಪಾಕಿಸ್ತಾನ್ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿರಾಟ್ ಕೊಹ್ಲಿಗೆ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡುತ್ತಾರಾ ಎಂಬ ಪ್ರಶ್ನೆ ಕೇಳಲಾಯಿತು. ಈ ವೇಳೆ ಮಾತನಾಡಿದ ಕೊಹ್ಲಿ, “ಹಾರ್ದಿಕ್ ಪಾಂಡ್ಯ ಅವರ ಪ್ರಸ್ತುತ ಸ್ಥಿತಿ ದಿನದಿಂದ ದಿನಕ್ಕೆ ಸುಧಾರಿಸುತ್ತಿದೆ. ಅವರು ವಿಶ್ವಕಪ್‌ನಲ್ಲಿ ಯಾವಾಗಲಾದರೂ ಬೌಲಿಂಗ್ ಮಾಡುತ್ತಾರೆ. ಇದಾಗ್ಯೂ ಭಾರತಕ್ಕೆ ಬೇರೆ ಆಯ್ಕೆಗಳಿವೆ. ಪಾಂಡ್ಯ ಸಂಪೂರ್ಣ ಫಿಟ್​ ಆಗುವವರೆಗೆ ಅವರು ಒಂದು ಅಥವಾ ಎರಡು ಓವರ್ ಬೌಲ್ ಮಾಡಬಹುದು ಎಂದು ತಿಳಿಸಿದ್ದಾರೆ.

ಈ ಮೂಲಕ ಹಾರ್ದಿಕ್ ಪಾಂಡ್ಯ ಇನ್ನೂ ಕೂಡ ಬೌಲಿಂಗ್ ಮಾಡಲು ಸಂಪೂರ್ಣ ಫಿಟ್ ಆಗಿಲ್ಲ ಎಂಬುದನ್ನು ವಿರಾಟ್ ಕೊಹ್ಲಿ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಇದಾಗ್ಯೂ ಅವರು ಒಂದೆರೆಡು ಓವರ್ ಎಸೆಯಲು ಸಮರ್ಥರಾಗಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಪಾಕಿಸ್ತಾನ್ ವಿರುದ್ದದ ಪಂದ್ಯದ ವೇಳೆ ಅನಿವಾರ್ಯತೆ ಬಂದರೆ ಹಾರ್ದಿಕ್ ಪಾಂಡ್ಯ ಒಂದೆರೆಡು ಓವರ್ ಬೌಲಿಂಗ್ ಮಾಡುವ ಸಾಧ್ಯತೆಯಿದೆ.

ಹಾಗೆಯೇ ಟಿ20 ವಿಶ್ವಕಪ್​ ವೇಳೆ ಹಾರ್ದಿಕ್ ಪಾಂಡ್ಯ ಸಂಪೂರ್ಣ ಫಿಟ್​ ಆಗುವ ವಿಶ್ವಾಸವನ್ನು ವಿರಾಟ್ ಕೊಹ್ಲಿ ವ್ಯಕ್ತಪಡಿಸಿದ್ದು, ಹೀಗಾಗಿ ಲೀಗ್ ಹಂತದ ಕೆಳ ಪಂದ್ಯಗಳ ಬಳಿಕ ಹಾರ್ದಿಕ್ 4 ಓವರ್​ಗಳನ್ನು ಬೌಲಿಂಗ್ ಮಾಡಬಹುದು. ಇದಾಗ್ಯೂ ತಂಡದಲ್ಲಿ ಆಲ್​ರೌಂಡರ್ ಆಗಿ ರವೀಂದ್ರ ಜಡೇಜಾ ಕೂಡ ಇದ್ದು, ಇವರಲ್ಲದೆ ಅಶ್ವಿನ್​ಗೂ ಸ್ಥಾನ ನೀಡುವ ಸಾಧ್ಯತೆಯಿದೆ. ಅತ್ತ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ಭುವನೇಶ್ವರ್​ ಕುಮಾರ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಟೀಮ್ ಇಂಡಿಯಾ ಐವರು ಬೌಲರುಗಳನ್ನು ಬಳಸಿಕೊಳ್ಳೋದು ಖಚಿತ.

ಇದನ್ನೂ ಓದಿ: India vs Pakistan, T20 World cup 2021: ಒಂದು ದಿನ ಮೊದಲೇ ಬಲಿಷ್ಠ ತಂಡ ಪ್ರಕಟಿಸಿದ ಪಾಕಿಸ್ತಾನ್

ಇದನ್ನೂ ಓದಿ: T20 World cup 2021: ಪಾಕ್ ವಿರುದ್ದದ ಪಂದ್ಯದೊಂದಿಗೆ ಹೊಸ ಸಾಧನೆ ಮಾಡಲಿದ್ದಾರೆ ಕೆಎಲ್ ರಾಹುಲ್, ಪಾಂಡ್ಯ

ಇದನ್ನೂ ಓದಿ: T20 World Cup 2021: ಟಿ20 ರ‍್ಯಾಂಕಿಂಗ್‌​ನಲ್ಲಿ ನಂಬರ್ 1 ತಂಡ ಯಾವುದು ಗೊತ್ತಾ?

(Virat kohli says hardik pandya will bowl at some point of time in t20 world cup 2021)

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ